AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಯ ಹಿಂದೆ ಸೆಪ್ಟಿಕ್ ಟ್ಯಾಂಕ್​​ನಲ್ಲಿ ತಲೆಬುರುಡೆ ಸಿಕ್ಕಾಗಲೇ ಪ್ರೀತಿ, ಮದುವೆ, ದ್ರೋಹದ ಕಥೆ ಬಯಲಾಗಿದ್ದು

ಮಧ್ಯಪ್ರದೇಶದ ಸಾಗರದಲ್ಲಿ ಪ್ರಿನ್ಸ್ ನಾಪತ್ತೆ ಪ್ರಕರಣ ಸೆಪ್ಟಿಕ್ ಟ್ಯಾಂಕ್‌ನಲ್ಲಿ ತಲೆಬುರುಡೆ ಪತ್ತೆಯಾದಾಗ ತಿರುವು ಪಡೆದುಕೊಂಡಿತು. ಪ್ರೀತಿ, ಮದುವೆ, ದ್ರೋಹದ ಕರಾಳ ಸತ್ಯ ಬಹಿರಂಗವಾಯಿತು. ಅನೈತಿಕ ಸಂಬಂಧದ ಕಾರಣ ಪತ್ನಿ ತುಳಸಿ ಮತ್ತು ಶೋಯೆಬ್ ಸೇರಿ ಪ್ರಿನ್ಸ್‌ಗೆ ಮಾದಕ ದ್ರವ್ಯ ನೀಡಿ ಕೊಲೆ ಮಾಡಿ, ಶವವನ್ನು ಸೆಪ್ಟಿಕ್ ಟ್ಯಾಂಕ್‌ಗೆ ಎಸೆದಿದ್ದರು. ಪೊಲೀಸರ ತನಿಖೆಯಿಂದ ಈ ಘೋರ ಅಪರಾಧ ಬಯಲಾಗಿದೆ.

ಮನೆಯ ಹಿಂದೆ ಸೆಪ್ಟಿಕ್ ಟ್ಯಾಂಕ್​​ನಲ್ಲಿ ತಲೆಬುರುಡೆ ಸಿಕ್ಕಾಗಲೇ ಪ್ರೀತಿ, ಮದುವೆ, ದ್ರೋಹದ ಕಥೆ ಬಯಲಾಗಿದ್ದು
ಪ್ರಿನ್ಸ್​, ಶೋಯೆಬ್ ಹಾಗೂ ತುಳಸಿImage Credit source: NDTV
ನಯನಾ ರಾಜೀವ್
|

Updated on: Feb 13, 2026 | 7:49 AM

Share

ಸಾಗರ್, ಫೆಬ್ರವರಿ 13: ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ ನಡೆದ ಘಟನೆ ಇದು. ಆಗಸ್ಟ್​ 20ರಂದು ಪ್ರಿನ್ಸ್​ ಎಂಬುವವರು ಏಕಾಏಕಿ ನಾಪತ್ತೆ(Missing)ಯಾಗಿದ್ದರು. ಅವರು ಕಾಣೆಯಾಗಿದ್ದಾರೆಂದು ಪತ್ನಿ ತುಳಸಿ ದೂರು ನೀಡಿದ್ದರು. ಆರಂಭದಲ್ಲಿ ಪೊಲೀಸರಿಗೆ ಯಾವುದೇ ಸುಳಿವು ಸಿಗದ ಕಾರಣ ಸದ್ದಿಲ್ಲದೆ ಪ್ರಕರಣದ ವಿಚಾರಣೆ ಅಂತ್ಯ ಕಂಡಿತ್ತು. ಆದರೆ ಕುಟುಂಬದವರಿಗೆ ಮಾತ್ರ ಅನುಮಾನ ಹಾಗೇ ಮುಂದುವರೆದಿತ್ತು.

ಸೆಪ್ಟಿಕ್ ಟ್ಯಾಂಕ್​​ನಲ್ಲಿ ಸಿಕ್ಕ ತಲೆ ಬುರುಡೆ, ಮೂಳೆಗಳು ಬೇರೆಯದೇ ಕಥೆಯನ್ನು ಹೇಳಿವೆ. ಪ್ರೇಮ, ಮದುವೆ, ದ್ರೋಹದ ಕಥೆಯನ್ನು ಎಳೆ ಎಳೆಯಾಗಿ ಬಿಚ್ಚಿಟ್ಟಿವೆ. ಮಧ್ಯಪ್ರದೇಶದ ದಿಯೋರಿ ನಗರದಲ್ಲಿ ನಾಪತ್ತೆ ಪ್ರಕರಣ ದಾಖಲಾಗಿ ಆರು ತಿಂಗಳ ನಂತರ ಸತ್ಯವನ್ನು ಪೊಲೀಸರು ಬಯಲು ಮಾಡಿದ್ದಾರೆ.

ಈ ಪ್ರಕರಣದಲ್ಲಿ ಆರೋಪಿ ಶೋಯೆಬ್​​ನನ್ನು ನರಸಿಂಗ್​ಪುರದಲ್ಲಿ ಬಂಧಿಸಲಾಯಿತು. ವಿಚಾರಣೆಯ ಸಮಯದಲ್ಲಿ ತುಳಸಲಿ ಹಾಗೂ ಶೋಯೆಬ್​ಗೆ ಮದುವೆಗೂ ಮುಂಚೆಯೇ ಸಂಬಂಧವಿತ್ತು ಎಂಬುದು ತಿಳಿದುಬಂದಿದೆ. ಪ್ರಿನ್ಸ್​ಗೆ ಮಾದಕ ದ್ರವ್ಯ ನೀಡಿ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ಮದುವೆಯ ನಂತರವೂ ಅಕ್ರಮ ಸಂಬಂಧ ಮುಂದುವರೆದಿದೆ ಎಂದು ತನಿಖಾಧಿಕಾರಿಗಳು ಆರೋಪಿಸಿದ್ದಾರೆ.

ಮತ್ತಷ್ಟು ಓದಿ: ಮನೆಯಲ್ಲಿ ಮಲಗಿದ್ದವರೂ ಇಲ್ಲ, ಜಗಳವಾಡಿ ಹೋದವರೂ ಹಿಂದಿರುಗಿಲ್ಲ, ದೆಹಲಿಯಲ್ಲಿ ಹೆಚ್ಚುತ್ತಿವೆ ಮಕ್ಕಳ ನಾಪತ್ತೆ ಪ್ರಕರಣಗಳು

ಮದುವೆಯಾದ ಒಂದು ತಿಂಗಳಿಗೆ ತುಳಸಿಯ ನಡವಳಿಕೆ ಬದಲಾಯಿತು, ಮನೆಯಲ್ಲಿ ಆಗಾಗ ಜಗಳಗಳು ನಡೆಯುತ್ತಿದ್ದವು, ಇಬ್ಬರೂ ಆಕೆಯ ಪೋಷಕರ ಮನೆಯಲ್ಲಿರಬೇಕೆಂದು ದಿಯೋರಿಗೆ ತೆರಳಿದ್ದರು. ನಂತರ ನಡೆದಿದ್ದು ಈ ಕೊಲೆ, ಶೋಯೆಬ್ ಪ್ರಿನ್ಸ್ ದೇವೋರಿಯಲ್ಲಿ ವಾಸಿಸುತ್ತಿದ್ದಾಗ ಅವನೊಂದಿಗೆ ಸ್ನೇಹ ಬೆಳೆಸಿದ್ದ ಎನ್ನಲಾಗಿದೆ. ಪದೇ ಪದೇ ಪ್ರಿನ್ಸ್​​ಗೆ ಮಾದಕ ದ್ರವ್ಯ ನೀಡುತ್ತಿದ್ದ. ಶೋಯೆಬ್ ತುಳಸಿಯನ್ನು ರಹಸ್ಯವಾಗಿ ಭೇಟಿಯಾಗುತ್ತಿದ್ದ. ಆದರೆ ಅದ್ಹೇಗೋ ಪ್ರಿನ್ಸ್​​ಗೆ ಈ ವಿಚಾರ ತಿಳಿದಾಗ ಇಬ್ಬರ ಸಂಬಂಧದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದ. ಆಗ ಉದ್ವಿಗ್ನತೆ ಹೆಚ್ಚಾಗಿತ್ತು.

ಆಗಸ್ಟ್ 20 ರಂದು ಪ್ರಿನ್ಸ್‌ಗೆ ಮಾದಕ ದ್ರವ್ಯ ನೀಡಿ ಕೊಲೆ ಮಾಡಿದ್ದಾಗಿ ಶೋಯೆಬ್ ಒಪ್ಪಿಕೊಂಡಿದ್ದಾನೆ. ಅನುಮಾನ ಬರದಂತೆ ಶವವನ್ನು ತನ್ನ ಮನೆಯ ಹಿಂದಿನ ಸೆಪ್ಟಿಕ್ ಟ್ಯಾಂಕ್‌ಗೆ ಎಸೆದು ಕಸದಿಂದ ಮುಚ್ಚಿದ್ದಾನೆ ಎಂದು ಆರೋಪಿಸಲಾಗಿದೆ. ಪೊಲೀಸರು ಶೋಯೆಬ್ ಅವರನ್ನು ಅಪರಾಧ ಸ್ಥಳಕ್ಕೆ ಕರೆದೊಯ್ದು ಸೆಪ್ಟಿಕ್ ಟ್ಯಾಂಕ್ ಅನ್ನು ಅಗೆದು, ತಲೆಬುರುಡೆ ಮತ್ತು ಇತರ  ಅವಶೇಷಗಳನ್ನು ವಶಪಡಿಸಿಕೊಂಡರು. ಅವರ ಗುರುತನ್ನು ದೃಢೀಕರಿಸಲು ಅವಶೇಷಗಳನ್ನು ಡಿಎನ್ಎ ಪರೀಕ್ಷೆಗೆ ಕಳುಹಿಸಲಾಗಿದೆ.

ಕೊಲೆಯ ನಂತರ, ಶೋಯೆಬ್ ತುಳಸಿ ಜೊತೆ ಗುಜರಾತ್‌ಗೆ ಪರಾರಿಯಾಗಿದ್ದ ಎನ್ನಲಾಗಿದೆ, ಅಲ್ಲಿ ಇಬ್ಬರೂ ಒಟ್ಟಿಗೆ ವಾಸಿಸುತ್ತಿದ್ದರು. ಇದು ಪ್ರಿನ್ಸ್​ ಕುಟುಂಬ ಸದಸ್ಯರಲ್ಲಿ ಅನುಮಾನ ಹುಟ್ಟುಹಾಕಿತ್ತು. ಪೊಲೀಸರಿಗೆ ದೂರು ನೀಡಿದ್ದರು. ಪ್ರಿನ್ಸ್ ನಾಪತ್ತೆ ಆಕಸ್ಮಿಕವಲ್ಲ ಎಂದು ಕುಟುಂಬ ಸದಸ್ಯರು ಯಾವಾಗಲೂ ಹೇಳುತ್ತಲೇ ಇದ್ದರು. ಇಬ್ಬರ ವಿಡಿಯೋಗಳು ವೈರಲ್ ಆದಾಗ ಪೊಲೀಸರಿಗೆ ಅನುಮಾನ ಬಂದು ಶೋಯೆಬ್​​ನನ್ನು ಪತ್ತೆಹಚ್ಚಿ ವಿಚಾರಣೆ ನಡೆಸಿದಾಗ ಸತ್ಯ ಬಯಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!