ಸ್ಪಷ್ಟ ಬಹುಮತ ನೀಡಿದ ಜನರಿಗೆ ಸೆಲ್ಯೂಟ್; ಹರಿಯಾಣದಲ್ಲಿ ಬಿಜೆಪಿ ಭರ್ಜರಿ ಗೆಲುವಿಗೆ ಪ್ರಧಾನಿ ಮೋದಿ ಸಂತಸ

ಚುನಾವಣಾ ಆಯೋಗವು ಹರಿಯಾಣ ರಾಜ್ಯದಲ್ಲಿ ಬಿಜೆಪಿ 47 ಸ್ಥಾನಗಳನ್ನು ಗೆದ್ದಿದೆ ಎಂದು ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹರಿಯಾಣದ ಜನತೆಗೆ ಅಭಿನಂದನೆ ಸಲ್ಲಿಸಿದ್ದಾರೆ. ಎಕ್ಸಿಟ್ ಪೋಲ್ ಲೆಕ್ಕಾಚಾರವನ್ನು ಉಲ್ಪಾ ಮಾಡಿ, ಬಿಜೆಪಿ ಅಭೂತಪೂರ್ವ ಸತತ ಮೂರನೇ ಬಾರಿಗೆ ಹರಿಯಾಣದಲ್ಲಿ ತನ್ನ ಸರ್ಕಾರವನ್ನು ರಚಿಸಲು ಸಿದ್ಧವಾಗಿದೆ.

ಸ್ಪಷ್ಟ ಬಹುಮತ ನೀಡಿದ ಜನರಿಗೆ ಸೆಲ್ಯೂಟ್; ಹರಿಯಾಣದಲ್ಲಿ ಬಿಜೆಪಿ ಭರ್ಜರಿ ಗೆಲುವಿಗೆ ಪ್ರಧಾನಿ ಮೋದಿ ಸಂತಸ
ಪ್ರಧಾನಮಂತ್ರಿ ಮೋದಿ
Follow us
|

Updated on: Oct 08, 2024 | 7:25 PM

ನವದೆಹಲಿ: ಹರಿಯಾಣದಲ್ಲಿ ಬಿಜೆಪಿ ಬಹುಮತ ಪಡೆಯುವ ಮೂಲಕ ಸರ್ಕಾರ ರಚಿಸಲು ಸಜ್ಜಾಗಿದೆ. ಈಗಾಗಲೇ ಬಿಜೆಪಿ ನಯಾಬ್ ಸಿಂಗ್ ಸೈನಿ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಿಸಿತ್ತು. ಹೀಗಾಗಿ, ಈ ಚುನಾವಣೆಯ ಗೆಲುವಿಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿಯ ಹಿರಿಯ ನಾಯಕರು ನಯಾಬ್ ಸಿಂಗ್ ಸೈನಿ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಚುನಾವಣಾ ಫಲಿತಾಂಶದ ಬಳಿಕ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಹರಿಯಾಣದಲ್ಲಿ ಸ್ಪಷ್ಟ ಬಹುಮತ ನೀಡುವ ಮೂಲಕ ಮತ್ತೆ ಸರ್ಕಾರ ರಚಿಸಲು ಅವಕಾಶ ನೀಡಿದ ಜನತೆಗೆ ಸೆಲ್ಯೂಟ್ ಎಂದಿದ್ದಾರೆ.

ಹರಿಯಾಣದಲ್ಲಿ ಬಿಜೆಪಿಯ ಸತತ ಮೂರನೇ ಅವಧಿಯ ದಾಖಲೆಯು ಅಭಿವೃದ್ಧಿ ಮತ್ತು ಉತ್ತಮ ಆಡಳಿತದ ರಾಜಕೀಯಕ್ಕೆ ಸಿಕ್ಕ ವಿಜಯವಾಗಿದೆ ಎಂದು ಮೋದಿ ಹೇಳಿದ್ದಾರೆ. ಹರಿಯಾಣದಲ್ಲಿ ಬಿಜೆಪಿ 47 ಸ್ಥಾನಗಳನ್ನು ಗೆದ್ದು, 90 ಸದಸ್ಯ ಬಲದ ವಿಧಾನಸಭೆಯಲ್ಲಿ ಅರ್ಧದಷ್ಟು ಸಂಖ್ಯೆಯನ್ನು ದಾಟಿದೆ. ಇನ್ನೂ ಒಂದು ಸ್ಥಾನದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ ಎಂದು ಚುನಾವಣಾ ಆಯೋಗ ಘೋಷಿಸಿದ ನಂತರ ಎಕ್ಸ್​ನಲ್ಲಿ ಪೋಸ್ಟ್ ಮಾಡಿದ ಪ್ರಧಾನಿ ಮೋದಿ, ರಾಜ್ಯದ ಜನತೆಗೆ ಕೃತಜ್ಞತೆ ಸಲ್ಲಿಸಿದರು.

ಇದನ್ನೂ ಓದಿ: Haryana Results: ಹರಿಯಾಣದಲ್ಲೂ ಸಿಎಂ ಅಭ್ಯರ್ಥಿಯ ಆಯ್ಕೆಯಲ್ಲಿ ಪ್ರಯೋಗ ಮಾಡಿ ಗೆದ್ದ ಬಿಜೆಪಿ

ಈ ಗೆಲುವಿಗಾಗಿ ಪ್ರಧಾನಮಂತ್ರಿ ಮೋದಿ ಪಕ್ಷದ ಎಲ್ಲಾ ಕಾರ್ಯಕರ್ತರನ್ನು ಅಭಿನಂದಿಸಿದರು. ಬಿಜೆಪಿ ಐತಿಹಾಸಿಕ ಗೆಲುವು ಸಾಧಿಸಲು ಕಾರ್ಯಕರ್ತರ ಶ್ರಮ ಕಾರಣ ಎಂದು ಹೇಳಿದರು. “ಈ ಮಹಾನ್ ಗೆಲುವಿಗಾಗಿ ಅವಿರತವಾಗಿ ಮತ್ತು ಸಂಪೂರ್ಣ ಸಮರ್ಪಣಾಭಾವದಿಂದ ದುಡಿದ ನನ್ನ ಪಕ್ಷದ ಎಲ್ಲಾ ಕಾರ್ಯಕರ್ತರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು! ನೀವು ರಾಜ್ಯದ ಜನರಿಗೆ ಪೂರ್ಣವಾಗಿ ಸೇವೆ ಸಲ್ಲಿಸಿದ್ದಲ್ಲದೆ, ನಮ್ಮ ಅಭಿವೃದ್ಧಿಯ ಕಾರ್ಯಸೂಚಿಯನ್ನು ಅವರ ಬಳಿಗೆ ಕೊಂಡೊಯ್ದಿದ್ದೀರಿ. ಈ ಮೂಲಕ ಹರಿಯಾಣದಲ್ಲಿ ಬಿಜೆಪಿ ಐತಿಹಾಸಿಕ ಗೆಲುವು ಸಾಧಿಸಿದೆ” ಎಂದು ಅವರು ಸಂತಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಫಲಿತಾಂಶ ಒಪ್ಪಿಕೊಳ್ಳಲು ಸಾಧ್ಯವಿಲ್ಲ; ಹರಿಯಾಣ ಮತ ಎಣಿಕೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಕಾಂಗ್ರೆಸ್

ಇದರ ನಡುವೆ ಹರಿಯಾಣ ವಿಧಾನಸಭಾ ಚುನಾವಣಾ ತೀರ್ಪಿನ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಕಾಂಗ್ರೆಸ್, ಇವಿಎಂ ದುರ್ಬಳಕೆಯಾಗಿದೆ ಎಂದು ಹೇಳಿಕೊಂಡಿದೆ ಮತ್ತು ಬಿಜೆಪಿಯು ಜನರ ಇಚ್ಛೆಯನ್ನು ಬುಡಮೇಲು ಮಾಡಿದೆ ಎಂದು ಆರೋಪಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಚನ್ನಪಟ್ಟಣ ಕ್ಷೇತ್ರಕ್ಕೆ ಅಭ್ಯರ್ಥಿ ಯಾರೆಂದು ಕೇಳಿದರೆ ಡಾ ಮಂಜುನಾಥ್ ಉತ್ತರ!
ಚನ್ನಪಟ್ಟಣ ಕ್ಷೇತ್ರಕ್ಕೆ ಅಭ್ಯರ್ಥಿ ಯಾರೆಂದು ಕೇಳಿದರೆ ಡಾ ಮಂಜುನಾಥ್ ಉತ್ತರ!
ನಿಯಮ ಮುರಿದ ಸ್ಪರ್ಧಿಗಳು, ಕಠಿಣ ಶಿಕ್ಷೆ ಕೊಟ್ಟ ಬಿಗ್​ಬಾಸ್
ನಿಯಮ ಮುರಿದ ಸ್ಪರ್ಧಿಗಳು, ಕಠಿಣ ಶಿಕ್ಷೆ ಕೊಟ್ಟ ಬಿಗ್​ಬಾಸ್
ಸಿದ್ದರಾಮಯ್ಯ ಮತ್ತು ಹರಿಯಾಣ ಸೋಲಿನ ನಡುವೆ ಸಂಬಂಧವಿಲ್ಲ: ಡಿಕೆ ಶಿವಕುಮಾರ್
ಸಿದ್ದರಾಮಯ್ಯ ಮತ್ತು ಹರಿಯಾಣ ಸೋಲಿನ ನಡುವೆ ಸಂಬಂಧವಿಲ್ಲ: ಡಿಕೆ ಶಿವಕುಮಾರ್
70ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಲೈವ್​ ನೋಡಿ..
70ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಲೈವ್​ ನೋಡಿ..
ದರ್ಶನ್​ ಜಾಮೀನು ಅರ್ಜಿ ವಿಚಾರಣೆ ಲೈವ್; ಇಂದಾದರೂ ದಾಸನಿಗೆ ಸಿಗುತ್ತಾ ಬೇಲ್?
ದರ್ಶನ್​ ಜಾಮೀನು ಅರ್ಜಿ ವಿಚಾರಣೆ ಲೈವ್; ಇಂದಾದರೂ ದಾಸನಿಗೆ ಸಿಗುತ್ತಾ ಬೇಲ್?
ಅಪ್ರಸ್ತುತವಾಗಿದ್ದರೂ ಬಸನಗೌಡ ಯತ್ನಾಳ್ ಹೆಸರು ಉಲ್ಲೇಖಿಸಿದ ಜಮೀರ್
ಅಪ್ರಸ್ತುತವಾಗಿದ್ದರೂ ಬಸನಗೌಡ ಯತ್ನಾಳ್ ಹೆಸರು ಉಲ್ಲೇಖಿಸಿದ ಜಮೀರ್
ಹರಿಯಾಣದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೋಲಾಗಿರೋದು ಶಿವಕುಮಾರ್​​ಗೆ ಗೊತ್ತಿಲ್ಲ
ಹರಿಯಾಣದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೋಲಾಗಿರೋದು ಶಿವಕುಮಾರ್​​ಗೆ ಗೊತ್ತಿಲ್ಲ
ಮೈಸೂರು ಕಾರ್ಯಕರ್ತನ ಮನೆಯಲ್ಲಿ ಸ್ಪೆಷಲ್ ದೋಸೆ ಸವಿದ ಸತೀಶ್ ಜಾರಕಿಹೊಳಿ!
ಮೈಸೂರು ಕಾರ್ಯಕರ್ತನ ಮನೆಯಲ್ಲಿ ಸ್ಪೆಷಲ್ ದೋಸೆ ಸವಿದ ಸತೀಶ್ ಜಾರಕಿಹೊಳಿ!
ಸಿಎಂ ಬದಲಾಯಿಸುವ ಸನ್ನಿವೇಶ ರಾಜ್ಯದಲ್ಲಿ ಸೃಷ್ಟಿಯಾಗಿಲ್ಲ: ಜಿ ಪರಮೇಶ್ವರ್
ಸಿಎಂ ಬದಲಾಯಿಸುವ ಸನ್ನಿವೇಶ ರಾಜ್ಯದಲ್ಲಿ ಸೃಷ್ಟಿಯಾಗಿಲ್ಲ: ಜಿ ಪರಮೇಶ್ವರ್
IND vs BAN: ಡೋಲು ಬಜಾನದೊಂದಿಗೆ ಟೀಮ್ ಇಂಡಿಯಾಗೆ ಭರ್ಜರಿ ಸ್ವಾಗತ
IND vs BAN: ಡೋಲು ಬಜಾನದೊಂದಿಗೆ ಟೀಮ್ ಇಂಡಿಯಾಗೆ ಭರ್ಜರಿ ಸ್ವಾಗತ