ನವದೆಹಲಿ: ಹರಿಯಾಣದಲ್ಲಿ ಬಿಜೆಪಿ ಬಹುಮತ ಪಡೆಯುವ ಮೂಲಕ ಸರ್ಕಾರ ರಚಿಸಲು ಸಜ್ಜಾಗಿದೆ. ಈಗಾಗಲೇ ಬಿಜೆಪಿ ನಯಾಬ್ ಸಿಂಗ್ ಸೈನಿ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಿಸಿತ್ತು. ಹೀಗಾಗಿ, ಈ ಚುನಾವಣೆಯ ಗೆಲುವಿಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿಯ ಹಿರಿಯ ನಾಯಕರು ನಯಾಬ್ ಸಿಂಗ್ ಸೈನಿ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಚುನಾವಣಾ ಫಲಿತಾಂಶದ ಬಳಿಕ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಹರಿಯಾಣದಲ್ಲಿ ಸ್ಪಷ್ಟ ಬಹುಮತ ನೀಡುವ ಮೂಲಕ ಮತ್ತೆ ಸರ್ಕಾರ ರಚಿಸಲು ಅವಕಾಶ ನೀಡಿದ ಜನತೆಗೆ ಸೆಲ್ಯೂಟ್ ಎಂದಿದ್ದಾರೆ.
ಹರಿಯಾಣದಲ್ಲಿ ಬಿಜೆಪಿಯ ಸತತ ಮೂರನೇ ಅವಧಿಯ ದಾಖಲೆಯು ಅಭಿವೃದ್ಧಿ ಮತ್ತು ಉತ್ತಮ ಆಡಳಿತದ ರಾಜಕೀಯಕ್ಕೆ ಸಿಕ್ಕ ವಿಜಯವಾಗಿದೆ ಎಂದು ಮೋದಿ ಹೇಳಿದ್ದಾರೆ. ಹರಿಯಾಣದಲ್ಲಿ ಬಿಜೆಪಿ 47 ಸ್ಥಾನಗಳನ್ನು ಗೆದ್ದು, 90 ಸದಸ್ಯ ಬಲದ ವಿಧಾನಸಭೆಯಲ್ಲಿ ಅರ್ಧದಷ್ಟು ಸಂಖ್ಯೆಯನ್ನು ದಾಟಿದೆ. ಇನ್ನೂ ಒಂದು ಸ್ಥಾನದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ ಎಂದು ಚುನಾವಣಾ ಆಯೋಗ ಘೋಷಿಸಿದ ನಂತರ ಎಕ್ಸ್ನಲ್ಲಿ ಪೋಸ್ಟ್ ಮಾಡಿದ ಪ್ರಧಾನಿ ಮೋದಿ, ರಾಜ್ಯದ ಜನತೆಗೆ ಕೃತಜ್ಞತೆ ಸಲ್ಲಿಸಿದರು.
ಇದನ್ನೂ ಓದಿ: Haryana Results: ಹರಿಯಾಣದಲ್ಲೂ ಸಿಎಂ ಅಭ್ಯರ್ಥಿಯ ಆಯ್ಕೆಯಲ್ಲಿ ಪ್ರಯೋಗ ಮಾಡಿ ಗೆದ್ದ ಬಿಜೆಪಿ
हरियाणा का हृदय से आभार!
भारतीय जनता पार्टी को एक बार फिर स्पष्ट बहुमत देने के लिए मैं हरियाणा की जनशक्ति को नमन करता हूं। यह विकास और सुशासन की राजनीति की जीत है। मैं यहां के लोगों को विश्वास दिलाता हूं कि उनकी आकांक्षाओं को पूरा करने के लिए हम कोई कोर-कसर नहीं छोड़ेंगे।
— Narendra Modi (@narendramodi) October 8, 2024
ಈ ಗೆಲುವಿಗಾಗಿ ಪ್ರಧಾನಮಂತ್ರಿ ಮೋದಿ ಪಕ್ಷದ ಎಲ್ಲಾ ಕಾರ್ಯಕರ್ತರನ್ನು ಅಭಿನಂದಿಸಿದರು. ಬಿಜೆಪಿ ಐತಿಹಾಸಿಕ ಗೆಲುವು ಸಾಧಿಸಲು ಕಾರ್ಯಕರ್ತರ ಶ್ರಮ ಕಾರಣ ಎಂದು ಹೇಳಿದರು. “ಈ ಮಹಾನ್ ಗೆಲುವಿಗಾಗಿ ಅವಿರತವಾಗಿ ಮತ್ತು ಸಂಪೂರ್ಣ ಸಮರ್ಪಣಾಭಾವದಿಂದ ದುಡಿದ ನನ್ನ ಪಕ್ಷದ ಎಲ್ಲಾ ಕಾರ್ಯಕರ್ತರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು! ನೀವು ರಾಜ್ಯದ ಜನರಿಗೆ ಪೂರ್ಣವಾಗಿ ಸೇವೆ ಸಲ್ಲಿಸಿದ್ದಲ್ಲದೆ, ನಮ್ಮ ಅಭಿವೃದ್ಧಿಯ ಕಾರ್ಯಸೂಚಿಯನ್ನು ಅವರ ಬಳಿಗೆ ಕೊಂಡೊಯ್ದಿದ್ದೀರಿ. ಈ ಮೂಲಕ ಹರಿಯಾಣದಲ್ಲಿ ಬಿಜೆಪಿ ಐತಿಹಾಸಿಕ ಗೆಲುವು ಸಾಧಿಸಿದೆ” ಎಂದು ಅವರು ಸಂತಸ ವ್ಯಕ್ತಪಡಿಸಿದ್ದಾರೆ.
इस महाविजय के लिए अथक परिश्रम और पूरे समर्पण भाव से काम करने वाले अपने सभी कार्यकर्ता साथियों को भी मेरी बहुत-बहुत बधाई! आपने ना केवल राज्य की जनता-जनार्दन की भरपूर सेवा की है, बल्कि विकास के हमारे एजेंडे को भी उन तक पहुंचाया है। इसी का नतीजा है कि भाजपा को हरियाणा में यह…
— Narendra Modi (@narendramodi) October 8, 2024
ಇದನ್ನೂ ಓದಿ: ಫಲಿತಾಂಶ ಒಪ್ಪಿಕೊಳ್ಳಲು ಸಾಧ್ಯವಿಲ್ಲ; ಹರಿಯಾಣ ಮತ ಎಣಿಕೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಕಾಂಗ್ರೆಸ್
ಇದರ ನಡುವೆ ಹರಿಯಾಣ ವಿಧಾನಸಭಾ ಚುನಾವಣಾ ತೀರ್ಪಿನ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಕಾಂಗ್ರೆಸ್, ಇವಿಎಂ ದುರ್ಬಳಕೆಯಾಗಿದೆ ಎಂದು ಹೇಳಿಕೊಂಡಿದೆ ಮತ್ತು ಬಿಜೆಪಿಯು ಜನರ ಇಚ್ಛೆಯನ್ನು ಬುಡಮೇಲು ಮಾಡಿದೆ ಎಂದು ಆರೋಪಿಸಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ