AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ಕ ಮಮತಾ ಎಂದೂ ಪ್ರೀತಿ ತೋರಿಸಿಲ್ಲ, ಮೊದಲಿನಿಂದಲೂ ದ್ರೋಹ ಮಾಡುತ್ತಲೇ ಬಂದಿದ್ದಾರೆ: ಸುವೇಂದು ಭೇಟಿಯಾದ ಬಾಬುನ್ ಬ್ಯಾನರ್ಜಿ

ಸ್ಯಾಮ್ ಪಿತ್ರೋಡಾ ರಾಹುಲ್ ಗಾಂಧಿ ಅವರನ್ನು ಸಮರ್ಥಿಸಿಕೊಂಡಿದ್ದು, 'ತಪ್ಪುಗಳು ಸಹಜ' ಎಂದಿದ್ದಾರೆ. ಮೋದಿ ಟೀಕೆಗೆ ತಿರುಗೇಟು ನೀಡಿ, ವಿದೇಶದಲ್ಲಿ ಭಾರತದ ಸಮಸ್ಯೆ ಚರ್ಚೆ ಸರಿಯಾಗಿದೆ ಎಂದಿದ್ದಾರೆ. ರಾಹುಲ್ ಗಾಂಧಿ ಅವರ ಅಮೆರಿಕ ಪ್ರವಾಸ ಮತ್ತು ಸೋನಿಯಾ ಗಾಂಧಿ ಆತ್ಮಕಥನಕ್ಕೂ ಪಿತ್ರೋಡಾ ಬೆಂಬಲ ನೀಡಿದ್ದಾರೆ. ಯುವಜನರ ಸಮಸ್ಯೆಗಳಿಗೆ ಆದ್ಯತೆ ನೀಡುವಂತೆ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

ಅಕ್ಕ ಮಮತಾ ಎಂದೂ ಪ್ರೀತಿ ತೋರಿಸಿಲ್ಲ, ಮೊದಲಿನಿಂದಲೂ ದ್ರೋಹ ಮಾಡುತ್ತಲೇ ಬಂದಿದ್ದಾರೆ: ಸುವೇಂದು ಭೇಟಿಯಾದ ಬಾಬುನ್ ಬ್ಯಾನರ್ಜಿ
ಸುವೇಂದು ಅಧಿಕಾರಿ
ನಯನಾ ರಾಜೀವ್
|

Updated on:Nov 11, 2026 | 2:45 PM

Share

ಕೋಲ್ಕತ್ತಾ, ನವೆಂಬರ್ 11: ಪಶ್ಚಿಮ ಬಂಗಾಳ ರಾಜಕೀಯದಲ್ಲಿ ಇದೀಗ ಹೊಸ ಚರ್ಚೆ ಶುರುವಾಗಿದೆ. ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸಹೋದರ ಬಾಬುನ್ ಬ್ಯಾನರ್ಜಿ, ತಮ್ಮ ಅಕ್ಕನ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮತ್ತೊಂದೆಡೆ, ಮುಖ್ಯಮಂತ್ರಿ ಸುವೇಂದು ಅಧಿಕಾರಿಯನ್ನು ಭೇಟಿಯಾಗಿ ಅವರಿಗೆ ಬಹಿರಂಗವಾಗಿ ಬೆಂಬಲ ಸೂಚಿಸಿದ್ದಾರೆ. ಮಮತಾ ಅವರ ಕುಟುಂಬದೊಳಗಿನ ಭಿನ್ನಾಭಿಪ್ರಾಯ ಇದೀಗ ರಾಜಕೀಯ ಚರ್ಚೆಯ ವಿಷಯವಾಗಿದೆ.

“ಆರಂಭದಿಂದಲೂ ನನಗೆ ದ್ರೋಹ ಮಾಡಿದ್ದಾರೆ” ಎಂದ ಬಾಬುನ್

ಮಮತಾ ಬ್ಯಾನರ್ಜಿ ತಮ್ಮ ಜೀವನದಲ್ಲಿ ತನಗಾಗಿ ಏನೂ ಮಾಡಿಲ್ಲ. ಆರಂಭದಿಂದಲೂ ತಮಗೆ ದ್ರೋಹ ಮಾಡಿದ್ದಾರೆ ಎಂದು ಬಾಬುನ್ ಆರೋಪಿಸಿದ್ದಾರೆ. ಅಕ್ಕನಿಂದ ತಮಗೆ ಪ್ರೀತಿ ಮತ್ತು ಆತ್ಮೀಯತೆ ಸಿಕ್ಕಿಲ್ಲ ಎಂದೂ ಅಸಮಾಧಾನ ಹೊರಹಾಕಿದ್ದಾರೆ. ಭಾಯಿ ದೂಜ್ ಹಬ್ಬಕ್ಕೆ ಮಮತಾ ಆಹ್ವಾನಿಸಿದರೂ ಅವರ ಮನೆಗೆ ಹೋಗುವುದಿಲ್ಲ ಎಂದು ಬಾಬುನ್ ಹೇಳಿದ್ದಾರೆ. ಮಮತಾ ಅವರು ತಮ್ಮ ರಾಜಕೀಯ ನಿರ್ಧಾರಗಳನ್ನು ತೆಗೆದುಕೊಂಡಾಗಲೂ ಅಭಿಷೇಕ್ ಬ್ಯಾನರ್ಜಿ ಅವರ ಹಿತಾಸಕ್ತಿಯನ್ನೇ ಗಮನದಲ್ಲಿಟ್ಟುಕೊಂಡಿದ್ದಾರೆ ಎಂಬುದು ಅವರ ಆರೋಪ.

ಸುವೇಂದು ಅಧಿಕಾರಿಗೆ ಬಾಬುನ್ ಬಹಿರಂಗ ಬೆಂಬಲ

ಕಾಳಿ ಪೂಜೆಯ ಸಂದರ್ಭದಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ, ಕೋಲ್ಕತ್ತಾದ ಕಾಳಿಘಾಟ್‌ನಲ್ಲಿರುವ ಮಮತಾ ಬ್ಯಾನರ್ಜಿ ನಿವಾಸದ ಸಮೀಪದ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ವೇಳೆ ಬಾಬುನ್ ಬ್ಯಾನರ್ಜಿ ಸ್ವತಃ ಮುಂದೆ ಬಂದು ಮುಖ್ಯಮಂತ್ರಿಯನ್ನು ಸ್ವಾಗತಿಸಿದ್ದರು. ಸುವೇಂದು ಕಾರಿನಿಂದ ಇಳಿಯುತ್ತಿದ್ದಂತೆ ಬಾಬುನ್ ಅವರ ಪಾದಗಳಿಗೆ ನಮಸ್ಕರಿಸಿ, ಹಾರ ಹಾಕಿ ಗೌರವಿಸಿದರು. ಬಳಿಕ ಸುವೇಂದು ಕಾಳಿ ದೇವಿಯ ಆರತಿಯಲ್ಲಿ ಭಾಗವಹಿಸಿದರು.

ಈ ಭೇಟಿಯ ಬಗ್ಗೆ ಮಾತನಾಡಿದ ಬಾಬುನ್, “ಸುವೇಂದು ಅಧಿಕಾರಿ ಕೊಟ್ಟ ಮಾತನ್ನು ಉಳಿಸಿಕೊಳ್ಳುವ ವ್ಯಕ್ತಿ. ಅವರು ನನಗೆ ಹಲವು ಸಂದರ್ಭಗಳಲ್ಲಿ ಬೆಂಬಲ ನೀಡಿದ್ದಾರೆ. ನಾನು ಅವರೊಂದಿಗೆ ಇದ್ದೇನೆ. ನೀವು ಮುಂದೆ ಸಾಗಿರಿ ಎಂದು ಅವರಿಗೆ ಹೇಳಿದ್ದೇನೆ” ಎಂದು ತಿಳಿಸಿದ್ದಾರೆ.

ಸುವೇಂದು ಅವರನ್ನು ತಮ್ಮ ಹಿರಿಯ ಸಹೋದರನಂತೆ ಗೌರವಿಸುವುದಾಗಿಯೂ ಬಾಬುನ್ ಹೇಳಿದ್ದಾರೆ. ಹೀಗಾಗಿ, ಮಮತಾ ಅವರ ಸಹೋದರನ ಈ ನಡೆ ರಾಜಕೀಯವಾಗಿ ಗಮನ ಸೆಳೆದಿದೆ.

ಇದನ್ನು ಓದಿ:

‘ದೀದಿ ನಂಬರ್ 1’ ಶೋಗೆ ರಚನಾ ಬ್ಯಾನರ್ಜಿ ವಿದಾಯ? ಮತ್ತೊಬ್ಬ ನಾಯಕಿಗೆ ಆಫರ್ ನೀಡಿದ ವಾಹಿನಿ

2024ರಲ್ಲೇ ಬಿರುಕು ಬಿಟ್ಟಿದ್ದ ಅಕ್ಕ-ತಮ್ಮನ ಸಂಬಂಧ

ಮಮತಾ ಬ್ಯಾನರ್ಜಿ ಮತ್ತು ಬಾಬುನ್ ನಡುವಿನ ಭಿನ್ನಾಭಿಪ್ರಾಯ 2024ರ ಲೋಕಸಭೆ ಚುನಾವಣೆಗೆ ಮುನ್ನವೇ ಬಹಿರಂಗವಾಗಿತ್ತು. ಹೌರಾ ಲೋಕಸಭಾ ಕ್ಷೇತ್ರದಿಂದ ತೃಣಮೂಲ ಕಾಂಗ್ರೆಸ್ ಹಾಲಿ ಸಂಸದ ಪ್ರಸೂನ್ ಬ್ಯಾನರ್ಜಿ ಅವರಿಗೆ ಮತ್ತೆ ಟಿಕೆಟ್ ನೀಡಿದ್ದಕ್ಕೆ ಬಾಬುನ್ ವಿರೋಧ ವ್ಯಕ್ತಪಡಿಸಿದ್ದರು. ತಮಗೆ ಅವಕಾಶ ನೀಡದಿದ್ದರೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿಯೂ ಹೇಳಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ್ದ ಮಮತಾ, ಬಾಬುನ್ ಅವರನ್ನು ಕುಟುಂಬದ ಸದಸ್ಯ ಎಂದು ಪರಿಗಣಿಸುವುದಿಲ್ಲ ಮತ್ತು ಅವರೊಂದಿಗಿನ ಸಂಬಂಧವನ್ನು ಕಡಿದುಕೊಳ್ಳುವುದಾಗಿ ಸಾರ್ವಜನಿಕವಾಗಿ ಘೋಷಿಸಿದ್ದರು. ಈ ಘಟನೆ ಬಳಿಕ ಇಬ್ಬರ ನಡುವಿನ ಅಂತರ ಮತ್ತಷ್ಟು ಹೆಚ್ಚಾಯಿತು.

ರಾಜಕೀಯ ಬದಲಾವಣೆಯ ಬಳಿಕ ಹೊಸ ಬೆಳವಣಿಗೆ

ಪಶ್ಚಿಮ ಬಂಗಾಳದಲ್ಲಿ ಅಧಿಕಾರ ಬದಲಾವಣೆಯಾದ ಬಳಿಕ ಬಾಬುನ್ ಅವರ ರಾಜಕೀಯ ನಿಲುವು ಮತ್ತಷ್ಟು ಚರ್ಚೆಗೆ ಬಂದಿದೆ. ಅವರು ತೃಣಮೂಲ ಕಾಂಗ್ರೆಸ್ ನಾಯಕರ ವಿರುದ್ಧ ಅಸಮಾಧಾನ ವ್ಯಕ್ತಪಡಿಸುತ್ತಿದ್ದು, ಬಿಜೆಪಿ ನಾಯಕ ಸುವೇಂದು ಅಧಿಕಾರಿಯನ್ನು ಹೊಗಳುತ್ತಿದ್ದಾರೆ. ಸುವೇಂದು ಅಧಿಕಾರಿ ಕೂಡ ಈ ಭೇಟಿಯ ಬಗ್ಗೆ ಪ್ರತಿಕ್ರಿಯಿಸಿದ್ದು, ತಾವು ಆ ಕ್ಷೇತ್ರದ ಶಾಸಕರಾಗಿರುವುದರಿಂದ ಸ್ಥಳೀಯರ ಆಹ್ವಾನದ ಮೇರೆಗೆ ಕಾಳಿ ಪೂಜೆಗೆ ಬಂದಿರುವುದಾಗಿ ತಿಳಿಸಿದ್ದಾರೆ. ಆದರೆ ಬಾಬುನ್ ಅವರ ಬಹಿರಂಗ ಬೆಂಬಲದಿಂದ ಈ ಭೇಟಿ ರಾಜಕೀಯ ಮಹತ್ವ ಪಡೆದುಕೊಂಡಿದೆ.

ತೃಣಮೂಲ ಕಾಂಗ್ರೆಸ್ ನಾಯಕ ಕುನಾಲ್ ಘೋಷ್, ಮಮತಾ ಅವರು ಬಹಳ ಹಿಂದೆಯೇ ಬಾಬುನ್ ಜೊತೆಗಿನ ಸಂಬಂಧ ಕಡಿದುಕೊಂಡಿದ್ದಾರೆ ಎಂದು ಹೇಳಿದ್ದಾರೆ. ಹೀಗಾಗಿ, ಈ ಬೆಳವಣಿಗೆ ಕೇವಲ ಕುಟುಂಬದ ಭಿನ್ನಾಭಿಪ್ರಾಯವಲ್ಲ, ಪಶ್ಚಿಮ ಬಂಗಾಳದ ಬದಲಾಗಿರುವ ರಾಜಕೀಯ ಪರಿಸ್ಥಿತಿಯಲ್ಲೂ ಗಮನ ಸೆಳೆಯುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:41 pm, Wed, 11 November 26

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ನಮ್ಮ ಮೆಟ್ರೋ; ಮುಂದಿನ ವರ್ಷ ಕಾರ್ಯರೂಪಕ್ಕೆ: ಕೃಷ್ಣ ಬೈರೇಗೌಡ
ನಮ್ಮ ಮೆಟ್ರೋ; ಮುಂದಿನ ವರ್ಷ ಕಾರ್ಯರೂಪಕ್ಕೆ: ಕೃಷ್ಣ ಬೈರೇಗೌಡ
ನಂದಿನಿ ಬೆನ್ನಲ್ಲೇ ಮದರ್ ಡೈರಿ ಹಾಲಿನ ದರದಲ್ಲಿಯೂ ಏರಿಕೆ
ನಂದಿನಿ ಬೆನ್ನಲ್ಲೇ ಮದರ್ ಡೈರಿ ಹಾಲಿನ ದರದಲ್ಲಿಯೂ ಏರಿಕೆ
ಬಸ್​​ ಟಿಕೆಟ್​​ ದರ ಏರಿಕೆ ಬಳಿಕವೂ ಬಿಎಂಟಿಸಿಯಿಂದ 'ಡಕೋಟಾ ಬಸ್'​​ ಸೇವೆ!
ಬಸ್​​ ಟಿಕೆಟ್​​ ದರ ಏರಿಕೆ ಬಳಿಕವೂ ಬಿಎಂಟಿಸಿಯಿಂದ 'ಡಕೋಟಾ ಬಸ್'​​ ಸೇವೆ!
ಮಂತ್ರಘೋಷಗಳು ಮೊಳಗುತ್ತಿದ್ದಂತೆ ತೆರೆದುಕೊಳ್ಳುವ ದೇಗುಲದ ಗರ್ಭಗುಡಿ ಬಾಗಿಲು!
ಮಂತ್ರಘೋಷಗಳು ಮೊಳಗುತ್ತಿದ್ದಂತೆ ತೆರೆದುಕೊಳ್ಳುವ ದೇಗುಲದ ಗರ್ಭಗುಡಿ ಬಾಗಿಲು!
‘ಒಂದು ತಿಂಗಳು ಹೊರಗಿದ್ದ ಬಚ್ಚಾ ನೀನು’; ಮಂಜುಗೆ ಪ್ರಶಾಂತ್ ಅವಾಜ್
‘ಒಂದು ತಿಂಗಳು ಹೊರಗಿದ್ದ ಬಚ್ಚಾ ನೀನು’; ಮಂಜುಗೆ ಪ್ರಶಾಂತ್ ಅವಾಜ್
ಹುಟ್ಟುಹಬ್ಬಕ್ಕೆ ವಿಶೇಷ ಪೂಜೆ ಮಾಡಿಸಿದ ವಿಜಯಲಕ್ಷ್ಮಿ ದರ್ಶನ್: ವಿಡಿಯೋ
ಹುಟ್ಟುಹಬ್ಬಕ್ಕೆ ವಿಶೇಷ ಪೂಜೆ ಮಾಡಿಸಿದ ವಿಜಯಲಕ್ಷ್ಮಿ ದರ್ಶನ್: ವಿಡಿಯೋ
ಇಲ್ಲಿ ಪರಸ್ಪರ ಸಗಣಿ ಗಟ್ಟಿ ಎಸೆದುಕೊಳ್ಳೋದೇ ಹಬ್ಬದ ಮಜಾ!
ಇಲ್ಲಿ ಪರಸ್ಪರ ಸಗಣಿ ಗಟ್ಟಿ ಎಸೆದುಕೊಳ್ಳೋದೇ ಹಬ್ಬದ ಮಜಾ!
ಹಾಸನಾಂಬೆ ಗರ್ಭಗುಡಿ ಬಾಗಿಲು ಮುಚ್ಚುವ ಬಗ್ಗೆ ದೇಗುಲದ ಅರ್ಚಕ ಹೇಳಿದ್ದೇನು?
ಹಾಸನಾಂಬೆ ಗರ್ಭಗುಡಿ ಬಾಗಿಲು ಮುಚ್ಚುವ ಬಗ್ಗೆ ದೇಗುಲದ ಅರ್ಚಕ ಹೇಳಿದ್ದೇನು?
ಪಟಾಕಿ ಶಬ್ದದಿಂದ ಹೃದಯಾಘಾತವಾಗಿ 6 ವರ್ಷದ ಡಾಬರ್​ಮನ್​​​​ ನಾಯಿ ಸಾವು
ಪಟಾಕಿ ಶಬ್ದದಿಂದ ಹೃದಯಾಘಾತವಾಗಿ 6 ವರ್ಷದ ಡಾಬರ್​ಮನ್​​​​ ನಾಯಿ ಸಾವು
ಅಂಗವಿಕಲನಂತೆ ನಟಿಸಿ ಭಿಕ್ಷಾಟನೆ ; ಯುವಕನನ್ನು ಹಿಡಿದು ಥಳಿಸಿದ ಸಾರ್ವಜನಿಕರು
ಅಂಗವಿಕಲನಂತೆ ನಟಿಸಿ ಭಿಕ್ಷಾಟನೆ ; ಯುವಕನನ್ನು ಹಿಡಿದು ಥಳಿಸಿದ ಸಾರ್ವಜನಿಕರು