AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿ ಒಳ್ಳೆಯ ವ್ಯಕ್ತಿ, ಕಠಿಣ ಪರಿಶ್ರಮಿ ಅವರೊಂದಿಗೆ ನನಗೆ ವೈಯಕ್ತಿಕ ದ್ವೇಷವಿಲ್ಲ: ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಹಿರಿಯ ನಾಯಕ ಸ್ಯಾಮ್ ಪಿತ್ರೋಡಾ, ಪ್ರಧಾನಿ ಮೋದಿ ಅವರನ್ನು "ಒಳ್ಳೆಯ ವ್ಯಕ್ತಿ, ಕಠಿಣ ಪರಿಶ್ರಮಿ, ಉತ್ತಮ ವಾಗ್ಮಿ" ಎಂದು ಹೊಗಳಿದ್ದಾರೆ. ವೈಯಕ್ತಿಕವಾಗಿ ಮೋದಿ ಬಗ್ಗೆ ಗೌರವವಿದ್ದರೂ, ಅವರ ರಾಜಕೀಯ ಸಿದ್ಧಾಂತಗಳ ಬಗ್ಗೆ ಭಿನ್ನಾಭಿಪ್ರಾಯಗಳಿವೆ ಎಂದು ಸ್ಪಷ್ಟಪಡಿಸಿದ್ದಾರೆ. ರಾಜಕೀಯ ವಿರೋಧಿಗಳಾಗಿದ್ದರೂ ವೈಯಕ್ತಿಕವಾಗಿ ಸ್ನೇಹ ಇರಬಹುದು, ಸಿದ್ಧಾಂತ ಮತ್ತು ವ್ಯಕ್ತಿಯನ್ನು ಪ್ರತ್ಯೇಕವಾಗಿ ನೋಡಬೇಕು ಎಂದು ಪಿತ್ರೋಡಾ ಒತ್ತಿ ಹೇಳಿದ್ದಾರೆ.

ಮೋದಿ ಒಳ್ಳೆಯ ವ್ಯಕ್ತಿ, ಕಠಿಣ ಪರಿಶ್ರಮಿ  ಅವರೊಂದಿಗೆ ನನಗೆ ವೈಯಕ್ತಿಕ ದ್ವೇಷವಿಲ್ಲ: ಸ್ಯಾಮ್ ಪಿತ್ರೋಡಾ
ನರೇಂದ್ರ ಮೋದಿ-ಸ್ಯಾಮ್ ಪಿತ್ರೋಡಾ Image Credit source: India TV
ನಯನಾ ರಾಜೀವ್
|

Updated on: Nov 12, 2026 | 1:37 PM

Share

ನವದೆಹಲಿ, ನವೆಂಬರ್ 12: ಪ್ರಧಾನಿ ನರೇಂದ್ರ ಮೋದಿ ಅವರನ್ನು ಕಾಂಗ್ರೆಸ್ ನಾಯಕ ಹಾಗೂ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ಹೊಗಳಿದ್ದಾರೆ. ಮೋದಿ ಒಬ್ಬ ಒಳ್ಳೆಯ ವಾಗ್ಮಿ, ಕಠಿಣ ಪರಿಶ್ರಮಿ ಹಾಗೂ ವೈಯಕ್ತಿಕವಾಗಿ ಆತ್ಮೀಯ ವ್ಯಕ್ತಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅವರೊಂದಿಗೆ ತಮಗೆ ಯಾವುದೇ ವೈಯಕ್ತಿಕ ದ್ವೇಷ ಅಥವಾ ಸಮಸ್ಯೆಗಳಿಲ್ಲ. ಆದರೆ ಅವರ ರಾಜಕೀಯ ಸಿದ್ಧಾಂತಗಳು ಮತ್ತು ದೇಶದ ಬಗ್ಗೆ ಇರುವ ದೃಷ್ಟಿಕೋನದಲ್ಲಿ ಭಿನ್ನಾಭಿಪ್ರಾಯಗಳಿವೆ ಎಂದು ಸ್ಪಷ್ಟಪಡಿಸಿದ್ದಾರೆ.

ಐಎಎನ್‌ಎಸ್ ಸುದ್ದಿ ಸಂಸ್ಥೆಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಸ್ಯಾಮ್ ಪಿತ್ರೋಡಾ, ಪ್ರಧಾನಿ ಮೋದಿ ಅವರನ್ನು ತಾವು ವ್ಯಕ್ತಿಯಾಗಿ ಗೌರವಿಸುವುದಾಗಿ ಹೇಳಿದ್ದಾರೆ. ಮೋದಿ ಗುಜರಾತ್‌ನವರು. ಅವರೊಂದಿಗೆ ತಮಗೆ ಸ್ನೇಹಪೂರ್ಣ ಸಂಬಂಧವಿದೆ. ತಮ್ಮ ಪತ್ನಿಯೊಂದಿಗೆ ಹಲವು ಬಾರಿ ಮೋದಿಯನ್ನು ಭೇಟಿಯಾಗಿದ್ದೇನೆ. ವೈಯಕ್ತಿಕವಾಗಿ ಅವರು ತುಂಬಾ ಆತ್ಮೀಯರು, ದಯಾಳು ಹಾಗೂ ಕಾಳಜಿ ವಹಿಸುವ ವ್ಯಕ್ತಿ ಎಂದು ಪಿತ್ರೋಡಾ ಹೇಳಿದ್ದಾರೆ.

ಮೋದಿಯವರೊಂದಿಗೆ ವೈಯಕ್ತಿಕ ಸ್ನೇಹ, ರಾಜಕೀಯವಾಗಿ ಭಿನ್ನಾಭಿಪ್ರಾಯ

ಪ್ರಧಾನಿ ಮೋದಿ ಅವರೊಂದಿಗೆ ಭಿನ್ನಾಭಿಪ್ರಾಯ ಹೊಂದಿದ್ದರೂ ಅವರೊಂದಿಗೆ ಕುಳಿತು ಊಟ ಮಾಡಬಹುದು, ನಗುತ್ತಾ ಮಾತನಾಡಬಹುದು ಎಂದು ಪಿತ್ರೋಡಾ ಹೇಳಿದ್ದಾರೆ. ಅವರ ವ್ಯಕ್ತಿತ್ವದ ಬಗ್ಗೆ ನನಗೆ ಯಾವುದೇ ವಿರೋಧವಿಲ್ಲ. ಆದರೆ ಅವರ ರಾಜಕೀಯ ಸಿದ್ಧಾಂತಗಳು ಮತ್ತು ಜಗತ್ತನ್ನು ನೋಡುವ ದೃಷ್ಟಿಕೋನದ ಬಗ್ಗೆ ನನ್ನದೇ ಆದ ಭಿನ್ನಾಭಿಪ್ರಾಯಗಳಿವೆ ಎಂದು ತಿಳಿಸಿದ್ದಾರೆ.

ವ್ಯಕ್ತಿಯೊಬ್ಬರ ವೈಯಕ್ತಿಕ ಗುಣ ಮತ್ತು ಅವರ ರಾಜಕೀಯ ವಿಚಾರಧಾರೆ ಎರಡನ್ನೂ ಪ್ರತ್ಯೇಕವಾಗಿ ನೋಡಬೇಕು. ವ್ಯಕ್ತಿಯೊಂದಿಗೆ ಸ್ನೇಹ ಹೊಂದಿದ್ದರೂ ಅವರ ಆಲೋಚನೆಗಳನ್ನು ಒಪ್ಪಲೇಬೇಕೆಂದಿಲ್ಲ ಎಂಬ ಅಭಿಪ್ರಾಯವನ್ನು ಅವರು ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಫ್ಯಾಕ್ಸ್ ಯಂತ್ರದಿಂದ ಇನ್‌ಸ್ಟಾಗ್ರಾಂ ರೀಲ್ಸ್‌ವರೆಗೆ, 25 ವರ್ಷಗಳಲ್ಲಿ ರಾಜಕೀಯ, ಮಾಧ್ಯಮದ ಸ್ವರೂಪ ಬದಲಾಗಿದೆ: ಮೋದಿ

ಸೋನಿಯಾ ಗಾಂಧಿ ಹೇಳಿಕೆಗೆ ಪಿತ್ರೋಡಾ ಪ್ರತಿಕ್ರಿಯೆ

2018ರಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಪ್ರಧಾನಿ ಮೋದಿಯವರ ಭಾಷಣದ ಶೈಲಿಯನ್ನು ಉಲ್ಲೇಖಿಸಿ ಅವರನ್ನು ಉತ್ತಮ ವಾಗ್ಮಿ ಎಂದು ಬಣ್ಣಿಸಿದ್ದರು. ಆದರೆ ಭಾಷಣ ಮಾಡುವಾಗ ಅವರು ತಪ್ಪು ಮಾಹಿತಿಯನ್ನು ನೀಡುತ್ತಾರೆ ಎಂಬ ಟೀಕೆಯನ್ನೂ ಮಾಡಿದ್ದರು. ಇದೀಗ ಸೋನಿಯಾ ಗಾಂಧಿಯವರ ಆ ಹೇಳಿಕೆಗೆ ಸಂಬಂಧಿಸಿದ ಪ್ರಶ್ನೆಗೆ ಉತ್ತರಿಸುವಾಗ ಪಿತ್ರೋಡಾ ಕೂಡ ಮೋದಿ ಅವರ ಭಾಷಣದ ಸಾಮರ್ಥ್ಯವನ್ನು ಮೆಚ್ಚಿದ್ದಾರೆ.

ಮೋದಿ ಒಳ್ಳೆಯ ವಾಗ್ಮಿ, ಜನರ ಮುಂದೆ ತಮ್ಮ ವಿಚಾರಗಳನ್ನು ಪರಿಣಾಮಕಾರಿಯಾಗಿ ಮಂಡಿಸುವ ಸಾಮರ್ಥ್ಯ ಹೊಂದಿದ್ದಾರೆ. ಜೊತೆಗೆ ಅವರು ತುಂಬಾ ಪರಿಶ್ರಮಿ ಎಂದು ಪಿತ್ರೋಡಾ ಹೇಳಿದ್ದಾರೆ.

ಈ ಹೇಳಿಕೆಯ ಹಿಂದಿನ ವಿಶೇಷತೆ ಏನು?

ಸ್ಯಾಮ್ ಪಿತ್ರೋಡಾ ಅವರ ಈ ಹೇಳಿಕೆ ರಾಜಕೀಯ ವಲಯದಲ್ಲಿ ಗಮನ ಸೆಳೆದಿದೆ. ಏಕೆಂದರೆ ಅವರು ಕಾಂಗ್ರೆಸ್‌ನ ಪ್ರಮುಖ ನಾಯಕರಲ್ಲಿ ಒಬ್ಬರಾಗಿದ್ದು, ಪ್ರಧಾನಿ ಮೋದಿ ಅವರ ರಾಜಕೀಯ ನೀತಿಗಳ ಬಗ್ಗೆ ಭಿನ್ನಾಭಿಪ್ರಾಯ ಹೊಂದಿದ್ದಾರೆ. ಆದರೂ ಮೋದಿಯವರ ವೈಯಕ್ತಿಕ ಗುಣಗಳನ್ನು ಬಹಿರಂಗವಾಗಿ ಮೆಚ್ಚಿಕೊಂಡಿದ್ದಾರೆ. ಇನ್ನೊಂದು ವಿಶೇಷವೆಂದರೆ, ಪಿತ್ರೋಡಾ ಅವರು ಮೋದಿಯವರ ಗುಜರಾತ್ ನಿವಾಸಕ್ಕೂ ಹಲವು ಬಾರಿ ಭೇಟಿ ನೀಡಿದ್ದಾರಂತೆ. ತಮ್ಮ ಪತ್ನಿಯೊಂದಿಗೂ ಮೋದಿಯನ್ನು ಭೇಟಿಯಾಗಿದ್ದಾಗಿ ಸಂದರ್ಶನದಲ್ಲಿ ತಿಳಿಸಿದ್ದಾರೆ.

ಅವರ ಮಾತಿನ ಮುಖ್ಯ ಸಂದೇಶ ಏನೆಂದರೆ, ರಾಜಕೀಯದಲ್ಲಿ ವಿರೋಧಿಗಳಾಗಿದ್ದರೂ ವೈಯಕ್ತಿಕವಾಗಿ ಸ್ನೇಹಿತರಾಗಿರಬಹುದು. ವ್ಯಕ್ತಿಯನ್ನು ವಿರೋಧಿಸುವುದಕ್ಕೂ ಅವರ ಸಿದ್ಧಾಂತವನ್ನು ವಿರೋಧಿಸುವುದಕ್ಕೂ ವ್ಯತ್ಯಾಸವಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ಕೆಎಸ್​ಆರ್​ಟಿಸಿ ಬಸ್ ಟಿಕೆಟ್ ಬೆಲೆ ಹೆಚ್ಚಳ ಆಯ್ತು ಈಗ ಬಾಡಿಗೆ ದರವೂ ಏರಿಕೆ!
ಕೆಎಸ್​ಆರ್​ಟಿಸಿ ಬಸ್ ಟಿಕೆಟ್ ಬೆಲೆ ಹೆಚ್ಚಳ ಆಯ್ತು ಈಗ ಬಾಡಿಗೆ ದರವೂ ಏರಿಕೆ!
ಮೈಸೂರಿನಲ್ಲಿ ಯುವತಿ ಜತೆ ರ್ಯಾಪಿಡೋ ಚಾಲಕ ಅವಾಚ್ಯ ಸಂಭಾಷಣೆ
ಮೈಸೂರಿನಲ್ಲಿ ಯುವತಿ ಜತೆ ರ್ಯಾಪಿಡೋ ಚಾಲಕ ಅವಾಚ್ಯ ಸಂಭಾಷಣೆ
ಸ್ಟಿಂಗ್ ಪ್ರಕರಣ: ವಿಡಿಯೋ ಮಾಡಿದ್ದೇ ಗೊತ್ತಿಲ್ಲವೆಂದ ಕೃಪಾ ಆಳ್ವ!
ಸ್ಟಿಂಗ್ ಪ್ರಕರಣ: ವಿಡಿಯೋ ಮಾಡಿದ್ದೇ ಗೊತ್ತಿಲ್ಲವೆಂದ ಕೃಪಾ ಆಳ್ವ!
ದಾವಣಗೆರೆಯ ಸೂಳೆಕರೆಗೆ ಅಪರೂಪದ ಅತಿಥಿ ಭೇಟಿ! ನೀರುನಾಯಿಗಳು ಪ್ರತ್ಯಕ್ಷ
ದಾವಣಗೆರೆಯ ಸೂಳೆಕರೆಗೆ ಅಪರೂಪದ ಅತಿಥಿ ಭೇಟಿ! ನೀರುನಾಯಿಗಳು ಪ್ರತ್ಯಕ್ಷ
ಡಿ.2ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ: ಬಿಗಿ ಭದ್ರತೆ
ಡಿ.2ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ: ಬಿಗಿ ಭದ್ರತೆ
ಕರಾವಳಿ ಬಳಿಕ ಉತ್ತರ ಕರ್ನಾಟಕದತ್ತ ಮುಖ ಮಾಡಿದ ಪ್ರಮೋದ್ ಶೆಟ್ಟಿ
ಕರಾವಳಿ ಬಳಿಕ ಉತ್ತರ ಕರ್ನಾಟಕದತ್ತ ಮುಖ ಮಾಡಿದ ಪ್ರಮೋದ್ ಶೆಟ್ಟಿ
ಪ್ರಧಾನಿ ಮೋದಿ ಬೆಂಗಳೂರು ಭೇಟಿಯ ಸಂಪೂರ್ಣ ವೇಳಾಪಟ್ಟಿ
ಪ್ರಧಾನಿ ಮೋದಿ ಬೆಂಗಳೂರು ಭೇಟಿಯ ಸಂಪೂರ್ಣ ವೇಳಾಪಟ್ಟಿ
ನಂಜನಗೂಡು ಸಿದ್ದೇಶ್ವರ ಜಾತ್ರೆ ಮೆರವಣಿಗೆ ವೇಳೆ ಗಲಾಟೆ, ಕಲ್ಲುತೂರಾಟ
ನಂಜನಗೂಡು ಸಿದ್ದೇಶ್ವರ ಜಾತ್ರೆ ಮೆರವಣಿಗೆ ವೇಳೆ ಗಲಾಟೆ, ಕಲ್ಲುತೂರಾಟ
Horoscope Today: ಕುಜ ಗ್ರಹವು ಕರ್ಕಾಟಕ ರಾಶಿಯಿಂದ ಸಿಂಹ ರಾಶಿಗೆ ಪ್ರವೇಶ
Horoscope Today: ಕುಜ ಗ್ರಹವು ಕರ್ಕಾಟಕ ರಾಶಿಯಿಂದ ಸಿಂಹ ರಾಶಿಗೆ ಪ್ರವೇಶ
ಬಿಗ್ ಬಾಸ್ ಮನೆಯಲ್ಲಿ ಗಾನವಿಗೆ ಮೆಮೋರಿ ಲಾಸ್? ಟಾಸ್ಕ್ ಬಳಿಕ ಏನೂ ನೆನಪಿಲ್ಲ
ಬಿಗ್ ಬಾಸ್ ಮನೆಯಲ್ಲಿ ಗಾನವಿಗೆ ಮೆಮೋರಿ ಲಾಸ್? ಟಾಸ್ಕ್ ಬಳಿಕ ಏನೂ ನೆನಪಿಲ್ಲ