Breaking News: ಪ್ರಧಾನಿ ಮೋದಿ ವಿರುದ್ಧ ದ್ವೇಷ ಭಾಷಣ ಪ್ರಕರಣ; ಎಸ್​ಪಿ ನಾಯಕ ಅಜಂ ಖಾನ್ ದೋಷಿ ಎಂದು ಘೋಷಣೆ

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿದ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ (ಎಸ್‌ಪಿ) ಶಾಸಕ ಅಜಂ ಖಾನ್‌ಗೆ ಶಿಕ್ಷೆ ವಿಧಿಸಲಾಗಿದೆ.

Breaking News: ಪ್ರಧಾನಿ ಮೋದಿ ವಿರುದ್ಧ ದ್ವೇಷ ಭಾಷಣ ಪ್ರಕರಣ; ಎಸ್​ಪಿ ನಾಯಕ ಅಜಂ ಖಾನ್ ದೋಷಿ ಎಂದು ಘೋಷಣೆ
ಅಜಂ ಖಾನ್
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Oct 27, 2022 | 2:55 PM

ರಾಂಪುರ: ಪ್ರಧಾನಿ ನರೇಂದ್ರ ಮೋದಿ (PM Narendra Modi) ವಿರುದ್ಧ ಉದ್ರೇಕಕಾರಿ ಭಾಷಣ ಮಾಡಿದ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ (ಎಸ್‌ಪಿ) ಶಾಸಕ ಮತ್ತು ಮಾಜಿ ಸಚಿವ ಅಜಂ ಖಾನ್ (Azam Khan) ಅವರನ್ನು ದೋಷಿ ಎಂದು ಘೋಷಿಸಲಾಗಿದೆ. ರಾಂಪುರ ನ್ಯಾಯಾಲಯವು ಇನ್ನು ಕೆಲವೇ ಕ್ಷಣಗಳಲ್ಲಿ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಲಿದೆ. ಕಳೆದ ಮೇ ತಿಂಗಳಲ್ಲಿ ಅಜಂ ಖಾನ್ ಹೊರ ಬಂದಿದ್ದರು. ಅಂದಿನಿಂದ ಅವರು ನಿರಂತರವಾಗಿ ಅನಾರೋಗ್ಯದಿಂದ ಬಳಲುತ್ತಿದ್ದರು. ಈ ಪ್ರಕರಣದಲ್ಲಿ ಅಜಂ ಖಾನ್ ವಿರುದ್ಧ ಕಠಿಣ ಶಿಕ್ಷೆಗೆ ಒತ್ತಾಯಿಸಲಾಗಿದೆ. ಮೂರು ಸೆಕ್ಷನ್‌ಗಳ ಅಡಿಯಲ್ಲಿ ಆಜಂ ಖಾನ್‌ಗೆ ಶಿಕ್ಷೆ ವಿಧಿಸಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿದ ಪ್ರಕರಣದಲ್ಲಿ ಅಜಂ ಖಾನ್‌ಗೆ ಶಿಕ್ಷೆ ವಿಧಿಸಲಾಗಿದೆ. ರಾಮ್‌ಪುರ ನ್ಯಾಯಾಲಯ ಅವರಿಗೆ ಶಿಕ್ಷೆ ವಿಧಿಸಿದೆ. 2019ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ರಾಂಪುರದಲ್ಲಿ ನಡೆದ ಸಭೆಯಲ್ಲಿ ಅಜಂ ಖಾನ್ ಅವರು ಪ್ರಧಾನಿ ಮೋದಿಯವರ ವಿರುದ್ಧ ಅಸಭ್ಯ ಟೀಕೆಗಳನ್ನು ಮಾಡಿದ್ದರು. ಈ ಸಂಬಂಧ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆದಿತ್ತು. ಈ ಪ್ರಕರಣದ ವಿಚಾರಣೆ ಇತ್ತೀಚೆಗೆ ಪೂರ್ಣಗೊಂಡಿತ್ತು. ಇಂದು ರಾಂಪುರ ನ್ಯಾಯಾಲಯ ತೀರ್ಪು ಪ್ರಕಟಿಸಿದ್ದು, ಇಂದು ಸಂಜೆ 4 ಗಂಟೆಗೆ ಶಿಕ್ಷೆ ವಿಧಿಸಲಿದೆ.

2019ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಮಿಲ್ಲತ್ ಪ್ರದೇಶದಲ್ಲಿ ಭಾಷಣ ಮಾಡುವಾಗ ಅಜಂ ಖಾನ್ ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುರಿಯಾಗಿಸಿಕೊಂಡು ಮಾತನಾಡಿದ್ದರು. ಪ್ರಚೋದನಕಾರಿ ಭಾಷಣ ಮಾಡಿದ ಅವರು, ದೇಶದ ಪರಿಸ್ಥಿತಿಗೆ ಪ್ರಧಾನಿ ಮೋದಿಯೇ ಕಾರಣ ಎಂದು ಆರೋಪಿಸಿದ್ದರು. ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ ಪ್ರಚೋದನಕಾರಿ ಹೇಳಿಕೆಯನ್ನೂ ನೀಡಿದ್ದರು. ಈ ಸಂಬಂಧ ಅವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಬಿಜೆಪಿ ನಾಯಕ ಆಕಾಶ್ ಸಕ್ಸೇನಾ ಅವರು ಅಜಂ ಖಾನ್ ವಿರುದ್ಧ ಅಸಭ್ಯ ಹೇಳಿಕೆ ಪ್ರಕರಣದಲ್ಲಿ ಕೇಸ್ ದಾಖಲಿಸಿದ್ದರು.

ಇದನ್ನೂ ಓದಿ: ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್‌ಗೆ ಮಧ್ಯಂತರ ಜಾಮೀನು ನಿರಾಕರಿಸಿದ ಸುಪ್ರೀಂಕೋರ್ಟ್ 

ರಾಂಪುರ ಎಂಪಿ- ಎಂಎಲ್‌ಎ ಕೋರ್ಟ್‌ನಲ್ಲಿ ಪ್ರಕರಣ ನಡೆಯುತ್ತಿದೆ. ಅಕ್ಟೋಬರ್ 21ರಂದು ಎಂಪಿ ಎಂಎಲ್ಎ ಕೋರ್ಟ್ ಈ ಪ್ರಕರಣದ ವಿಚಾರಣೆಯನ್ನು ಪೂರ್ಣಗೊಳಿಸಿತ್ತು. ನಂತರ ತೀರ್ಪನ್ನು ಕಾಯ್ದಿರಿಸಿತ್ತು. ಇಂದು ಅವರು ದೋಷಿ ಎಂದು ಘೋಷಿಸಲಾಗಿದ್ದು, ತೀರ್ಪಿನ ಪ್ರಮಾಣ ಇನ್ನೂ ಹೊರಬಿದ್ದಿಲ್ಲ. ಒಂದು ವೇಳೆ ಆಜಂ ಖಾನ್​ಗೆ 2 ವರ್ಷಕ್ಕಿಂತ ಹೆಚ್ಚು ಶಿಕ್ಷೆಯಾದರೆ ಅವರ ವಿಧಾನಸಭಾ ಸದಸ್ಯತ್ವವು ಹೋಗುತ್ತದೆ ಎನ್ನಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:45 pm, Thu, 27 October 22

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಬಹಳ ಸಲ ನನ್ನ ಮನೆಗೆ ಬಂದಿದ್ದಾರೆ: ಸತೀಶ್ ಜಾರಕಿಹೊಳಿ