ಅಮ್ಮನ ಅಂತ್ಯ ಸಂಸ್ಕಾರ ನಂತರ ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಮೋದಿ, ಇವರೇನಾ ನಿಜವಾದ ಹಿಂದೂ?; ಸಮಾಜವಾದಿ ಪಕ್ಷದ ನಾಯಕನ ಟ್ವೀಟ್

ಎಸ್‌ಪಿ ನಾಯಕ ಐಪಿ ಸಿಂಗ್ ಒಬ್ಬ ಹಿಂದೂ ಮಗ, ಎಲ್ಲಾ ಹಿಂದೂ ಸಂಸ್ಕಾರಗಳನ್ನು ಗೌರವಿಸುತ್ತಾ, ತೇಹ್ರಾವಿವರೆಗೆ ಎಲ್ಲವನ್ನೂ ತ್ಯಜಿಸಿ ತನ್ನ ತಂದೆಯ ಆತ್ಮಕ್ಕೆ ಶಾಂತಿ ಕೋರಿದ. ಇನ್ನೊಬ್ಬರು ಹಿಂದೂ ಸಂಸ್ಕಾರಗಳನ್ನು ತಿರಸ್ಕರಿಸಿ ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು...

ಅಮ್ಮನ ಅಂತ್ಯ ಸಂಸ್ಕಾರ ನಂತರ ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಮೋದಿ, ಇವರೇನಾ ನಿಜವಾದ ಹಿಂದೂ?; ಸಮಾಜವಾದಿ ಪಕ್ಷದ ನಾಯಕನ ಟ್ವೀಟ್
ಐಪಿ ಸಿಂಗ್
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Dec 30, 2022 | 6:37 PM

ಸರ್ಕಾರಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ‘ಹಿಂದೂ ಆಚರಣೆಗಳನ್ನು’ ಅಪಹಾಸ್ಯ ಮಾಡಿದ್ದಾರೆ ಎಂದು ಸಮಾಜವಾದಿ ಪಕ್ಷದ (Samajwadi Party)ನಾಯಕ ಐಪಿ ಸಿಂಗ್ (IP Singh) ವಾಗ್ದಾಳಿ ನಡೆಸಿದ್ದಾರೆ. ತಮ್ಮ ತಾಯಿ ಹೀರಾಬೆನ್ ಅವರ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಿದ ನಂತರ ಪ್ರಧಾನಿ ಮೋದಿ ಶುಕ್ರವಾರ ಕೆಲಸಕ್ಕೆ ಮರಳಿದ್ದರು. ಎಸ್‌ಪಿ ನಾಯಕ ಐಪಿ ಸಿಂಗ್ ಒಬ್ಬ ಹಿಂದೂ ಮಗ, ಎಲ್ಲಾ ಹಿಂದೂ ಸಂಸ್ಕಾರಗಳನ್ನು ಗೌರವಿಸುತ್ತಾ, ತೇಹ್ರಾವಿವರೆಗೆ ಎಲ್ಲವನ್ನೂ ತ್ಯಜಿಸಿ ತನ್ನ ತಂದೆಯ ಆತ್ಮಕ್ಕೆ ಶಾಂತಿ ಕೋರಿದ. ಇನ್ನೊಬ್ಬರು ಹಿಂದೂ ಸಂಸ್ಕಾರಗಳನ್ನು ತಿರಸ್ಕರಿಸಿ ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ತನ್ನ ತಾಯಿಯ ಅಂತ್ಯಕ್ರಿಯೆಯ ನಂತರ ಸೂತಕದಲ್ಲಿ ಶುಭ ಕಾರ್ಯವನ್ನು ನಿಷೇಧಿಸಲಾಗಿದೆ. ಈಗ ಹಿಂದೂ ಯಾರು? ಎಂದು ಸಿಂಗ್, ಅಖಿಲೇಶ್ ಯಾದವ್ ಮತ್ತು ನರೇಂದ್ರ ಮೋದಿಯವರ ಫೋಟೊ ಟ್ವೀಟ್ ಮಾಡಿದ್ದಾರೆ.

ಏತನ್ಮಧ್ಯೆ, ಬಿಜೆಪಿ ನಾಯಕ ಶೆಹಜಾದ್ ಪೂನಾವಾಲಾ ಅವರು ಎಸ್‌ಪಿ ನಾಯಕನನ್ನು ಕಟುವಾಗಿ ಟೀಕಿಸಿದ್ದಾರೆ.

ಇಡೀ ದೇಶದ ಅಮ್ಮನಂತಿರುವವರು ತೀರಿ ಹೋದ ದುಃಖದಲ್ಲಿರುವ ದಿನ ಸಮಾಜವಾದಿ ಪಕ್ಷದ ಮನಸ್ಥಿತಿಯನ್ನು ಇದು ತೋರಿಸುತ್ತದೆ.. ಪ್ರಧಾನಿ ಮೋದಿ ದುಃಖಕ್ಕಿಂತ ಮೇಲೆ ಕರ್ತವ್ಯವನ್ನಿರಿಸಿದ್ದಾರೆ. ವೈಯಕ್ತಿಕ ನಷ್ಟಕ್ಕಿಂತ ಭಾರತ ಮಾತೆಯನ್ನು ಮೇಲಿರಿಸಿದ್ದಾರೆ. ಹೀಗಿರುವಾಗ ಸಮಾಜವಾದಿ ಪಕ್ಷ ಅವರ ಮೇಲೆ ದಾಳಿ ನಡೆಸುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಜಿ ದೇಶವನ್ನು ಕುಟುಂಬಕ್ಕಿಂತ ಮೇಲಿಟ್ಟಿರುವುದೇ ಅವರ ತಪ್ಪು ಎಂದಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್