AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರುವ ವರ್ಷದ ಚುನಾವಣೆಗೆ ಈಗಲೇ ಪ್ರಣಾಳಿಕೆ ಸಿದ್ಧಪಡಿಸಿದ ಎಸ್​ಪಿ; ಬಡವರಿಗೆ 300 ಯೂನಿಟ್​ ಉಚಿತ ವಿದ್ಯುತ್ ಪೂರೈಕೆ​ ಭರವಸೆ

ಎಸ್​ಪಿ ತನ್ನ ಚುನಾವಣಾ ಪ್ರಣಾಳಿಕೆಗಳನ್ನು ರೂಪಿಸುವಾಗ ಬಿಜೆಪಿಯನ್ನು ಸೋಲಿಸಿ ಸರ್ಕಾರ ರಚನೆ ಮಾಡಿರುವ ಪಕ್ಷಗಳಾದ ಆಮ್ ಆದ್ಮಿ ಪಾರ್ಟಿ (ದೆಹಲಿ) ಮತ್ತು ತೃಣಮೂಲ ಕಾಂಗ್ರೆಸ್​ (ಪಶ್ಚಿಮ ಬಂಗಾಳ)ಗಳು ಚುನಾವಣೆ ಪೂರ್ವ ಘೋಷಿಸಿದ್ದ ಪ್ರಣಾಳಿಕೆಗಳನ್ನು ಅವಲೋಕಿಸಿದೆ ಎಂದು ಹೇಳಲಾಗಿದೆ.

ಬರುವ ವರ್ಷದ ಚುನಾವಣೆಗೆ ಈಗಲೇ ಪ್ರಣಾಳಿಕೆ ಸಿದ್ಧಪಡಿಸಿದ ಎಸ್​ಪಿ; ಬಡವರಿಗೆ 300 ಯೂನಿಟ್​ ಉಚಿತ ವಿದ್ಯುತ್ ಪೂರೈಕೆ​ ಭರವಸೆ
ಅಖಿಲೇಶ್ ಯಾದವ್
TV9 Web
| Updated By: Lakshmi Hegde|

Updated on: Jul 10, 2021 | 4:28 PM

Share

ಲಖನೌ: ಮುಂದಿನ ಚುನಾವಣೆಯಲ್ಲಿ ಗೆದ್ದು ಉತ್ತರ ಪ್ರದೇಶದಲ್ಲಿ ಮತ್ತೆ ಸರ್ಕಾರ ರಚನೆ ಮಾಡಲೇಬೇಕು ಎಂಬ ಹಠಕ್ಕೆ ಬಿದ್ದಿರುವ ಸಮಾಜವಾದಿ ಪಕ್ಷ (SP) ಈಗಿನಿಂದಲೇ ಒಂದೊಂದೇ ಸಿದ್ಧತೆ ಮಾಡಿಕೊಳ್ಳುತ್ತಿದೆ. ಚುನಾವಣಾ ಪ್ರಣಾಳಿಕೆ ತಯಾರಿಯಲ್ಲಿ ತೊಡಗಿದೆ ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಸಮಾಜದ ಎಲ್ಲ ವಿಭಾಗಗಳನ್ನೂ ಗಮನದಲ್ಲಿಟ್ಟುಕೊಂಡು ಚುನಾವಣಾ ಪ್ರಣಾಳಿಕೆ ತಯಾರಿಯಾಗುತ್ತಿದೆ ಎಂದೂ ಹೇಳಲಾಗಿದೆ.

ಅಖಿಲೇಶ್​ ಯಾದವ್ ನೇತೃತ್ವದ ಸಮಾಜವಾದಿ ಪಕ್ಷ ಈ ಬಾರಿ ಬಡವರಿಗೆ 300 ಯೂನಿಟ್​​ಗಳಷ್ಟು ಉಚಿತ ವಿದ್ಯುತ್​ ಪೂರೈಕೆ, ಬಿಪಿಎಲ್​ ವರ್ಗಕ್ಕೆ ಸೇರಿದ ಮಹಿಳೆಯರಿಗೆ ಮಾಸಿಕ 1500 ರೂ.ಪಿಂಚಣಿ ಮತ್ತು 10 ಲಕ್ಷಕ್ಕೂ ಅಧಿಕ ಯುವಕರಿಗೆ ಉದ್ಯೋಗ ಒದಗಿಸುವ ಭರವಸೆಯನ್ನು ತನ್ನ ಪ್ರಣಾಳಿಕೆಯಲ್ಲಿ ಸೇರಿಸಲಿದೆ ಎಂದು ಪಕ್ಷದ ಮೂಲಗಳಿಂದಲೇ ಮಾಹಿತಿ ಲಭ್ಯವಾಗಿದೆ. ಎಸ್​ಪಿ ನಾಯಕರೊಬ್ಬರು ಈ ಬಗ್ಗೆ ಸುಳಿವು ನೀಡಿದ್ದಾರೆ.

ಎಸ್​ಪಿ ತನ್ನ ಚುನಾವಣಾ ಪ್ರಣಾಳಿಕೆಗಳನ್ನು ರೂಪಿಸುವಾಗ ಬಿಜೆಪಿಯನ್ನು ಸೋಲಿಸಿ ಸರ್ಕಾರ ರಚನೆ ಮಾಡಿರುವ ಪಕ್ಷಗಳಾದ ಆಮ್ ಆದ್ಮಿ ಪಾರ್ಟಿ (ದೆಹಲಿ) ಮತ್ತು ತೃಣಮೂಲ ಕಾಂಗ್ರೆಸ್​ (ಪಶ್ಚಿಮ ಬಂಗಾಳ)ಗಳು ಚುನಾವಣೆ ಪೂರ್ವ ಘೋಷಿಸಿದ್ದ ಪ್ರಣಾಳಿಕೆಗಳನ್ನು ಅವಲೋಕಿಸಿದೆ ಎಂದು ಹೇಳಲಾಗಿದೆ. ಉತ್ತರಪ್ರದೇಶದಲ್ಲಿ ಸಮಾಜವಾದಿ ಪಕ್ಷ ಕೂಡ ಬಿಜೆಪಿ ವಿರುದ್ಧವೇ ಸ್ಪರ್ಧಿಸಿ ಗೆಲ್ಲಬೇಕಾಗಿರುವ ಕಾರಣಕ್ಕೆ ತುಂಬ ಅಳೆದು-ತೂಗಿ ಪ್ರಣಾಳಿಕೆಯನ್ನು ತಯಾರಿಸುತ್ತಿದೆ.

2017ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 312 ಕ್ಷೇತ್ರಗಳನ್ನು ಗೆದ್ದು ಸರ್ಕಾರ ರಚನೆ ಮಾಡಿತ್ತು. ಸಮಾಜವಾದಿ ಪಕ್ಷ ಕೇವಲ 47 ಮತ್ತು ಮಾಯಾವತಿಯವರ ಬಹುಜನ ಸಮಾಜ ಪಕ್ಷ 19 ಕ್ಷೇತ್ರಗಳನ್ನಷ್ಟೇ ಗೆದ್ದಿತ್ತು. ಕಾಂಗ್ರೆಸ್​ ಬರೀ ಏಳು ಸೀಟ್​​ಗಳಿಗೆ ಸಮಾಧಾನ ಪಟ್ಟುಕೊಂಡಿತ್ತು. ಉತ್ತರ ಪ್ರದೇಶದಲ್ಲಿ 2022ರ ಫೆಬ್ರವರಿಯಲ್ಲಿ ವಿಧಾನಸಭೆ ಚುನಾವಣೆ ನಡೆಯುವ ಸಾಧ್ಯತೆ ಇದ್ದು, ಬಿಜೆಪಿ, ಎಸ್​ಪಿ ಮಾತ್ರವಲ್ಲದೆ ಎಲ್ಲ ಪಕ್ಷಗಳೂ ಚುರುಕಾಗಿ ಸಿದ್ಧತೆಯಲ್ಲಿ ತೊಡಗಿವೆ.

ಇದನ್ನೂ ಓದಿ: ಆಯುರ್ವೇದ ಕ್ಷೇತ್ರದ ದಿಗ್ಗಜ ವೈದ್ಯ, ಶತಾಯುಷಿ ಪಿ.ಕೆ.ವಾರಿಯರ್​ ಇನ್ನಿಲ್ಲ; ದೇಶದ ಹಲವು ವಿವಿಐಪಿಗಳಿಗೆ ಚಿಕಿತ್ಸೆ ನೀಡಿದ್ದರು

Samajwadi Party prepares manifesto for 2022 polls of Uttar Pradesh

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ