ಮುಂಬೈ: ಕಾಶ್ಮೀರ ಕಣಿವೆಯಲ್ಲಿ (Kashmir Valley) ಉಗ್ರರು ನಡೆಸುತ್ತಿರುವ ಉದ್ದೇಶಿತ ಹತ್ಯೆಗಳನ್ನು ಖಂಡಿಸಿರುವ ವಿಪಕ್ಷಗಳು ಕಾಶ್ಮೀರದಲ್ಲಿ ಶಾಂತಿ ಪುನಸ್ಥಾಪಿಸಿ ಎಂದು ಬಿಜೆಪಿ (BJP) ನೇತೃತ್ವದ ಕೇಂದ್ರ ಸರ್ಕಾರವನ್ನು ಒತ್ತಾಯಿಸಿವೆ. ಬಿಜೆಪಿ ಹಿಂದುತ್ವ ಹೆಸರಿನಲ್ಲಿ ಮತಗಳನ್ನು ಗಳಿಸಲು ಯತ್ನಿಸುತ್ತಿದೆಯೇ ಹೊರತು ಕಣಿವೆಯಲ್ಲಿ ವಾಸಿಸುತ್ತಿರುವ ಕಾಶ್ಮೀರಿ ಪಂಡಿತರ (Kashmir Pandits) ಬದುಕನ್ನು ಉತ್ತಮಗೊಳಿಸಲು ಶ್ರಮಿಸುತ್ತಿಲ್ಲ ಎಂದು ಶಿವಸೇನಾ ಸಂಸದ ಸಂಜಯ್ ರಾವುತ್ (Sanjay Raut) ಹೇಳಿರುವುದಾಗಿ ಎಎನ್ಐ ಸುದ್ದಿಸಂಸ್ಥೆ ವರದಿ ಮಾಡಿದೆ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಟೀಕಾ ಪ್ರಹಾರ ಮಾಡಿದ ರಾವುತ್, 1990ರಲ್ಲಿ ಆದ ಅದೇ ಪರಿಸ್ಥಿತಿ ಈಗ ಕಾಶ್ಮೀರದಲ್ಲಿದೆ. ಅಂದು ಉಗ್ರರ ಅಟ್ಟಹಾಸ ಜಾಸ್ತಿಯಾಗಿ ಕಾಶ್ಮೀರಿ ಪಂಡಿತರು ವಲಸೆ ಹೋಗಿದ್ದರು. ಅದೇ ಪರಿಸ್ಥಿತಿ ಇಂದು ಅಲ್ಲಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ 370ನೇ ವಿಧಿ ರದ್ದತಿ ಮಾಡಿದ ನಂತರಲೂ ಅಲ್ಲಿನ ಜನರ ಬದುಕಿನಲ್ಲಿ ಯಾವುದೇ ಅಭಿವೃದ್ಧಿ ಕಂಡಿಲ್ಲ ಎಂದಿದ್ದಾರೆ. 1990ರಲ್ಲಿ ಯಾವ ಪರಿಸ್ಥಿತಿ ಇತ್ತೋ ಅದೇ ಪರಿಸ್ಥಿತಿ ಈಗ ಇದೆ. ನೀವು ಬಿಜೆಪಿಯವರು ಕಾಶ್ಮೀರಿ ಪಂಡಿತರನ್ನು ವಾಪಸ್ ಕರೆ ತರುತ್ತೇವೆ ಎಂದು ಹೇಳಿ ಹಿಂದುತ್ವ ಹೆಸರಿನಲ್ಲಿ ಮತ ಪಡೆದಿರಿ. ಜಮ್ಮ ಕಾಶ್ಮೀರದಲ್ಲಿ 370ನೇ ವಿಧಿ ರದ್ದು ಮಾಡಿಯೂ ಅಲ್ಲಿನ ಜನರ ಬದುಕು ಬದಲಾಗಲಿಲ್ಲ ಎಂದು ಸಂಜಯ್ ರಾವುತ್ ಹೇಳಿದ್ದಾರೆ.
ಕಾಶ್ಮೀರವು ಅಲ್ಪಸಂಖ್ಯಾತರ ವಿರುದ್ಧದ ಇತ್ತೀಚಿನ ಉದ್ದೇಶಿತ ದಾಳಿಯ ನಂತರ ಭಯಭೀತರಾದ ಕಾಶ್ಮೀರಿ ಪಂಡಿತರು ಮತ್ತು ಹಿಂದೂ ವಲಸಿಗರ ಮತ್ತೊಂದು ಸುತ್ತಿನ ನಿರ್ಗಮನಕ್ಕೆ ಸಾಕ್ಷಿಯಾಗಿದೆ. ಗುರುವಾರ ರಾಜಸ್ಥಾನದ ಹನುಮಾನ್‌ಗಢ ಮೂಲದ ಬ್ಯಾಂಕ್ ಮ್ಯಾನೇಜರ್ ವಿಜಯ್ ಕುಮಾರ್ ಅವರನ್ನು ಕುಲ್ಗಾಮ್‌ನಲ್ಲಿ ಅಪರಿಚಿತ ಭಯೋತ್ಪಾದಕರು ಗುಂಡಿಕ್ಕಿ ಕೊಂದಿದ್ದರು.
Today the same situation has arisen in Kashmir that was in 1990s. You (BJP) talked about return of Kashmiri Pandits to the Valley&fetched votes on the same in the name of Hindutva.There is no improvement in people’s lives despite abrogation of Art 370 in J&K:Sanjay Raut,Shiv Sena pic.twitter.com/tFZf2OmXF3
— ANI (@ANI) June 3, 2022
ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್ ಜಿಲ್ಲೆಯಲ್ಲಿ ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಯಲ್ಲಿ ಬಿಹಾರದ ವಲಸೆ ಕಾರ್ಮಿಕ ಸಾವನ್ನಪ್ಪಿದ್ದು, ಮತ್ತೊಬ್ಬರು ಗಾಯಗೊಂಡಿದ್ದಾರೆ. ಇವರು ಚದೂರ ಪ್ರದೇಶದ ಮಗ್ರೆಪೋರಾ ಗ್ರಾಮದ ಇಟ್ಟಿಗೆ ಮಾಡುವ ಗೂಡೊಂದರಲ್ಲಿ ಕೆಲಸ ಮಾಡುತ್ತಿದ್ದಾಗ ರಾತ್ರಿ 9.20 ರ ಸುಮಾರಿಗೆ ಭಯೋತ್ಪಾದಕರು ಗುಂಡು ಹಾರಿಸಿದ್ದಾರೆ ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ. ಕುಮಾರ್ ಅವರ ಹತ್ಯೆಯನ್ನು ಖಂಡಿಸಿರುವ ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ನಾಗರಿಕರ ಸುರಕ್ಷತೆಯನ್ನು ಖಚಿತಪಡಿಸಿ ಎಂದು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ”ಕಾಶ್ಮೀರದಲ್ಲಿ ಶಾಂತಿಯನ್ನು ಮರುಸ್ಥಾಪಿಸುವಲ್ಲಿ ಎನ್‌ಡಿಎ ಸರಕಾರ ವಿಫಲವಾಗಿದೆ. ಕಾಶ್ಮೀರದಲ್ಲಿ ನಾಗರಿಕರ ಸುರಕ್ಷತೆಯನ್ನು ಕೇಂದ್ರ ಸರ್ಕಾರ ಖಚಿತಪಡಿಸಿಕೊಳ್ಳಬೇಕು. ಭಯೋತ್ಪಾದಕರು ನಮ್ಮ ನಾಗರಿಕರ ಹತ್ಯೆಯನ್ನು ಸಹಿಸುವುದಿಲ್ಲ ಎಂದು ಹಿರಿಯ ಕಾಂಗ್ರೆಸ್ ನಾಯಕ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.
ಇಂತಹ ದಾಳಿಗಳ ಹಿಂದಿರುವ ಜನರ ವಿರುದ್ಧ ಕೇಂದ್ರ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ವರಿಷ್ಠೆ ಮಾಯಾವತಿ ಒತ್ತಾಯಿಸಿದ್ದಾರೆ. ಜಮ್ಮು-ಕಾಶ್ಮೀರದಲ್ಲಿ ಪ್ರತಿದಿನ ಅಮಾಯಕರು ಬಲಿಯಾಗುತ್ತಿದ್ದಾರೆ.ಇತ್ತೀಚೆಗಷ್ಟೇ ರಾಜಸ್ಥಾನದ ನಿವಾಸಿ ಹಾಗೂ ಬ್ಯಾಂಕ್ ಮ್ಯಾನೇಜರ್ ಹತ್ಯೆ ನಡೆದಿದ್ದು, ಇದು ಅತ್ಯಂತ ದುಃಖದಾಯಕ ಹಾಗೂ ಆತಂಕಕಾರಿಯಾಗಿದೆ.ಇದರಿಂದ ಆತಂಕದ ವಾತಾವರಣ ನಿರ್ಮಾಣವಾಗಿದೆ.ಕೇಂದ್ರ ಸರ್ಕಾರ ಮುಂದಾಗಬೇಕು. ಇಂತಹ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ ಎಂದು ಬಿಎಸ್ ಪಿ ಒತ್ತಾಯಿಸುತ್ತಿದೆ ಎಂದು ಮಾಯಾವತಿ ಟ್ವೀಟ್ ಮಾಡಿದ್ದಾರೆ.
ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ
Published On - 3:11 pm, Fri, 3 June 22