AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Samvardhan Fellowship: ಯುವ ಪರಿಸರ ಪ್ರೇಮಿಗಳಿಗೆ ಸುವರ್ಣಾವಕಾಶ; ‘ಸಂವರ್ಧನ್ ಫೆಲೋಶಿಪ್’ಗೆ ಅರ್ಜಿ ಆಹ್ವಾನ, 3 ಲಕ್ಷ ರೂ. ನೆರವು!

ಭಾರತದ ಜೀವವೈವಿಧ್ಯ ಮತ್ತು ಪರಿಸರ ಸಂರಕ್ಷಣಾ ವ್ಯವಸ್ಥೆಯನ್ನು ಬಲಪಡಿಸಲು ರೋಹಿಣಿ ನಿಲೇಕಣಿ ಫಿಲಾಂತ್ರಪೀಸ್ ಮತ್ತು ದಸ್ರಾ ಸಂಸ್ಥೆಗಳು ‘ಸಂವರ್ಧನ್ ಫೆಲೋಶಿಪ್’ ಪ್ರಕಟಿಸಿವೆ. 35 ವರ್ಷದೊಳಗಿನ ಯುವ ಪರಿಸರ ಸಂರಕ್ಷಕರಿಗೆ 3 ಲಕ್ಷ ರೂ. ಧನಸಹಾಯ ಮತ್ತು ತಜ್ಞರ ಮಾರ್ಗದರ್ಶನ ಸಿಗಲಿದ್ದು, ಅರ್ಜಿ ಸಲ್ಲಿಸಲು ಜುಲೈ 12 ಕೊನೆಯ ದಿನವಾಗಿದೆ. ಆದ್ದರಿಂದ ಆಸಕ್ತರು ತಡಮಾಡದೇ ಕೂಡಲೇ ಅರ್ಜಿ ಸಲ್ಲಿಸಿ.

Samvardhan Fellowship: ಯುವ ಪರಿಸರ ಪ್ರೇಮಿಗಳಿಗೆ ಸುವರ್ಣಾವಕಾಶ; 'ಸಂವರ್ಧನ್ ಫೆಲೋಶಿಪ್'ಗೆ ಅರ್ಜಿ ಆಹ್ವಾನ, 3 ಲಕ್ಷ ರೂ. ನೆರವು!
ಸಂವರ್ಧನ್ ಫೆಲೋಶಿಪ್Image Credit source: samvardhan.dasra.org
ಅಕ್ಷತಾ ವರ್ಕಾಡಿ
|

Updated on: Jun 19, 2026 | 12:29 PM

Share

ಭಾರತದ ಜೀವವೈವಿಧ್ಯ ಮತ್ತು ಪರಿಸರ ಸಂರಕ್ಷಣಾ ವ್ಯವಸ್ಥೆಯನ್ನು ಬಲಪಡಿಸಲು ಹಾಗೂ ಮುಂದಿನ ಪೀಳಿಗೆಯ ಪರಿಸರ ನಾಯಕರನ್ನು ಬೆಳೆಸಲು ‘ರೋಹಿಣಿ ನಿಲೇಕಣಿ ಫಿಲಾಂತ್ರಪೀಸ್’ (RNP) ಮತ್ತು ‘ದಸ್ರಾ’ ಸಂಸ್ಥೆಗಳು ಕೈಜೋಡಿಸಿವೆ. ದೇಶಾದ್ಯಂತ ಇರುವ ಯುವ ಪರಿಸರ ಸಂರಕ್ಷಕರು ಹಾಗೂ ಸಂಶೋಧಕರಿಗಾಗಿ ವಿಶಿಷ್ಟವಾದ ‘ಸಂವರ್ಧನ್ ಬಯೋಡೈವರ್ಸಿಟಿ ಮತ್ತು ಕನ್ಸರ್ವೇಶನ್ ಫೆಲೋಶಿಪ್’ ಅನ್ನು ಘೋಷಿಸಲಾಗಿದ್ದು, ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ.

ಏನಿದು ಸಂವರ್ಧನ್ ಫೆಲೋಶಿಪ್?

ಇದು ಯುವ ಮತ್ತು ಉದಯೋನ್ಮುಖ ಪರಿಸರ ಸಂರಕ್ಷಕರಿಗೆ ಸಮಗ್ರ ಬೆಂಬಲ ನೀಡಲು ರೂಪಿಸಲಾದ 12 ತಿಂಗಳ (ಒಂದು ವರ್ಷ) ವಿಶೇಷ ಫೆಲೋಶಿಪ್ ಕಾರ್ಯಕ್ರಮವಾಗಿದೆ. ವಿಶೇಷವಾಗಿ ಸೌಲಭ್ಯ ವಂಚಿತ ಹಿನ್ನೆಲೆಯ, ಗ್ರಾಮೀಣ ಭಾಗದ ಮತ್ತು ಪ್ರಮುಖ ನಗರಗಳಿಂದ ದೂರವಿರುವ ಯುವ ಪ್ರತಿಭೆಗಳನ್ನು ಗುರುತಿಸಿ, ಅವರಿಗೆ ಆರ್ಥಿಕ ನೆರವು, ಸೂಕ್ತ ಮಾರ್ಗದರ್ಶನ (Mentorship) ಹಾಗೂ ವೃತ್ತಿಪರ ನೆಟ್‌ವರ್ಕ್ ಒದಗಿಸುವುದು ಈ ಫೆಲೋಶಿಪ್‌ನ ಮುಖ್ಯ ಉದ್ದೇಶವಾಗಿದೆ.

ಫೆಲೋಶಿಪ್‌ನ ಪ್ರಮುಖ 3 ಪ್ರಯೋಜನಗಳು:

  • 3 ಲಕ್ಷ ರೂ. ಧನಸಹಾಯ: ಪರಿಸರ ಸಂರಕ್ಷಣೆಗೆ ಸಂಬಂಧಿಸಿದ ಪ್ರಾಯೋಗಿಕ ಅಥವಾ ಪರಿಶೋಧನಾತ್ಮಕ ಕೆಲಸಗಳಿಗಾಗಿ ಪ್ರತಿಯೊಬ್ಬ  ಅಭ್ಯರ್ಥಿಗೆ 3 ರೂ. ಲಕ್ಷಗಳ ‘ಸೀಡ್ ಗ್ರಾಂಟ್’ (Seed Grant) ನೀಡಲಾಗುತ್ತದೆ.
  • ತಜ್ಞರ ಮಾರ್ಗದರ್ಶನ: ಪರಿಸರ ಕ್ಷೇತ್ರದಲ್ಲಿ ದಶಕಗಳ ಅನುಭವವಿರುವ ಪ್ರಮುಖ ತಜ್ಞರಿಂದ ವರ್ಷಪೂರ್ತಿ ವೈಯಕ್ತಿಕ ಮಾರ್ಗದರ್ಶನ ಮತ್ತು ಸಲಹೆಗಳು ಸಿಗಲಿವೆ.
  • ಸಹಪಾಠಿ ಕಲಿಕೆ (Peer Learning): ಫೆಲೋಶಿಪ್ ಪಡೆದ ಇತರ ಯುವಕರೊಂದಿಗೆ ಒಟ್ಟಾಗಿ ಕಲಿಯಲು, ಕಾರ್ಯಾಗಾರಗಳಲ್ಲಿ ಭಾಗವಹಿಸಲು ಮತ್ತು ಜ್ಞಾನವನ್ನು ಹಂಚಿಕೊಳ್ಳಲು ವೇದಿಕೆ ಸಿಗುತ್ತದೆ.

ರೋಹಿಣಿ ನಿಲೇಕಣಿ ಫಿಲಾಂತ್ರಪೀಸ್ ನ ಅಧ್ಯಕ್ಷರಾದ ರೋಹಿಣಿ ನಿಲೇಕಣಿ ಹೇಳುವಂತೆ, “ಭಾರತದಲ್ಲಿ ಅತ್ಯಂತ ಪ್ರಮುಖವಾದ ಪರಿಸರ ಸಂರಕ್ಷಣಾ ಕೆಲಸಗಳು ಯಾವುದೇ ಪ್ರಚಾರವಿಲ್ಲದೆ, ತಳಮಟ್ಟದಲ್ಲಿ ಶಾಂತಿಯುತವಾಗಿ ನಡೆಯುತ್ತಿವೆ. ಸಮುದಾಯಗಳು ಮತ್ತು ಪರಿಸರ ವ್ಯವಸ್ಥೆಗಳೊಂದಿಗೆ ನಿಕಟವಾಗಿ ಕೆಲಸ ಮಾಡುವ ಯುವಕರಿಗೆ ಆಳವಾದ ಜ್ಞಾನ ಮತ್ತು ಬದ್ಧತೆ ಇರುತ್ತದೆ, ಆದರೆ ಪ್ರೋತ್ಸಾಹ ಇರುವುದಿಲ್ಲ. ಅಂತಹ ಯುವಕರಿಗೆ ನಂಬಿಕೆ, ಸಮಯ ಮತ್ತು ಮುಕ್ತವಾಗಿ ಕಲಿಯುವ ಸ್ವಾತಂತ್ರ್ಯವನ್ನು ನೀಡಲು ‘ಸಂವರ್ಧನ್ ಫೆಲೋಶಿಪ್’ ಅನ್ನು ಆರಂಭಿಸಲಾಗಿದೆ.”

ಅರ್ಜಿ ಸಲ್ಲಿಸಲು ಯಾರು ಅರ್ಹರು?

ಪರಿಸರ ಸಂರಕ್ಷಣೆ ಮತ್ತು ಜೀವವೈವಿಧ್ಯ ಸಂಶೋಧನೆಯಲ್ಲಿ ತೊಡಗಿಸಿಕೊಂಡಿರುವ ಆರಂಭಿಕ ಹಂತದ ವೃತ್ತಿಪರರು ಅರ್ಜಿ ಸಲ್ಲಿಸಬಹುದು. ಅರ್ಜಿದಾರರ ವಯಸ್ಸು 35 ವರ್ಷದೊಳಗಿರಬೇಕು. ಸಾರ್ವಜನಿಕ ಹಿತಾಸಕ್ತಿ ಹೊಂದಿರುವ ಪರಿಸರ ಸಂಶೋಧನೆ, ಸಮುದಾಯ ಆಧಾರಿತ ಕೆಲಸ ಅಥವಾ ಸಂಬಂಧಿತ ಕ್ಷೇತ್ರಗಳಲ್ಲಿ ಸಕ್ರಿಯರಾಗಿರಬೇಕು. ಯಾವುದೇ ನಿರ್ದಿಷ್ಟ ಉನ್ನತ ಶಿಕ್ಷಣದ ಹಿನ್ನೆಲೆ ಕಡ್ಡಾಯವಿಲ್ಲ. ತಳಮಟ್ಟದ ಸಮುದಾಯಗಳು ಮತ್ತು ದೇಶದ ವಿವಿಧ ಭಾಗಗಳ ಅರ್ಹ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?

  • ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ.
  • ಅಧಿಕೃತ ವೆಬ್‌ಸೈಟ್ ಲಿಂಕ್: samvardhan.dasra.org
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜುಲೈ 12

ಪರಿಸರ ಸಂರಕ್ಷಣೆಯ ಕ್ಷೇತ್ರದಲ್ಲಿ ಕೆಲಸ ಮಾಡಬೇಕೆಂಬ ಕನಸು ಹೊತ್ತಿರುವ ಯುವಜನತೆಗೆ ತಮ್ಮ ಆಲೋಚನೆಗಳನ್ನು ಕಾರ್ಯರೂಪಕ್ಕೆ ತರಲು ಇದು ಅತ್ಯುತ್ತಮ ವೇದಿಕೆಯಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್
ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ
ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ
ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ
ಈ ರಾಶಿಯವರಿಗೆ ಮಧ್ಯಾಹ್ನ 12:20 ರಿಂದ ಶುಭ ಕಾಲ ಆರಂಭ
ಈ ರಾಶಿಯವರಿಗೆ ಮಧ್ಯಾಹ್ನ 12:20 ರಿಂದ ಶುಭ ಕಾಲ ಆರಂಭ
ಪ್ರಿಯ ಮಿತ್ರ ನರೇಂದ್ರ; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಮ್ಯಾಕ್ರನ್
ಪ್ರಿಯ ಮಿತ್ರ ನರೇಂದ್ರ; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಮ್ಯಾಕ್ರನ್
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ
ಜೈಲಲ್ಲಿ ಪವಿತ್ರಾ ಗೌಡಗೆ ಕೆಲಸ ಮಾಡಿಕೊಡಲು ಆಳುಗಳು ಇದ್ದಾರೆ: ಸಂಧ್ಯಾ ಆರೋಪ