Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇ 26 ಪ್ರಧಾನಿ ಮೋದಿ ಅಧಿಕಾರಕ್ಕೆ ಬಂದು 7 ವರ್ಷ; ಅಂದು ರೈತರಿಂದ ಕರಾಳ ದಿನ ಆಚರಣೆಗೆ ದೆಹಲಿ ರೈತ ನಾಯಕರ ನಿರ್ಧಾರ

May 26 black day: ಕೇಂದ್ರ ಸರ್ಕಾರವು ತಾನು ಜಾರಿಗೆ ತಂದಿರುವ ಮೂರೂ ಕೃಷಿ ತಿದ್ದುಪಡಿ ಕಾಯಿದೆಗಳು ರೈತ ಪರ ಇವೆ. ಹಾಗಾಗಿ ಅವುಗಳನ್ನು ಬದಲಾಯಿಸುವ ಮಾತೇ ಇಲ್ಲ ಎಂದು ಹೇಳಿದೆ. ಈ ಮಧ್ಯೆ. ರೈತ ನಾಯಕರೊಂದಿಗೆ ಅನೇಕ ಸುತ್ತಿನ ಮಾತುಕತೆಗಳನ್ನು ನಡೆಸಿದೆಯಾದರೂ ಯಾವುದೂ ಫಲಪ್ರದವಾಗಿಲ್ಲ. 

ಮೇ 26 ಪ್ರಧಾನಿ ಮೋದಿ ಅಧಿಕಾರಕ್ಕೆ ಬಂದು 7 ವರ್ಷ; ಅಂದು ರೈತರಿಂದ ಕರಾಳ ದಿನ ಆಚರಣೆಗೆ ದೆಹಲಿ ರೈತ ನಾಯಕರ ನಿರ್ಧಾರ
ಮೇ 26 ಪ್ರಧಾನಿ ಮೋದಿ ಅಧಿಕಾರಕ್ಕೆ ಬಂದು 7 ವರ್ಷ; ಅಂದು ರೈತರಿಂದ ಕರಾಳ ದಿನ ಆಚರಣೆಗೆ ದೆಹಲಿ ರೈತ ನಾಯಕರ ನಿರ್ಧಾರ
Follow us
ಸಾಧು ಶ್ರೀನಾಥ್​
|

Updated on: May 15, 2021 | 3:19 PM

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ರೈತ ಕಾಯಿದೆ ತಿದ್ದುಪಡಿಗಳನ್ನು ವಿರೋಧಿಸಿ ರಾಷ್ಟ್ರ ರಾಜಧಾನಿ ದೆಹಲಿಯ ಗಡಿ ಭಾಗದಲ್ಲಿ ಆರು ತಿಂಗಳ ಹಿಂದೆ ಭಾರಿ ಪ್ರತಿಭಟನೆಯಲ್ಲಿ ತೊಡಗಿದ್ದ ರೈತರು ಇತ್ತೀಚೆಗೆ ತಮ್ಮ ಪತಿಭಟನೆಯನ್ನು ನಿಲ್ಲಿಸಿದ್ದರು. ಆದರೆ ಇದೀಗ ಮೇ 26ರಂದು  ಬುಧವಾರ ಕರಾಳ ದಿನ ಆಚರಿಸಲು ಸಿದ್ಧತೆ ನಡೆಸಿದ್ದಾರೆ. ಸುಮಾರು 40ಕ್ಕೂ ಹೆಚ್ಚು ರೈತ ಒಕ್ಕೂಟಗಳ ಸಂಯುಕ್ತ ಕಿಸಾನ್ ಮೋರ್ಚಾವು ಇದೀಗ ಕೇಂದ್ರದ ಮೂರು ತಿದ್ದುಪಡಿಗಳನ್ನು ವಿರೋಧಿಸಿ ಮೇ 26ರಂದು ಕರಾಳ ದಿನ ಆಚರಿಸುವುದಾಗಿ ಘೋಷಿಸಿದೆ.

ಆ ವಿವಾದಿತ ಮೂರು ರೈತ ಕಾಯಿದೆಗಳ ವಿರುದ್ಧ ಪ್ರತಿಭಟನಾರ್ಥವಾಗಿ ರೈತರು ತಮ್ಮ ಮನೆಗಳಲ್ಲಿ, ತಮ್ಮ ವಾಹನಗಳಲ್ಲಿ ಮತ್ತು ತಮ್ಮ ಅಂಗಡಿಮುಂಗಟ್ಟುಗಳ ಎದುರು ಕಪ್ಪು ಬಾವುಟ ಪ್ರದರ್ಶಿಸುವ ಮೂಲಕ  ಮೇ 26ರ ಕರಾಳ ದಿನವನ್ನು ಆಚರಿಸಬೇಕು. ಜೊತೆಗೆ ಪ್ರಧಾನಿ ಮೋದಿ ಅವರ ಆಕೃತಿಯನ್ನು ದಹಿಸಿ ಪ್ತತಿಭಟನೆ ನಡೆಸಬೇಕು ಎಂದು ರೈತ ನಾಯಕ ಬಲಬೀರ್ ಸಿಂಗ್ ರಾಜೇವಾಲ್ ವರ್ಚುಯಲ್ ಕಾನ್ಫರೆನ್ಸ್ ಮೂಲಕ ರೈತರಲ್ಲಿ ಮನವಿ ಮಾಡಿದ್ದಾರೆ.

ನಿರ್ದಿಷ್ಟವಾಗಿ ಮೇ 26ರಂದೇ ಏಕೆ ಕರಾಳ ದಿನ ಆಚರಿಸುತ್ತಿದ್ದೇವೆ ಅಂದ್ರೆ ಅಂದು ಪ್ರಧಾನಿ ನರೇಂದ್ರ ಮೋದಿ ಕೇಂದ್ರದಲ್ಲಿ ಸರ್ಕಾರ ಸ್ಥಾಪಿಸಿ 7 ವರ್ಷಗಳಾಗಲಿದೆ. ಜೊತೆಗೆ ನಾವು ರೈತರೂ ಸಹ ಕೇಂದ್ರದ ಮೂರು ಕೃಷಿ ತಿದ್ದುಪಡಿ ಕಾಯಿದೆಗಳನ್ನು ವಿರೋಧಿಸಿ ಆಂದೋಲನ ಹಮ್ಮಿಕೊಂಡು ಆರು ತಿಂಗಳಾಗಲಿದೆ. ಹಾಗಾಗಿ ಆ ದಿನಕ್ಕೆ ಮಹತ್ವವಿದೆ ಎಂದು  ಬಲಬೀರ್ ಸಿಂಗ್ ರಾಜೇವಾಲ್ ಹೇಳಿದ್ದಾರೆ.  ಆರು ತಿಂಗಳ ಹಿಂದೆ, ನವೆಂಬರ್  26ರಂದು ದೆಹಲಿ ಗಡಿ ಭಾಗದಲ್ಲಿ ರೈತರು ದೆಹಲಿ ಚಲೋ ಚಳವಳಿ ನಡೆಸಿದ್ದರು.  ಅದಾದ ನಂತರ ಟಿಕ್ರಿ, ಸಿಂಘು ಮತ್ತು ಗಾಜಿಪುರ ಗಡಿ ಭಾಗಗಳಲ್ಲಿ ದೇಶಾದ್ಯಂತ ಆಗಮಿಸಿದ್ದ ಸಾವಿರಾರು ರೈತರು ಬೃಹತ್​ ಆಂದೋಲನ ನಡೆಸುತ್ತಾ ಬಂದಿದ್ದರು.

ಮೂರು ಕೃಷಿ ತಿದ್ದುಪಡಿ ಕಾಯಿದೆಗಳ ವಾಪಸ್​ ತೆಗೆದುಕೊಳ್ಳಬೇಕು ಎಂಬುದು ಮುಖ್ಯ ಬೇಡಿಕೆಯಾಗಿದೆ. ಇನ್ನು, ಇತ್ತೀಚೆಗೆ ರಸಗೊಬ್ಬರ ಬೆಲೆ ಏರಿಕಯಾಗಿದೆ. ಡೀಸೆಲ್ – ಪೆಟ್ರೋಲ್​ ಬೆಲೆಯೂ ಗಗನಕ್ಕೆ ತಲುಪಿದೆ. ಕೇಂದ್ರದ ಇಂತಹ ಜನ ವಿರೋಧಿ ನೀತಿಗಳಿಂದಾಗಿ ರೈತಾಪಿ ವರ್ಗ ವಹಿವಾಟು ನಡೆಸಲು ಸಾಧ್ಯವಾಗುತ್ತಿಲ್ಲ ಎಂದು  ರೈತ ನಾಯಕ ಬಲಬೀರ್ ಸಿಂಗ್ ರಾಜೇವಾಲ್ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ರೈತರು ಪ್ರಮುಖವಾಗಿ ಈ ಕೆಳಗಿನ ಮೂರು ತಿದ್ದುಪಡಿ ಕಾನೂನುಗಳನ್ನು ವಾಪಸ್​ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ ನವೆಂಬರ್​ – 2020 ರಿಂದ ದೆಹಲಿ ಗಡಿ ಭಾಗಗಳಲ್ಲಿ ಠಿಕಾಣಿ ಹೂಡಿ,  ಪ್ರತಿಭಟನೆಯಲ್ಲಿ ತೊಡಗಿದ್ದಾರೆ.  ಜೊತೆಗೆ ರೈತರ ಬೆಳಗಳಿಗೆ ಕನಿಷ್ಟ ಬೆಂಬಲ ಬೆಲೆ ನಿಗದಿಪಡಿಸಲು ಹೊಸ ಕಾಯಿದೆ ಜಾರಿಗೆ ತರಬೇಕು ಎಂದೂ ಆ್ರಹಿಸುತ್ತಿದ್ದಾರೆ. ಆದರೆ ಕೇಂದ್ರ ಸರ್ಕಾರವು ತಾನು ಜಾರಿಗೆ ತಂದಿರುವ ಮೂರೂ ಕೃಷಿ ತಿದ್ದುಪಡಿ ಕಾಯಿದೆಗಳು ರೈತ ಪರ ಇವೆ. ಹಾಗಾಗಿ ಅವುಗಳನ್ನು ಬದಲಾಯಿಸುವ ಮಾತೇ ಇಲ್ಲ ಎಂದು ಹೇಳಿದೆ. ಈ ಮಧ್ಯೆ. ರೈತ ನಾಯಕರೊಂದಿಗೆ ಅನೇಕ ಸುತ್ತಿನ ಮಾತುಕತೆಗಳನ್ನು ನಡೆಸಿದೆಯಾದರೂ ಯಾವುದೂ ಫಲಪ್ರದವಾಗಿಲ್ಲ.

1) Farmers’ Produce Trade and Commerce (Promotion and Facilitation) Act, 2020 2) Farmers’ (Empowerment and Protection) Agreement on Price Assurance and Farm Services Act, 2020 ಮತ್ತು 3) Essential Commodities (Amendment) Act, 2020

(Samyukta Kisan Morcha to observe May 26 as black day and to burn effigies of PM Narendra Modi in protest against Centres three farm laws) Delhi Chalo: ಕೃಷಿ ಕಾಯ್ದೆಗಳ ವಿರುದ್ಧ ಹೋರಾಟ ‘ದೆಹಲಿ ಚಲೋ‘ಗೆ ಶತ ದಿನ; ರೈತ ಚಳವಳಿ ನಡೆದು ಬಂದಿದ್ದು ಹೀಗೆ..

ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು