AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸನಾತನ ಧರ್ಮವನ್ನು ಡೆಂಗ್ಯೂ, ಮಲೇರಿಯಾ ಎಂದು ಕರೆದ ಸ್ಟಾಲಿನ್ ಪುತ್ರ ಉದಯನಿಧಿ

‘ಸನಾತನ ಧರ್ಮ’ವು ಡೆಂಗ್ಯೂ, ಮಲೇರಿಯಾ, ಕೊರೊನಾ ಇದ್ದಂತೆ ಎಂದು ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದಾರೆ. ಕೇವಲ ಸನಾತನ ಧರ್ಮವನ್ನು ವಿರೋಧಿಸಿದರೆ ಸಾಲದು ಅದನ್ನು ನಿರ್ಮೂಲನೆ ಮಾಡಬೇಕು ಎಂದರು. ನಾವು ಡೆಂಗ್ಯೂ, ಮಲೇರಿಯಾ, ಕೊರೊನಾವನ್ನು ವಿರೋಧಿಸಲು ಸಾರ್ಧಯವಿಲ್ಲ ನಾವು ಅದನ್ನು ತೊಡೆದುಹಾಕಬೇಕು, ಹಾಗೆಯೇ ಸನಾತನ ಸಂಸ್ಥೆಯನ್ನು ಕೂಡ ವಿರೋಧಿಸಿ ಅದನ್ನು ನಾಶ ಮಾಡಬೇಕು ಎಂದು ಹೇಳಿದರು.

ಸನಾತನ ಧರ್ಮವನ್ನು ಡೆಂಗ್ಯೂ, ಮಲೇರಿಯಾ ಎಂದು ಕರೆದ ಸ್ಟಾಲಿನ್ ಪುತ್ರ ಉದಯನಿಧಿ
ಉದಯನಿಧಿ ಸ್ಟಾಲಿನ್Image Credit source: Super Stars Bio
ನಯನಾ ರಾಜೀವ್
|

Updated on: Sep 03, 2023 | 8:25 AM

Share

ಸನಾತನ ಧರ್ಮ’ವು ಡೆಂಗ್ಯೂ, ಮಲೇರಿಯಾ, ಕೊರೊನಾ ಇದ್ದಂತೆ ಎಂದು ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್(Udhayanidhi Stalin)ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದಾರೆ. ಕೇವಲ ಸನಾತನ ಧರ್ಮವನ್ನು ವಿರೋಧಿಸಿದರೆ ಸಾಲದು ಅದನ್ನು ನಿರ್ಮೂಲನೆ ಮಾಡಬೇಕು ಎಂದರು. ನಾವು ಡೆಂಗ್ಯೂ, ಮಲೇರಿಯಾ, ಕೊರೊನಾವನ್ನು ವಿರೋಧಿಸಲು ಸಾರ್ಧಯವಿಲ್ಲ ನಾವು ಅದನ್ನು ತೊಡೆದುಹಾಕಬೇಕು, ಹಾಗೆಯೇ ಸನಾತನ ಸಂಸ್ಥೆಯನ್ನು ಕೂಡ ವಿರೋಧಿಸಿ ಅದನ್ನು ನಾಶ ಮಾಡಬೇಕು ಎಂದು ಹೇಳಿದರು.

ನಾವು ಪೆರಿಯಾರ್, ಅಣ್ಣಾ ಮತ್ತು ಕರುಣಾನಿಧಿಯವರ ಬೆಂಬಲಿಗರು. ಸಾಮಾಜಿಕ ನ್ಯಾಯಕ್ಕಾಗಿ ನಾವು ಯಾವಾಗಲೂ ನಮ್ಮ ಹೋರಾಟವನ್ನು ಮುಂದುವರಿಸುತ್ತೇವೆ ಯಾರಿಗೂ ಭಯ ಪಡುವುದಿಲ್ಲ ಎಂದರು.

ಡಿಎಂಕೆ ನಾಯಕನ ಹೇಳಿಕೆ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಭಟನೆ ಆರಂಭವಾಗಿದೆ. ಬಿಜೆಪಿಯ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಹೇಳಿದ್ದಾರೆ.

ಮತ್ತಷ್ಟು ಓದಿ: ಸನಾತನ ಹಿಂದೂ ಧರ್ಮೀಯರು ಕೊಲೆಗಡುಕರು ಎಂದಿದ್ದಕ್ಕೆ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಆಕ್ರೋಶ

ರಾಜ್ಯದಲ್ಲಿ ಡಿಎಂಕೆ ಮತ್ತು ಕಾಂಗ್ರೆಸ್ ಚುನಾವಣಾ ಮೈತ್ರಿ ಮಾಡಿಕೊಂಡಿವೆ ಎಂದರು. ಅಲ್ಲದೆ 2024ರ ಸಂಸತ್ ಚುನಾವಣೆಯಲ್ಲಿ ಡಿಎಂಕೆ ಮತ್ತು ಅದರ ಮಿತ್ರಪಕ್ಷಗಳಿಗೆ ಮತ ನೀಡುವಂತೆ ಜನರಿಗೆ ಮನವಿ ಮಾಡಿದರು.

ಸನಾತನ ಧರ್ಮವನ್ನು ಅನುಸರಿಸುವ ಜನರ ನರಮೇಧಕ್ಕೆ ನಾನು ಎಂದಿಗೂ ಕರೆ ನೀಡಿಲ್ಲ . ಸನಾತನ ಧರ್ಮವು ಜಾತಿ ಮತ್ತು ಧರ್ಮದ ಹೆಸರಿನಲ್ಲಿ ಜನರನ್ನು ವಿಭಜಿಸುವ ತತ್ವವಾಗಿದೆ. ಸನಾತನ ಧರ್ಮವನ್ನು ಕಿತ್ತುಹಾಕುವುದು ಮಾನವೀಯತೆ ಮತ್ತು ಮಾನವ ಸಮಾನತೆಯನ್ನು ಎತ್ತಿಹಿಡಿಯುತ್ತದೆ. ನಾನು ಮಾತನಾಡುವ ಪ್ರತಿಯೊಂದು ಮಾತಿಗೂ ದೃಢವಾಗಿ ನಿಲ್ಲುತ್ತೇನೆ.ಸನಾತನ ಧರ್ಮದಿಂದ ಬಳಲುತ್ತಿರುವ ತುಳಿತಕ್ಕೊಳಗಾದ ಮತ್ತು ಅಂಚಿನಲ್ಲಿರುವವರ ಪರವಾಗಿ ಮಾತನಾಡಿದ್ದೇನೆ ಎಂದು ಸಮರ್ಥಿಸಿಕೊಂಡರು.

ನ್ಯಾಯಾಲಯ ಅಥವಾ ಜನತಾ ನ್ಯಾಯಾಲಯದಲ್ಲಿ ನನ್ನ ದಾರಿಯಲ್ಲಿ ಬರುವ ಯಾವುದೇ ಸವಾಲುಗಳನ್ನು ಎದುರಿಸಲು ನಾನು ಸಿದ್ಧನಿದ್ದೇನೆ. ನಕಲಿ ಸುದ್ದಿಗಳನ್ನು ಹರಡುವುದನ್ನು ನಿಲ್ಲಿಸಿ ಎಂದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ