‘ಸನಾತನ ಧರ್ಮ’ವು ಡೆಂಗ್ಯೂ, ಮಲೇರಿಯಾ, ಕೊರೊನಾ ಇದ್ದಂತೆ ಎಂದು ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್(Udhayanidhi Stalin)ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದಾರೆ. ಕೇವಲ ಸನಾತನ ಧರ್ಮವನ್ನು ವಿರೋಧಿಸಿದರೆ ಸಾಲದು ಅದನ್ನು ನಿರ್ಮೂಲನೆ ಮಾಡಬೇಕು ಎಂದರು. ನಾವು ಡೆಂಗ್ಯೂ, ಮಲೇರಿಯಾ, ಕೊರೊನಾವನ್ನು ವಿರೋಧಿಸಲು ಸಾರ್ಧಯವಿಲ್ಲ ನಾವು ಅದನ್ನು ತೊಡೆದುಹಾಕಬೇಕು, ಹಾಗೆಯೇ ಸನಾತನ ಸಂಸ್ಥೆಯನ್ನು ಕೂಡ ವಿರೋಧಿಸಿ ಅದನ್ನು ನಾಶ ಮಾಡಬೇಕು ಎಂದು ಹೇಳಿದರು.
ನಾವು ಪೆರಿಯಾರ್, ಅಣ್ಣಾ ಮತ್ತು ಕರುಣಾನಿಧಿಯವರ ಬೆಂಬಲಿಗರು. ಸಾಮಾಜಿಕ ನ್ಯಾಯಕ್ಕಾಗಿ ನಾವು ಯಾವಾಗಲೂ ನಮ್ಮ ಹೋರಾಟವನ್ನು ಮುಂದುವರಿಸುತ್ತೇವೆ ಯಾರಿಗೂ ಭಯ ಪಡುವುದಿಲ್ಲ ಎಂದರು.
ಡಿಎಂಕೆ ನಾಯಕನ ಹೇಳಿಕೆ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಭಟನೆ ಆರಂಭವಾಗಿದೆ. ಬಿಜೆಪಿಯ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಹೇಳಿದ್ದಾರೆ.
ಮತ್ತಷ್ಟು ಓದಿ: ಸನಾತನ ಹಿಂದೂ ಧರ್ಮೀಯರು ಕೊಲೆಗಡುಕರು ಎಂದಿದ್ದಕ್ಕೆ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಆಕ್ರೋಶ
ರಾಜ್ಯದಲ್ಲಿ ಡಿಎಂಕೆ ಮತ್ತು ಕಾಂಗ್ರೆಸ್ ಚುನಾವಣಾ ಮೈತ್ರಿ ಮಾಡಿಕೊಂಡಿವೆ ಎಂದರು. ಅಲ್ಲದೆ 2024ರ ಸಂಸತ್ ಚುನಾವಣೆಯಲ್ಲಿ ಡಿಎಂಕೆ ಮತ್ತು ಅದರ ಮಿತ್ರಪಕ್ಷಗಳಿಗೆ ಮತ ನೀಡುವಂತೆ ಜನರಿಗೆ ಮನವಿ ಮಾಡಿದರು.
ಸನಾತನ ಧರ್ಮವನ್ನು ಅನುಸರಿಸುವ ಜನರ ನರಮೇಧಕ್ಕೆ ನಾನು ಎಂದಿಗೂ ಕರೆ ನೀಡಿಲ್ಲ . ಸನಾತನ ಧರ್ಮವು ಜಾತಿ ಮತ್ತು ಧರ್ಮದ ಹೆಸರಿನಲ್ಲಿ ಜನರನ್ನು ವಿಭಜಿಸುವ ತತ್ವವಾಗಿದೆ. ಸನಾತನ ಧರ್ಮವನ್ನು ಕಿತ್ತುಹಾಕುವುದು ಮಾನವೀಯತೆ ಮತ್ತು ಮಾನವ ಸಮಾನತೆಯನ್ನು ಎತ್ತಿಹಿಡಿಯುತ್ತದೆ. ನಾನು ಮಾತನಾಡುವ ಪ್ರತಿಯೊಂದು ಮಾತಿಗೂ ದೃಢವಾಗಿ ನಿಲ್ಲುತ್ತೇನೆ.ಸನಾತನ ಧರ್ಮದಿಂದ ಬಳಲುತ್ತಿರುವ ತುಳಿತಕ್ಕೊಳಗಾದ ಮತ್ತು ಅಂಚಿನಲ್ಲಿರುವವರ ಪರವಾಗಿ ಮಾತನಾಡಿದ್ದೇನೆ ಎಂದು ಸಮರ್ಥಿಸಿಕೊಂಡರು.
ನ್ಯಾಯಾಲಯ ಅಥವಾ ಜನತಾ ನ್ಯಾಯಾಲಯದಲ್ಲಿ ನನ್ನ ದಾರಿಯಲ್ಲಿ ಬರುವ ಯಾವುದೇ ಸವಾಲುಗಳನ್ನು ಎದುರಿಸಲು ನಾನು ಸಿದ್ಧನಿದ್ದೇನೆ. ನಕಲಿ ಸುದ್ದಿಗಳನ್ನು ಹರಡುವುದನ್ನು ನಿಲ್ಲಿಸಿ ಎಂದರು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ