ಸಂದೇಶ್​​ಖಾಲಿ ಪ್ರಕರಣದಲ್ಲಿ ಷಹಜಹಾನ್‌ನನ್ನು ಬಂಧಿಸಲು ಸಾಧ್ಯವಿಲ್ಲ ಎಂದು ಡಿಜಿಪಿ ಹೇಳಿದ್ದಾರೆ: ಎನ್‌ಸಿಡಬ್ಲ್ಯೂ ಅಧ್ಯಕ್ಷೆ

ಡಿಜಿಪಿಯವರನ್ನು ಭೇಟಿ ಮಾಡಿದ ನಂತರ ಮಾಧ್ಯಮದವರ ಜತೆ ಮಾತನಾಡಿದ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ, ನಾವು ಷಹಜಹಾನ್ ಹೆಸರನ್ನು ಉಲ್ಲೇಖಿಸಿದ್ದು ಅವರಿಗೆ ಇಷ್ಟವಾಗಲಿಲ್ಲ. ಅವರು ಸಭೆಯನ್ನು ಅರ್ಧದಲ್ಲೇ ನಿಲ್ಲಿಸಿದರು. ಷಹಜಹಾನ್ ವಿರುದ್ಧ ಏನೂ ಸಾಕ್ಷ್ಯ ಇಲ್ಲದಿರುವಾಗ ಅವರನ್ನು ಹೇಗೆ ಬಂಧಿಸುವುದು ಎಂದು ಅವರು (ಡಿಜಿಪಿ) ನಮ್ಮನ್ನು ಕೇಳಿದರು ಎಂದಿದ್ದಾರೆ.

ಸಂದೇಶ್​​ಖಾಲಿ ಪ್ರಕರಣದಲ್ಲಿ ಷಹಜಹಾನ್‌ನನ್ನು ಬಂಧಿಸಲು ಸಾಧ್ಯವಿಲ್ಲ ಎಂದು ಡಿಜಿಪಿ ಹೇಳಿದ್ದಾರೆ: ಎನ್‌ಸಿಡಬ್ಲ್ಯೂ ಅಧ್ಯಕ್ಷೆ
ರೇಖಾ ಶರ್ಮಾ
Follow us
ರಶ್ಮಿ ಕಲ್ಲಕಟ್ಟ
|

Updated on: Feb 20, 2024 | 3:45 PM

ಕೊಲ್ಕತ್ತಾ ಫೆಬ್ರುವರಿ 20: ತೃಣಮೂಲ ಕಾಂಗ್ರೆಸ್ ಸ್ಥಳೀಯ ನಾಯಕ ಶೇಖ್ ಷಹಜಹಾನ್​​ನ್ನು ಬಂಧಿಸಲು ಸಾಧ್ಯವಿಲ್ಲ ಎಂದು ಪಶ್ಚಿಮ ಬಂಗಾಳದ ಪೊಲೀಸ್ ಮಹಾನಿರ್ದೇಶಕರು ಹೇಳಿರುವುದಾಗಿ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ಮಂಗಳವಾರ ಹೇಳಿದ್ದಾರೆ. ರಾಜ್ಯದ ಉನ್ನತ ಪೊಲೀಸ್ ಅಧಿಕಾರಿ ರಾಜೀವ್ ಕುಮಾರ್ ಅವರನ್ನು ಭೇಟಿಯಾದ ನಂತರ ಸುದ್ದಿಸಂಸ್ಥೆ ಎಎನ್ಐ ಜತೆ ಮಾತನಾಡಿದ ಶರ್ಮಾ, “ಡಿಜಿಪಿ ನನ್ನನ್ನು ಭೇಟಿಯಾಗಿದ್ದೇ ದೊಡ್ಡ ಸಂಗತಿ . ನಾನು 8-9 ನೇ ಬಾರಿಗೆ ಪಶ್ಚಿಮ ಬಂಗಾಳಕ್ಕೆ ಬಂದಿದ್ದರೂ ಡಿಜಿಪಿ ಭೇಟಿ ಮಾಡಲು ಸಾಧ್ಯವಾಗಿಲ್ಲ. ಪೊಲೀಸರಿಂದ ತಪ್ಪಾಗಿದೆ ಎಂದು ಡಿಜಿಪಿ ಒಪ್ಪಿದ್ದಾರೆ.ಅಲ್ಲಿರುವ ಎಲ್ಲಾ ಪೊಲೀಸ್ ಅಧಿಕಾರಿಗಳನ್ನು (ಸಂದೇಶ್​​ಖಾಲಿಯಲ್ಲಿ) ಬದಲಾಯಿಸಬೇಕೆಂದು ನಾವು ಒತ್ತಾಯಿಸಿದ್ದೇವೆ ಎಂದು ಹೇಳಿದ್ದಾರೆ. .

ಆದರೆ, 1-2 ಫೋನ್ ಕರೆಗಳ ನಂತರ ಕುಮಾರ್ ಅವರ ವರ್ತನೆ ಬದಲಾಯಿತು ಎಂದು ಮಹಿಳಾ ಸಮಿತಿಯ ಮುಖ್ಯಸ್ಥರು ಹೇಳಿದ್ದಾರೆ. “ಅವರು ಸಭೆಯನ್ನು ಅರ್ಧದಲ್ಲೇ ನಿಲ್ಲಿಸಿದರು. ನಾವು ಷಹಜಹಾನ್ ಹೆಸರನ್ನು ಉಲ್ಲೇಖಿಸಿದ್ದು ಅವರಿಗೆ ಇಷ್ಟವಾಗಲಿಲ್ಲ. ಷಹಜಹಾನ್ ವಿರುದ್ಧ ಏನೂ ಸಾಕ್ಷ್ಯ ಇಲ್ಲದಿರುವಾಗ ಅವರನ್ನು ಹೇಗೆ ಬಂಧಿಸುವುದು ಎಂದು ಅವರು (ಡಿಜಿಪಿ) ನಮ್ಮನ್ನು ಕೇಳಿದರು.  ಷಹಜಹಾನ್​​​ನ್ನು ಇಡಿ   ಬಂಧಿಸಬೇಕು, ನಾನಲ್ಲ. ಅವನ ವಿರುದ್ಧ ಏನೂ ಇಲ್ಲದಿದ್ದರೆ, ಪೊಲೀಸರು ಏನು ತನಿಖೆ ಮಾಡುತ್ತಾರೆ ಎಂದು ಅವರು ನಮ್ಮಲ್ಲಿ ಕೇಳಿದರು ಎಂದಿದ್ದಾರೆ ಶರ್ಮಾ.

ನನ್ನ ಪ್ರಕಾರ ಡಿಜಿಪಿಯ ಕೈ ಕಟ್ಟಿಹಾಕಲಾಗಿದೆ. ಅವರಿಂದ ಏನೂ ಮಾಡಲು ಸಾಧ್ಯವಿಲ್ಲ. ಅವರು ಯಾವ ಒತ್ತಡದಲ್ಲಿದ್ದಾರೆ ಎಂಬುದನ್ನು ನಾವು ಊಹಿಸಬಹುದು.ಅವರು ಗಂಭೀರವಾಗಿರುತ್ತಾರೆ ಎಂದು ನಾನು ಭಾವಿಸುತ್ತೇನೆ. ಆದರೆ ಅವರು ಒತ್ತಡದಲ್ಲಿ ಹೇಗೆ ಕೆಲಸ ಮಾಡುತ್ತಾರೆ? ಎಂದು ಶರ್ಮಾ ಕೇಳಿದ್ದಾರೆ.

ಉತ್ತರ 24 ಪರಗಣ ಜಿಲ್ಲೆಯ ಸಂದೇಶ್‌ಖಾಲಿ ಎಂಬ ಗ್ರಾಮವು ಲೋಕಸಭೆ ಚುನಾವಣೆಗೆ ಮುನ್ನ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಮತ್ತು ಬಿಜೆಪಿ ನಡುವಿನ ವಾಕ್ಸಮರಕ್ಕೆ ಕಾರಣವಾಗಿದೆ. ಶೇಖ್ ಷಹಜಹಾನ್ ಮತ್ತು ಅವರ ಬೆಂಬಲಿಗರು ತಮ್ಮ ಟಿಎಂಸಿ ಕಚೇರಿಯಲ್ಲಿ ಬಂದೂಕು ತೋರಿಸಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಹಲವಾರು ಮಹಿಳೆಯರು ಆರೋಪಿಸಿದ್ದಾರೆ.

ಎನ್‌ಸಿಡಬ್ಲ್ಯೂ ಮುಖ್ಯಸ್ಥರು ಸೋಮವಾರ ಸಂದೇಶ್​​ಖಾಲಿಗೆ ಭೇಟಿ ನೀಡಿ ಸಂತ್ರಸ್ತರನ್ನು ಭೇಟಿ ಮಾಡಿದ್ದರು. ಭೇಟಿಯ ನಂತರ, ಶರ್ಮಾ ಅವರು ಮಮತಾ ಬ್ಯಾನರ್ಜಿ ರಾಜೀನಾಮೆ ಮತ್ತು ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲು ಕರೆ ನೀಡಿದರು.

ಪಡಿತರ ಹಗರಣದಲ್ಲಿ ತನ್ನ ನಿವೇಶನಗಳನ್ನು ಶೋಧಿಸಲು ಸಂದೇಶ್​​ಖಾಲಿಗೆ ತೆರಳಿದ್ದ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ತಂಡದ ಮೇಲೆ ಆತನ ಬೆಂಬಲಿಗರು ದಾಳಿ ನಡೆಸಿದ ನಂತರ ‘ಭಾಯ್’ ಎಂದು ಕರೆಯಲ್ಪಡುವ ಷಹಜಹಾನ್ ಪರಾರಿಯಾಗಿದ್ದಾನೆ. ಇಟ್ಟಿಗೆ ತಯಾರಿಕಾ ಕಾರ್ಖಾನೆಯಲ್ಲಿ ಒಕ್ಕೂಟದ ನಾಯಕರಾಗಿ ಪ್ರಾರಂಭಿಸಿದ ಶೇಖ್ ಷಹಜಹಾನ್ ಅವರು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಯೊಂದಿಗೆ ತಮ್ಮ ರಾಜಕೀಯ ವೃತ್ತಿಜೀವನವನ್ನು ಪ್ರಾರಂಭಿಸಿದ್ದರು. ಬಂಗಾಳದಲ್ಲಿ ಟಿಎಂಸಿಗೆ ಅಧಿಕಾರಕ್ಕೆ ಬಂದಾಗ ಅವರು ಸಿಪಿಎಂನಿಂದ ತೃಣಮೂಲ ಕಾಂಗ್ರೆಸ್​​ಗೆ ಸೇರ್ಪಡೆ ಆಗಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ
ಕೊಟ್ಟ ಮಾತಿನಂತೆ ಉಡುಗೊರೆ ಕಳಿಸಿದ ಕಿಚ್ಚ ಸುದೀಪ್, ಭಾವುಕಗೊಂಡ ಹನುಮಂತ
ಕೊಟ್ಟ ಮಾತಿನಂತೆ ಉಡುಗೊರೆ ಕಳಿಸಿದ ಕಿಚ್ಚ ಸುದೀಪ್, ಭಾವುಕಗೊಂಡ ಹನುಮಂತ