ಸಂದೇಶ್​ಖಾಲಿ ಪ್ರಕರಣ: 55 ದಿನಗಳ ಬಳಿಕ ಅಂತೂ ಟಿಎಂಸಿ ನಾಯಕ ಶಹಜಹಾನ್ ಶೇಖ್ ಬಂಧನ

ಸಂದೇಶ್​ಖಾಲಿ ಲೈಂಗಿಕ ದೌರ್ಜನ್ಯ ಪ್ರಕರಣ ಹಾಗೂ ಭೂಕಬಳಿಕೆ ಪ್ರಕರಣದ ಪ್ರಮುಖ ಆರೋಪಿ ತೃಣಮೂಲ ಕಾಂಗ್ರೆಸ್​ ನಾಯಕ ಶಹಜಹಾನ್ ಶೇಖ್​ ಅವರನ್ನು ಬಂಧಿಸಲಾಗಿದೆ.

ಸಂದೇಶ್​ಖಾಲಿ ಪ್ರಕರಣ: 55 ದಿನಗಳ ಬಳಿಕ ಅಂತೂ ಟಿಎಂಸಿ ನಾಯಕ ಶಹಜಹಾನ್ ಶೇಖ್ ಬಂಧನ
ಶಹಜಹಾನ್ ಶೇಖ್​Image Credit source: Telegraph
Follow us
ನಯನಾ ರಾಜೀವ್
|

Updated on:Feb 29, 2024 | 7:42 AM

ಸಂದೇಶ್​ಖಾಲಿ(SandeshKhali) ಲೈಂಗಿಕ ದೌರ್ಜನ್ಯ ಹಾಗೂ ಭೂಕಬಳಿಕೆ ಪ್ರಕರಣದ ಪ್ರಮುಖ ಆರೋಪಿ ತೃಣಮೂಲ ಕಾಂಗ್ರೆಸ್​ ನಾಯಕ ಶಹಜಹಾನ್ ಶೇಖ್(Shahjahan Sheikh)​ ಅವರನ್ನು ಬಂಧಿಸಲಾಗಿದೆ. ಜನವರಿ 5 ರಿಂದ ಜಾರಿ ನಿರ್ದೇಶನಾಲಯ (ಇಡಿ) ತಂಡವು ಟಿಎಂಸಿ ನಾಯಕನ ನಿವಾಸಕ್ಕೆ ಪ್ರವೇಶಿಸಲು ಪ್ರಯತ್ನಿಸಿದಾಗ ಗುಂಪೊಂದು ದಾಳಿ ನಡೆಸಿತ್ತು, ನಂತರ ಶಹಜಹಾನ್ ಶೇಖ್ ಪರಾರಿಯಾಗಿದ್ದರು. ದಾಳಿಯಲ್ಲಿ ಕನಿಷ್ಠ ಮೂವರು ಇಡಿ ಅಧಿಕಾರಿಗಳು ಗಾಯಗೊಂಡಿದ್ದರು.

55 ದಿನಗಳ ನಂತರ ಷಹಜಹಾನ್ ಶೇಖ್ ಬಂಧನ ಉತ್ತರ 24 ಪರಗಣ ಜಿಲ್ಲೆಯ ಮಿನಾಖಾನ್‌ನ ಅಜ್ಞಾತ ಸ್ಥಳದಿಂದ 3.00 AM ಸುಮಾರಿಗೆ ಷಹಜಹಾನ್ ಶೇಖ್ ಅವರನ್ನು ಬಂಧಿಸಲಾಯಿತು. ಬಸಿರ್‌ಹತ್‌ಗೆ ಕರೆದೊಯ್ದ ಟಿಎಂಸಿ ನಾಯಕನನ್ನು ನಂತರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎನ್ನುವ ಮಾಹಿತಿ ಲಭ್ಯವಾಗಿದೆ.

ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ ಅವರು ಮಾತನಾಡಿ, ತಮ್ಮ ಸರ್ಕಾರವು ಷಹಜಾನ್ ಅವರನ್ನು ರಕ್ಷಿಸುತ್ತಿಲ್ಲ, ಹೈಕೋರ್ಟ್ ಆದೇಶವನ್ನು ಅನುಸರಿಸುತ್ತಿದೆ ಎಂದು ಹೇಳಿಕೆ ನೀಡಿದ್ದರು.

ಮತ್ತಷ್ಟು ಓದಿ: ಸಂದೇಶ್​​ಖಾಲಿ ಪ್ರಕರಣದಲ್ಲಿ ಷಹಜಹಾನ್‌ನನ್ನು ಬಂಧಿಸಲು ಸಾಧ್ಯವಿಲ್ಲ ಎಂದು ಡಿಜಿಪಿ ಹೇಳಿದ್ದಾರೆ: ಎನ್‌ಸಿಡಬ್ಲ್ಯೂ ಅಧ್ಯಕ್ಷೆ

ಶಹಜಹಾನ್ ಶೇಖ್, ಟಿಎಂಸಿಯ ಪ್ರಬಲ ನಾಯಕರಾಗಿದ್ದಾರೆ, ಸಂದೇಶ್​ಖಾಲಿ ಘಟಕದ ಟಿಎಂಸಿ ಅಧ್ಯಕ್ಷರೂ ಆಗಿದ್ದಾರೆ. ಜನವರಿ 5 ರಂದು ಬಂಗಾಳದ ಪಡಿತರ ವಿತರಣೆ ಹಗರಣ ಪ್ರಕರಣದಲ್ಲಿ ಷಹಜಹಾನ್ ಅವರನ್ನು ಇಡಿ ವಿಚಾರಣೆಗೆ ಬಂದಾಗ ಶೇಖ್​ ತಲೆಮರೆಸಿಕೊಂಡಿದ್ದರು.

ಏನಿದು ಸಂದೇಶ್​ಖಾಲಿ ಪ್ರಕರಣ ಸಂದೇಶ್​ಖಾಲಿಯಲ್ಲಿ ವಾಸಿಸುವ ಮಹಿಳೆಯರು ಆತನ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ್ದರು, ಆಗ ಆತನ ಹೆಸರು ಬೆಳಕಿಗೆ ಬಂದಿತ್ತು. ಬಿಜೆಪಿ ಪಕ್ಷವೂ ಕೂಡ ಈ ವಿಚಾರವಾಗಿ ಮಮತಾ ಸರ್ಕಾರದ ವಿರುದ್ಧ ಪ್ರತಿಭಟನೆಯನ್ನೂ ನಡೆಸಿದೆ. ಪಶ್ಚಿಮ ಬಂಗಾಳದ ಪಡಿತರ ವಿತರಣೆ ಹಗರಣದಲ್ಲಿ ಸುಮಾರು 10 ಸಾವಿರ ಕೋಟಿ ರೂಪಾಯಿಗಳ ಭ್ರಷ್ಟಾಚಾರ ನಡೆದಿದೆ ಎಂದು ಇಡಿ ಹೇಳಿದೆ. ಇಡಿ ಮೊದಲು ಮಾಜಿ ಸಚಿವೆ ಜ್ಯೋತಿಪ್ರಿಯಾ ಮಲ್ಲಿಕ್ ಅವರನ್ನು ಬಂಧಿಸಿತ್ತು, ಇದರಲ್ಲಿ ಶೇಖ್​ ಹಾಗೂ ಪುರಸಭೆ ಮಾಜಿ ಅಧ್ಯಕ್ಷ ಶಂಕರ್​ ಆದ್ಯಾ ಭಾಗಿಯಾಗಿರುವುದು ತಿಳಿದುಬಂದಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 7:32 am, Thu, 29 February 24

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ