ಸಂದೇಶಖಾಲಿ ಹಿಂಸಾಚಾರ: ಸಿಬಿಐಗೆ ತನಿಖೆ ವಹಿಸಿದ ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು ಸುಪ್ರೀಂ ನಕಾರ

Supreme Court Refuses Request from Bengal Govt: ಪಶ್ಚಿಮ ಬಂಗಾಳದ ಸಂದೇಶಖಾಲಿಯಲ್ಲಿ ಇಡಿ ಅಧಿಕಾರಿಗಳ ಮೇಲೆ ಹಲ್ಲೆ ನಡೆದ ಘಟನೆಯ ತನಿಖೆಯನ್ನು ಸಿಬಿಐಗೆ ಹಸ್ತಾಂತರಿಸಿದ ಹೈಕೋರ್ಟ್ ತೀರ್ಪಿಗೆ ಸುಪ್ರೀಂಕೋರ್ಟ್ ತಡೆ ಕೊಡಲು ನಿರಾಕರಿಸಿದೆ. ಜನವರಿ 5ರಂದು ಇಡಿ ಅಧಿಕಾರಿಗಳ ಮೇಲೆ ಶೇಖ್ ಶಾಹಜಹಾನ್ ಮತ್ತವರ ಬೆಂಬಲಿಗರು ಹಲ್ಲೆ ಮಾಡಿದ್ದರು. ಘಟನೆಯ ತನಿಖೆಯನ್ನು ಸಿಐಡಿಯಿಂದ ಸಿಬಿಐಗೆ ವರ್ಗಾಯಿಸಿ ಮಾರ್ಚ್ 5ರಂದು ಕಲ್ಕತ್ತಾ ಹೈಕೋರ್ಟ್ ಆದಶ ನೀಡಿತ್ತು.

ಸಂದೇಶಖಾಲಿ ಹಿಂಸಾಚಾರ: ಸಿಬಿಐಗೆ ತನಿಖೆ ವಹಿಸಿದ ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು ಸುಪ್ರೀಂ ನಕಾರ
ಸುಪ್ರೀಂ ಕೋರ್ಟ್
Follow us
|

Updated on:Mar 11, 2024 | 5:17 PM

ನವದೆಹಲಿ, ಮಾರ್ಚ್ 11: ಇಡಿ ಅಧಿಕಾರಿಗಳ ಮೇಲಿನ ಹಲ್ಲೆ ಘಟನೆಯಲ್ಲಿ (Sandeshkhali incident) ಸಿಬಿಐ ತನಿಖೆಗೆ ತಡೆ ನೀಡಲು ಪಶ್ಚಿಮ ಬಂಗಾಳ ಸರ್ಕಾರ ಮಾಡಿದ ಮನವಿಯನ್ನು ಪುರಸ್ಕರಿಸಲು ಸುಪ್ರೀಂಕೋರ್ಟ್ ನಿರಾಕರಿಸಿದೆ. ಸಂದೇಶಖಾಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜನವರಿ 5ರಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮತ್ತು ಕೇಂದ್ರೀಯ ಸಶಸ್ತ್ರ ಪೊಲೀಸ್ ಸಿಬ್ಬಂದಿ ಮೇಲೆ ನಡೆದ ಹಲ್ಲೆ ಘಟನೆಯ ತನಿಖೆಯನ್ನು ಕಲ್ಕತಾ ಹೈಕೋರ್ಟ್ ಸಿಬಿಐಗೆ ವಹಿಸಿತ್ತು. ಈ ಆದೇಶಕ್ಕೆ ತಡೆ ನೀಡುವಂತೆ ಸುಪ್ರೀಂಕೋರ್ಟ್​ನಲ್ಲಿ ಸ್ಪೆಷಲ್ ಲೀವ್ ಪೆಟಿಶನ್ (SLP) ಸಲ್ಲಿಸಿತ್ತು. ಆದರೆ, ತಡೆ ನೀಡಲು ಸರ್ವೋಚ್ಚ ನ್ಯಾಯಾಲಯ (Supreme Court) ಒಪ್ಪಿಲ್ಲ.

ಈ ಘಟನೆಯ ತನಿಖೆಯನ್ನು ಸಿಬಿಐ ನಡೆಸಬೇಕೆಂದು ಮತ್ತು ಘಟನೆಯ ಮಾಸ್ಟರ್ ಮೈಂಡ್ ಎನ್ನಲಾದ ಶೇಖ್ ಶಾಹಜಹಾನ್​ನನ್ನು ಸಿಬಿಐ ಕಸ್ಟಡಿಗೆ ಒಪ್ಪಿಸಬೇಕೆಂದು ಕಲ್ಕತ್ತಾ ಹೈಕೋರ್ಟ್ ಮಾರ್ಚ್ 5ರಂದು ತೀರ್ಪು ನೀಡಿತ್ತು. ಇದನ್ನು ಪ್ರಶ್ನಿಸಿ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತು. ಸಮಂಜಸವಾದ ಕಾನೂನು ಮಾರ್ಗ ಅನುಸರಿಸುವ ತನ್ನ ಹಕ್ಕನ್ನು ನಿರಾಕರಿಸಲಾಗಿದೆ. ಬಂಗಾಳ ಪೊಲೀಸರಿಂದಲೇ ತನಿಖೆ ಮುಂದುವರಿಯಲು ಅವಕಾಶ ಕೊಡಬೇಕು ಎಂಬುದು ಸರ್ಕಾರದ ಮನವಿ. ಇದನ್ನು ಸರ್ವೋಚ್ಚ ನ್ಯಾಯಾಲಯ ಪುರಸ್ಕರಿಸಲಿಲ್ಲ.

ಆದರೆ, ಹೈಕೋರ್ಟ್ ನ್ಯಾಯಪೀಠ ಮಾರ್ಚ್ 5ರಂದು ನೀಡಿದ ತೀರ್ಪಿನ ವೇಳೆ ಪಶ್ಚಿಮ ಬಂಗಾಳದ ಪೊಲೀಸ್ ಮೇಲೆ ಟೀಕೆ ಮಾಡಲಾಗಿತ್ತು. ಈ ಟೀಕೆಯ ಮಾತುಗಳನ್ನು ತೀರ್ಪಿನಿಂದ ತೆಗೆದುಹಾಕಬೇಕೆಂದು ಬಂಗಾಳ ಸರ್ಕಾರದ ಮನವಿಗೆ ಮಾತ್ರ ಸುಪ್ರೀಂ ನ್ಯಾಯಪೀಠ ಒಪ್ಪಿಕೊಂಡಿತು.

ಇದನ್ನೂ ಓದಿ: ಅಕ್ರಮ ಮರಳು ಗಣಿಗಾರಿಕೆ: ಲಾಲೂ ಪ್ರಸಾದ್ ಆಪ್ತ ಸುಭಾಷ್​ ಯಾದವ್​ಗೆ ಮಾರ್ಚ್​ 22ರವರೆಗೆ ನ್ಯಾಯಾಂಗ ಬಂಧನ

ಹೈಕೋರ್ಟ್ ಆದೇಶದ ಬಳಿಕ ಸಿಬಿಐ ಈ ಪ್ರಕರಣದಲ್ಲಿ ಮೂರು ಎಫ್​ಐಆರ್​ಗಳನ್ನು ದಾಖಲಿಸಿಕೊಂಡಿದೆ. ಆದರೆ, ಬಂಗಾಳ ಪೊಲೀಸರು ಸಿಬಿಐ ತಂಡಕ್ಕೆ ಸರಿಯಾದ ಸಹಕಾರ ನೀಡುತ್ತಿಲ್ಲ ಎನ್ನುವ ಆರೋಪವೂ ಕೇಳಿಬಂದಿದೆ.

ಏನಿದು ಸಂದೇಶಖಾಲಿ ಪ್ರಕರಣ?

ಸಂದೇಶಖಾಲಿ ಎಂಬುದು ಪಶ್ಚಿಮ ಬಂಗಾಳದ ಸುಂದರ್​ಬನ್ಸ್ ಜಿಲ್ಲೆಯ ಗಡಿಭಾಗದಲ್ಲಿರುವ ಪ್ರದೇಶವಾಗಿದೆ. ಆಡಳಿತಾರೂಢ ಪಕ್ಷವಾದ ಟಿಎಂಸಿಯೊಂದಿಗೆ ನಿಕಟ ಸಂಬಂಧ ಹೊಂದಿದನೆನ್ನಲಾದ ಶೇಖ್ ಶಾಹಜಹಾನ್ ಹಾಗೂ ಅವರ ಬೆಂಬಲಿಗರು ಸಂದೇಶಖಾಲಿಯಲ್ಲಿ ಸಾಕಷ್ಟು ಲೈಂಗಿಕ ಬಲಾತ್ಕಾರ, ಭೂಕಬಳಿಕೆ ಇತ್ಯಾದಿ ದಬ್ಬಾಳಿಕೆ ನಡೆಸುತ್ತಿದ್ದಾರೆ ಎಂಬ ಆರೋಪಗಳು ಕೇಳಿಬಂದಿದ್ದವು.

ಇದನ್ನೂ ಓದಿ: ಟಿಕೆಟ್​ ನಿರಾಕರಣೆ, ಬಿಜೆಪಿಗೆ ರಾಜೀನಾಮೆ ನೀಡಿ ಕಾಂಗ್ರೆಸ್​ಗೆ ಸೇರ್ಪಡೆಯಾದ ರಾಹುಲ್ ಕಸ್ವಾನ್

ಇದೇ ವೇಳೆ, ಪಶ್ಚಿಮ ಬಂಗಾಳದ ಬಹುಕೋಟಿ ರೇಷನ್ ವಿತರಣೆ ಹಗರಣ ಸಂಬಂಧ ಇಡಿ ಅಧಿಕಾರಿಗಳು ಜನವರಿ 5ರಂದು ಶೇಖ್ ಶಾಹಜಹಾನ್​ನ ಮನೆಗೆ ರೇಡ್ ಮಾಡಲು ಹೋಗಿರುತ್ತಾರೆ. ಆಗ ಸುಮಾರು ಒಂದು ಸಾವಿರ ಜನರು ಗುಂಪು ಇಡಿ ಅಧಿಕಾರಿಗಳು ಹಾಗೂ ಅವರ ಜೊತೆ ಹೋಗಿದ್ದ ಸಿಎಪಿ ಪೊಲೀಸರ ಮೇಲೆ ಹಲ್ಲೆ ಮಾಡುತ್ತಾರೆ. ಈ ವೇಳೆ ಮೂವರು ಇಡಿ ಅಧಿಕಾರಿಗಳು ಗಾಯಗೊಂಡಿದ್ದಾರೆ.

ಆ ಘಟನೆ ರಾಷ್ಟ್ರಾದ್ಯಂತ ಜೋರು ಸುದ್ದಿಯಾಗುತ್ತದೆ. ಫೆಬ್ರುವರಿ 29ರಂದು ಪಶ್ಚಿಮ ಬಂಗಾಳ ಪೊಲೀಸರು ಶೇಖ್​ನನ್ನು ಬಂಧಿಸುತ್ತಾರೆ. ಬಳಿಕ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸುತ್ತಾರೆ. ಈಗ ಸಿಐಡಿಯಿಂದ ಸಿಬಿಐಗೆ ತನಿಖೆ ವರ್ಗಾವಣೆ ಆಗಬೇಕು ಎಂಬುದು ಹೈಕೋರ್ಟ್ ಆದೇಶವಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 5:17 pm, Mon, 11 March 24

ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ