ಸಂದೇಶ್​ಖಾಲಿಯಲ್ಲಿ ಇಡಿ ಅಧಿಕಾರಿಗಳ ಮೇಲೆ ದಾಳಿ ಪ್ರಕರಣ, ಷಹಜಹಾನ್ ಶೇಖ್​ ಸಹೋದರ ಸೇರಿ ಮೂವರ ಬಂಧನ

ಪಶ್ಚಿಮ ಬಂಗಾಳದ ಸಂದೇಶ್​ಖಾಲಿಯಲ್ಲಿ ನಡೆದ ಇಡಿ ಅಧಿಕಾರಿಗಳ ಮೇಲಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿಎಂಸಿ ನಾಯಕ ಷಹಜಹಾನ್ ಶೇಖ್ ಸಹೋದರ ಅಲಂಗೀರ್ ಸೇರಿದಂತೆ ಮೂವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ. ಈ ತಿಂಗಳ ಆರಂಭದಲ್ಲಿ ರಾಜ್ಯ ಪೊಲೀಸರು ಷಹಜಹಾನ್ ಶೇಖ್​ನನ್ನು ಸಿಬಿಐಗೆ ಒಪ್ಪಿಸಿದ್ದರು. ಈ ಪ್ರಕರಣದಲ್ಲಿ ಕೋಲ್ಕತ್ತಾ ಹೈಕೋರ್ಟ್​ ಸಿಬಿಐ ತನಿಖೆಗೆ ಆದೇಶಿಸಿತ್ತು.

ಸಂದೇಶ್​ಖಾಲಿಯಲ್ಲಿ ಇಡಿ ಅಧಿಕಾರಿಗಳ ಮೇಲೆ ದಾಳಿ ಪ್ರಕರಣ, ಷಹಜಹಾನ್ ಶೇಖ್​ ಸಹೋದರ ಸೇರಿ ಮೂವರ ಬಂಧನ
ಷಹಜಹಾನ್ ಶೇಖ್​
Follow us
ನಯನಾ ರಾಜೀವ್
|

Updated on: Mar 17, 2024 | 12:02 PM

ಪಶ್ಚಿಮ ಬಂಗಾಳದ ಸಂದೇಶ್​ಖಾಲಿಯಲ್ಲಿ ನಡೆದ ಇಡಿ ಅಧಿಕಾರಿಗಳ ಮೇಲಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿಎಂಸಿ ನಾಯಕ ಷಹಜಹಾನ್ ಶೇಖ್ ಸಹೋದರ ಅಲಂಗೀರ್ ಸೇರಿದಂತೆ ಮೂವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ. ಈ ತಿಂಗಳ ಆರಂಭದಲ್ಲಿ ರಾಜ್ಯ ಪೊಲೀಸರು ಷಹಜಹಾನ್ ಶೇಖ್​ನನ್ನು ಸಿಬಿಐಗೆ ಒಪ್ಪಿಸಿದ್ದರು. ಈ ಪ್ರಕರಣದಲ್ಲಿ ಕೋಲ್ಕತ್ತಾ ಹೈಕೋರ್ಟ್​ ಸಿಬಿಐ ತನಿಖೆಗೆ ಆದೇಶಿಸಿತ್ತು. ಷಹಜಹಾನ್ ಶೇಖ್ ಹಾಗೂ ಸಹಚರರ ವಿರುದ್ಧ ಅನೇಕ ಗಂಭೀರ ಆರೋಪಗಳಿವೆ. ಸಂದೇಶ್​ಖಾಲಿಯಲ್ಲಿ ಮಹಿಳೆಯರು ಷಹಜಹಾನ್​ ಶೇಖ್​ ಮೇಲೆ ಲೈಂಗಿಕ ಕಿರುಕುಳ ಆರೋಪ ಮಾಡಿದ್ದರು. ಬಲವಂತವಾಗಿ ತಮ್ಮ ಭೂಮಿಯನ್ನು ವಶಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿದ್ದರು.

ಜನವರಿ 5 ರಂದು ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಅಲಂಗೀರ್ ಮತ್ತು ಅವರ ಇಬ್ಬರು ಸಹಚರರಿಗೆ ಸಿಬಿಐ ಸಮನ್ಸ್​ ನೀಡಿದೆ. ಶನಿವಾರ ಸಂಜೆ ಅವರನ್ನು ಬಂಧಿಸಲಾಗಿದೆ. ಮಹಿಳೆಯರ ಪ್ರತಿಭಟನೆಯ ನಂತರ ಸಂದೇಶ್​ಖಾಲಿ ವಿಷಯ ರಾಜಕೀಯ ವಲಯದಲ್ಲೂ ಸದ್ದು ಮಾಡಿತ್ತು. ಪಶ್ಚಿಮ ಬಂಗಾಳದಲ್ಲಿ ಇದು ಚುನಾವಣಾ ವಿಷಯವಾಗಿಯೇ ಉಳಿದಿದೆ.

ಸಿಬಿಐ ಕಚೇರಿಯಲ್ಲಿ ಅಲಂಗೀರ್​ ಅವರನ್ನು 9 ಗಂಟೆಗಳ ಕಾಲ ವಿಚಾರಣೆ ನಡೆಸಲಾಯಿತು. ಮೂವರನ್ನು ಒಟ್ಟಿಗೆ ಬಂಧಿಸಲಾಗಿತ್ತು. ಇವರೊಂದಿಗೆ ಮಫಿಜುಲ್ ಮೊಲ್ಲಾ ಹಾಗೂ ಸಿರಾಜುಲ್ ಮೊಲ್ಲಾ ಕೂಡ ಸಿಬಿಐ ಕಚೇರಿ ತಲುಪಿದ್ದಾರೆ. ವಿಚಾರಣೆ ವೇಳೆ ಅಲಂಗೀರ್ ಹಾಗೂ ಆತನ ಸಹಚರರು ವಿಭಿನ್ನ ಉತ್ತರಗಳನ್ನು ನೀಡುವ ಮೂಲಕ ಅಧಿಕಾರಿಗಳ ದಾರಿತಪ್ಪಿಸಲು ಪ್ರಯತ್ನಿಸುತ್ತಿದ್ದರು.

ಮತ್ತಷ್ಟು ಓದಿ: ಸಂದೇಶ್​​ಖಾಲಿ ಪ್ರಕರಣದಲ್ಲಿ ಷಹಜಹಾನ್‌ನನ್ನು ಬಂಧಿಸಲು ಸಾಧ್ಯವಿಲ್ಲ ಎಂದು ಡಿಜಿಪಿ ಹೇಳಿದ್ದಾರೆ: ಎನ್‌ಸಿಡಬ್ಲ್ಯೂ ಅಧ್ಯಕ್ಷೆ

ಇಂದು ಮೂವರನ್ನೂ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ. ಈ ಪ್ರಕರಣದಲ್ಲಿ ಇದುವರೆಗೆ 14 ಮಂದಿಯನ್ನು ಬಂಧಿಸಲಾಗಿದೆ. ಜನವರಿ 5 ರಂದು ಇಡಿ ಅಧಿಕಾರಿಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದರ ಹಿಂದೆ ಇವರ ಕೈವಾಡವಿದೆ ಎಂಬುದು ಸ್ಪಷ್ಟವಾಗಿದೆ.

ಪಡಿತರ ಹಗರಣದಲ್ಲಿ ಟಿಎಂಸಿ ನಾಯಕ ಷಹಜಹಾನ್ ಶೇಖ್ ಅಡಗುತಾಣಗಳ ಮೇಲೆ ದಾಳಿ ನಡೆಸಲು ಬಂದಿದ್ದ ಅಧಿಕಾರಿಗಳ ಮೇಲೆ ದಾಳಿ ನಡೆಸಲಾಗಿತ್ತು, ಸಂದರ್ಭದಲ್ಲಿ ಹಲವು ಅಧಿಕಾರಿಗಳು ಗಂಭೀರವಾಗಿ ಗಾಯಗೊಂಡಿದ್ದರು.

ಏಪ್ರಿಲ್​ 19 ಹಾಗೂ ಜೂನ್ 1ರ ನಡುವೆ ಏಳು ಹಂತಗಳಲ್ಲಿ ಲೋಕಸಭಾ ಚುನಾವಣೆಗಳನ್ನು ನಡೆಸುತ್ತಿರುವ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳ ಆಡಳಿತಾರೂಢ ತೃಣಮೂಲ ಕಾಂಗ್ರೆಸ್​ ಚುನಾವಣಾ ಆಯೋಗವನ್ನು ಟೀಕಿಸಿದೆ. ಪಶ್ಚಿಮ ಬಂಗಾಳ ಎಲ್ಲಾ 42 ಲೋಕಸಭಾ ಕ್ಷೇತ್ರಗಳಿಗೆ ಏಪ್ರಿಲ್ 19, ಏಪ್ರಿಲ್ 26, ಮೇ 4, ಮೇ 13, ಮೇ 20, ಮೇ 25 ಹಾಗೂ ಜೂನ್​ 1ರಂದು ಮತದಾನ ನಡೆಯಲಿದ್ದು ಜೂನ್​ 4ರಂದು ಫಲಿತಾಂಶ ಹೊರಬರಲಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ
ಕೇರಳವನ್ನು ಮಿನಿ ಪಾಕಿಸ್ತಾನ ಎಂದು ಕರೆದ ಸಚಿವ ನಿತೇಶ್​ ರಾಣೆ
ಕೇರಳವನ್ನು ಮಿನಿ ಪಾಕಿಸ್ತಾನ ಎಂದು ಕರೆದ ಸಚಿವ ನಿತೇಶ್​ ರಾಣೆ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪಿಎನನ್ನು ಇದುವರೆಗೆ ಯಾಕೆ ಬಂಧಿಸಿಲ್ಲ? ರವಿ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪಿಎನನ್ನು ಇದುವರೆಗೆ ಯಾಕೆ ಬಂಧಿಸಿಲ್ಲ? ರವಿ
ನನ್ನ ಸಹೋದರನಿಂದ ಸಚಿನ್ ರೂ. 80 ಲಕ್ಷ ತೆಗೆದುಕೊಂಡಿದ್ದ: ಪ್ರಕಾಶ್ ಕಪನೂರ್
ನನ್ನ ಸಹೋದರನಿಂದ ಸಚಿನ್ ರೂ. 80 ಲಕ್ಷ ತೆಗೆದುಕೊಂಡಿದ್ದ: ಪ್ರಕಾಶ್ ಕಪನೂರ್