ಸಂದೇಶ್​ಖಾಲಿಯಲ್ಲಿ ಇಡಿ ಅಧಿಕಾರಿಗಳ ಮೇಲೆ ದಾಳಿ ಪ್ರಕರಣ, ಷಹಜಹಾನ್ ಶೇಖ್​ ಸಹೋದರ ಸೇರಿ ಮೂವರ ಬಂಧನ

ಪಶ್ಚಿಮ ಬಂಗಾಳದ ಸಂದೇಶ್​ಖಾಲಿಯಲ್ಲಿ ನಡೆದ ಇಡಿ ಅಧಿಕಾರಿಗಳ ಮೇಲಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿಎಂಸಿ ನಾಯಕ ಷಹಜಹಾನ್ ಶೇಖ್ ಸಹೋದರ ಅಲಂಗೀರ್ ಸೇರಿದಂತೆ ಮೂವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ. ಈ ತಿಂಗಳ ಆರಂಭದಲ್ಲಿ ರಾಜ್ಯ ಪೊಲೀಸರು ಷಹಜಹಾನ್ ಶೇಖ್​ನನ್ನು ಸಿಬಿಐಗೆ ಒಪ್ಪಿಸಿದ್ದರು. ಈ ಪ್ರಕರಣದಲ್ಲಿ ಕೋಲ್ಕತ್ತಾ ಹೈಕೋರ್ಟ್​ ಸಿಬಿಐ ತನಿಖೆಗೆ ಆದೇಶಿಸಿತ್ತು.

ಸಂದೇಶ್​ಖಾಲಿಯಲ್ಲಿ ಇಡಿ ಅಧಿಕಾರಿಗಳ ಮೇಲೆ ದಾಳಿ ಪ್ರಕರಣ, ಷಹಜಹಾನ್ ಶೇಖ್​ ಸಹೋದರ ಸೇರಿ ಮೂವರ ಬಂಧನ
ಷಹಜಹಾನ್ ಶೇಖ್​

Updated on: Mar 17, 2024 | 12:02 PM

ಪಶ್ಚಿಮ ಬಂಗಾಳದ ಸಂದೇಶ್​ಖಾಲಿಯಲ್ಲಿ ನಡೆದ ಇಡಿ ಅಧಿಕಾರಿಗಳ ಮೇಲಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿಎಂಸಿ ನಾಯಕ ಷಹಜಹಾನ್ ಶೇಖ್ ಸಹೋದರ ಅಲಂಗೀರ್ ಸೇರಿದಂತೆ ಮೂವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ.
ಈ ತಿಂಗಳ ಆರಂಭದಲ್ಲಿ ರಾಜ್ಯ ಪೊಲೀಸರು ಷಹಜಹಾನ್ ಶೇಖ್​ನನ್ನು ಸಿಬಿಐಗೆ ಒಪ್ಪಿಸಿದ್ದರು. ಈ ಪ್ರಕರಣದಲ್ಲಿ ಕೋಲ್ಕತ್ತಾ ಹೈಕೋರ್ಟ್​ ಸಿಬಿಐ ತನಿಖೆಗೆ ಆದೇಶಿಸಿತ್ತು. ಷಹಜಹಾನ್ ಶೇಖ್ ಹಾಗೂ ಸಹಚರರ ವಿರುದ್ಧ ಅನೇಕ ಗಂಭೀರ ಆರೋಪಗಳಿವೆ.
ಸಂದೇಶ್​ಖಾಲಿಯಲ್ಲಿ ಮಹಿಳೆಯರು ಷಹಜಹಾನ್​ ಶೇಖ್​ ಮೇಲೆ ಲೈಂಗಿಕ ಕಿರುಕುಳ ಆರೋಪ ಮಾಡಿದ್ದರು. ಬಲವಂತವಾಗಿ ತಮ್ಮ ಭೂಮಿಯನ್ನು ವಶಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿದ್ದರು.

ಜನವರಿ 5 ರಂದು ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಅಲಂಗೀರ್ ಮತ್ತು ಅವರ ಇಬ್ಬರು ಸಹಚರರಿಗೆ ಸಿಬಿಐ ಸಮನ್ಸ್​ ನೀಡಿದೆ. ಶನಿವಾರ ಸಂಜೆ ಅವರನ್ನು ಬಂಧಿಸಲಾಗಿದೆ. ಮಹಿಳೆಯರ ಪ್ರತಿಭಟನೆಯ ನಂತರ ಸಂದೇಶ್​ಖಾಲಿ ವಿಷಯ ರಾಜಕೀಯ ವಲಯದಲ್ಲೂ ಸದ್ದು ಮಾಡಿತ್ತು. ಪಶ್ಚಿಮ ಬಂಗಾಳದಲ್ಲಿ ಇದು ಚುನಾವಣಾ ವಿಷಯವಾಗಿಯೇ ಉಳಿದಿದೆ.

ಸಿಬಿಐ ಕಚೇರಿಯಲ್ಲಿ ಅಲಂಗೀರ್​ ಅವರನ್ನು 9 ಗಂಟೆಗಳ ಕಾಲ ವಿಚಾರಣೆ ನಡೆಸಲಾಯಿತು. ಮೂವರನ್ನು ಒಟ್ಟಿಗೆ ಬಂಧಿಸಲಾಗಿತ್ತು. ಇವರೊಂದಿಗೆ ಮಫಿಜುಲ್ ಮೊಲ್ಲಾ ಹಾಗೂ ಸಿರಾಜುಲ್ ಮೊಲ್ಲಾ ಕೂಡ ಸಿಬಿಐ ಕಚೇರಿ ತಲುಪಿದ್ದಾರೆ.
ವಿಚಾರಣೆ ವೇಳೆ ಅಲಂಗೀರ್ ಹಾಗೂ ಆತನ ಸಹಚರರು ವಿಭಿನ್ನ ಉತ್ತರಗಳನ್ನು ನೀಡುವ ಮೂಲಕ ಅಧಿಕಾರಿಗಳ ದಾರಿತಪ್ಪಿಸಲು ಪ್ರಯತ್ನಿಸುತ್ತಿದ್ದರು.

ಮತ್ತಷ್ಟು ಓದಿ: ಸಂದೇಶ್​​ಖಾಲಿ ಪ್ರಕರಣದಲ್ಲಿ ಷಹಜಹಾನ್‌ನನ್ನು ಬಂಧಿಸಲು ಸಾಧ್ಯವಿಲ್ಲ ಎಂದು ಡಿಜಿಪಿ ಹೇಳಿದ್ದಾರೆ: ಎನ್‌ಸಿಡಬ್ಲ್ಯೂ ಅಧ್ಯಕ್ಷೆ

ಇಂದು ಮೂವರನ್ನೂ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ. ಈ ಪ್ರಕರಣದಲ್ಲಿ ಇದುವರೆಗೆ 14 ಮಂದಿಯನ್ನು ಬಂಧಿಸಲಾಗಿದೆ. ಜನವರಿ 5 ರಂದು ಇಡಿ ಅಧಿಕಾರಿಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದರ ಹಿಂದೆ ಇವರ ಕೈವಾಡವಿದೆ ಎಂಬುದು ಸ್ಪಷ್ಟವಾಗಿದೆ.

ಪಡಿತರ ಹಗರಣದಲ್ಲಿ ಟಿಎಂಸಿ ನಾಯಕ ಷಹಜಹಾನ್ ಶೇಖ್ ಅಡಗುತಾಣಗಳ ಮೇಲೆ ದಾಳಿ ನಡೆಸಲು ಬಂದಿದ್ದ ಅಧಿಕಾರಿಗಳ ಮೇಲೆ ದಾಳಿ ನಡೆಸಲಾಗಿತ್ತು, ಸಂದರ್ಭದಲ್ಲಿ ಹಲವು ಅಧಿಕಾರಿಗಳು ಗಂಭೀರವಾಗಿ ಗಾಯಗೊಂಡಿದ್ದರು.

ಏಪ್ರಿಲ್​ 19 ಹಾಗೂ ಜೂನ್ 1ರ ನಡುವೆ ಏಳು ಹಂತಗಳಲ್ಲಿ ಲೋಕಸಭಾ ಚುನಾವಣೆಗಳನ್ನು ನಡೆಸುತ್ತಿರುವ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳ ಆಡಳಿತಾರೂಢ ತೃಣಮೂಲ ಕಾಂಗ್ರೆಸ್​ ಚುನಾವಣಾ ಆಯೋಗವನ್ನು ಟೀಕಿಸಿದೆ. ಪಶ್ಚಿಮ ಬಂಗಾಳ ಎಲ್ಲಾ 42 ಲೋಕಸಭಾ ಕ್ಷೇತ್ರಗಳಿಗೆ ಏಪ್ರಿಲ್ 19, ಏಪ್ರಿಲ್ 26, ಮೇ 4, ಮೇ 13, ಮೇ 20, ಮೇ 25 ಹಾಗೂ ಜೂನ್​ 1ರಂದು ಮತದಾನ ನಡೆಯಲಿದ್ದು ಜೂನ್​ 4ರಂದು ಫಲಿತಾಂಶ ಹೊರಬರಲಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us