ದೇಶದಲ್ಲಿ ಯಾರೊಬ್ಬರೂ ಆಮ್ಲಜನಕ ಕೊರತೆಯಿಂದ ಸತ್ತಿಲ್ಲ ಎಂಬ ಕೇಂದ್ರದ ವರದಿಗೆ ಶಿವಸೇನೆ ಗರಂ; ಬಿ.ಎಲ್.ಸಂತೋಷ್ ಸಮರ್ಥನೆ

ಸಂಜಯ್ ರಾವತ್ ಹೇಳಿಕೆಗೆ ಬಿಜೆಪಿ ಪಕ್ಷದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ತಿರುಗೇಟು ನೀಡಿದ್ದು, ಆಕ್ಸಿಜನ್ ಕೊರತೆಯಿಂದ ಮೃತಪಟ್ಟವರ ಮಾಹಿತಿ ನಿಮ್ಮ ಸಿಎಂ, ಆರೋಗ್ಯ ಸಚಿವರಿಂದ ಕೇಳಿ. ರಾಜ್ಯ ಸರ್ಕಾರಗಳು ಕಳಿಸಿದ ವರದಿ ಆಧರಿಸಿ ಕೇಂದ್ರ ಸರ್ಕಾರ ಮಾಹಿತಿ ನೀಡಿದೆ ಎಂದಿದ್ದಾರೆ.

ದೇಶದಲ್ಲಿ ಯಾರೊಬ್ಬರೂ ಆಮ್ಲಜನಕ ಕೊರತೆಯಿಂದ ಸತ್ತಿಲ್ಲ ಎಂಬ ಕೇಂದ್ರದ ವರದಿಗೆ ಶಿವಸೇನೆ ಗರಂ; ಬಿ.ಎಲ್.ಸಂತೋಷ್ ಸಮರ್ಥನೆ
ಸಂಜಯ್ ರಾವತ್, ಬಿ.ಎಲ್.ಸಂತೋಷ್
Follow us
TV9 Web
| Updated By: Skanda

Updated on: Jul 21, 2021 | 1:10 PM

ದೆಹಲಿ: ದೇಶದಲ್ಲಿ ವೈದ್ಯಕೀಯ ಆಕ್ಸಿಜನ್ ಕೊರತೆಯಿಂದ (Medical Oxygen Shortage) ಯಾರೂ ಮೃತಪಟ್ಟಿಲ್ಲ ಎಂದು ರಾಜ್ಯಸಭೆಗೆ ಕೇಂದ್ರದ ಆರೋಗ್ಯ ಇಲಾಖೆ ನೀಡಿರುವ ಮಾಹಿತಿಯನ್ನು ನೋಡಿದರೆ ಮಾತೇ ಬರುತ್ತಿಲ್ಲ ಎಂದ ಶಿವಸೇನೆಯ ಸಂಜಯ್ ರಾವತ್ (Sanjay Raut) ವ್ಯಂಗ್ಯವಾಡಿದ್ದಾರೆ. ಹಲವು ರಾಜ್ಯಗಳಲ್ಲಿ ಆಕ್ಸಿಜನ್ ಕೊರತೆಯಿಂದ ಜನರ ಸಾವಾಗಿದೆ. ಆದರೆ ಕೇಂದ್ರ ಸರ್ಕಾರ (Union Government) ಮಾತ್ರ ದೇಶದಲ್ಲಿ ಮೆಡಿಕಲ್ ಆಕ್ಸಿಜನ್ ಕೊರತೆಯಿಂದ ಯಾರೊಬ್ಬರೂ ಸತ್ತಿಲ್ಲ ಎಂದು ಹೇಳುತ್ತಿದೆ. ಅವರ ಹೇಳಿಕೆ ಕೇಳಿಸಿಕೊಂಡ ಮೇಲೆ ಮಾತೇ ಹೊರಡುತ್ತಿಲ್ಲ. ಹೀಗೆ ಸುಳ್ಳು ಹೇಳುತ್ತಿರುವ ಕೇಂದ್ರ ಸರ್ಕಾರದ ವಿರುದ್ಧ ಮೊಕದ್ದಮೆ ದಾಖಲಿಸಬೇಕು ಎಂದು ಸಂಜಯ್ ರಾವತ್ ಗುಡುಗಿದ್ದಾರೆ.

ದೇಶದಲ್ಲಿ ಮೆಡಿಕಲ್ ಆಕ್ಸಿಜನ್ ಕೊರತೆಯಿಂದ ಯಾರೊಬ್ಬರೂ ಸತ್ತಿಲ್ಲ ಎಂಬ ಕೇಂದ್ರ ಸರ್ಕಾರದ ಹೇಳಿಕೆಗೆ ದೇಶಾದ್ಯಂತ ತೀವ್ರ ಆಕ್ಷೇಪ ವ್ಯಕ್ತವಾಗುತ್ತಿದ್ದು, ದೆಹಲಿ, ಕರ್ನಾಟಕ, ಮಹಾರಾಷ್ಟ್ರ, ಮಧ್ಯಪ್ರದೇಶ ಸೇರಿದಂತೆ ಹಲವು ರಾಜ್ಯಗಳಲ್ಲಿ ಆಕ್ಸಿಜನ್ ಕೊರತೆಯಿಂದ ಜನರ ಸಾವಾಗಿದ್ದರೂ ಸರ್ಕಾರ ಸುಳ್ಳು ಹೇಳುತ್ತಿದೆ. ಕೇಂದ್ರದ ಹೇಳಿಕೆಯಿಂದ ಮಾತೇ ಬರುತ್ತಿಲ್ಲ. ಕೇಂದ್ರ ಸರ್ಕಾರದ ವಿರುದ್ಧ ಮೊಕದ್ದಮೆ ದಾಖಲಿಸಬೇಕು ಎಂದು ಶಿವಸೇನೆ ವಕ್ತಾರ ಸಂಜಯ್ ರಾವತ್ ಚಾಟಿ ಬೀಸಿದ್ದಾರೆ.

ಇತ್ತ ಸಂಜಯ್ ರಾವತ್ ಹೇಳಿಕೆಗೆ ಬಿಜೆಪಿ ಪಕ್ಷದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ತಿರುಗೇಟು ನೀಡಿದ್ದು, ಆಕ್ಸಿಜನ್ ಕೊರತೆಯಿಂದ ಮೃತಪಟ್ಟವರ ಮಾಹಿತಿ ನಿಮ್ಮ ಸಿಎಂ, ಆರೋಗ್ಯ ಸಚಿವರಿಂದ ಕೇಳಿ. ರಾಜ್ಯ ಸರ್ಕಾರಗಳು ಕಳಿಸಿದ ವರದಿ ಆಧರಿಸಿ ಕೇಂದ್ರ ಸರ್ಕಾರ ಮಾಹಿತಿ ನೀಡಿದೆ ಎಂದಿದ್ದಾರೆ. ಆ ಮೂಲಕ ದೇಶದಲ್ಲಿ ಮೆಡಿಕಲ್ ಆಕ್ಸಿಜನ್ ಕೊರತೆಯಿಂದ ಯಾರೊಬ್ಬರೂ ಸತ್ತಿಲ್ಲ ಎಂಬ ಕೇಂದ್ರ ಸರ್ಕಾರದ ಹೇಳಿಕೆಯನ್ನು ಬಿ.ಎಲ್.ಸಂತೋಷ್ ಸಮರ್ಥಿಸಿಕೊಂಡಿದ್ದಾರೆ.

ಈ ಹಿಂದೆ ಇದೇ ವಿಚಾರವಾಗಿ ಮೇಲ್ಮನೆಯಲ್ಲಿ ಮಾತನಾಡಿದ್ದ ಕಾಂಗ್ರೆಸ್​ನ ಕೆ.ಸಿ.ವೇಣುಗೋಪಾಲ್, ಆಮ್ಲಜನಕದ ಕೊರತೆಯಿಂದಾಗಿ ಸಂಭವಿಸಿದ ಸಾವುಗಳ ಮಾಹಿತಿಗೆ ಸಂಬಂಧಿಸಿದಂತೆ ಕಿರಿಯ ಆರೋಗ್ಯ ಸಚಿವ ಭಾರತಿ ಪ್ರವೀಣ್ ಪವಾರ್ ವಿರುದ್ಧ ಸುಳ್ಳು ಮಾಹಿತಿ ನೀಡಿದ್ದಕ್ಕಾಗಿ ಹಕ್ಕುಚ್ಯುತಿ ನಿರ್ಣಯವನ್ನು ಮಂಡಿಸುವುದಾಗಿ ಹೇಳಿದ್ದರು. ಇದು ಕುರುಡು ಮತ್ತು ಕಾಳಜಿಯಿಲ್ಲದ ಸರ್ಕಾರ. ಆಮ್ಲಜನಕದ ಕೊರತೆಯಿಂದಾಗಿ ಹತ್ತಿರದವರು, ಆತ್ಮೀಯರು ಎಷ್ಟು ಮಂದಿ ಸಾವನ್ನಪ್ಪಿದ್ದಾರೆಂದು ಜನರು ನೋಡಿದ್ದಾರೆ ಎಂದು ಕೆ.ಸಿ.ವೇಣುಗೋಪಾಲ್ ಕಿಡಿಕಾರಿದ್ದರು.

(Sanjay Raut slams Union Government for saying No one died due to Medical Oxygen crisis during Covid 19 Second Wave)

ಇದನ್ನೂ ಓದಿ: ಆಮ್ಲಜನಕ ಕೊರತೆಯಿಂದ ಸಾವುಗಳ ಮಾಹಿತಿ ಬಗ್ಗೆ ರಾಹುಲ್ ಟ್ವೀಟ್​ಗೆ ಇಟಾಲಿಯನ್ ಭಾಷೆಯಲ್ಲಿ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಗಿರಿರಾಜ್ ಸಿಂಗ್ 

ದೆಹಲಿಯಲ್ಲಿ ಆಮ್ಲಜನಕ ಹೆಚ್ಚಿಗೆ  ಬಳಕೆ; ವರದಿಯನ್ನು ಸುಪ್ರೀಂಕೋರ್ಟ್  ಸಮಿತಿ ಅನುಮೋದಿಸಿಲ್ಲ, ಬಿಜೆಪಿ ಸುಳ್ಳು ಹೇಳುತ್ತಿದೆ: ಮನೀಶ್ ಸಿಸೋಡಿಯಾ

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್