AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸನೋಫಿ-ಜಿಎಸ್​ಕೆ ಕೊರೊನಾ ಲಸಿಕೆ ಮೂರನೇ ಹಂತದ ಕ್ಲಿನಿಕಲ್ ಪ್ರಯೋಗ ಭಾರತದಲ್ಲಿ ನಡೆಸಲು ಡಿಸಿಜಿಐ ಅನುಮೋದನೆ

Covid 19 Vaccine: ಸನೋಫಿ ಪಾಶ್ಚರ್ ಕಂಪನಿಯ ಲಸಿಕೆಯ ಮೂರನೇ ಹಂತದ ಅಧ್ಯಯನದಲ್ಲಿ ಭಾರತ ಪಾಲ್ಗೊಳ್ಳುತ್ತಿದೆ. ಈ ಪ್ರಯೋಗದಲ್ಲಿ ಪಾಲ್ಗೊಳ್ಳುವವರ ದಾಖಲಾತಿ ಪ್ರಕ್ರಿಯೆಯನ್ನು ಶೀಘ್ರದಲ್ಲೇ ಶುರು ಮಾಡುತ್ತೇವೆ ಎಂದು ಕಂಪನಿಯ ಭಾರತದ ಮುಖ್ಯಸ್ಥೆ ಅನ್ನಪೂರ್ಣಾ ದಾಸ್ ತಿಳಿಸಿದ್ದಾರೆ.

ಸನೋಫಿ-ಜಿಎಸ್​ಕೆ ಕೊರೊನಾ ಲಸಿಕೆ ಮೂರನೇ ಹಂತದ ಕ್ಲಿನಿಕಲ್ ಪ್ರಯೋಗ ಭಾರತದಲ್ಲಿ ನಡೆಸಲು ಡಿಸಿಜಿಐ ಅನುಮೋದನೆ
ಲಸಿಕೆಯ ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jul 08, 2021 | 5:17 PM

Share

ಫ್ರೆಂಚ್​ನ ಸನೋಫಿ ಫಾರ್ಮಾ ಕಂಪನಿ ಯುಕೆಯ ಗ್ಲಾಕ್ಸೋಸ್ಮಿತ್​ಕ್ಲೈನ್ (ಜಿಎಸ್​ಕೆ) ಕಂಪನಿಯೊಂದಿಗೆ ಸೇರಿ ಅಭಿವೃದ್ಧಿ ಪಡಿಸಿದ ಕೊವಿಡ್​ ಲಸಿಕೆಯ ಮೂರನೇ ಹಂತದ ಕ್ಲಿನಿಕಲ್​ ಪ್ರಯೋಗವನ್ನು ಭಾರತದಲ್ಲಿ ನಡೆಸಲು ಭಾರತೀಯ ಔಷಧ ನಿಯಂತ್ರಣಾ ಪ್ರಾಧಿಕಾರ (ಡಿಸಿಜಿಐ) ಅನುಮೋದನೆ ನೀಡಿದೆ. ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸನೋಫಿ ಕಂಪನಿ, ನಮ್ಮ ಸಹಾಯಕ ಮರುಸಂಯೋಜನೆ-ಪ್ರೋಟೀನ್ ಕೋವಿಡ್ -19 ಲಸಿಕೆಯ ಸುರಕ್ಷತೆ, ಪರಿಣಾಮ ಮತ್ತು ರೋಗನಿರೋಧಕ ಶಕ್ತಿ ಬಗ್ಗೆ ಮೂರನೇ ಹಂತದ ಕ್ಲಿನಿಕಲ್​ ಟ್ರಯಲ್​ನ್ನು ಭಾರತದಲ್ಲಿ ನಡೆಸಲು ಗ್ರೀನ್​ ಸಿಗ್ನಲ್​ ಸಿಕ್ಕಿದೆ ಎಂದು ತಿಳಿಸಿದೆ.

ನಾವು ನಮ್ಮ ಕೊವಿಡ್ 19 ಲಸಿಕೆಯ ಮೂರನೇ ಹಂತದ ಪ್ರಯೋಗವನ್ನು ಜಾಗತಿಕವಾಗಿ ನಡೆಸುತ್ತೇವೆ. ಯುಎಸ್​, ಏಷಿಯಾ, ಆಫ್ರಿಕಾ, ಲ್ಯಾಟಿನ್​ ಅಮೆರಿಕಾಗಳಲ್ಲಿ 18 ಮತ್ತು ಅದಕ್ಕಿಂತ ಮೇಲ್ಪಟ್ಟ ವಯಸ್ಸಿನವರ ಮೇಲೆ ಪ್ರಯೋಗ ಮಾಡಲಾಗುವುದು. ಅದರಲ್ಲಿ 35 ಸಾವಿರಕ್ಕೂ ಹೆಚ್ಚು ಸ್ವಯಂ ಸೇವಕರನ್ನು ಒಳಗೊಳ್ಳುತ್ತೇವೆ ಎಂದು ಸನೋಫಿ ತಿಳಿಸಿದೆ.

ಸನೋಫಿ ಪಾಶ್ಚರ್ ಕಂಪನಿಯ ಲಸಿಕೆಯ ಮೂರನೇ ಹಂತದ ಅಧ್ಯಯನದಲ್ಲಿ ಭಾರತ ಪಾಲ್ಗೊಳ್ಳುತ್ತಿದೆ. ಈ ಪ್ರಯೋಗದಲ್ಲಿ ಪಾಲ್ಗೊಳ್ಳುವವರ ದಾಖಲಾತಿ ಪ್ರಕ್ರಿಯೆಯನ್ನು ಶೀಘ್ರದಲ್ಲೇ ಶುರು ಮಾಡುತ್ತೇವೆ ಎಂದು ಕಂಪನಿಯ ಭಾರತದ ಮುಖ್ಯಸ್ಥೆ ಅನ್ನಪೂರ್ಣಾ ದಾಸ್ ತಿಳಿಸಿದ್ದಾರೆ. ಕೊರೊನಾ ವೈರಸ್ ನಿರಂತರವಾಗಿ ವಿಕಸನಗೊಳ್ಳುತ್ತಲೇ ಇದೆ. ಹಾಗಾಗಿ ಲಸಿಕೆಗಳು ಅನಿವಾರ್ಯವಾಗುತ್ತಿವೆ. ಅವಶ್ಯಕತೆಗಳಿಗೆ ಅನುಗುಣವಾಗಿ ನಾವೂ ವ್ಯಾಕ್ಸಿನ್ ಅಭಿವೃದ್ಧಿಯಲ್ಲಿ ತೊಡಗಿಕೊಂಡಿದ್ದೇವೆ. ಖಂಡಿತ ನಮ್ಮ ಲಸಿಕೆಯು ಕೊವಿಡ್​ 19 ವಿರುದ್ಧ ಪರಿಣಾಮಕಾರಿಯಾಗಿ ಹೋರಾಡುತ್ತದೆ ಎಂಬ ನಂಬಿಕೆಯಿದೆ ಎಂದೂ ಅವರು ತಿಳಿಸಿದ್ದಾರೆ. ಇದನ್ನೂ ಓದಿ: ನಟಿ ನಗ್ಮಾ- ಗಂಗೂಲಿ ನಡುವಿನ ಪ್ರೀತಿ ಮುರಿದು ಬಿದ್ದಿದ್ಯಾಕೆ? ನಗ್ಮಾ ಮದುವೆಯಾಗದಿರಲು ದಾದಾ ಕಾರಣನಾ?

Sanofi GSK Covid 19 Vaccine get DCGI nod for Phase 3 trial In India

Published On - 5:15 pm, Thu, 8 July 21

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ