Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂತೋಷ್ ಆತ್ಮಹತ್ಯೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪ್ರಧಾನಿ ಮೋದಿ; ಬಿ.ಎಲ್. ಸಂತೋಷ್‌ಗೆ ಬುಲಾವ್

40 ಪರ್ಸೆಂಟ್ ಕಮಿಷನ್‌ಗಾಗಿ ಸಂತೋಷ್‌ ಬಲಿಯಾಗಿದ್ದಾನೆ. ಸಂತೋಷ್‌ ಪಾಟೀಲ್‌ ಮಾನಸಿಕವಾಗಿ ಬಹಳಷ್ಟು ಸದೃಢವಾಗಿದ್ದ. ಧೈರ್ಯವಂತ ಸಂತೋಷ್‌ ಸ್ವಾಭಿಮಾನಕ್ಕೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.

ಸಂತೋಷ್ ಆತ್ಮಹತ್ಯೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪ್ರಧಾನಿ ಮೋದಿ; ಬಿ.ಎಲ್. ಸಂತೋಷ್‌ಗೆ ಬುಲಾವ್
ಕೆ.ಎಸ್.ಈಶ್ವರಪ್ಪ (ಸಂಗ್ರಹ ಚಿತ್ರ)
Follow us
TV9 Web
| Updated By: ganapathi bhat

Updated on:Apr 13, 2022 | 4:04 PM

ದೆಹಲಿ: ಉಡುಪಿಯಲ್ಲಿ ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಕರ್ನಾಟಕ ರಾಜ್ಯಾದ್ಯಂತ ರಾಜಕೀಯ ಸಂಚಲನ ಸೃಷ್ಟಿಯಾಗಿದೆ. ಈ ಮಧ್ಯೆ, ಪ್ರಕರಣವನ್ನು ಪ್ರಧಾನಿ ಮೋದಿ ಗಂಭೀರವಾಗಿ ಪರಿಗಣಿಸಿದ್ದಾರೆ ಎಂಬ ಬಗ್ಗೆ ಮಾಹಿತಿ ಲಭ್ಯವಾಗಿದೆ. ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್‌ಗೆ ಪ್ರಧಾನಿ ನರೇಂದ್ರಮೋದಿ ಬುಲಾವ್ ನೀಡಿರುವ ವಿಚಾರ ತಿಳಿದುಬಂದಿದೆ. ದೆಹಲಿ ನಿವಾಸಕ್ಕೆ ಕರೆಸಿಕೊಂಡು ಪ್ರಧಾನಿ ವಿವರಣೆ ಪಡೆದುಕೊಂಡಿದ್ದಾರೆ. ಈಶ್ವರಪ್ಪ ಕೇಸ್‌ನ ಬಗ್ಗೆ ಬಿ.ಎಲ್. ಸಂತೋಷ್‌ರಿಂದ ಮಾಹಿತಿ ನೀಡಲಾಗಿದೆ.

ಇತ್ತ, ಸಂತೋಷ್ ಆತ್ಮಹತ್ಯೆ ಪ್ರಕರಣದ ಬಗ್ಗೆ ಸಿಬಿಐ ತನಿಖೆ ನಡೆಯಲಿ. ಸಿಬಿಐ ತನಿಖೆಗೆ ಕೋರಿ ಸಮುದಾಯದಿಂದ ಹೋರಾಟ ಮಾಡ್ತೇವೆ ಎಂದು ಮೃತ ಸಂತೋಷ್ ನಿವಾಸಕ್ಕೆ ಭೇಟಿ ಬಳಿಕ ಲಿಂಗಾಯತ ಪಂಚಮಸಾಲಿ ಸಂಘಟನೆ ರಾಷ್ಟ್ರೀಯ ಯುವ ಘಟಕದ ಅಧ್ಯಕ್ಷ ರಾಜಶೇಖರ್ ಮೆಣಸಿನಕಾಯಿ ಹೇಳಿಕೆ ನೀಡಿದ್ದಾರೆ. ನಮ್ಮ ಸಮುದಾಯದ ಯುವಕ ಸಂತೋಷ್‌ಗೆ ಅನ್ಯಾಯವಾಗಿದೆ. ಗುತ್ತಿಗೆದಾರರು ಆರೋಪಿಸಿದಾಗ ಗಂಭೀರವಾಗಿ ತೆಗೆದುಕೊಳ್ಳಲಿಲ್ಲ. 40 ಪರ್ಸೆಂಟ್ ಕಮಿಷನ್‌ಗಾಗಿ ಸಂತೋಷ್‌ ಬಲಿಯಾಗಿದ್ದಾನೆ. ಸಂತೋಷ್‌ ಪಾಟೀಲ್‌ ಮಾನಸಿಕವಾಗಿ ಬಹಳಷ್ಟು ಸದೃಢವಾಗಿದ್ದ. ಧೈರ್ಯವಂತ ಸಂತೋಷ್‌ ಸ್ವಾಭಿಮಾನಕ್ಕೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.

ಸಂತೋಷ್ ಪಾಟೀಲ್‌ ಪತ್ನಿಗೆ ಸರ್ಕಾರಿ ನೌಕರಿ ನೀಡಬೇಕು. ಮಗುವಿನ ಶಿಕ್ಷಣದ ಜವಾಬ್ದಾರಿಯನ್ನ ಸರ್ಕಾರ ತೆಗೆದುಕೊಳ್ಳಲಿ. ಅಲ್ಲದೇ ಕುಟುಂಬಕ್ಕೆ 5 ಕೋಟಿ ರೂಪಾಯಿ ಪರಿಹಾರ ನೀಡಲಿ. ಈಶ್ವರಪ್ಪರಿಂದ ರಾಜೀನಾಮೆ ಪಡೆದು ಕಾನೂನುಕ್ರಮ ಕೈಗೊಳ್ಳಲಿ. ಸಮುದಾಯದ ಉಭಯ ಸ್ವಾಮೀಜಿಗಳೊಂದಿಗೆ ಚರ್ಚಿಸುತ್ತೇವೆ. ಸ್ವಾಮೀಜಿಗಳ ಜೊತೆ ಚರ್ಚಿಸಿ ಉಗ್ರ ಹೋರಾಟ ಮಾಡುತ್ತೇವೆ ಎಂದು ಬೆಳಗಾವಿಯಲ್ಲಿ ಯುವ ಘಟಕದ ಅಧ್ಯಕ್ಷ ರಾಜಶೇಖರ್ ಹೇಳಿದ್ದಾರೆ. ಸಂತೋಷ್ ನಿವಾಸಕ್ಕೆ ಭೇಟಿ ನಂತರ ರಾಜಶೇಖರ್ ಪ್ರತಿಕ್ರಿಯೆ ನೀಡಿದ್ದಾರೆ.

ಈಶ್ವರಪ್ಪರನ್ನು ಸಂತೋಷ್ ಪಾಟೀಲ್ ಭೇಟಿ ಮಾಡಿದ್ದು ನಿಜ; ಹಿಂಡಲಗಾ ಗ್ರಾ.ಪಂ ಅಧ್ಯಕ್ಷ ಸ್ಫೋಟಕ ಮಾಹಿತಿ

ಉಡುಪಿಯಲ್ಲಿ ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಹಿಂಡಲಗಾ ಗ್ರಾ.ಪಂ ಅಧ್ಯಕ್ಷ ನಾಗೇಶ್ ಮನ್ನೋಳಕರ್ ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ. ಈಶ್ವರಪ್ಪರನ್ನು ಸಂತೋಷ್ ಪಾಟೀಲ್ ಭೇಟಿ ಮಾಡಿದ್ದು ನಿಜ. ಸಂತೋಷ್ ಜೊತೆ 2 ಸಲ ಬೆಂಗಳೂರಿಗೆ ತೆರಳಿ ಸಚಿವರ ಭೇಟಿ ಮಾಡಿದ್ದೆವು. ಬೆಂಗಳೂರಿಗೆ ತೆರಳಿ ಸಚಿವ ಈಶ್ವರಪ್ಪರನ್ನು ಭೇಟಿಯಾಗಿದ್ದೆವು. ಬೈಲಹೊಂಗಲದ ಸ್ವಾಮೀಜಿ ಜೊತೆ ಇಬ್ಬರೂ ಭೇಟಿಯಾಗಿದ್ದೆವು. ಹಿಂಡಲಗಾದಲ್ಲಿ ನೂರು ವರ್ಷಕ್ಕೊಮ್ಮೆ ಗ್ರಾಮದೇವಿ ಜಾತ್ರೆ ನಡೆಯುತ್ತದೆ. 108 ಕಾಮಗಾರಿ ಮಾಡಬೇಕೆಂದು ಪಟ್ಟಿ ತಗೊಂಡು ಹೋಗಿದ್ದೆವು. ಆಯ್ತು‌ ನೀವು ಕಾಮಗಾರಿ ಆರಂಭಿಸಿ ಎಂದು ಈಶ್ವರಪ್ಪ ಹೇಳಿದ್ದರು. ಚೆನ್ನಾಗಿ ಕೆಲಸ ಮಾಡು ಅಂತಾ ಸಂತೋಷ್ ಪಾಟೀಲ್‌ಗೆ ಹೇಳಿದ್ರು ಎಂದು ತಿಳಿದುಬಂದಿದೆ.

ಈಶ್ವರಪ್ಪ ಸೂಚನೆ ಬಳಿಕವೇ 4ಕೋಟಿ ವೆಚ್ಚದ ಕಾಮಗಾರಿ ನಡೆಸಿದ್ರು. 4 ಕೋಟಿ ರೂಪಾಯಿ ವೆಚ್ಚದ 108 ಕಾಮಗಾರಿ ಮಾಡಿದ್ದರು. ನನ್ನ ಲೆಟರ್‌ಹೆಡ್‌ನಲ್ಲಿ ಸಹಿ ಮಾಡಿ ನಾನೂ ಪತ್ರ ಬರೆದಿದ್ದೆ. ರಾಜ್ಯ ಗ್ರಾಮೀಣಾಭಿವೃದ್ಧಿ ಇಲಾಖೆಗೆ ನಾನು ಪತ್ರವನ್ನ ಬರೆದಿದ್ದೆ. ನನ್ನ ವಿರುದ್ಧ ಶಾಸಕಿ ಹೆಬ್ಬಾಳ್ಕರ್ ಆರೋಪ ಕೇಳಿ ನೋವಾಯ್ತು. ಬಿಲ್ ಪಡೆಯಲು ಪರದಾಡ್ತಿದ್ದಾಗ ಸಹಾಯ ಮಾಡಬೇಕಿತ್ತು. ಇದರ ಬದಲು ಸಂತೋಷ್ ಆತ್ಮಹತ್ಯೆ ಬಳಿಕ ಧರಣಿ ಸರಿಯಲ್ಲ. ಸಂತೋಷ್‌ ಹಿಂಡಲಗಾ ಗ್ರಾಮದವ್ರು, ಚೆನ್ನಾಗಿ ಕೆಲಸ ಮಾಡಿದ್ರು. ಹೀಗಾಗಿ ಇಂದು ಗ್ರಾ.ಪಂ ಸಭೆಯಲ್ಲಿ ಶ್ರದ್ಧಾಂಜಲಿ ಸಲ್ಲಿಸಿದ್ದೇವೆ. ಕಾಮಗಾರಿ ಬಿಲ್ ಪಾವತಿಸಲು ಸರ್ಕಾರಕ್ಕೆ ಮನವಿ ಮಾಡುವೆ ಎಂದು ಹಿಂಡಲಗಾ ಗ್ರಾ.ಪಂ ಅಧ್ಯಕ್ಷ ನಾಗೇಶ್ ಮನ್ನೋಳಕರ್ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ನಾನು ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ, ಷಡ್ಯಂತ್ರದ ಬಗ್ಗೆ ತನಿಖೆ ಆಗಬೇಕು: ಕೆಎಸ್ ಈಶ್ವರಪ್ಪ

ಇದನ್ನೂ ಓದಿ: ಗುತ್ತಿಗೆದಾರರನ್ನು ಈಶ್ವರಪ್ಪ ಗೆಟ್‌ಔಟ್ ಎಂದು ಗದರುತಿದ್ದರು, ಮರ್ಯಾದೆ ಕೊಡುತ್ತಿರಲಿಲ್ಲ -ಕಾರ್ಯದರ್ಶಿ ಜಗನ್ನಾಥ ಶೇಗಜಿ ಆರೋಪ

Published On - 4:02 pm, Wed, 13 April 22

ರಜತ್ ಕಿಶನ್ ರೀಲ್ಸ್ ಕೇಸ್: ಪೊಲೀಸ್ ಠಾಣೆಗೆ ಅಲೆದಾಡಿದ ಪತ್ನಿ ಅಕ್ಷಿತಾ
ರಜತ್ ಕಿಶನ್ ರೀಲ್ಸ್ ಕೇಸ್: ಪೊಲೀಸ್ ಠಾಣೆಗೆ ಅಲೆದಾಡಿದ ಪತ್ನಿ ಅಕ್ಷಿತಾ
ಹೇಳಿದ ಸತ್ಯವನ್ನು ಬಿಜೆಪಿಗೆ ಜೀರ್ಣಿಸಿಕೊಳ್ಳಲಾಗುತ್ತಿಲ್ಲ: ಶಿವಕುಮಾರ್
ಹೇಳಿದ ಸತ್ಯವನ್ನು ಬಿಜೆಪಿಗೆ ಜೀರ್ಣಿಸಿಕೊಳ್ಳಲಾಗುತ್ತಿಲ್ಲ: ಶಿವಕುಮಾರ್
ರಾಜಣ್ಣ ನನಗೆ ದೂರು ನೀಡಲು ಬರಲ್ಲ, ಪೊಲೀಸ್ ಠಾಣೆಗೆ ನೀಡಬೇಕು: ಪರಮೇಶ್ವರ್
ರಾಜಣ್ಣ ನನಗೆ ದೂರು ನೀಡಲು ಬರಲ್ಲ, ಪೊಲೀಸ್ ಠಾಣೆಗೆ ನೀಡಬೇಕು: ಪರಮೇಶ್ವರ್
ಶಿವಕುಮಾರ್ ತಮಿಳುನಾಡುನಿಂದ ಒಪ್ಪಿಗೆ ತಂದರೆಂದು ಭಾವಿಸಿದ್ದೆ: ಸಿಟಿ ರವಿ
ಶಿವಕುಮಾರ್ ತಮಿಳುನಾಡುನಿಂದ ಒಪ್ಪಿಗೆ ತಂದರೆಂದು ಭಾವಿಸಿದ್ದೆ: ಸಿಟಿ ರವಿ
ಮೀಸಲಾತಿ ಕುರಿತು ನಿತೀಶ್ ಕುಮಾರ್, ರಾಬ್ರಿ ದೇವಿ ನಡುವೆ ತೀವ್ರ ವಾಗ್ವಾದ
ಮೀಸಲಾತಿ ಕುರಿತು ನಿತೀಶ್ ಕುಮಾರ್, ರಾಬ್ರಿ ದೇವಿ ನಡುವೆ ತೀವ್ರ ವಾಗ್ವಾದ
ಹನಿಟ್ರ್ಯಾಪ್​: ರಾಜಣ್ಣ, ಪರಮೇಶ್ವರ್​ ದಿಢೀರ್ ಜಂಟಿ ಸುದ್ದಿಗೋಷ್ಠಿ ಲೈವ್​
ಹನಿಟ್ರ್ಯಾಪ್​: ರಾಜಣ್ಣ, ಪರಮೇಶ್ವರ್​ ದಿಢೀರ್ ಜಂಟಿ ಸುದ್ದಿಗೋಷ್ಠಿ ಲೈವ್​
ವಿನಯ್-ರಜತ್ ಅವರ ಮಹಜರಿಗೆ ಕರೆತಂದ ಪೊಲೀಸರು: ವಿಡಿಯೋ
ವಿನಯ್-ರಜತ್ ಅವರ ಮಹಜರಿಗೆ ಕರೆತಂದ ಪೊಲೀಸರು: ವಿಡಿಯೋ
ಕೇವಲ ಒಬ್ಬ ಕಾರ್ಯಕರ್ತನ ಹಿಂದೆ ಹತ್ತಾರು ಪೊಲೀಸರು!
ಕೇವಲ ಒಬ್ಬ ಕಾರ್ಯಕರ್ತನ ಹಿಂದೆ ಹತ್ತಾರು ಪೊಲೀಸರು!
ಹನಿಟ್ರ್ಯಾಪ್‌ನಲ್ಲಿ ನನ್ನದೂ ತಪ್ಪಿದೆ ಎಂದಿದ್ಯಾಕೆ ರಾಜಣ್ಣ..?
ಹನಿಟ್ರ್ಯಾಪ್‌ನಲ್ಲಿ ನನ್ನದೂ ತಪ್ಪಿದೆ ಎಂದಿದ್ಯಾಕೆ ರಾಜಣ್ಣ..?
ರಾಜಣ್ಣ ದೂರು ನೀಡಿದರೆ ಸರ್ಕಾರ ತನಿಖೆ ಮಾಡಿಸಲು ಸಿದ್ಧವಿದೆ: ಚಲುವರಾಯಸ್ವಾಮಿ
ರಾಜಣ್ಣ ದೂರು ನೀಡಿದರೆ ಸರ್ಕಾರ ತನಿಖೆ ಮಾಡಿಸಲು ಸಿದ್ಧವಿದೆ: ಚಲುವರಾಯಸ್ವಾಮಿ