ಶಶಿಕಲಾನ್ನ ಮತ್ತೆ AIADMK ಪಕ್ಷಕ್ಕೆ ಸೇರಿಸಿಕೊಳ್ಳುವ ಮಾತೇ ಇಲ್ಲ: ತಮಿಳುನಾಡು ಮುಖ್ಯಮಂತ್ರಿ ಪಳನಿಸ್ವಾಮಿ ಸ್ಪಷ್ಟನೆ

ಜ.27ರಂದು ಜೈಲಿನಿಂದ ಶಶಿಕಲಾ ಬಿಡುಗಡೆಯಾಗಲಿದ್ದು, ಅವರು ನಮ್ಮ ಪಕ್ಷದಲ್ಲಿ ಇಲ್ಲ ಎಂದು ಪಳನಿಸ್ವಾಮಿ ಹೇಳಿದ್ದಾರೆ.

  • TV9 Web Team
  • Published On - 12:25 PM, 20 Jan 2021
ಶಶಿಕಲಾನ್ನ ಮತ್ತೆ AIADMK ಪಕ್ಷಕ್ಕೆ ಸೇರಿಸಿಕೊಳ್ಳುವ ಮಾತೇ ಇಲ್ಲ: ತಮಿಳುನಾಡು ಮುಖ್ಯಮಂತ್ರಿ ಪಳನಿಸ್ವಾಮಿ ಸ್ಪಷ್ಟನೆ
ಪಳನಿಸ್ವಾಮಿ

ಚೆನ್ನೈ: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಆಪ್ತೆ ಶಶಿಕಲಾ ಮತ್ತೆ ಎಐಎಡಿಎಂಕೆ ಪಕ್ಷಕ್ಕೆ ಎಂಟ್ರಿ ಕೊಡಲ್ಲ ಎಂದು ತಮಿಳುನಾಡು ಸಿಎಂ ಪಳನಿಸ್ವಾಮಿ ಹೇಳಿದ್ದಾರೆ. ಅಂದಹಾಗೆ, ಶಶಿಕಲಾ ಜನವರಿ 27ರಂದು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.

ಮಾಧ್ಯಮದವರು ಶಶಿಕಲಾ ಜೈಲಿನಿಂದ ಬಿಡುಗಡೆಯಾಗುವ ವಿಚಾರದ ಬಗ್ಗೆ ಕೇಳಿದಾಗ  ‘ಶಶಿಕಲಾ ಮತ್ತೆ ಎಐಎಡಿಎಂಕೆ ಪಕ್ಷಕ್ಕೆ ಬರುವ ಸಾಧ್ಯತೆಯೇ ಇಲ್ಲ. ಅವರು ನಮ್ಮ ಪಕ್ಷದಲ್ಲಿ ಇಲ್ಲ’ ಎಂದಿದ್ದಾರೆ  ಪಳನಿಸ್ವಾಮಿ. ಈಗಾಗಲೇ ಜಯಲಲಿತಾ ಆಪ್ತೆ ಶಶಿಕಲಾರನ್ನ ಎಐಎಡಿಎಂಕೆ ಪಕ್ಷದಿಂದ ಉಚ್ಚಾಟಿಸಲಾಗಿದೆ. ಆದರೆ ಶಶಿಕಲಾ ಮತ್ತೆ ಎಐಎಡಿಎಂಕೆ ಪಕ್ಷವನ್ನ ತಮ್ಮ ನಿಯಂತ್ರಣಕ್ಕೇ ತೆಗೆದುಕೊಳ್ಳಲು ಯತ್ನಿಸುವ ಸಾಧ್ಯತೆ ಇರುವುದರಿಂದ ಸಿಎಂ ಪಳನಿಸ್ವಾಮಿ ಅವರ ಹೇಳಿಕೆ ಮಹತ್ವ ಪಡೆದುಕೊಂಡಿದೆ. ಗಮನಾರ್ಹವೆಂದ್ರೆ ಇದೇ ಮೇ ತಿಂಗಳಲ್ಲಿ ತಮಿಳುನಾಡು ವಿಧಾನಸಭೆಗೆ ಚುನಾವಣೆಗಳು ನಡೆಯಲಿವೆ.

ಜನವರಿ 27ರಂದು ಶಶಿಕಲಾ ಜೈಲಿನಿಂದ ಬಿಡುಗಡೆ ಸಾಧ್ಯತೆ -ಮದ್ರಾಸ್ ಹೈಕೋರ್ಟ್​​ಗೆ ವಕೀಲರಿಂದ ಮಾಹಿತಿ