Sign In

By signing in or creating an account, you agree with Associated Broadcasting Company's Terms & Conditions and Privacy Policy.

Satpura Bhawan Fire: ಸತ್ಪುರ ಭವನದಲ್ಲಿ ನಿಯಂತ್ರಣಕ್ಕೆ ಬಾರದ ಬೆಂಕಿ, ಸರ್ಕಾರಿ ದಾಖಲೆಗಳು ನಾಶ, ವಾಯುಪಡೆಗೆ ಜವಾಬ್ದಾರಿ

ಮಧ್ಯಪ್ರದೇಶದ ರಾಜಧಾನಿ ಭೋಪಾಲ್​ನ ರಾಜ್ಯ ನಿರ್ದೇಶನಾಲಯದ ಸತ್ಪುರ ಭವನದಲ್ಲಿ ಸೋಮವಾರ ಸಂಜೆ 4 ಗಂಟೆಗೆ ಅಗ್ನಿ ಅವಘಡ ಸಂಭವಿಸಿತ್ತು, ಸುಮಾರು 25 ಕೋಟಿ ರೂ ಮೌಲ್ಯದ ಪೀಠೋಪಕರಣಗಳು ಹಾಗೂ ಸರ್ಕಾರಿದ ದಾಖಲೆಗಳು ಸುಟ್ಟು ಭಸ್ಮವಾಗಿವೆ.

Satpura Bhawan Fire: ಸತ್ಪುರ ಭವನದಲ್ಲಿ ನಿಯಂತ್ರಣಕ್ಕೆ ಬಾರದ ಬೆಂಕಿ, ಸರ್ಕಾರಿ ದಾಖಲೆಗಳು ನಾಶ, ವಾಯುಪಡೆಗೆ ಜವಾಬ್ದಾರಿ
ಸತ್ಪುರ ಭವನ
Follow us
ನಯನಾ ರಾಜೀವ್
|

Updated on: Jun 13, 2023 | 7:56 AM

ಮಧ್ಯಪ್ರದೇಶದ ರಾಜಧಾನಿ ಭೋಪಾಲ್​ನ ರಾಜ್ಯ ನಿರ್ದೇಶನಾಲಯದ ಸತ್ಪುರ ಭವನದಲ್ಲಿ ಸೋಮವಾರ ಸಂಜೆ 4 ಗಂಟೆಗೆ ಅಗ್ನಿ ಅವಘಡ ಸಂಭವಿಸಿತ್ತು, ಸುಮಾರು 25 ಕೋಟಿ ರೂ ಮೌಲ್ಯದ ಪೀಠೋಪಕರಣಗಳು ಹಾಗೂ ಸರ್ಕಾರಿದ ದಾಖಲೆಗಳು ಸುಟ್ಟು ಭಸ್ಮವಾಗಿವೆ. ಬೆಂಕಿ ಎಷ್ಟು ತೀವ್ರವಾಗಿತ್ತೆಂದರೆ 50 ಅಗ್ನಿಶಾಮಕ ವಾಹನಗಳು 7 ಗಂಟೆಗಳಿಗೂ ಹೆಚ್ಚು ಕಾಲ ಪ್ರಯತ್ನಪಟ್ಟರೂ ಬೆಂಕಿ ನಂದಿಸಲು ಸಾಧ್ಯವಾಗಿಲ್ಲ. ಬೆಂಕಿಯನ್ನು ನಿಯಂತ್ರಿಸಲು ವಾಯುಪಡೆಯ ತಂಡ ಸೋಮವಾರ ರಾತ್ರಿ ಭೋಪಾಲ್ ತಲುಪಿತ್ತು, ಮೂರನೇ ಮಹಡಿಯಲ್ಲಿ ಅಳವಡಿಸಲಾಗಿದ್ದ ಎಸಿಯಿಂದ ಶಾರ್ಟ್​ ಸರ್ಕ್ಯೂಟ್​ ಆಗಿ ಬೆಂಕಿ ಹೊತ್ತಿಕೊಂಡಿರಬಹುದು,ಬೆಂಕಿ ನಂದಿಸಲು ಮುಖ್ಯಮಂತ್ರಿಗಳ ಸಚಿವಾಲಯ ವಾಯುಸೇನೆಗೆ ಕರೆ ಮಾಡಿತ್ತು. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಸೂಚನೆ ಮೇರೆಗೆ ಎಎನ್-32 ವಿಮಾನ ಮತ್ತು ಎಂಐ-15 ಹೆಲಿಕಾಪ್ಟರ್‌ಗಳು ರಾತ್ರಿಯೇ ಭೋಪಾಲ್ ತಲುಪಲಿವೆ.

ಈ ಘಟನೆಯ ಕುರಿತು ಮಾಹಿತಿ ನೀಡಿದ ಭೋಪಾಲ್ ಪೊಲೀಸ್ ಕಮಿಷನರ್ ಹರಿನಾರಾಯಣ ಚಾರಿ ಮಿಶ್ರಾ, “ಈಗಾಗಲೇ ಬೆಂಕಿಯನ್ನು ನಿಯಂತ್ರಿಸಲಾಗಿದೆ, ಆದರೆ ಕಟ್ಟಡವು ತುಂಬಾ ದೊಡ್ಡದಾಗಿದೆ, ಆದ್ದರಿಂದ ವಿವಿಧ ಸ್ಥಳಗಳಲ್ಲಿ ಹೊಗೆಯಾಡುತ್ತಿದೆ. ಮತ್ತೆ ಹೊತ್ತಿಕೊಳ್ಳುವ ಸಾಧ್ಯತೆ ಇರುವುದರಿಂದ ಎಚ್ಚರಿಕೆವಹಿಸಲಾಗಿದೆ.

ಮತ್ತಷ್ಟು ಓದಿ: ಬೆಂಗಳೂರಲ್ಲಿ ಮೊತ್ತೊಂದು ಅಗ್ನಿ ಅವಘಡ: ಐದಾರು ಗುಜರಿ ಗೋಡೌನ್‌ಗಳಿಗೆ ಹೊತ್ತಿಕೊಂಡ ಬೆಂಕಿ

ಪ್ರಾಥಮಿಕ ತನಿಖೆಯಲ್ಲಿ, ಬೆಂಕಿಗೆ ಶಾರ್ಟ್ ಸರ್ಕ್ಯೂಟ್ ಕಾರಣ, ಆದರೆ ಅದರ ತನಿಖೆಗಾಗಿ ತಜ್ಞರ ತಂಡವನ್ನು ರಚಿಸಲಾಗಿದೆ, ಅದು ಶೀಘ್ರದಲ್ಲೇ ವರದಿ ಮಾಡುತ್ತದೆ ಎಂದು ಅವರು ಹೇಳಿದರು. ತಡರಾತ್ರಿ ರಾಜ್ಯ ಗೃಹ ಸಚಿವ ಡಾ.ನರೋತ್ತಮ್ ಮಿಶ್ರಾ ಮತ್ತು ಆರೋಗ್ಯ ಸಚಿವ ಡಾ.ಪ್ರಭುರಾಮ್ ಚೌಧರಿ ಕೂಡ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಗೃಹ) ರಾಜೇಶ್ ರಾಜೌರಾ ನೇತೃತ್ವದಲ್ಲಿ ನಾಲ್ವರು ಸದಸ್ಯರ ತನಿಖಾ ತಂಡವನ್ನು ರಚಿಸಿದ್ದು, ಎರಡು ದಿನಗಳಲ್ಲಿ ತನ್ನ ವರದಿಯನ್ನು ಸಲ್ಲಿಸಲಿದೆ.

ಸಮಿತಿಯಲ್ಲಿ ನಗರಾಭಿವೃದ್ಧಿ ಮತ್ತು ವಸತಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ನೀರಜ್ ಮಂಡ್ಲೋಯ್, ಲೋಕೋಪಯೋಗಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸುಖಬೀರ್ ಸಿಂಗ್ ಮತ್ತು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಅಗ್ನಿಶಾಮಕ) ಅಶುತೋಷ್ ರೈ ಇದ್ದಾರೆ.

ಕೇಂದ್ರದಿಂದ ಸಾಧ್ಯವಿರುವ ಎಲ್ಲ ನೆರವು ನೀಡುವುದಾಗಿ ಪ್ರಧಾನಿ ಭರವಸೆ ನೀಡಿದ್ದಾರೆ. ಅದೇ ಸಮಯದಲ್ಲಿ, ಬೆಂಕಿಯನ್ನು ನಿಯಂತ್ರಿಸಲು ಗೃಹ ಸಚಿವ ಅಮಿತ್ ಶಾ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರೊಂದಿಗೆ ಚರ್ಚಿಸಿದ ನಂತರ ಮುಖ್ಯಮಂತ್ರಿ ಸಹಾಯ ಕೋರಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ