AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೌದಿ ಮೇಲೆ ಹೌತಿ ದಾಳಿ; ಅ. 10ರವರೆಗೆ ರಿಯಾದ್​ಗೆ ತೆರಳುವ ಏರ್ ಇಂಡಿಯಾ, ಇಂಡಿಗೋ ವಿಮಾನ ಸಂಚಾರ ರದ್ದು

ಸೌದಿ ಅರೇಬಿಯಾದ ರಾಜಧಾನಿ ರಿಯಾದ್​ನಲ್ಲಿರುವ ಕಿಂಗ್ ಖಾಲಿದ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ ಭಾರಿ ಸ್ಪೋಟಗಳು ಸಂಭವಿಸಿದ ಹಿನ್ನೆಲೆಯಲ್ಲಿ ಏರ್ ಇಂಡಿಯಾ ಎಕ್ಸ್‌ಪ್ರೆಸ್, ಇಂಡಿಗೋ ಹಾಗೂ ಅಕಾಸಾ ಏರ್ ಸಂಸ್ಥೆಗಳು ರಿಯಾದ್​ಗೆ ತೆರಳುವ ಮತ್ತು ಅಲ್ಲಿಂದ ಆಗಮಿಸುವ ತನ್ನ ಎಲ್ಲಾ ವಿಮಾನಗಳ ಸಂಚಾರವನ್ನು ರದ್ದುಗೊಳಿಸಿವೆ. ರಿಯಾದ್ ವಿಮಾನ ನಿಲ್ದಾಣವನ್ನು ಗುರಿಯಾಗಿಸಿಕೊಂಡು ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ ನಡೆಸಿರುವುದಾಗಿ ಯೆಮೆನ್‌ನ ಇರಾನ್ ಬೆಂಬಲಿತ ಹುತಿ ದಂಗೆಕೋರರು ಘೋಷಿಸಿಕೊಂಡ ಬೆನ್ನಲ್ಲೇ ಈ ನಿರ್ಧಾರ ಹೊರಬಿದ್ದಿದೆ.

ಸೌದಿ ಮೇಲೆ ಹೌತಿ ದಾಳಿ; ಅ. 10ರವರೆಗೆ ರಿಯಾದ್​ಗೆ ತೆರಳುವ ಏರ್ ಇಂಡಿಯಾ, ಇಂಡಿಗೋ ವಿಮಾನ ಸಂಚಾರ ರದ್ದು
ಏರ್ ಇಂಡಿಯಾImage Credit source: Getty Images
ಸುಷ್ಮಾ ಚಕ್ರೆ
|

Updated on: Oct 08, 2026 | 8:42 PM

Share

ನವದೆಹಲಿ, ಅಕ್ಟೋಬರ್ 8: ಯೆಮೆನ್‌ನ ಇರಾನ್ ಬೆಂಬಲಿತ ಹೌತಿ ದಂಗೆಕೋರರು ಸೌದಿ ಅರೇಬಿಯಾದ ರಾಜಧಾನಿ ರಿಯಾದ್ ಮತ್ತು ಇತರೆ ಪ್ರಮುಖ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ ನಡೆಸಿರುವುದಾಗಿ ಘೋಷಿಸಿದ ಬೆನ್ನಲ್ಲೇ, ಭಾರತೀಯ ವಿಮಾನಯಾನ ಸಂಸ್ಥೆಗಳಾದ ಏರ್ ಇಂಡಿಯಾ, ಏರ್ ಇಂಡಿಯಾ ಎಕ್ಸ್‌ಪ್ರೆಸ್, ಇಂಡಿಗೋ, ಅಕಾಸಾ ರಿಯಾದ್​ಗೆ ತೆರಳುವ ಮತ್ತು ಅಲ್ಲಿಂದ ಆಗಮಿಸುವ ಎಲ್ಲಾ ವಿಮಾನಗಳ ಕಾರ್ಯಾಚರಣೆಯನ್ನು ಅಕ್ಟೋಬರ್ 10ರವರೆಗೆ ರದ್ದುಗೊಳಿಸಿವೆ. ಇದೇ ವೇಳೆ, ದೆಹಲಿಯಿಂದ ರಿಯಾದ್​ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನವೊಂದು ಬಾಂಬ್ ಸ್ಪೋಟ ಮತ್ತು ದಾಳಿಯ ವರದಿಗಳ ಹಿನ್ನೆಲೆಯಲ್ಲಿ ಅರ್ಧ ಹಾದಿಯಿಂದಲೇ ವಾಪಾಸ್ ದೆಹಲಿಗೆ ಮರಳಿದೆ.

ಏರ್ ಇಂಡಿಯಾ ಎಕ್ಸ್‌ಪ್ರೆಸ್ ರಿಯಾದ್​​ನಲ್ಲಿ ತಲೆದೋರಿರುವ ಬಿಕ್ಕಟ್ಟನ್ನು ಪರಿಗಣಿಸಿ ಅಕ್ಟೋಬರ್ 10ರವರೆಗೆ ರಿಯಾದ್ ವಿಮಾನಗಳ ಸಂಚಾರವನ್ನು ಸಂಪೂರ್ಣವಾಗಿ ರದ್ದುಗೊಳಿಸಿದೆ. ಇದರಿಂದ ಸಂಕಷ್ಟಕ್ಕೆ ಸಿಲುಕಿರುವ ಪ್ರಯಾಣಿಕರಿಗೆ ಉಚಿತವಾಗಿ ಪ್ರಯಾಣದ ದಿನಾಂಕ ಬದಲಾಯಿಸಲು ಅಥವಾ ಸಂಪೂರ್ಣ ಹಣ ಮರುಪಾವತಿ ಪಡೆಯಲು ಅವಕಾಶ ನೀಡಲಾಗಿದೆ.

ಇದನ್ನೂ ಓದಿ: ‘ನಾಗರಿಕ ಮೂಲಸೌಕರ್ಯಗಳ ಮೇಲಿನ ದಾಳಿ ಒಪ್ಪಲಾಗದು’; ಸೌದಿ ವಿಮಾನ ನಿಲ್ದಾಣಗಳ ಮೇಲಿನ ಹೌತಿ ದಾಳಿಗೆ ಭಾರತ ಖಂಡನೆ

ಅಕಾಸಾ ಏರ್ ಇಂದು (ಅಕ್ಟೋಬರ್ 8) ನಿಗದಿಯಾಗಿದ್ದ ವಿಮಾನ ಸೇವೆಗಳನ್ನು ರದ್ದುಗೊಳಿಸಿದೆ. ಪ್ರಯಾಣಿಕರು ಯಾವುದೇ ಹೆಚ್ಚುವರಿ ಶುಲ್ಕವಿಲ್ಲದೆ ಪ್ರಯಾಣ ಮರುನಿಗದಿಪಡಿಸಿಕೊಳ್ಳಬಹುದು ಅಥವಾ ಹಣ ಮರುಪಾವತಿ ಪಡೆಯಬಹುದು. ಪ್ರಯಾಣಿಕರ ಹಾಗೂ ಸಿಬ್ಬಂದಿಯ ಸುರಕ್ಷತೆಗೆ ಮೊದಲ ಆದ್ಯತೆ ಎಂದು ಸಂಸ್ಥೆ ತಿಳಿಸಿದೆ.

ರಿಯಾದ್ ವಿಮಾನ ನಿಲ್ದಾಣದ ತುರ್ತು ಸಲಹೆ:

ರಿಯಾದ್ ನಗರ ಮತ್ತು ವಿಮಾನ ನಿಲ್ದಾಣದ ಸುತ್ತಮುತ್ತ ಸರಣಿ ಸ್ಪೋಟಗಳು ಕೇಳಿಬಂದ ಬೆನ್ನಲ್ಲೇ ವಿಮಾನಗಳ ಕಾರ್ಯಾಚರಣೆ ಅಸ್ತವ್ಯಸ್ತಗೊಂಡಿದೆ. ವಿಮಾನ ನಿಲ್ದಾಣಕ್ಕೆ ಆಗಮಿಸುವ ಮುನ್ನ ಪ್ರಯಾಣಿಕರು ತಮ್ಮ ವಿಮಾನಯಾನ ಸಂಸ್ಥೆಗಳನ್ನು ನೇರವಾಗಿ ಸಂಪರ್ಕಿಸಿ, ವಿಮಾನದ ಪ್ರಸ್ತುತ ವೇಳಾಪಟ್ಟಿಯನ್ನು ಖಚಿತಪಡಿಸಿಕೊಳ್ಳುವಂತೆ ಕಿಂಗ್ ಖಾಲಿದ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಎಕ್ಸ್​​ನಲ್ಲಿ ಸೂಚನೆ ಬಿಡುಗಡೆ ಮಾಡಿದೆ.

ಇದನ್ನೂ ಓದಿ: ರಿಯಾದ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ; ಗುರಿ ತಲುಪಿರುವುದಾಗಿ ಘೋಷಿಸಿಕೊಂಡ ಹೌತಿ ಉಗ್ರರು

ಕಿಂಗ್ ಖಾಲಿದ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸೇರಿದಂತೆ ರಿಯಾದ್ ನಗರದಲ್ಲಿ ಭಾರಿ ಸ್ಪೋಟದ ಶಬ್ದಗಳು ಕೇಳಿಬಂದಿವೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಸೌದಿ ಮಿತ್ರಪಡೆಯ ವಕ್ತಾರ ಮೇಜರ್ ಜನರಲ್ ಟರ್ಕಿ ಅಲ್-ಮಲಿಕಿ, ರಿಯಾದ್ ಕಡೆಗೆ ಬಂದ 2 ಬ್ಯಾಲಿಸ್ಟಿಕ್ ಕ್ಷಿಪಣಿ ಹಾಗೂ ಖಮಿಸ್ ಮುಶೈತ್ ಕಡೆಗೆ ಬಂದ 1 ಕ್ಷಿಪಣಿಯನ್ನು ತಡೆದು ಧ್ವಂಸಗೊಳಿಸಿರುವುದಾಗಿ ಹೇಳಿದ್ದಾರೆ.

ಭಾರತದ ಖಂಡನೆ:

ಸೌದಿ ಅರೇಬಿಯಾದ ಅಭಾ ಹಾಗೂ ರಿಯಾದ್ ವಿಮಾನ ನಿಲ್ದಾಣಗಳನ್ನು ಗುರಿಯಾಗಿಸಿಕೊಂಡು ನಡೆಸಿರುವ ದಾಳಿಯಲ್ಲಿ ನಾಗರಿಕರು ಮೃತಪಟ್ಟಿರುವುದನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. “ನಾಗರಿಕ ಮೂಲಸೌಕರ್ಯಗಳ ಮೇಲಿನ ದಾಳಿ ಸಂಪೂರ್ಣವಾಗಿ ಅಸಂಗತ” ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಪುನರುಚ್ಚರಿಸಿದ್ದು, ಸಂತ್ರಸ್ತ ಕುಟುಂಬಗಳಿಗೆ ಸಂತಾಪ ಸೂಚಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More
ಚಿಕ್ಕಮಗಳೂರಲ್ಲಿ ಬಿರುಗಾಳಿ ಸಹಿತ ಅಬ್ಬರಿಸಿದ ವರುಣ
ಚಿಕ್ಕಮಗಳೂರಲ್ಲಿ ಬಿರುಗಾಳಿ ಸಹಿತ ಅಬ್ಬರಿಸಿದ ವರುಣ
ವಿಜಯಲಕ್ಷ್ಮಿ ದರ್ಶನ್ ಅರ್ಜಿ ರದ್ದಾಗಿದ್ದೇಕೆ: ವಿವರಿಸಿದ ವಕೀಲ
ವಿಜಯಲಕ್ಷ್ಮಿ ದರ್ಶನ್ ಅರ್ಜಿ ರದ್ದಾಗಿದ್ದೇಕೆ: ವಿವರಿಸಿದ ವಕೀಲ
ಸತತ 2ನೇ ವರ್ಷವೂ ಚಾಮರಾಜನಗರ ದಸರಾ ರದ್ದು; ಜಾನಪದ ಕಲಾವಿದರಲ್ಲಿ ಬೇಸರ
ಸತತ 2ನೇ ವರ್ಷವೂ ಚಾಮರಾಜನಗರ ದಸರಾ ರದ್ದು; ಜಾನಪದ ಕಲಾವಿದರಲ್ಲಿ ಬೇಸರ
ಎಸ್​​​​ಐಆರ್ ವಿರುದ್ಧ ಸಿಜೆಪಿ ಸಮರ: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
ಎಸ್​​​​ಐಆರ್ ವಿರುದ್ಧ ಸಿಜೆಪಿ ಸಮರ: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
ಕರ್ನಾಟಕ ಸರ್ಕಾರ ಕೆಡವಲು ಕೇಂದ್ರದಿಂದ ಯತ್ನ: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ
ಕರ್ನಾಟಕ ಸರ್ಕಾರ ಕೆಡವಲು ಕೇಂದ್ರದಿಂದ ಯತ್ನ: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ
ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡದ ಟಿಹೆಚ್ಒಗಳು: ಸಚಿವ ಖಾದರ್ ಗರಂ
ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡದ ಟಿಹೆಚ್ಒಗಳು: ಸಚಿವ ಖಾದರ್ ಗರಂ
ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಚಿಕಿತ್ಸೆ
ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಚಿಕಿತ್ಸೆ
ಬೀಗರೂಟ ಮಾಡಿದ್ರೆ 1 ಲಕ್ಷ, ತಿಂದ್ರೆ 50 ಸಾವಿರ ದಂಡ
ಬೀಗರೂಟ ಮಾಡಿದ್ರೆ 1 ಲಕ್ಷ, ತಿಂದ್ರೆ 50 ಸಾವಿರ ದಂಡ
ವಿಜಯಪುರದಲ್ಲಿ ಕಚ್ಚಾ ಅಡುಗೆ ಎಣ್ಣೆ ಟ್ಯಾಂಕರ್ ಪಲ್ಟಿ: ಮುಗಿಬಿದ್ದ ಜನ
ವಿಜಯಪುರದಲ್ಲಿ ಕಚ್ಚಾ ಅಡುಗೆ ಎಣ್ಣೆ ಟ್ಯಾಂಕರ್ ಪಲ್ಟಿ: ಮುಗಿಬಿದ್ದ ಜನ
ಸಾಗರ ಮುಂಬಾಳು ಬಳಿ ನಡು ರಸ್ತೆಯಲ್ಲೇ ಧಗಧಗ ಹೊತ್ತಿ ಉರಿದ ಸ್ಲೀಪರ್ ಬಸ್
ಸಾಗರ ಮುಂಬಾಳು ಬಳಿ ನಡು ರಸ್ತೆಯಲ್ಲೇ ಧಗಧಗ ಹೊತ್ತಿ ಉರಿದ ಸ್ಲೀಪರ್ ಬಸ್