G20 SUMMIT: ಜಿ20 ಶೃಂಗಸಭೆಯಲ್ಲಿ ಭಾಗವಹಿಸಲಿರುವ ಸೌದಿ ಕ್ರೌನ್ ಪ್ರಿನ್ಸ್, ದ್ವಿಪಕ್ಷೀಯ ಮಾತುಕತೆಗೆ ಸಿದ್ಧ ಎಂದ ಉಭಯ ನಾಯಕರು

Saudi Crown Prince: ಜಿ20 ಶೃಂಗಸಭೆಯಲ್ಲಿ ಸೌದಿ ಅರೇಬಿಯಾದ ಕ್ರೌನ್ ಪ್ರಿನ್ಸ್ ಮತ್ತು ಪ್ರಧಾನಿ ಮೊಹಮ್ಮದ್ ಬಿನ್ ಸಲ್ಮಾನ್ ಬಿನ್ ಅಬ್ದುಲಜೀಜ್ ಅಲ್ ಸೌದ್ ಅವರು ಭಾಗವಹಿಸಲಿದ್ದಾರೆ. ಸೆಪ್ಟೆಂಬರ್ 11 ರವರೆಗೆ ಭಾರತ ನೇತೃತ್ವದಲ್ಲಿ ನಡೆಯಲಿರುವ ಜಿ 20 ಶೃಂಗಸಭೆಯಲ್ಲಿ ಅರೇಬಿಯಾದ ಕ್ರೌನ್ ಪ್ರಿನ್ಸ್ ಕೂಡ ಭಾಗವಹಿಸುತ್ತಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಇಂದು (ಸೆ.9) ತಿಳಿಸಿದೆ.

G20 SUMMIT: ಜಿ20 ಶೃಂಗಸಭೆಯಲ್ಲಿ ಭಾಗವಹಿಸಲಿರುವ ಸೌದಿ ಕ್ರೌನ್ ಪ್ರಿನ್ಸ್, ದ್ವಿಪಕ್ಷೀಯ ಮಾತುಕತೆಗೆ ಸಿದ್ಧ ಎಂದ ಉಭಯ ನಾಯಕರು
ಸೌದಿ ಕ್ರೌನ್ ಪ್ರಿನ್ಸ್ ಮತ್ತು ಮೋದಿ
Follow us
ಅಕ್ಷಯ್​ ಪಲ್ಲಮಜಲು​​
|

Updated on:Sep 09, 2023 | 11:25 AM

ದೆಹಲಿ, ಸೆ.9: ಇಂದಿನಿಂದ ದೆಹಲಿಯಲ್ಲಿ ಜಿ20 ಶೃಂಗಸಭೆ (G20 Summit Delhi) ನಡೆಯಲಿದ್ದು, ಅನೇಕ ದೇಶಗಳ ನಾಯಕರು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಈ ಸಭೆಗೆ ಈಗಾಗಲೇ ಸಕಲ ಸಿದ್ಧತೆಗಳನ್ನು ನಡೆಸಲಿದೆ. ದೆಹಲಿಯಲ್ಲಿ ಇದೀಗ ಹಬ್ಬದ ವಾತಾವರಣ ಸೃಷ್ಟಿಯಾಗಿದ್ದು. ಈಗಾಗಲೇ ಹಲವು ದೇಶದ ನಾಯಕರಗಳು ಭಾರತಕ್ಕೆ ಬಂದಿಳಿದ್ದಾರೆ. ಈ ವೇಳೆ ಉಭಯ ನಾಯಕರುಗಳ ನಡುವೆ ಮಹತ್ವದ ಮಾತುಕತೆ ನಡೆದಿದೆ. ಇನ್ನು ಈ ಸಭೆಯಲ್ಲಿ ಸೌದಿ ಅರೇಬಿಯಾದ ಕ್ರೌನ್ ಪ್ರಿನ್ಸ್ ಮತ್ತು ಪ್ರಧಾನಿ ಮೊಹಮ್ಮದ್ ಬಿನ್ ಸಲ್ಮಾನ್ ಬಿನ್ ಅಬ್ದುಲಜೀಜ್ ಅಲ್ ಸೌದ್ ಅವರು ಭಾಗವಹಿಸಲಿದ್ದಾರೆ. ಸೆಪ್ಟೆಂಬರ್ 11 ರವರೆಗೆ ಭಾರತ ನೇತೃತ್ವದಲ್ಲಿ ನಡೆಯಲಿರುವ ಜಿ 20 ಶೃಂಗಸಭೆಯಲ್ಲಿ ಅರೇಬಿಯಾದ ಕ್ರೌನ್ ಪ್ರಿನ್ಸ್ ಕೂಡ ಭಾಗವಹಿಸುತ್ತಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಇಂದು (ಸೆ.9) ತಿಳಿಸಿದೆ.

ಭಾರತದಲ್ಲಿ ಎರಡು ದಿನಗಳ ಕಾಲ ನಡೆಯಲ್ಲಿರುವ G20 ಶೃಂಗಸಭೆ ರಾಷ್ಟ್ರ ರಾಜಧಾನಿಯಲ್ಲಿ ಹೊಸದಾಗಿ ಉದ್ಘಾಟನೆಗೊಂಡ ಭಾರತ ಮಂಟಪದಲ್ಲಿ ಇಂದಿನಿಂದ ಪ್ರಾರಂಭವಾಗುತ್ತಿದೆ. ವಿಶ್ವ ನಾಯಕರ ಆಗಮನದೊಂದಿಗೆ ಶೃಂಗಸಭೆಯು ಬೆಳಿಗ್ಗೆ 9:30 ರಿಂದ ಭಾರತ್ ಮಂಟಪದಲ್ಲಿ ಪ್ರಾರಂಭವಾಗಿದೆ. ಭಾರತದ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ಈ ವರ್ಷದ G20 ಶೃಂಗಸಭೆಯಲ್ಲಿ “ವಸುಧೈವ ಕುಟುಂಬಕಂ” ಅಥವಾ “ಒಂದು ಭೂಮಿ – ಒಂದು ಕುಟುಂಬ – ಒಂದು ಭವಿಷ್ಯ” ಎಂಬ ವಿಚಾರಧಾರೆಯಡಿಯಲ್ಲಿ ನಡೆಯಲಿದೆ.

ಪ್ರಧಾನಿ ನರೇಂದ್ರ ಮೋದಿಯವರ ಆಹ್ವಾನದ ಮೇರೆಗೆ ಸೌದಿ ಅರೇಬಿಯಾದ ಕ್ರೌನ್ ಪ್ರಿನ್ಸ್ ಭಾರತಕ್ಕೆ ಪ್ರಯಾಣ ಬೆಳೆಸಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಹೇಳಿಕೆ ತಿಳಿಸಿದೆ. ಮೊಹಮ್ಮದ್ ಬಿನ್ ಸಲ್ಮಾನ್ ಬಿನ್ ಅಬ್ದುಲಜೀಜ್ ಅಲ್ ಸೌದ್ ಅವರನ್ನು ಸಚಿವರು ಮತ್ತು ಹಿರಿಯ ಅಧಿಕಾರಿಗಳು ಸೇರಿದಂತೆ ಉನ್ನತ ಮಟ್ಟದ ನಿಯೋಗಗಳು ಸ್ವಾಗತಿಸಲಿದೆ.

ಇದನ್ನೂ ಓದಿ:G20 Summit 2023 in Delhi Live: ಜಿ20 ಒಕ್ಕೂಟಕ್ಕೆ ಆಫ್ರಿಕನ್​ ಒಕ್ಕೂಟ ಸೇರ್ಪಡೆ ಬಗ್ಗೆ ಮೋದಿ ಘೋಷಣೆ

ಸೆಪ್ಟೆಂಬರ್ 11 ರಂದು ಸೌದಿ ಅರೇಬಿಯಾದ ಪ್ರಧಾನಿ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ. ಮೊಹಮ್ಮದ್ ಬಿನ್ ಸಲ್ಮಾನ್ ಬಿನ್ ಅಬ್ದುಲಜೀಜ್ ಅಲ್ ಸೌದ್ ಅವರು ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ದ್ವಿಪಕ್ಷೀಯ ಸಭೆಯನ್ನು ನಡೆಸಲಿದ್ದಾರೆ ಮತ್ತು ಇಬ್ಬರೂ ನಾಯಕರು ಕಾರ್ಯತಂತ್ರದ ಪಾಲುದಾರಿಕೆ ಮಂಡಳಿ ಸಭೆಯ ಸಹ-ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದ್ದಾರೆ.

ಉಭಯ ನಾಯಕರು ರಾಜಕೀಯ, ಭದ್ರತೆ, ಸಾಮಾಜಿಕ ಮತ್ತು ಸಾಂಸ್ಕೃತಿಕ ಸಹಕಾರ ಸಮಿತಿ ಮತ್ತು ಆರ್ಥಿಕತೆ, ಹೂಡಿಕೆ ಸಹಕಾರ, ಇನ್ನು ಅನೇಕ ವಿಚಾರಗಳ ಕುರಿತು ಚರ್ಚೆ ನಡೆಸಲಿದ್ದಾರೆ ಎಂದು ಹೇಳಿದ್ದಾರೆ. ಈ ಹಿಂದೆ ಅಂದರೆ 2019ರಲ್ಲಿ ಮೊಹಮ್ಮದ್ ಬಿನ್ ಸಲ್ಮಾನ್ ಬಿನ್ ಅಬ್ದುಲಜೀಜ್ ಅಲ್ ಸೌದ್ ಭಾರತಕ್ಕೆ ಭೇಟಿ ನೀಡಿದಾಗ ಅನೇಕ ವಿಚಾರಗಳು ಕುರಿತು ಹಲವು ಚರ್ಚೆಗಳನ್ನು ನಡೆಸಿದ್ದರು. ಈ ಸಂದರ್ಭದಲ್ಲಿ ಭಾರತ ಮತ್ತು ಸೌದಿ ಅರೇಬಿಯಾ ಐತಿಹಾಸಿಕ ಒಪ್ಪಂದಗಳಿಗೆ ಸಹಿ ಹಾಕಿತ್ತು. ಇದೀಗ ಈ ಜಿ20 ಸಭೆಯಲ್ಲಿ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:01 am, Sat, 9 September 23