ಒಂದು ಬಾರಿ ಐ ಲವ್ ಯೂ ಎನ್ನುವುದು ಉದ್ದೇಶಪೂರ್ವಕವಾಗಿ ಹುಡುಗಿಯ ನಮ್ರತೆಗೆ ಮಾಡಿದ ಅವಮಾನವಲ್ಲ: ಪೋಕ್ಸೊ ಕೋರ್ಟ್

ಸಂತ್ರಸ್ತೆಗೆ ಐ ಲವ್ ಯೂ ಹೇಳುವ ಒಂದೇ ಒಂದು ಘಟನೆಯು ಸಂತ್ರಸ್ತೆಯ ಮೇಲೆ ಆರೋಪಿಯ ಪ್ರೀತಿಯ ಭಾವನೆಯನ್ನು ವ್ಯಕ್ತಪಡಿಸುತ್ತದೆ. ಸಂತ್ರಸ್ತೆಯ ನಮ್ರತೆಯನ್ನು ಅವಮಾನಿಸುವ ಉದ್ದೇಶದಿಂದ ಈ ಕೃತ್ಯ ಎಸಗಲಾಗಿದೆ ಎಂದು ಹೇಳಲಾಗದು.

ಒಂದು ಬಾರಿ ಐ ಲವ್ ಯೂ ಎನ್ನುವುದು ಉದ್ದೇಶಪೂರ್ವಕವಾಗಿ ಹುಡುಗಿಯ ನಮ್ರತೆಗೆ ಮಾಡಿದ ಅವಮಾನವಲ್ಲ: ಪೋಕ್ಸೊ ಕೋರ್ಟ್
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Feb 25, 2022 | 1:26 PM

ಮುಂಬೈ: ಒಬ್ಬಳು ಹುಡುಗಿಗೆ ಒಂದು ಬಾರಿ “ಐ ಲವ್ ಯೂ” ಎಂದು ಹೇಳುವುದು ಅವಳ ನಮ್ರತೆಗೆ ಉದ್ದೇಶಪೂರ್ವಕ ಅವಮಾನವಲ್ಲ, ಹೆಚ್ಚೆಂದರೆ ಅದು ಪ್ರೀತಿಯ ಭಾವನೆಯನ್ನು ವ್ಯಕ್ತಪಡಿಸುತ್ತದೆ ಎಂದು ಹೇಳಿದ ವಿಶೇಷ ನ್ಯಾಯಾಲಯವು ಪೋಕ್ಸೊ ಕಾಯಿದೆಯಡಿಯಲ್ಲಿ ಕೇಸು ದಾಖಲಿಸಲಾದ 23 ವರ್ಷದ ಯುವಕನನ್ನು ಖುಲಾಸೆಗೊಳಿಸಿದೆ. ವಿಶೇಷ ನ್ಯಾಯಾಧೀಶೆ ಕಲ್ಪನಾ ಪಾಟೀಲ್ ಅವರು ಮಂಗಳವಾರ ವಿಚಾರಣೆ ಮಾಡಿದ್ದು, ಬುಧವಾರ ವಿವರವಾದ ಆದೇಶ ಲಭ್ಯವಾಗಿದೆ. 17 ವರ್ಷದ ಸಂತ್ರಸ್ತೆಯ ಕುಟುಂಬದವರು ನೀಡಿದ ದೂರಿನ ಪ್ರಕಾರ, ಆರೋಪಿಯು 2016 ರಲ್ಲಿ ತಮ್ಮ ನಿವಾಸದ ಬಳಿ ಹುಡುಗಿಯನ್ನು ಪ್ರೀತಿಸುವುದಾಗಿ ಹೇಳಿದ್ದರು. ಆರೋಪಿ ಬಾಲಕಿಯನ್ನು ಗುರಾಯಿಸಿದ್ದಾನೆ ಮತ್ತು ಕಣ್ಣು ಹೊಡೆದಿದ್ದಾನೆ. ಆಕೆಯ ತಾಯಿಗೆ ಬೆದರಿಕೆಯನ್ನು ಹಾಕಿದ್ದಾರೆ ಎಂದು ದೂರುದಾರರು ಆರೋಪಿಸಿದ್ದಾರೆ. ದೂರಿನ ಆಧಾರದ ಮೇಲೆ, ವಡಾಲಾ ಟಿಟಿ ಪೊಲೀಸರು ಆರೋಪಿಗಳ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (POCSO) ಕಾಯ್ದೆಯ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಸಂತ್ರಸ್ತೆಗೆ ಐ ಲವ್ ಯೂ ಹೇಳುವ ಒಂದೇ ಒಂದು ಘಟನೆಯು ಸಂತ್ರಸ್ತೆಯ ಮೇಲೆ ಆರೋಪಿಯ ಪ್ರೀತಿಯ ಭಾವನೆಯನ್ನು ವ್ಯಕ್ತಪಡಿಸುತ್ತದೆ. ಸಂತ್ರಸ್ತೆಯ ನಮ್ರತೆಯನ್ನು ಅವಮಾನಿಸುವ ಉದ್ದೇಶದಿಂದ ಈ ಕೃತ್ಯ ಎಸಗಲಾಗಿದೆ ಎಂದು ಹೇಳಲಾಗದು ಎಂದು ನ್ಯಾಯಾಲಯ ಹೇಳಿದೆ.

ಸಂತ್ರಸ್ತೆಯ ನಮ್ರತೆಗೆ ಅವಮಾನ ಮಾಡುವ ಆರೋಪಿಯ ಬಹಿರಂಗ ಕೃತ್ಯವನ್ನು ಪ್ರಾಸಿಕ್ಯೂಷನ್ ದಾಖಲೆಗೆ ತಂದಿಲ್ಲ ಎಂದು ಅದು ಹೇಳಿದೆ.

ಆರೋಪಿಯು ಲೈಂಗಿಕ ಉದ್ದೇಶದಿಂದ ಸಂತ್ರಸ್ತೆಗೆ ಸಂಬಂಧಿಸಿದಂತೆ ಯಾವುದೇ ಕೃತ್ಯ ಎಸಗಿದ್ದಾನೆ ಅಥವಾ ಸಂತ್ರಸ್ತೆ ಅಥವಾ ಆಕೆಯ ತಾಯಿಗೆ ಯಾವುದೇ ರೀತಿಯ ಬೆದರಿಕೆಯನ್ನು ನೀಡಿದ್ದಾನೆ ಎಂಬುದಕ್ಕೆ ಯಾವುದೇ ಸಾಕ್ಷ್ಯವನ್ನು ಪ್ರಾಸಿಕ್ಯೂಷನ್ ದಾಖಲಿಸಿಲ್ಲ ಎಂದು ನ್ಯಾಯಾಲಯ ಹೇಳಿದೆ.

ಇದನ್ನೂ ಓದಿ: ಪೋಕ್ಸೊ ಕಾಯ್ದೆಯಡಿಯಲ್ಲಿ ಮುಖ ಮೈಥುನ ಗಂಭೀರ ಲೈಂಗಿಕ ದೌರ್ಜನ್ಯ ವ್ಯಾಪ್ತಿಗೆ ಬರುವುದಿಲ್ಲ: ಅಲಹಾಬಾದ್ ಹೈಕೋರ್ಟ್

Published On - 1:15 pm, Fri, 25 February 22

ಮನೆಯಲ್ಲಿ ಸಲಗೆನಾ, ಸ್ಟ್ರೀಕ್ಟಾ? ವಿದ್ಯಾರ್ಥಿನಿ ಪ್ರಶ್ನೆಗೆ ಡಿಕೆಶಿ ಉತ್ತರ
ಮನೆಯಲ್ಲಿ ಸಲಗೆನಾ, ಸ್ಟ್ರೀಕ್ಟಾ? ವಿದ್ಯಾರ್ಥಿನಿ ಪ್ರಶ್ನೆಗೆ ಡಿಕೆಶಿ ಉತ್ತರ
ತಮಗೊಂದು ಗ್ಯಾರಂಟಿ ನೀಡುವಂತೆ ವಿದ್ಯಾರ್ಥಿ ಕೇಳಿದ ಪ್ರಶ್ನೆಗೆ ಡಿಸಿಎಂ ಉತ್ತರ
ತಮಗೊಂದು ಗ್ಯಾರಂಟಿ ನೀಡುವಂತೆ ವಿದ್ಯಾರ್ಥಿ ಕೇಳಿದ ಪ್ರಶ್ನೆಗೆ ಡಿಸಿಎಂ ಉತ್ತರ
ಬೃಹತ್ ಹೆಬ್ಬಾವನ್ನು ಮೈಗೆಲ್ಲ ಸುತ್ತಿಕೊಂಡ ವಿಡಿಯೋ ನೋಡಿದರೆ ಶಾಕ್ ಗ್ಯಾರಂಟಿ
ಬೃಹತ್ ಹೆಬ್ಬಾವನ್ನು ಮೈಗೆಲ್ಲ ಸುತ್ತಿಕೊಂಡ ವಿಡಿಯೋ ನೋಡಿದರೆ ಶಾಕ್ ಗ್ಯಾರಂಟಿ
ಮಕ್ಕಳು ಕ್ರೀಡಾಪಟುಗಳಾಗಿದ್ದರೆ ಕೃಪಾಂಕ ನೀಡುವ ಬಗ್ಗೆ ಪರಾಮರ್ಶೆ: ಸಿಎಂ
ಮಕ್ಕಳು ಕ್ರೀಡಾಪಟುಗಳಾಗಿದ್ದರೆ ಕೃಪಾಂಕ ನೀಡುವ ಬಗ್ಗೆ ಪರಾಮರ್ಶೆ: ಸಿಎಂ
ಡ್ಯಾನ್ಸ್ ವೇದಿಕೆಯಾಗಿ ಬದಲಾದ ಬಿಗ್ ಬಾಸ್ ಮನೆ; ಧರ್ಮ-ಐಶೂ ಮಸ್ತ್ ಕುಣಿತ
ಡ್ಯಾನ್ಸ್ ವೇದಿಕೆಯಾಗಿ ಬದಲಾದ ಬಿಗ್ ಬಾಸ್ ಮನೆ; ಧರ್ಮ-ಐಶೂ ಮಸ್ತ್ ಕುಣಿತ
ಯತೀಂದ್ರ ಸಿದ್ದರಾಮಯ್ಯಗೆ ಸಂವಿಧಾನ ಕೈಯಲ್ಲಿ ಹಿಡಿಯುವ ನೈತಿಕತೆ ಇಲ್ಲ: ಅಶೋಕ
ಯತೀಂದ್ರ ಸಿದ್ದರಾಮಯ್ಯಗೆ ಸಂವಿಧಾನ ಕೈಯಲ್ಲಿ ಹಿಡಿಯುವ ನೈತಿಕತೆ ಇಲ್ಲ: ಅಶೋಕ
ಬಸ್​​ನಿಂದ ಎಳೆದೊಯ್ದು ಕಂಡಕ್ಟರ್ ಮೇಲೆ ಮಾರಣಾಂತಿಕ ಹಲ್ಲೆ
ಬಸ್​​ನಿಂದ ಎಳೆದೊಯ್ದು ಕಂಡಕ್ಟರ್ ಮೇಲೆ ಮಾರಣಾಂತಿಕ ಹಲ್ಲೆ
ಲೈಸೆನ್ಸ್ ಹಂಚಿಕೆಯಲ್ಲಿ ಅವ್ಯಾಹತ ಭ್ರಷ್ಟಾಚಾರ: ಗುರುಸ್ವಾಮಿ, ಸಂಘದ ಅಧ್ಯಕ್ಷ
ಲೈಸೆನ್ಸ್ ಹಂಚಿಕೆಯಲ್ಲಿ ಅವ್ಯಾಹತ ಭ್ರಷ್ಟಾಚಾರ: ಗುರುಸ್ವಾಮಿ, ಸಂಘದ ಅಧ್ಯಕ್ಷ
ಕೊವಿಡ್ ಹಗರಣದ ತನಿಖೆಗೆ SIT ರಚನೆ: ಡಾ ಸಿಎನ್ ಮಂಜುನಾಥ್​ಗೂ ಸಂಕಷ್ಟ?
ಕೊವಿಡ್ ಹಗರಣದ ತನಿಖೆಗೆ SIT ರಚನೆ: ಡಾ ಸಿಎನ್ ಮಂಜುನಾಥ್​ಗೂ ಸಂಕಷ್ಟ?
ಫಲಿತಾಂಶಕ್ಕೆ ಮೊದಲೇ ಗೂಬೆ ಕೂರಿಸುವ ಕೆಲಸ ಶುರುಮಾಡಿದ ಯೋಗೇಶ್ವರ್
ಫಲಿತಾಂಶಕ್ಕೆ ಮೊದಲೇ ಗೂಬೆ ಕೂರಿಸುವ ಕೆಲಸ ಶುರುಮಾಡಿದ ಯೋಗೇಶ್ವರ್