ಸೆಂಗೋಲ್ ಇತಿಹಾಸ ಬೋಗಸ್ ಎಂದು ಹೇಳುವುದು, ನಮ್ಮ ವಿಶ್ವಾಸಾರ್ಹತೆಯನ್ನು ಪ್ರಶ್ನಿಸುವುದು ದುರದೃಷ್ಟಕರ: ತಿರುವವಡುತುರೈ ಅಧೀನಂ

Sengol:ಯಾರ ಹೆಸರನ್ನೂ ಉಲ್ಲೇಖಿಸದೆ ಪಕ್ಷಕ್ಕೆ ತಿರುಗೇಟು ನೀಡಿದ ಮಠ, ಶುಕ್ರವಾರ ಸಂಜೆ ಪತ್ರಿಕಾಗೋಷ್ಠಿಯಲ್ಲಿ ಸೆಂಗೋಲ್ ಬಗ್ಗೆ ಮತ್ತು ಭಾರತದ ಸ್ವಾತಂತ್ರ್ಯದ ಹೊತ್ತಲ್ಲಿ ಅಧಿಕಾರದ ಹಸ್ತಾಂತರ ಬಗ್ಗೆ ನಿಜವಾದ ಇತಿಹಾಸವನ್ನು ಬಹಿರಂಗಪಡಿಸುವುದಾಗಿ ಹೇಳಿದೆ.

ಸೆಂಗೋಲ್ ಇತಿಹಾಸ ಬೋಗಸ್ ಎಂದು ಹೇಳುವುದು, ನಮ್ಮ ವಿಶ್ವಾಸಾರ್ಹತೆಯನ್ನು ಪ್ರಶ್ನಿಸುವುದು ದುರದೃಷ್ಟಕರ: ತಿರುವವಡುತುರೈ ಅಧೀನಂ
ತಿರುವವಡುತುರೈ ಅಧೀನಂ
Follow us
ರಶ್ಮಿ ಕಲ್ಲಕಟ್ಟ
|

Updated on: May 26, 2023 | 4:34 PM

ನೂತನ ಸಂಸತ್ ಭವನದಲ್ಲಿ ಸೆಂಗೋಲ್ (Sengol) ಸ್ಥಾಪಿಸುವುದರ ಬಗ್ಗೆ ಬಿಜೆಪಿ ಮತ್ತು ಕಾಂಗ್ರೆಸ್ (Congress) ನಡುವಿವ ವಾಕ್ಸಮರದೆಡೆಯಲ್ಲಿಯೇ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಅವರು ಸೆಂಗೋಲ್ ಇತಿಹಾಸ ಬೋಗಸ್ ಎಂದು ಹೇಳಿದ್ದಾರೆ. ಲಾರ್ಡ್ ಮೌಂಟ್‌ಬ್ಯಾಟನ್, ಸಿ ರಾಜಗೋಪಾಲಾಚಾರಿ ಮತ್ತು ಜವಾಹರಲಾಲ್ ನೆಹರು (Jawaharlal Nehru) ಅವರು ಸೆಂಗೋಲ್ ಅನ್ನು ಬ್ರಿಟಿಷರು ಭಾರತಕ್ಕೆ ಅಧಿಕಾರ ಹಸ್ತಾಂತರಿಸುವ ಸಂಕೇತ ಎಂದು ಬಣ್ಣಿಸಿದ್ದಾರೆ ಎಂಬುದಕ್ಕೆ ಯಾವುದೇ ದಾಖಲೆಗಳಿಲ್ಲ ಎಂದು ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ಬೆಂಬಲಿಗರು ತಮಿಳುನಾಡಿನಲ್ಲಿ ತಮ್ಮ ರಾಜಕೀಯ ಉದ್ದೇಶಕ್ಕಾಗಿ ರಾಜದಂಡವನ್ನು ಬಳಸುತ್ತಿದ್ದಾರೆ ಎಂದು ಜೈರಾಮ್ ರಮೇಶ್ ಟ್ವೀಟ್ ಮಾಡಿದ್ದಾರೆ.

ಕಾಂಗ್ರೆಸ್ ಪಕ್ಷದ ಈ ಹೇಳಿಕೆಯನ್ನು ಖಂಡಿಸಿದ ತಿರುವವಡುತುರೈ ಅಧೀನಂ ಈ ಬಗ್ಗೆ ಅಧಿಕೃತ ಹೇಳಿಕೆ ನೀಡಿದೆ. ಯಾರ ಹೆಸರನ್ನೂ ಉಲ್ಲೇಖಿಸದೆ ಪಕ್ಷಕ್ಕೆ ತಿರುಗೇಟು ನೀಡಿದ ಮಠ, ಶುಕ್ರವಾರ ಸಂಜೆ ಪತ್ರಿಕಾಗೋಷ್ಠಿಯಲ್ಲಿ ಸೆಂಗೋಲ್ ಬಗ್ಗೆ ಮತ್ತು ಭಾರತದ ಸ್ವಾತಂತ್ರ್ಯದ ಹೊತ್ತಲ್ಲಿ ಅಧಿಕಾರದ ಹಸ್ತಾಂತರ ಬಗ್ಗೆ ನಿಜವಾದ ಇತಿಹಾಸವನ್ನು ಬಹಿರಂಗಪಡಿಸುವುದಾಗಿ ಹೇಳಿದೆ.

ಸೆಂಗೋಲ್ ವಿರುದ್ಧ ಕಾಂಗ್ರೆಸ್ ವಾಗ್ದಾಳಿಯನ್ನು ದುಃಖದ್ದು ಮತ್ತು ದುರದೃಷ್ಟಕರ ಎಂದು ಕರೆದ ಅಧೀನಂ, ಸೆಂಗೋಲ್ ಇತಿಹಾಸವನ್ನು ಅನೇಕ ಮೂಲಗಳಿಂದ ದಾಖಲಿಸಲಾಗಿದ್ದು, ನಮ್ಮ ಸ್ವಂತ ದಾಖಲೆಗಳಲ್ಲಿ ಸಂರಕ್ಷಿಸಲಾಗಿದೆ ಎಂದು ಹೇಳಿದರು. ನಮ್ಮ ಸ್ವಂತ ದಾಖಲೆಗಳು ಸೇರಿದಂತೆ ಅನೇಕ ಮೂಲಗಳಲ್ಲಿ ಇದರ ಬಗ್ಗೆ ಇದೆ. ಅಧಿಕಾರದ ವರ್ಗಾವಣೆಯನ್ನು ಸಂಕೇತಿಸಲು ನೀಡುವ ಈ ಕಾರ್ಯ ನಡೆಸಲು ನಮ್ಮನ್ನು ಆಹ್ವಾನಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ. ತಿರುವವಡುತುರೈ ಅಧೀನಂ ಸಿ ರಾಜಗೋಪಾಲಾಚಾರಿಯವರ ಆಹ್ವಾನವನ್ನು ಗೌರವಿಸಿ, ಸೆಂಗೋಲ್ ತಯಾರಿಸಿದ್ದೇವೆ ಎಂದು ಅವರು ಹೇಳಿದ್ದಾರೆ.

ಸೆಂಗೋಲ್ ಅನ್ನು ಲಾರ್ಡ್ ಮೌಂಟ್‌ಬ್ಯಾಟನ್‌ಗೆ ನೀಡಲಾಯಿತು. ಅದನ್ನು ಅವರಿಂದ ಮರಳಿ ಪಡೆದುಕೊಂಡು ಅದನ್ನು ಪಂಡಿತ್ ಜವಾಹರಲಾಲ್ ನೆಹರು ಅವರಿಗೆ ನೀಡಲಾಯಿತು ಎಂದು ಪ್ರಕಟಣೆ ತಿಳಿಸಿದೆ.ನೆಹರು ಅವರಿಗೆ ಸೆಂಗೋಲ್ ಉಡುಗೊರೆ ನೀಡಿದ ಸ್ವಾಮಿ ಇದು ಸ್ವಯಂ ಆಡಳಿತದ ಸಂಕೇತ ಎಂದು ಸ್ಪಷ್ಟಪಡಿಸಿದ್ದಾರೆ ಎಂದು ಮಠವು ಹೇಳಿದೆ.

ಇದನ್ನೂ ಓದಿ: ಕಾಂಗ್ರೆಸ್ ಪಕ್ಷ ಸೆಂಗೋಲ್​​ನ್ನು ವಾಕಿಂಗ್ ಸ್ಟಿಕ್​​ನಂತೆ ಪರಿಗಣಿಸಿದೆ: ಅಮಿತ್ ಶಾ

ಇಂಥಾ ಘಟನೆಗಳು ನಕಲಿ ಅಥವಾ ಸುಳ್ಳು ಎಂದು ಹೇಳುವುದು, ನಮ್ಮ ವಿಶ್ವಾಸಾರ್ಹತೆಯ ಬಗ್ಗೆ ಪ್ರಶ್ನಿಸಲು ಪ್ರಯತ್ನಿಸುವುದು ಮತ್ತು ರಾಜಕೀಯದ ಸಲುವಾಗಿ ಅಧಿಕಾರದ ಹಸ್ತಾಂತರದ ಸಂಕೇತವಾಗಿ ಸೆಂಗೋಲ್ ಬಳಕೆಯ ಪ್ರಾಮುಖ್ಯತೆಯನ್ನು ಕಡಿಮೆ ಮಾಡಲು ಪ್ರಯತ್ನಿಸುವುದು ತುಂಬಾ ದುಃಖ ಮತ್ತು ದುರದೃಷ್ಟಕರ ಎಂದು ತಿರುವವಡುತುರೈ ಅಧೀನಂ ಹೇಳಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು