AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

The Kerala Story: ದಿ ಕೇರಳ ಸ್ಟೋರಿ ಚಿತ್ರದ ನಿರ್ಮಾಪಕರನ್ನು ಸಾರ್ವಜನಿಕವಾಗಿ ಗಲ್ಲಿಗೇರಿಸಬೇಕು: ಎನ್​ಸಿಪಿ ನಾಯಕ ವಿವಾದಾತ್ಮಕ ಹೇಳಿಕೆ

ದಿ ಕೇರಳ ಸ್ಟೋರಿ(The Kerala Story) ಸಿನಿಮಾವು ಕೆಲವೆಡೆ ಪ್ರಶಂಸೆಗೆ ಪಾತ್ರವಾಗಿದ್ದರೆ ಇನ್ನೂ ಕೆಲವರಿಂದ ವಿರೋಧ ವ್ಯಕ್ತವಾಗಿದೆ.

The Kerala Story: ದಿ ಕೇರಳ ಸ್ಟೋರಿ ಚಿತ್ರದ ನಿರ್ಮಾಪಕರನ್ನು ಸಾರ್ವಜನಿಕವಾಗಿ ಗಲ್ಲಿಗೇರಿಸಬೇಕು: ಎನ್​ಸಿಪಿ ನಾಯಕ ವಿವಾದಾತ್ಮಕ ಹೇಳಿಕೆ
ದಿ ಕೇರಳ ಸ್ಟೋರಿ
ನಯನಾ ರಾಜೀವ್
|

Updated on: May 09, 2023 | 3:03 PM

Share

ದಿ ಕೇರಳ ಸ್ಟೋರಿ(The Kerala Story) ಸಿನಿಮಾವು ಕೆಲವೆಡೆ ಪ್ರಶಂಸೆಗೆ ಪಾತ್ರವಾಗಿದ್ದರೆ ಇನ್ನೂ ಕೆಲವರಿಂದ ವಿರೋಧ ವ್ಯಕ್ತವಾಗಿದೆ. ಈ ಚಿತ್ರದ ನಿರ್ಮಾಪಕರನ್ನು ಸಾರ್ವಜನಿಕವಾಗಿ ಗಲ್ಲಿಗೇರಿಸಬೇಕು ಎಂದು ಎನ್​ಸಿಪಿ ನಾಯಕ ಜಿತೇಂದ್ರ ಅವ್ಹಾದ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ದಿ ಕೇರಳ ಸ್ಟೋರಿ ಚಿತ್ರ ಮೇ 5 ರಂದು ಬಿಡುಗಡೆಯಾಗಿದೆ. ಸಿನಿಮಾ ವೀಕ್ಷಿಸಲು ಹೆಚ್ಚಿನ ಸಂಖ್ಯೆಯಲ್ಲಿ ವೀಕ್ಷಕರು ಥಿಯೇಟರ್‌ಗಳಿಗೆ ಆಗಮಿಸುತ್ತಿದ್ದಾರೆ.

ದೇಶದ ಎರಡು ರಾಜ್ಯಗಳಾದ ಮಧ್ಯಪ್ರದೇಶ ಮತ್ತು ಉತ್ತರ ಪ್ರದೇಶದಲ್ಲಿ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡಲಾಗಿದ್ದರೂ, ಬಂಗಾಳ ಮತ್ತು ತಮಿಳುನಾಡಿನಲ್ಲಿ ಚಿತ್ರವು ಥಿಯೇಟರ್‌ಗಳನ್ನು ತಲುಪಲು ಸಾಧ್ಯವಾಗಲಿಲ್ಲ. ಮಹಾರಾಷ್ಟ್ರದಲ್ಲಿಯೂ ಚಿತ್ರಕ್ಕೆ ಸಂಬಂಧಿಸಿದಂತೆ ರಾಜಕೀಯವು ತೀವ್ರಗೊಳ್ಳುತ್ತಿದೆ . ಚಿತ್ರದಲ್ಲಿ ಎಲ್ಲ ಸುಳ್ಳುಗಳನ್ನು ತೋರಿಸಲಾಗಿದೆ, ಚಿತ್ರ ನಿರ್ಮಾಪಕನನ್ನು ಸಾರ್ವಜನಿಕವಾಗಿ ಗಲ್ಲಿಗೇರಿಸಬೇಕು ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕ ಜಿತೇಂದ್ರ ಅವ್ಹಾದ್ ಹೇಳಿದ್ದಾರೆ.

ಮತ್ತಷ್ಟು ಓದಿ: The Kerala Story: ಉತ್ತರಪ್ರದೇಶದಲ್ಲಿ ‘ದಿ ಕೇರಳ ಸ್ಟೋರಿ’ ಸಿನಿಮಾ ತೆರಿಗೆ ಮುಕ್ತ: ಸಿಎಂ ಯೋಗಿ ಆದಿತ್ಯನಾಥ್

32 ಸಾವಿರ ಮಹಿಳೆಯರು ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ ಆದರೆ ಅಧಿಕೃತ ಅಂಕಿ ಅಂಶ 3 ಆಗಿದೆ ಎಂದು ಅವರು ಹೇಳಿದರು. 32 ಸಾವಿರಕ್ಕೂ 3ಕ್ಕೂ ವ್ಯತ್ಯಾಸವಿಲ್ಲವೇ, ಈ ಕಾಲ್ಪನಿಕ ಕಥೆಯನ್ನು ನಿರ್ಮಿಸಿದ ನಿರ್ಮಾಪಕರು ಯಾರೇ ಆಗಿರಲಿ ಅವರನ್ನು ನೇಣಿಗೇರಿಸಬೇಕು ಎಂದು ಗುಡುಗಿದ್ದಾರೆ.

ಅದೇ ಸಮಯದಲ್ಲಿ, ಜಿತೇಂದ್ರ ಅವ್ಹಾದ್ ಅವರು ಟ್ವಿಟರ್‌ನಲ್ಲಿ ಮುಸ್ಲಿಂ ದಂಪತಿ ಚಿತ್ರವನ್ನು ಹಂಚಿಕೊಂಡಿದ್ದಾರೆ ಮತ್ತು ಕಾಸರಗೋಡಿನಲ್ಲಿ, ಮುಸ್ಲಿಂ ದಂಪತಿಅಬ್ದುಲ್ಲಾ ಮತ್ತು ಖಾಜಿದಾ ತಮ್ಮ ದತ್ತು ಪಡೆದ ಹಿಂದೂ ಮಗಳನ್ನು ಹಿಂದೂ ಹುಡುಗನಿಗೆ ಪೂರ್ಣ ಹಿಂದೂ ಸಂಪ್ರದಾಯದೊಂದಿಗೆ ಮದುವೆಮಾಡಿಕೊಟ್ಟರು. ಈ ವಿಷಯದ ಮೇಲೆ ಸಿನಿಮಾ ಮಾಡಬಹುದಲ್ಲವೇ ಎಂದು ಪ್ರಶ್ನಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ