AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SBI PO Recruitment 2026: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 1,500 ಹುದ್ದೆಗೆ ಅರ್ಜಿ ಆಹ್ವಾನ; ಬ್ಯಾಂಕಿಂಗ್ ಆಕಾಂಕ್ಷಿಗಳಿಗೆ ಸುವರ್ಣಾವಕಾಶ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) 1500 ಪ್ರೊಬೇಷನರಿ ಆಫೀಸರ್ (PO) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಜೂನ್ 18 ರಿಂದ ಜುಲೈ 8 ರವರೆಗೆ ಆನ್‌ಲೈನ್‌ನಲ್ಲಿ ಪದವೀಧರರು ಅರ್ಜಿ ಸಲ್ಲಿಸಬಹುದು. ಮೂರು ಹಂತದ ಆಯ್ಕೆ ಪ್ರಕ್ರಿಯೆ, ಆಕರ್ಷಕ ವೇತನ ಹಾಗೂ ಭತ್ಯೆಗಳು ಇರಲಿವೆ. ಎಸ್‌ಸಿ, ಎಸ್‌ಟಿ, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದ್ದು, ಕೊನೆಯ ದಿನಾಂಕದ ವರೆಗೆ ಕಾಯದೇ ಕೂಡಲೇ ಅರ್ಜಿ ಸಲ್ಲಿಸಿ.

SBI PO Recruitment 2026: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 1,500 ಹುದ್ದೆಗೆ ಅರ್ಜಿ ಆಹ್ವಾನ; ಬ್ಯಾಂಕಿಂಗ್ ಆಕಾಂಕ್ಷಿಗಳಿಗೆ ಸುವರ್ಣಾವಕಾಶ
ಬ್ಯಾಂಕಿಂಗ್ ಆಕಾಂಕ್ಷಿಗಳಿಗೆ ಸುವರ್ಣಾವಕಾಶ Image Credit source: Pinterest
ಅಕ್ಷತಾ ವರ್ಕಾಡಿ
|

Updated on:Jun 18, 2026 | 4:09 PM

Share

ಬ್ಯಾಂಕಿಂಗ್ ವಲಯದಲ್ಲಿ ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವ ಯುವಜನತೆಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಭರ್ಜರಿ ಸಿಹಿ ಸುದ್ದಿ ನೀಡಿದೆ. ಎಸ್‌ಬಿಐ ಒಟ್ಟು 1,500 ಪ್ರೊಬೇಷನರಿ ಆಫೀಸರ್ (PO) ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಜೂನ್ 18 ರಿಂದಲೇ ಪ್ರಾರಂಭವಾಗಿದ್ದು, ಅರ್ಹ ಅಭ್ಯರ್ಥಿಗಳು ಜುಲೈ 8 ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ (Graduation) ಮುಗಿಸಿದ ಅಭ್ಯರ್ಥಿಗಳಿಗೆ ಇದು ಅತ್ಯುತ್ತಮ ಅವಕಾಶವಾಗಿದೆ.

ವರ್ಗಾವಾರು ಹುದ್ದೆಗಳ ವಿವರ:

ಪ್ರಕಟಿಸಲಾದ ಒಟ್ಟು 1,500 ಹುದ್ದೆಗಳಲ್ಲಿ ವಿವಿಧ ವರ್ಗಗಳಿಗೆ ನಿಯಮಾನುಸಾರ ಸೀಟುಗಳನ್ನು ಕಾಯ್ದಿರಿಸಲಾಗಿದೆ. ವರ್ಗಾವಾರು ವಿವರ ಈ ಕೆಳಗಿನಂತಿದೆ:

  • ಸಾಮಾನ್ಯ ವರ್ಗ (General): 588 ಹುದ್ದೆಗಳು
  • ಒಬಿಸಿ ವರ್ಗ (OBC): 390 ಹುದ್ದೆಗಳು
  • ಎಸ್‌ಸಿ ವರ್ಗ (SC): 234 ಹುದ್ದೆಗಳು
  • ಎಸ್‌ಟಿ ವರ್ಗ (ST): 144 ಹುದ್ದೆಗಳು
  • ಇಡಬ್ಲ್ಯೂಎಸ್ ವರ್ಗ (EWS): 144 ಹುದ್ದೆಗಳು

ಶೈಕ್ಷಣಿಕ ಅರ್ಹತೆ ಮತ್ತು ವಯೋಮಿತಿ:

ಅರ್ಜಿದಾರರು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವೀಧರರಾಗಿರಬೇಕು. ಪ್ರಸ್ತುತ ಅಂತಿಮ ವರ್ಷ ಅಥವಾ ಅಂತಿಮ ಸೆಮಿಸ್ಟರ್‌ನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಸಹ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಆದರೆ, ಅವರು ಸೆಪ್ಟೆಂಬರ್ 30, 2026 ರೊಳಗೆ ತಾವು ಪದವಿ ಪೂರ್ಣಗೊಳಿಸಿರುವ ಪುರಾವೆಯನ್ನು ಒದಗಿಸುವುದು ಕಡ್ಡಾಯವಾಗಿದೆ.

ಏಪ್ರಿಲ್ 1, 2026 ರ ಅನ್ವಯ ಅಭ್ಯರ್ಥಿಗಳಿಗೆ ಕನಿಷ್ಠ 21 ವರ್ಷ ತುಂಬಿರಬೇಕು ಮತ್ತು ಗರಿಷ್ಠ 30 ವರ್ಷ ಮೀರಿರಬಾರದು. ಸರ್ಕಾರದ ನಿಯಮಗಳ ಪ್ರಕಾರ ಕಾಯ್ದಿರಿಸಿದ ವರ್ಗಗಳಿಗೆ ವಯೋಮಿತಿ ಸಡಿಲಿಕೆ ಇರಲಿದ್ದು, ಎಸ್‌ಸಿ ಮತ್ತು ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಇದನ್ನೂ ಓದಿ: ಲಿಖಿತ ಪರೀಕ್ಷೆಯಿಲ್ಲದೆ ಸಿಗಲಿದೆ ತಿಂಗಳಿಗೆ 2.25 ಲಕ್ಷ ರೂ. ಸಂಬಳದ ಉದ್ಯೋಗ! ಅರ್ಜಿ ಸಲ್ಲಿಸುವುದು ಹೇಗೆ?

ಮೂರು ಹಂತಗಳ ಕಠಿಣ ಆಯ್ಕೆ ಪ್ರಕ್ರಿಯೆ:

ಎಸ್‌ಬಿಐ ಪಿಒ ಹುದ್ದೆಗಳ ಆಯ್ಕೆ ಪ್ರಕ್ರಿಯೆಯು ಒಟ್ಟು ಮೂರು ಪ್ರಮುಖ ಹಂತಗಳಲ್ಲಿ ಪೂರ್ಣಗೊಳ್ಳುತ್ತದೆ:

  • ಮೊದಲ ಹಂತ (ಪ್ರಾಥಮಿಕ ಪರೀಕ್ಷೆ): ಇದರಲ್ಲಿ ಇಂಗ್ಲಿಷ್ ಭಾಷೆ, ತಾರ್ಕಿಕ ಸಾಮರ್ಥ್ಯ ಮತ್ತು ಪರಿಮಾಣಾತ್ಮಕ ಸಾಮರ್ಥ್ಯದ ವಸ್ತುನಿಷ್ಠ ಪ್ರಶ್ನೆಗಳಿರುತ್ತವೆ.
  • ಎರಡನೇ ಹಂತ (ಮುಖ್ಯ ಪರೀಕ್ಷೆ): ಪ್ರಾಥಮಿಕ ಪರೀಕ್ಷೆಯಲ್ಲಿ ಪಾಸಾದವರಿಗೆ ಮುಖ್ಯ ಪರೀಕ್ಷೆ ನಡೆಯಲಿದ್ದು, ಇದು ವಸ್ತುನಿಷ್ಠ ಮತ್ತು ವಿವರಣಾತ್ಮಕ ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. ಈ ಎರಡೂ ಪರೀಕ್ಷೆಗಳಲ್ಲಿ ತಪ್ಪು ಉತ್ತರಗಳಿಗೆ 1/4 ರಷ್ಟು ಋಣಾತ್ಮಕ ಅಂಕಗಳ ವ್ಯವಸ್ಥೆ ಇರಲಿದೆ.
  • ಅಂತಿಮ ಹಂತ: ಸೈಕೋಮೆಟ್ರಿಕ್ ಪರೀಕ್ಷೆ, ಗುಂಪು ವ್ಯಾಯಾಮಗಳು ಮತ್ತು ವೈಯಕ್ತಿಕ ಸಂದರ್ಶನವನ್ನು ಒಳಗೊಂಡಿರುತ್ತದೆ.

ಆಕರ್ಷಕ ಸಂಬಳ, ಸೇವಾ ಬಾಂಡ್ ಮತ್ತು ಅರ್ಜಿ ಶುಲ್ಕ:

  • ವೇತನ ಶ್ರೇಣಿ: ಆಯ್ಕೆಯಾದ ಅಭ್ಯರ್ಥಿಗಳಿಗೆ ಆರಂಭಿಕ ಮೂಲ ವೇತನ 48,480 ರೂ. ಇರಲಿದೆ. ಇದರೊಂದಿಗೆ ವಿವಿಧ ಭತ್ಯೆಗಳನ್ನು ಒಳಗೊಂಡಂತೆ ವಾರ್ಷಿಕ ಸಿಟಿಸಿ (CTC) ಸುಮಾರು 21.97 ಲಕ್ಷ ರೂ. ವರೆಗೆ ತಲುಪಬಹುದು.
  • ಸೇವಾ ಬಾಂಡ್: ಬ್ಯಾಂಕಿಂಗ್ ನಿಯಮಾವಳಿಗಳ ಪ್ರಕಾರ, ಆಯ್ಕೆಯಾದ ಅಭ್ಯರ್ಥಿಗಳು ಮೂರು ವರ್ಷಗಳ ಅವಧಿಗೆ 2 ಲಕ್ಷ ರೂ. ಸೇವಾ ಬಾಂಡ್‌ಗೆ ಸಹಿ ಹಾಕಬೇಕಾಗುತ್ತದೆ.
  • ಅರ್ಜಿ ಶುಲ್ಕ: ಸಾಮಾನ್ಯ (General), ಒಬಿಸಿ ಮತ್ತು ಇಡಬ್ಲ್ಯೂಎಸ್ ವರ್ಗಗಳ ಅಭ್ಯರ್ಥಿಗಳಿಗೆ ₹750 ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಎಸ್‌ಸಿ, ಎಸ್‌ಟಿ ಮತ್ತು ಅಂಗವಿಕಲ (PwD) ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದವರೆಗೆ ಕಾಯದೆ ಎಸ್‌ಬಿಐನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಕೂಡಲೇ ಅರ್ಜಿ ಸಲ್ಲಿಸಬಹುದಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:08 pm, Thu, 18 June 26

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!