
ಬ್ಯಾಂಕಿಂಗ್ ವಲಯದಲ್ಲಿ ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವ ಯುವಜನತೆಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಭರ್ಜರಿ ಸಿಹಿ ಸುದ್ದಿ ನೀಡಿದೆ. ಎಸ್‌ಬಿಐ ಒಟ್ಟು 1,500 ಪ್ರೊಬೇಷನರಿ ಆಫೀಸರ್ (PO) ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಜೂನ್ 18 ರಿಂದಲೇ ಪ್ರಾರಂಭವಾಗಿದ್ದು, ಅರ್ಹ ಅಭ್ಯರ್ಥಿಗಳು ಜುಲೈ 8 ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ (Graduation) ಮುಗಿಸಿದ ಅಭ್ಯರ್ಥಿಗಳಿಗೆ ಇದು ಅತ್ಯುತ್ತಮ ಅವಕಾಶವಾಗಿದೆ.
ಪ್ರಕಟಿಸಲಾದ ಒಟ್ಟು 1,500 ಹುದ್ದೆಗಳಲ್ಲಿ ವಿವಿಧ ವರ್ಗಗಳಿಗೆ ನಿಯಮಾನುಸಾರ ಸೀಟುಗಳನ್ನು ಕಾಯ್ದಿರಿಸಲಾಗಿದೆ. ವರ್ಗಾವಾರು ವಿವರ ಈ ಕೆಳಗಿನಂತಿದೆ:
ಅರ್ಜಿದಾರರು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವೀಧರರಾಗಿರಬೇಕು. ಪ್ರಸ್ತುತ ಅಂತಿಮ ವರ್ಷ ಅಥವಾ ಅಂತಿಮ ಸೆಮಿಸ್ಟರ್‌ನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಸಹ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಆದರೆ, ಅವರು ಸೆಪ್ಟೆಂಬರ್ 30, 2026 ರೊಳಗೆ ತಾವು ಪದವಿ ಪೂರ್ಣಗೊಳಿಸಿರುವ ಪುರಾವೆಯನ್ನು ಒದಗಿಸುವುದು ಕಡ್ಡಾಯವಾಗಿದೆ.
ಏಪ್ರಿಲ್ 1, 2026 ರ ಅನ್ವಯ ಅಭ್ಯರ್ಥಿಗಳಿಗೆ ಕನಿಷ್ಠ 21 ವರ್ಷ ತುಂಬಿರಬೇಕು ಮತ್ತು ಗರಿಷ್ಠ 30 ವರ್ಷ ಮೀರಿರಬಾರದು. ಸರ್ಕಾರದ ನಿಯಮಗಳ ಪ್ರಕಾರ ಕಾಯ್ದಿರಿಸಿದ ವರ್ಗಗಳಿಗೆ ವಯೋಮಿತಿ ಸಡಿಲಿಕೆ ಇರಲಿದ್ದು, ಎಸ್‌ಸಿ ಮತ್ತು ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಇದನ್ನೂ ಓದಿ: ಲಿಖಿತ ಪರೀಕ್ಷೆಯಿಲ್ಲದೆ ಸಿಗಲಿದೆ ತಿಂಗಳಿಗೆ 2.25 ಲಕ್ಷ ರೂ. ಸಂಬಳದ ಉದ್ಯೋಗ! ಅರ್ಜಿ ಸಲ್ಲಿಸುವುದು ಹೇಗೆ?
ಎಸ್‌ಬಿಐ ಪಿಒ ಹುದ್ದೆಗಳ ಆಯ್ಕೆ ಪ್ರಕ್ರಿಯೆಯು ಒಟ್ಟು ಮೂರು ಪ್ರಮುಖ ಹಂತಗಳಲ್ಲಿ ಪೂರ್ಣಗೊಳ್ಳುತ್ತದೆ:
ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದವರೆಗೆ ಕಾಯದೆ ಎಸ್‌ಬಿಐನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಕೂಡಲೇ ಅರ್ಜಿ ಸಲ್ಲಿಸಬಹುದಾಗಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 4:08 pm, Thu, 18 June 26