ಜೈಲಿನಲ್ಲಿರುವ ತಮಿಳುನಾಡು ಸಚಿವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬಹುದು: ಸುಪ್ರೀಂಕೋರ್ಟ್

V Senthil Balaji: ರಾಜ್ಯ ಸಾರಿಗೆ ಇಲಾಖೆಯಲ್ಲಿ ಉದ್ಯೋಗಕ್ಕಾಗಿ ನಗದು ಹಗರಣಕ್ಕೆ ಸಂಬಂಧಿಸಿದಂತೆ ಬಾಲಾಜಿಯನ್ನು ಬಂಧಿಸಿರುವ ಜಾರಿ ನಿರ್ದೇಶನಾಲಯವು ಮದ್ರಾಸ್ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು.

ಜೈಲಿನಲ್ಲಿರುವ ತಮಿಳುನಾಡು ಸಚಿವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬಹುದು: ಸುಪ್ರೀಂಕೋರ್ಟ್
ವಿ ಸೆಂಥಿಲ್ ಬಾಲಾಜಿ
Follow us
ರಶ್ಮಿ ಕಲ್ಲಕಟ್ಟ
|

Updated on: Jun 21, 2023 | 2:19 PM

ದೆಹಲಿ: ಬಂಧಿತ ತಮಿಳುನಾಡು (Tamil Nadu) ಸಚಿವ ವಿ ಸೆಂಥಿಲ್ ಬಾಲಾಜಿ (V Senthil Balaji) ಅವರನ್ನು ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲು ಸುಪ್ರೀಂಕೋರ್ಟ್ (Supreme Court) ಬುಧವಾರ ಅನುಮತಿ ನೀಡಿದೆ. ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿದ್ದ ಬಾಲಾಜಿ ಚೆನ್ನೈನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ರಾಜ್ಯ ಸಾರಿಗೆ ಇಲಾಖೆಯಲ್ಲಿ ಉದ್ಯೋಗಕ್ಕಾಗಿ ನಗದು ಹಗರಣಕ್ಕೆ ಸಂಬಂಧಿಸಿದಂತೆ ಬಾಲಾಜಿಯನ್ನು ಬಂಧಿಸಿರುವ ಜಾರಿ ನಿರ್ದೇಶನಾಲಯವು ಮದ್ರಾಸ್ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಬಾಲಾಜಿ ವರ್ಗಾವಣೆಗೆ ಹೈಕೋರ್ಟ್ ಅನುಮತಿ ನೀಡಿತ್ತು. ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಎಂ ಎಂ ಸುಂದ್ರೇಶ್ ಅವರಿದ್ದ ಸುಪ್ರೀಂ ಕೋರ್ಟ್ ರಜಾಕಾಲದ ಪೀಠವು ಅರ್ಜಿಯು ಇನ್ನೂ ಹೈಕೋರ್ಟ್‌ನಲ್ಲಿ ಬಾಕಿ ಉಳಿದಿದೆ ಎಂದು ಹೇಳಿದ್ದು, ಆ ನ್ಯಾಯಾಲಯವನ್ನು ಸಂಪರ್ಕಿಸಲು ಇಡಿಗೆ ತಿಳಿಸಿದೆ.

ಹೈಕೋರ್ಟ್‌ನ ಅವಲೋಕನಗಳು ಮಧ್ಯಂತರ ಆದೇಶದಲ್ಲಿವೆ. ಈ ನ್ಯಾಯಾಲಯವು ಮಾಡಿದ ಯಾವುದೇ ಮೌಖಿಕ ಅವಲೋಕನವು ಪ್ರಕರಣದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಪೀಠ ಜುಲೈ 4 ರಂದು ವಿಚಾರಣೆ ಮುಂದೂಡಿದೆ.

ತಮಿಳುನಾಡಿನ ವಿದ್ಯುತ್ ಮತ್ತು ನಿಷೇಧ ಮತ್ತು ಅಬಕಾರಿ ಸಚಿವ ಬಾಲಾಜಿ ಅವರು ಜೆ ಜಯಲಲಿತಾ ನೇತೃತ್ವದಲ್ಲಿ ಎಐಎಡಿಎಂಕೆ ಸರ್ಕಾರದಲ್ಲಿ ಸಾರಿಗೆ ಸಚಿವರಾಗಿದ್ದಾಗ ನಡೆದ ಉದ್ಯೋಗಕ್ಕಾಗಿ ನಗದು ಹಗರಣದಲ್ಲಿ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಜೂನ್ 14 ರಂದು ಬಂಧಿಸಲ್ಪಟ್ಟರು.

ಇದನ್ನೂ ಓದಿ:5 ವರ್ಷಗಳಿಂದ ಬಾಲಕಿಗೆ ನಿರಂತರ ಲೈಂಗಿಕ ಕಿರುಕುಳ ನೀಡಿದ್ದ ತಮಿಳುನಾಡು ಚರ್ಚ್​​​ನ ಪಾದ್ರಿ ಬಂಧನ 

ಅಕ್ರಮ ಬಂಧನ ಆರೋಪದಡಿ ಬಾಲಾಜಿ ಪತ್ನಿ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ ಹಿನ್ನೆಲೆಯಲ್ಲಿ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ