AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬುದ್ಧಿಜೀವಿಗಳೇ ಗೋವಾಕ್ಕೆ ಬನ್ನಿ, ಏಕರೂಪ ನಾಗರಿಕ ಸಂಹಿತೆ ಇಲ್ಲಿ ಹೇಗೆ ಕೆಲಸ ಮಾಡುತ್ತೆ ನೋಡಿ: ಮುಖ್ಯ ನ್ಯಾಯಮೂರ್ತಿ ಬೋಬ್ಡೆ ಕರೆ

ಬಾಂಬೆ ಹೈಕೋರ್ಟಿನ ಗೋವಾ ಪೀಠದ ಹೊಸ ಕಟ್ಟಡದ ಉದ್ಘಾಟನೆ ಸಂದರ್ಭದಲ್ಲಿ ಸವೋಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಎಸ್​.ಎ. ಬೋಬ್ಡೆ ಗೋವಾದಲ್ಲಿ ಬಹಳ ವರ್ಷದಿಂದ ಜಾರಿಯಲ್ಲಿರುವ Uniform Civil Codeನ್ನು ಅಧ್ಯಯನ ಮಾಡಲು ಬುದ್ಧಿಜೀವಗಳಿಗೆ ಕರೆ ನೀಡಿದರು.

ಬುದ್ಧಿಜೀವಿಗಳೇ ಗೋವಾಕ್ಕೆ ಬನ್ನಿ, ಏಕರೂಪ ನಾಗರಿಕ ಸಂಹಿತೆ ಇಲ್ಲಿ ಹೇಗೆ ಕೆಲಸ ಮಾಡುತ್ತೆ ನೋಡಿ: ಮುಖ್ಯ ನ್ಯಾಯಮೂರ್ತಿ ಬೋಬ್ಡೆ ಕರೆ
ಮುಖ್ಯ ನ್ಯಾಯಮೂರ್ತಿ ಎಸ್. ಎ ಬೋಬ್ಡೆ
ಡಾ. ಭಾಸ್ಕರ ಹೆಗಡೆ
|

Updated on:Mar 27, 2021 | 7:03 PM

Share

ಯೂನಿಫಾರಂ ಸಿವಿಲ್​ ಕೋಡ್ (Uniform Civil Code)​ ಅಥವಾ ಏಕರೂಪ ನಾಗರಿಕ ಸಂಹಿತೆ ಎಂದರೆ ಸಾಕು, ನಮ್ಮಲ್ಲಿ ಭಿನ್ನಾಭಿಪ್ರಾಯ ಶುರು. ಕೆಲವೊಮ್ಮೆ ಜಗಳದಲ್ಲೂ ಕೊನೆಗೊಂಡಿದ್ದಿದೆ. ಇದನ್ನು ಜಾರಿಗೆ ತರುವುದರಿಂದ ನಮ್ಮ ಧರ್ಮ ನಿರಪೇಕ್ಷ ಸಂವಿಧಾನಕ್ಕೆ ಅಪಚಾರವಾಗುತ್ತದೆ ಎಂದು ಬಹಳ ಜನ ಹೇಳುತ್ತಾರೆ. ನಿಮಗೆ ಗೊತ್ತಾ? ಗೋವಾದಲ್ಲಿ ಈ ಯೂನಿಫಾರಂ ಸಿವಿಲ್​ ಕೋಡ್ (Uniform Civil Code)​ ಬಹಳ ವರ್ಷಗಳಿಂದ ಜಾರಿಯಲ್ಲಿದೆ ಎಂಬುದು. ಅಲ್ಲಿ ಇದನ್ನು ಸಾಮಾನ್ಯ ಕುಟುಂಬ ಕಾಯ್ದೆ (Uniform Family Law) ಎಂದು ಕರೆಯುತ್ತಾರೆ. ಗೋವಾ ರಾಜ್ಯದಲ್ಲಿ ವಾಸಿಸುವ ಎಲ್ಲ ಧರ್ಮವನ್ನು ಅನುಸರಿಸುವ ಜನರು ತಮ್ಮ ಕೌಟುಂಬಿಕ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬೇಕಾಗುತ್ತದೆ.

ಈಗ ಈ ಸುದ್ದಿ ಏಕೆ?

ಇಂದು ಗೋವಾದಲ್ಲಿರುವ ಬಾಂಬೆ ಹೈ ಕೋರ್ಟ್​ನ ಗೋವಾ ಪೀಠದ​ ಹೊಸ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಸರ್ವೋಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಎಸ್​.ಎ. ಬೋಬ್ಡೆ ಗೋವಾದಲ್ಲಿ ಬಹಳ ವರ್ಷದಿಂದ ಏಕರೂಪ ನಾಗರಿಕ ಸಂಹಿತೆ ಇದೆ ಎಂದು ಹೇಳಿದರು. ಮುಖ್ಯ ನ್ಯಾಯಮೂರ್ತಿ ಅಲ್ಲಿಗೇ ನಿಲ್ಲದೆ.. ದೇಶದ ಬುದ್ಧಿಜೀವಿಗಳು ಇಲ್ಲಿಗೆ ಬಂದು ಅಧ್ಯಯನ ಮಾಡಬೇಕು. ಪ್ರತಿ ಬಾರಿ ಈ ವಿಚಾರ ಬಂದಾಗ ಬಿಸಿ ಬಿಸಿ ಚರ್ಚಿಸುವ ಈ ಬುದ್ಧಿಜೀವಿಗಳು ಇಲ್ಲಿಗೆ ಬಂದು ನೋಡಿದರೆ ಅವರಿಗೆ ಅರ್ಥವಾಗುತ್ತದೆ, ಈ ಕಾನೂನು ಇಲ್ಲಿ ಹೇಗೆ ಕೆಲಸ ಮಾಡುತ್ತಿದೆ ಎಂದು ಹೇಳಿದರು.

ಮದುವೆಯಿಂದ ಹಿಡಿದು ಆಸ್ತಿ ಹಂಚಿಕೆವರೆಗೆ ಎಲ್ಲ ವಿಚಾರದಲ್ಲಿಯೂ ಗೋವಾದ ಏಕರೂಪ ನಾಗರಿಕ ಸಂಹಿತೆ, ಇಲ್ಲಿ ವಾಸಿಸುವ ಎಲ್ಲ ಧರ್ಮದ ಜನರಿಗೂ ಅನ್ವಯಿಸುತ್ತದೆ ಎಂದು ಅವರು ಹೇಳಿದರು. ಈ ಹಿಂದೆ ನಾನಿಲ್ಲಿ ಕೆಲಸ ಮಾಡಿದ್ದೇನೆ. ಅನೇಕ ಕೇಸುಗಳನ್ನು ಈ ಕಾನೂನಿನ ಅಡಿ ನಿರ್ಣಯಿಸಲಾಗಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಇನ್ನೊಂದು ವಿಚಾರವನ್ನು ನಾನು ಹೇಳುತ್ತೇನೆ. ಬಾಂಬೆ ಹೈ ಕೋರ್ಟಿನ ಮುಖ್ಯ ಪೀಠ ಇರುವುದು ಮುಂಬೈಯಲ್ಲಿ. ಅಲ್ಲಿರುವ ಪ್ರಧಾನ ಉಚ್ಛ ನ್ಯಾಯಾಲಯಕ್ಕೆ ಹೊಸ ಕಟ್ಟಡ ಬೇಕು ಎಂದು, ಈ ಸಂದರ್ಭದಲ್ಲಿ ಇಲ್ಲಿ ಹಾಜರಿರುವ ಕೇಂದ್ರ ಕಾನೂನು ಸಚಿವ ರವಿಶಂಕರ್​ ಪ್ರಸಾದ್​ ಅವರಿಗೆ ಹೇಳಲು ಇಚ್ಛಿಸುತ್ತೇನೆ ಎಂದರು. ಮುಂದಿನ ಮುಖ್ಯ ನ್ಯಾಯಮೂರ್ತಿಗಳಾಗಿ ನಿಯುಕ್ತಿಗೊಂಡಿರುವ ಎನ್​.ವಿ. ರಮಣ ಅವರಿಗೆ ಈ ಕುರಿತು ಕಿವಿಮಾತು ಹೇಳಿದ ಬೋಬ್ಡೆ ಅವರು, ತಾವು ಈ ನಿಟ್ಟಿನಲ್ಲಿ ಪ್ರಯತ್ನಿಸಿ ಎಂದರು.

ರವಿಶಂಕರ್​ ಪ್ರಸಾದ್​ ಮಾತನಾಡಿ ಗೋವಾ ರಾಜ್ಯವನ್ನು ಕದಂಬರು ಆಳಿದ್ದರು. ಹತ್ತರಿಂದ ಹದಿನಾಲ್ಕನೇ ಶತಮಾನದ ಮಧ್ಯೆ ಕದಂಬರು ಆಳುವಾಗ ನ್ಯಾಯ ಪದ್ಧತಿ ಹಿಂದೂ ನ್ಯಾಯಶಾಸ್ತ್ರದ ಆಧಾರದ ಮೇಲೆ ನಡೆಯುತ್ತಿತ್ತು ಮತ್ತು ಮುಖ್ಯ ನ್ಯಾಯಮೂರ್ತಿಯನ್ನು ಧರ್ಮ ಅಧ್ಯಕ್ಷ ಎಂದು ಕರೆಯುತ್ತಿದ್ದರು ಎಂದು ಹೇಳಿದರು.

ಇದನ್ನೂ ಓದಿ:

ಸುಪ್ರೀಂಕೋರ್ಟ್​ ನ್ಯಾಯಮೂರ್ತಿ ಸ್ಥಾನಕ್ಕೆ ಎನ್​.ವಿ.ರಮಣ ಹೆಸರನ್ನು ಶಿಫಾರಸು ಮಾಡಿದ ಸಿಜಿಐ ಬೋಬ್ಡೆ..; ಕೇಂದ್ರ ಸಚಿವರ ಪತ್ರಕ್ಕೆ ಉತ್ತರ

ಗೋವಾದ ಮಸೀದಿಗಳಲ್ಲಿ ಇನ್ಮುಂದೆ ಅನುಮತಿ ಇಲ್ಲದೆ ಲೌಡ್​ಸ್ಪೀಕರ್​ ಬಳಸುವ ಹಾಗಿಲ್ಲ; ಶಬ್ದ ಮಾಲಿನ್ಯ ಪ್ರಮಾಣವೂ ನಿಗದಿ

Published On - 7:01 pm, Sat, 27 March 21

ಚಡ್ಡಿಯಲ್ಲಿ ಬಂದು ಒಣಗಲು ಹಾಕಿದ್ದ ಬಟ್ಟೆಗಳನ್ನು ಕದ್ದು ಓಡಿದ ಭೂಪ
ಚಡ್ಡಿಯಲ್ಲಿ ಬಂದು ಒಣಗಲು ಹಾಕಿದ್ದ ಬಟ್ಟೆಗಳನ್ನು ಕದ್ದು ಓಡಿದ ಭೂಪ
‘ಸು ಫ್ರಮ್ ಸೋ’ ನಿರ್ದೇಶಕರಿಗೆ ತಾಯಿಯಿಂದ ಸಿಕ್ತು ಬೆಸ್ಟ್ ಪ್ರತಿಕ್ರಿಯೆ
‘ಸು ಫ್ರಮ್ ಸೋ’ ನಿರ್ದೇಶಕರಿಗೆ ತಾಯಿಯಿಂದ ಸಿಕ್ತು ಬೆಸ್ಟ್ ಪ್ರತಿಕ್ರಿಯೆ
ಬಿಳಿ ಪಂಚೆ ಧರಿಸಿ ಚೋಳಪುರಂ ದೇವಸ್ಥಾನಕ್ಕೆ ಭೇಟಿ ಕೊಟ್ಟ ಪ್ರಧಾನಿ ಮೋದಿ
ಬಿಳಿ ಪಂಚೆ ಧರಿಸಿ ಚೋಳಪುರಂ ದೇವಸ್ಥಾನಕ್ಕೆ ಭೇಟಿ ಕೊಟ್ಟ ಪ್ರಧಾನಿ ಮೋದಿ
ಮೈಸೂರಿನಲ್ಲೇ ಡ್ರಗ್ಸ್​ ತಯಾರಿಕಾ ಘಟಕ: ಸ್ಫೋಟಕ ಅಂಶ ಬಾಯ್ಬಿಟ್ಟ ಪೆಡ್ಲರ್
ಮೈಸೂರಿನಲ್ಲೇ ಡ್ರಗ್ಸ್​ ತಯಾರಿಕಾ ಘಟಕ: ಸ್ಫೋಟಕ ಅಂಶ ಬಾಯ್ಬಿಟ್ಟ ಪೆಡ್ಲರ್
ಆರಂಭಿಕನಾಗಿ ಕಣಕ್ಕಿಳಿದು 6 ಸಿಕ್ಸ್ ಸಿಡಿಸಿದ ಗ್ಲೆನ್ ಮ್ಯಾಕ್ಸ್​ವೆಲ್
ಆರಂಭಿಕನಾಗಿ ಕಣಕ್ಕಿಳಿದು 6 ಸಿಕ್ಸ್ ಸಿಡಿಸಿದ ಗ್ಲೆನ್ ಮ್ಯಾಕ್ಸ್​ವೆಲ್
7 ರನ್​ಗಳ ಅವಶ್ಯಕತೆ: ಪಂದ್ಯದ ಫಲಿತಾಂಶ ಬದಲಿಸಿದ 2 ಅದ್ಭುತ ಕ್ಯಾಚ್​ಗಳು
7 ರನ್​ಗಳ ಅವಶ್ಯಕತೆ: ಪಂದ್ಯದ ಫಲಿತಾಂಶ ಬದಲಿಸಿದ 2 ಅದ್ಭುತ ಕ್ಯಾಚ್​ಗಳು
ಹರಿದ್ವಾರದ ಮಾನಸ ದೇವಿ ದೇವಸ್ಥಾನದಲ್ಲಿ ಕಾಲ್ತುಳಿತ, ಆರು ಮಂದಿ ಸಾವು
ಹರಿದ್ವಾರದ ಮಾನಸ ದೇವಿ ದೇವಸ್ಥಾನದಲ್ಲಿ ಕಾಲ್ತುಳಿತ, ಆರು ಮಂದಿ ಸಾವು
ಮನೆ ಕೌಂಪೌಂಡ್ ಹಾರಿ ಬಂದು ನಾಯಿ ಹೊತ್ತೊಯ್ದ ಚಿರತೆ
ಮನೆ ಕೌಂಪೌಂಡ್ ಹಾರಿ ಬಂದು ನಾಯಿ ಹೊತ್ತೊಯ್ದ ಚಿರತೆ
ಟೇಕ್ ಆಫ್ ಆಗುವಾಗ ಅಮೆರಿಕನ್ ಏರ್​​ಲೈನ್ಸ್ ವಿಮಾನದಲ್ಲಿ ಬೆಂಕಿ
ಟೇಕ್ ಆಫ್ ಆಗುವಾಗ ಅಮೆರಿಕನ್ ಏರ್​​ಲೈನ್ಸ್ ವಿಮಾನದಲ್ಲಿ ಬೆಂಕಿ
ಹೆಚ್ಚುತ್ತಲೇ ಇದೆ ‘ಸು ಫ್ರಮ್ ಸೋ’ ಸಿನಿಮಾ ಶೋ ಸಂಖ್ಯೆ; ಕಲೆಕ್ಷನ್ ಹೇಗಿದೆ?
ಹೆಚ್ಚುತ್ತಲೇ ಇದೆ ‘ಸು ಫ್ರಮ್ ಸೋ’ ಸಿನಿಮಾ ಶೋ ಸಂಖ್ಯೆ; ಕಲೆಕ್ಷನ್ ಹೇಗಿದೆ?