AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರೋಪಿಗಳು ಖುಲಾಸೆಗೊಂಡರೆ ಸಂತ್ರಸ್ತರು ನೇರವಾಗಿ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಬಹುದು: ಸುಪ್ರೀಂ

ಆರೋಪಿಗಳು ಪ್ರಕರಣದಲ್ಲಿ ಖುಲಾಸೆಗೊಂಡರೆ ಸಂತ್ರಸ್ತರು ನೇರವಾಗಿ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಬಹುದು ಎಂದು ಸುಪ್ರೀಂಕೋರ್ಟ್​ ಹೇಳಿದೆ. ಆರೋಪಿಯ ಶಿಕ್ಷೆಯ ವಿರುದ್ಧ ಮೇಲ್ಮನವಿ ಸಲ್ಲಿಸುವ ಹಕ್ಕು ಸಂತ್ರಸ್ತರಿಗೆ ನೀಡಲಾಗಿದೆ. ಸುಪ್ರೀಂಕೋರ್ಟ್​ ಸಂತ್ರಸ್ತರು ಹಾಗೂ ಅವರ ಕಾನೂನು ಬದ್ಧ ಉತ್ತರಾಧಿಕಾರಿಗಳು ಆರೋಪಿಯ ಖುಲಾಸೆ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸುವ ಹಕ್ಕನ್ನು ನೀಡಲಾಗಿದೆ. ವಿಚಾರಣಾ ನ್ಯಾಯಾಲಯ ಅಥವಾ ಹೈಕೋರ್ಟ್ ಆರೋಪಿಯನ್ನು ಖುಲಾಸೆಗೊಳಿಸಿದ ಪ್ರಕರಣದಲ್ಲಿ, ರಾಜ್ಯ ಅಥವಾ ದೂರುದಾರರು ಮೇಲ್ಮನವಿ ಸಲ್ಲಿಸುವ ಹಕ್ಕನ್ನು ಹೊಂದಿದ್ದರು.

ಆರೋಪಿಗಳು ಖುಲಾಸೆಗೊಂಡರೆ ಸಂತ್ರಸ್ತರು ನೇರವಾಗಿ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಬಹುದು: ಸುಪ್ರೀಂ
ಸುಪ್ರೀಂಕೋರ್ಟ್​
ನಯನಾ ರಾಜೀವ್
|

Updated on: Aug 25, 2025 | 10:00 AM

Share

ನವದೆಹಲಿ, ಆಗಸ್ಟ್​ 25: ಆರೋಪಿಗಳು ಪ್ರಕರಣದಲ್ಲಿ ಖುಲಾಸೆಗೊಂಡರೆ ಸಂತ್ರಸ್ತರು ನೇರವಾಗಿ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಬಹುದು ಎಂದು ಸುಪ್ರೀಂಕೋರ್ಟ್​(Supreme Court) ಹೇಳಿದೆ. ಆರೋಪಿಯ ಶಿಕ್ಷೆಯ ವಿರುದ್ಧ ಮೇಲ್ಮನವಿ ಸಲ್ಲಿಸುವ ಹಕ್ಕು ಸಂತ್ರಸ್ತರಿಗೆ ನೀಡಲಾಗಿದೆ. ಸುಪ್ರೀಂಕೋರ್ಟ್​ ಸಂತ್ರಸ್ತರು ಹಾಗೂ ಅವರ ಕಾನೂನು ಬದ್ಧ ಉತ್ತರಾಧಿಕಾರಿಗಳು ಆರೋಪಿಯ ಖುಲಾಸೆ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸುವ ಹಕ್ಕನ್ನು ನೀಡಿದೆ. ವಿಚಾರಣಾ ನ್ಯಾಯಾಲಯ ಅಥವಾ ಹೈಕೋರ್ಟ್ ಆರೋಪಿಯನ್ನು ಖುಲಾಸೆಗೊಳಿಸಿದ ಪ್ರಕರಣದಲ್ಲಿ, ರಾಜ್ಯ ಅಥವಾ ದೂರುದಾರರು ಮೇಲ್ಮನವಿ ಸಲ್ಲಿಸುವ ಹಕ್ಕನ್ನು ಹೊಂದಿದ್ದರು.

ನ್ಯಾಯಮೂರ್ತಿಗಳಾದ ಬಿ.ವಿ. ನಾಗರತ್ನ ಮತ್ತು ಕೆ.ವಿ. ವಿಶ್ವನಾಥನ್ ಅವರ ಪೀಠವು ಕಳೆದ ವಾರ ಆರೋಪಿಗಳ ಖುಲಾಸೆಯ ವಿರುದ್ಧ ಮೇಲ್ಮನವಿ ಸಲ್ಲಿಸುವ ಹಕ್ಕನ್ನು ಇನ್ನೂ ಎರಡು ವರ್ಗಗಳಿಗೆ ವಿಸ್ತರಿಸಿತು. ಅಪರಾಧದಲ್ಲಿ ನೇರವಾಗಿ ತೊಂದರೆಗೊಳಗಾದವರು ಅಥವಾ ನಷ್ಟ ಅನುಭವಿಸಿದವರು ಮತ್ತು ಸಂತ್ರಸ್ತರ ಕಾನೂನುಬದ್ಧ ಉತ್ತರಾಧಿಕಾರಿಗಳು ಮೇಲ್ಮನವಿ ಸಲ್ಲಿಸಬಹುದು. ಅಪರಾಧದ ಸಂತ್ರಸ್ತರ ಹಕ್ಕನ್ನು ಶಿಕ್ಷೆಗೊಳಗಾದ ಆರೋಪಿಯ ಹಕ್ಕಿಗೆ ಸಮಾನವಾಗಿ ಇರಿಸಬೇಕು, ಸಿಆರ್​​ಪಿಸಿಯ ಸೆಕ್ಷನ್ 374 ರ ಅಡಿಯಲ್ಲಿ ಮೇಲ್ಮನವಿ ಸಲ್ಲಿಸಬಹುದು ಎಂದು ಹೇಳಿದರು.

ಭಾರತೀಯ ನ್ಯಾಯ ವ್ಯವಸ್ಥೆಯು ಆರೋಪಿಗಳಿಗೆ ನ್ಯಾಯಯುತ ವಿಚಾರಣೆಯನ್ನು ಮುಂದುವರಿಸಲು ಮತ್ತು ಮೇಲ್ಮನವಿ ಸಲ್ಲಿಸುವ ಹಕ್ಕನ್ನು ನೀಡಿದೆ. ಈಗ ನ್ಯಾಯಾಲಯವು ಸಂತ್ರಸ್ತರ ಮತ್ತು ಅವರ ಅಧಿಕೃತ ಉತ್ತರಾಧಿಕಾರಿಗಳಿಗೆ ಆರೋಪಿಗಳು ಖುಲಾಸೆಗೊಂಡರೆ ಮೇಲ್ಮನವಿ ಸಲ್ಲಿಸುವ ಹಕ್ಕನ್ನು ನೀಡಿದೆ. ಆರೋಪಿ ಬಿಡುಗಡೆಯಾದರೆ ಅಥವಾ ಪಡೆದ ಪರಿಹಾರದ ಪ್ರಮಾಣ ಕಡಿಮೆಯಿದ್ದರೆ ಮತ್ತಷ್ಟು ಮೇಲ್ಮನವಿ ಸಲ್ಲಿಸುವ ಹಕ್ಕನ್ನು ಹೊಂದಿರಬೇಕು ಎಂದು ಪೀಠ ಹೇಳಿದೆ.

ಮತ್ತಷ್ಟು ಓದಿ: ಹೆತ್ತವರನ್ನು ಮಕ್ಕಳು ನೋಡಿಕೊಳ್ಳದಿದ್ದರೆ ಗಿಫ್ಟ್​ ಡೀಡ್ ರದ್ದು: ಸುಪ್ರೀಂಕೋರ್ಟ್​

ಸಂತ್ರಸ್ತರು ಗಾಯಗೊಂಡಿದ್ದರೂ ಅಥವಾ ಆರ್ಥಿಕವಾಗಿ ಸಣ್ಣ ಅಥವಾ ದೊಡ್ಡ ನಷ್ಟವನ್ನು ಅನುಭವಿಸಿದ್ದರೂ, ಅವರು ಮೇಲ್ಮನವಿ ಸಲ್ಲಿಸಬಹುದು ಎಂದು ಪೀಠವು ಸ್ಪಷ್ಟಪಡಿಸಿತು. ಅಷ್ಟೇ ಅಲ್ಲ, ಮೇಲ್ಮನವಿ ಮತ್ತು ಪ್ರಕರಣದ ಪ್ರಕ್ರಿಯೆಯ ಸಮಯದಲ್ಲಿ ಸಂತ್ರಸ್ತ ಸತ್ತರೆ, ಅಧಿಕೃತವಾಗಿ ಅವರ ಉತ್ತರಾಧಿಕಾರಿ ಅದೇ ಮೇಲ್ಮನವಿಯನ್ನು ಮುಂದುವರಿಸಬಹುದು.

ಆರೋಪಿಯ ಬಿಡುಗಡೆಯ ಸಂದರ್ಭದಲ್ಲಿ, ರಾಜ್ಯ ಅಥವಾ ದೂರುದಾರರ ಮೇಲ್ಮನವಿಯನ್ನು ಮಾತ್ರ ಅವಲಂಬಿಸಬಾರದು ಎಂದು ನ್ಯಾಯಾಲಯ ಹೇಳಿದೆ. ಸಂತ್ರಸ್ತ ಬಯಸಿದರೆ, ಅವರು ನೇರವಾಗಿ ಮತ್ತು ಸ್ವಂತವಾಗಿ ಮೇಲ್ಮನವಿ ಸಲ್ಲಿಸಬಹುದು. ಈ ಹಕ್ಕನ್ನು ಸೀಮಿತಗೊಳಿಸಲಾಗುವುದಿಲ್ಲ.

ಸುಪ್ರೀಂ ಕೋರ್ಟ್‌ನ ಈ ತೀರ್ಪು ಉತ್ತರಾಖಂಡ ಹೈಕೋರ್ಟ್‌ನ ತೀರ್ಪಿನ ಆಧಾರದ ಮೇಲೆ ಬಂದಿದೆ. ಇಲ್ಲಿ, 1992 ರಲ್ಲಿ ನಡೆದ ಕೊಲೆ ಪ್ರಕರಣದಲ್ಲಿ 2004 ರಲ್ಲಿ ಮೂವರು ಜನರನ್ನು ತಪ್ಪಿತಸ್ಥರೆಂದು ಘೋಷಿಸಲಾಯಿತು. ಇದರ ವಿರುದ್ಧ ಅವರು ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದರು ಮತ್ತು 2012 ರಲ್ಲಿ ಹೈಕೋರ್ಟ್ ಅವರನ್ನು ನಿರಪರಾಧಿಗಳೆಂದು ಘೋಷಿಸಿತು.

ಈಗ ಮೃತರ ಮಗ ಈ ವಿಷಯದ ಬಗ್ಗೆ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಇದನ್ನು ಕೇಳಿದ ಪೀಠವು ವಿಚಾರಣೆಗೆ ಅನುಮತಿ ನೀಡಿದೆ. ಗಮನಿಸಬೇಕಾದ ಅಂಶವೆಂದರೆ, ಇಲ್ಲಿಯವರೆಗೆ ರಾಜ್ಯ ಸರ್ಕಾರ ಅಥವಾ ದೂರುದಾರರು ಮಾತ್ರ ಮೇಲ್ಮನವಿ ಸಲ್ಲಿಸುವ ಹಕ್ಕನ್ನು ಹೊಂದಿದ್ದರು. ಈ ನಿರ್ಧಾರದ ನಂತರ, ಅದರ ವ್ಯಾಪ್ತಿ ಹೆಚ್ಚಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ