ರೈತರ ಸಮಸ್ಯೆ ಬಗೆಹರಿಸಲು ಸುಪ್ರೀಂ ಕೋರ್ಟ್​ನಿಂದ ಹೊಸ ಸಮಿತಿ ರಚನೆ ಸಾಧ್ಯತೆ

ದೆಹಲಿ ಗಡಿಭಾಗದಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ತೆರವುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ಕೈಗೆತ್ತಿಕೊಂಡಿತ್ತು. ಪ್ರತಿಭಟನೆಯಲ್ಲಿ ತೊಡಗಿರುವ ರೈತಸಂಘಟನೆಗಳನ್ನು ಪ್ರತಿವಾದಿಗಳನ್ನಾಗಿ ಪರಿಗಣಿಸುವಂತೆ ತಿಳಿಸಿ, ತನಿಖೆಯನ್ನು ಗುರುವಾರಕ್ಕೆ ಮುಂದೂಡಿದೆ.

ರೈತರ ಸಮಸ್ಯೆ ಬಗೆಹರಿಸಲು ಸುಪ್ರೀಂ ಕೋರ್ಟ್​ನಿಂದ ಹೊಸ ಸಮಿತಿ ರಚನೆ ಸಾಧ್ಯತೆ
ಸುಪ್ರೀಂಕೋರ್ಟ್​
TV9kannada Web Team

| Edited By: ganapathi bhat

Apr 07, 2022 | 10:39 AM

ದೆಹಲಿ: ಹಲವು ಸುತ್ತಿನ ಮಾತುಕತೆಯ ಬಳಿಕವೂ ಬಗೆಹರಿಯದೇ ಉಳಿದಿರುವ ರೈತರ ಸಮಸ್ಯೆಯನ್ನು ಪರಿಹರಿಸುವ ಹಿನೆಲೆಯಲ್ಲಿ ಸುಪ್ರೀಂ ಕೋರ್ಟ್ ಹೊಸ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ. ಸರ್ಕಾರ ಮತ್ತು ರೈತ ಸಂಘಟನೆ ಪ್ರತಿನಿಧಿಗಳನ್ನು ಒಳಗೊಂಡ ಸಮಿತಿ ರಚಿಸುವ ಬಗ್ಗೆ ಮುಖ್ಯ ನ್ಯಾಯಮೂರ್ತಿ ಎಸ್. ಎ. ಬೋಬ್ಡೆ, ನ್ಯಾಯಾಧೀಶರಾದ ಎ.ಎಸ್. ಬೋಪಣ್ಣ ಮತ್ತು ವಿ. ರಾಮಸುಬ್ರಹ್ಮಣ್ಯನ್ ಒಳಗೊಂಡ ನ್ಯಾಯಪೀಠ ಈ ಸೂಚನೆ ನೀಡಿದೆ.

ಪ್ರತಿಭಟನಾನಿರತ ರೈತರೊಂದಿಗೆ ಕೇಂದ್ರದ ಮಾತುಕತೆಗಳು ಫಲಪ್ರದವಾಗಿಲ್ಲ ಎಂದು ಕೋರ್ಟ್​ ಹೇಳಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ರೈತರ ಹಿತಕ್ಕೆ ವಿರುದ್ಧವಾಗಿ ಸರ್ಕಾರ ವರ್ತಿಸುವುದಿಲ್ಲ ಎಂದಿದ್ದಾರೆ.

ದೆಹಲಿ ಗಡಿಭಾಗದಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ತೆರವುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ಕೈಗೆತ್ತಿಕೊಂಡಿತ್ತು. ದೆಹಲಿ ಚಲೋ ಕೊರೊನಾ ಸೋಂಕು ಹೆಚ್ಚಳಕ್ಕೆ ಕಾರಣವಾಗಲಿದೆ, ರಸ್ತೆ ತಡೆಯಿಂದ ಪ್ರಯಾಣಿಕರಿಗೆ ತೊಂದರೆಯಾಗುತ್ತಿದೆ ಎಂಬ ಬಗ್ಗೆ ಕೋರ್ಟ್ ತನಿಖೆ ನಡೆಸಿ, ಕೇಂದ್ರಕ್ಕೆ ನೋಟೀಸು ಜಾರಿಗೊಳಿಸಿದೆ. ವೀಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಿದ ನ್ಯಾಯಪೀಠ, ಪ್ರತಿಭಟನೆಯಲ್ಲಿ ತೊಡಗಿರುವ ರೈತಸಂಘಟನೆಗಳನ್ನು ಪ್ರತಿವಾದಿಗಳನ್ನಾಗಿ ಪರಿಗಣಿಸುವಂತೆ ತಿಳಿಸಿ, ತನಿಖೆಯನ್ನು ಗುರುವಾರಕ್ಕೆ ಮುಂದೂಡಿದೆ.

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada