Nimisha Priya: ನಿಮಿಷಾ ಪ್ರಿಯಾ ಪ್ರಕರಣ, ವಿಚಾರಣೆ ಆಗಸ್ಟ್​ 14ಕ್ಕೆ ಮುಂದೂಡಿದ ಸುಪ್ರೀಂ

ಯೆಮೆನ್​​ನಲ್ಲಿ ಕೊಲೆ ಪ್ರಕರಣದಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ಕೇರಳದ ನರ್ಸ್​ ನಿಮಿಷಾ ಪ್ರಿಯಾ(Nimisha Priya) ಪ್ರಕರಣದ ಕುರಿತ ವಿಚಾರಣೆಯನ್ನು ಸುಪ್ರೀಂಕೋರ್ಟ್​ ಆಗಸ್ಟ್​ 14ಕ್ಕೆ ಮುಂದೂಡಿದೆ. ಯೆಮನ್‌ನಲ್ಲಿ ಮರಣದಂಡನೆ ಶಿಕ್ಷೆಯಲ್ಲಿರುವ ಭಾರತೀಯ ನರ್ಸ್‌ನ ಮರಣದಂಡನೆಯನ್ನು ತಡೆಯಲು ರಾಜತಾಂತ್ರಿಕ ಮತ್ತು ಕಾನೂನು ಪ್ರಯತ್ನಗಳಿಗೆ ಹೆಚ್ಚಿನ ಸಮಯವನ್ನು ನೀಡಲಾಗಿದೆ.

Nimisha Priya: ನಿಮಿಷಾ ಪ್ರಿಯಾ ಪ್ರಕರಣ, ವಿಚಾರಣೆ ಆಗಸ್ಟ್​ 14ಕ್ಕೆ ಮುಂದೂಡಿದ ಸುಪ್ರೀಂ
ನಿಮಿಷಾ ಪ್ರಿಯಾ

Updated on: Jul 18, 2025 | 12:45 PM

ನವದೆಹಲಿ, ಜುಲೈ 18: ಯೆಮೆನ್​​ನಲ್ಲಿ ಕೊಲೆ ಪ್ರಕರಣದಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ಕೇರಳದ ನರ್ಸ್​ ನಿಮಿಷಾ ಪ್ರಿಯಾ(Nimisha Priya) ಪ್ರಕರಣದ ಕುರಿತ ವಿಚಾರಣೆಯನ್ನು ಸುಪ್ರೀಂಕೋರ್ಟ್​ ಆಗಸ್ಟ್​ 14ಕ್ಕೆ ಮುಂದೂಡಿದೆ. ಯೆಮನ್‌ನಲ್ಲಿ ಮರಣದಂಡನೆ ಶಿಕ್ಷೆಯಲ್ಲಿರುವ ಭಾರತೀಯ ನರ್ಸ್‌ನ ಮರಣದಂಡನೆಯನ್ನು ತಡೆಯಲು ರಾಜತಾಂತ್ರಿಕ ಮತ್ತು ಕಾನೂನು ಪ್ರಯತ್ನಗಳಿಗೆ ಹೆಚ್ಚಿನ ಸಮಯವನ್ನು ನೀಡಲಾಗಿದೆ.

ಭಾರತೀಯ ಅಧಿಕಾರಿಗಳು ಮಧ್ಯಪ್ರವೇಶಿಸಿದ ನಂತರ ಜುಲೈ 16 ರಂದು ನಿಗದಿಯಾಗಿದ್ದ ಮರಣದಂಡನೆಯಿಂದ ಹಿನ್ನಡೆಯಾದ ನಂತರ ಈ ಮುಂದೂಡಿಕೆಯಾಗಿದೆ.
ವಿಚಾರಣೆ ಸಮಯದಲ್ಲಿ ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರನ್ನೊಳಗೊಂಡ ಪೀಠವು, ಭಾರತ ಸರ್ಕಾರ ಆಕೆಯನ್ನು ಉಳಿಸಲು ತಮಗೆ ಸಾಧ್ಯವಾದ ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ ಎಂದಿದೆ.

ನಿಮಿಷಾ ಪ್ರಿಯಾ ಯಾರು?
ಕೇರಳದ ಪಾಲಕ್ಕಾಡ್ ಜಿಲ್ಲೆಯ ಕೊಲ್ಲೆಂಗೋಡ್‌ನ 38 ವರ್ಷದ ನರ್ಸ್ ನಿಮಿಷಾ ಪ್ರಿಯಾ, 2017 ರಲ್ಲಿ ಯೆಮೆನ್ ಪ್ರಜೆಯ ಕೊಲೆ ಮಾಡಿ ಶಿಕ್ಷೆಗೊಳಗಾದರು.2020 ರಲ್ಲಿ, ಅವರಿಗೆ ಯೆಮೆನ್ ನ್ಯಾಯಾಲಯವು ಮರಣದಂಡನೆ ವಿಧಿಸಿತು ಮತ್ತು ಅವರ ಅಂತಿಮ ಮೇಲ್ಮನವಿಯನ್ನು ದೇಶದ ಸುಪ್ರೀಂ ಜುಡಿಷಿಯಲ್ ಕೌನ್ಸಿಲ್ 2023 ರ ನವೆಂಬರ್‌ನಲ್ಲಿ ತಿರಸ್ಕರಿಸಿತು. ಅವರು ಪ್ರಸ್ತುತ ಇರಾನ್ ಬೆಂಬಲಿತ ಹೌತಿ ಬಂಡುಕೋರರಿಂದ ನಿಯಂತ್ರಿಸಲ್ಪಡುವ ರಾಜಧಾನಿ ಸನಾದಲ್ಲಿ ಬಂಧನದಲ್ಲಿದ್ದಾರೆ.

ಮತ್ತಷ್ಟು ಓದಿ: ಬ್ಲಡ್ ಮನಿ ನಿರಾಕರಿಸಿದ ಮೃತನ ಸೋದರ; ಯೆಮೆನ್​ನಲ್ಲಿ ಕೇರಳದ ನರ್ಸ್ ನಿಮಿಷಾ ಪ್ರಿಯಾ ಗಲ್ಲು ಬಹುತೇಕ ಖಚಿತ

ಪ್ರಿಯಾಳ ತಾಯಿ ಪ್ರೇಮಕುಮಾರಿ ಕಳೆದ ವರ್ಷ ತನ್ನ ಮಗಳ ಬಿಡುಗಡೆಗಾಗಿ ಮನವಿ ಮಾಡಲು ಯೆಮೆನ್‌ಗೆ ಪ್ರಯಾಣ ಬೆಳೆಸಿದ್ದರು. ಕೇರಳದ ಸುನ್ನಿ ಧರ್ಮಗುರು ಒಬ್ಬರು ಪ್ರಮುಖ ಯೆಮೆನ್ ಧಾರ್ಮಿಕ ವಿದ್ವಾಂಸರನ್ನು ಸಂಪರ್ಕಿಸಿ ಮಧ್ಯಪ್ರವೇಶ ಕೋರಿದರು. ಈ ಪ್ರಯತ್ನಗಳ ಹೊರತಾಗಿಯೂ, ಯೆಮೆನ್‌ನಲ್ಲಿ ನಡೆಯುತ್ತಿರುವ ಸಂಘರ್ಷ ಮತ್ತು ಔಪಚಾರಿಕ ರಾಜತಾಂತ್ರಿಕ ಸಂಬಂಧಗಳ ಕೊರತೆಯಿಂದಾಗಿ ಅಡೆತಡೆಗಳು ಮುಂದುವರೆದಿವೆ.

ಪ್ರಿಯಾಳನ್ನು ರಕ್ಷಿಸಲು ಕೇಂದ್ರವು ರಾಜತಾಂತ್ರಿಕ ಮಾರ್ಗಗಳನ್ನು ಸಕ್ರಿಯವಾಗಿ ಅನುಸರಿಸಬೇಕೆಂದು ಒತ್ತಾಯಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿತ್ತು. ವಿದೇಶದಲ್ಲಿರುವ ಭಾರತೀಯ ನಾಗರಿಕರನ್ನು ಉಳಿಸಲು ಸರ್ಕಾರ ಬದ್ಧವಾಗಿದೆ ಎಂದು ಹೇಳುತ್ತಿದ್ದರೂ, ಯೆಮೆನ್‌ನಲ್ಲಿ ಭಾರತದ ಪ್ರಭಾವ ಸೀಮಿತವಾಗಿದೆ ಎಂದು ಅಧಿಕಾರಿಗಳು ಪುನರುಚ್ಚರಿಸಿದರು.

ನಿಮಿಷಾ ಪ್ರಿಯಾ ಬಿಜಿನೆಸ್ ಪಾರ್ಟ್ನರ್ ತಲಾಲ್ ಅಬ್ದೋ ಮೆಹದಿ ಕೊಲೆ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿದ್ದಾಳೆ. ನಿಮಿಷಾ ಹೇಳಿಕೆ ಪ್ರಕಾರ ಆತ ಆಕೆ ನಿರಂತರ ಕಿಡುಕುಳ ನೀಡುತ್ತಿದ್ದ. ನಕಲಿ ವಿವಾಹ ದಾಖಲೆ ಕೂಡ ಮಾಡಿಸಿದ್ದ. ಹಾಗೆಯೇ ಬ್ಲಡ್ ಮನಿ ನೀಡಲು ಆಕೆಯ ಕುಟುಂಬವು ಮೃತರ ಕುಟುಂಬವನ್ನು ಸಂಪರ್ಕಿಸಿತ್ತು, ಆದರೆ ಅವರು ಒಪ್ಪಿಕೊಂಡಿಲ್ಲ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us