AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಶಾಂತ್ ಭೂಷಣ್ ನ್ಯಾಯಾಂಗ ನಿಂದನೆ ಪ್ರಕರಣ: ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ಹಿರಿಯ ಸುಪ್ರೀಂ ಕೋರ್ಟ್ ನ್ಯಾಯವಾದಿ ಹಾಗೂ ಸಾಮಾಜಿಕ ಹೋರಾಟಗಾರ ಪ್ರಶಾಂತ್ ಭೂಷಣ್ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಸರ್ವೋಚ್ಛ ನ್ಯಾಯಾಲಯವು ತೀರ್ಪನ್ನು ಇಂದು ಕಾಯ್ದಿರಿಸಿತು. ತಮ್ಮ ಎರಡು ವಿವಾದಾತ್ಮಕ ಟ್ಟ್ವೀಟ್​ಗಳ ಹಿನ್ಲೆನೆಯಲ್ಲಿ ಪ್ರಶಾಂತ್ ಭೂಷಣ್ ನ್ಯಾಯಾಂಗ ನಿಂದನೆ ಪ್ರಕರಣ ಎದುರಿಸುತ್ತಿದ್ದಾರೆ. ನ್ಯಾಯಮೂರ್ತಿ ಅರುಣ್ ಮಿಶ್ರಾ ಅವರ ನೇತೃತ್ವದ ಪೀಠವು ಅಟಾರ್ನಿ ಜನರಲ್ ಕೆ ಕೆ ವೇಣುಗೋಪಾಲ್ ಮಂಡಿಸಿದ ವಾದವನ್ನು ಮಂಗಳವಾರದಂದು ಆಲಿಸಿತು. ಪ್ರಶಾಂತ್ ಭೂಷಣ್ ಪರವಾಗಿ ಕೋರ್ಟ್​ನಲ್ಲಿ ವಾದಿಸಿದ ವಕೀಲ ರಾಜೀವ ಧವನ್, ‘‘ನಾಯಮೂರ್ತಿ ಮಿಶ್ರಾ ಅವರು […]

ಪ್ರಶಾಂತ್ ಭೂಷಣ್ ನ್ಯಾಯಾಂಗ ನಿಂದನೆ ಪ್ರಕರಣ: ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್
ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Aug 25, 2020 | 4:53 PM

Share

ಹಿರಿಯ ಸುಪ್ರೀಂ ಕೋರ್ಟ್ ನ್ಯಾಯವಾದಿ ಹಾಗೂ ಸಾಮಾಜಿಕ ಹೋರಾಟಗಾರ ಪ್ರಶಾಂತ್ ಭೂಷಣ್ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಸರ್ವೋಚ್ಛ ನ್ಯಾಯಾಲಯವು ತೀರ್ಪನ್ನು ಇಂದು ಕಾಯ್ದಿರಿಸಿತು. ತಮ್ಮ ಎರಡು ವಿವಾದಾತ್ಮಕ ಟ್ಟ್ವೀಟ್​ಗಳ ಹಿನ್ಲೆನೆಯಲ್ಲಿ ಪ್ರಶಾಂತ್ ಭೂಷಣ್ ನ್ಯಾಯಾಂಗ ನಿಂದನೆ ಪ್ರಕರಣ ಎದುರಿಸುತ್ತಿದ್ದಾರೆ.

ನ್ಯಾಯಮೂರ್ತಿ ಅರುಣ್ ಮಿಶ್ರಾ ಅವರ ನೇತೃತ್ವದ ಪೀಠವು ಅಟಾರ್ನಿ ಜನರಲ್ ಕೆ ಕೆ ವೇಣುಗೋಪಾಲ್ ಮಂಡಿಸಿದ ವಾದವನ್ನು ಮಂಗಳವಾರದಂದು ಆಲಿಸಿತು. ಪ್ರಶಾಂತ್ ಭೂಷಣ್ ಪರವಾಗಿ ಕೋರ್ಟ್​ನಲ್ಲಿ ವಾದಿಸಿದ ವಕೀಲ ರಾಜೀವ ಧವನ್, ‘‘ನಾಯಮೂರ್ತಿ ಮಿಶ್ರಾ ಅವರು ಕೊಲ್ಕತಾ ಹೈಕೋರ್ಟ್​ನಲ್ಲಿದ್ದಾಗ ಮಮತಾ ಬ್ಯಾನರ್ಜಿ ಕೋರ್ಟಿನ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದರು. ನ್ಯಾಯಮೂರ್ತಿ ಬಗ್ಚಿ ತೀರ್ಪನ್ನು ಬರೆದರಾದರೂ ನ್ಯಾಯಮೂರ್ತಿ ಮಿಶ್ರಾ, ‘ಮಮತಾ ಒಬ್ಬ ರಾಜಕಾರಣಿಯಾಗಿರುವುದರಿಂದ ಕೋರ್ಟ್ ಅವರಿಗೆ ಶಿಕ್ಷೆಗೊಳಪಡಿಸುವುದಿಲ್ಲ’ ಎಂದಿದ್ದರು. ಮಮತಾರವರು ಸಾರ್ವಜನಿಕ ವ್ಯಕ್ತಿಯಾಗಿರುವ ಹಿನ್ನಲೆಯಲ್ಲಿ ಅವರನ್ನು ಕ್ಷಮಿಸುವುದಾದರೆ, ಪ್ರಶಾಂತ್ ಭೂಷಣ್ ಅವರನ್ನು ಹುತಾತ್ಮರನ್ನಾಗಿಸಬೇಡಿ,’’ ಎಂದರು.

ಶಿಕ್ಷೆಯ ತೀರ್ಪು ಘೋಷಣೆಗೆ ಮೊದಲು, ಕೋರ್ಟ್ ಪ್ರಶಾಂತ್ ಭೂಷಣ್ ಅವರಿಗೆ 30 ನಿಮಿಷಗಳ ಕಾಲಾವಕಾಶ ನೀಡಿ, ನ್ಯಾಯಾಂಗದ ವಿರುದ್ಧ ಮಾಡಿರುವ ಆಪಾದನೆಗಳನ್ನು ಮತ್ತು ಭಾರತದ ಮುಖ್ಯ ನ್ಯಾಯಾಧೀಶ ಎಸ್ ಎ ಬೊಬ್ಡೆ ಅವರ ವಿರುದ್ಧ ಬರೆದಿರುವ ಟ್ವೀಟ್​ಗಳ ಬಗ್ಗೆ ಕ್ಷಮೆಯಾಚಿಸದಿರುವ ತಮ್ಮ ನಿಲುವನ್ನು ಪುನರ್​ಪರಿಶೀಲಿಸುವಂತೆ ಹೇಳಿತು.

ಎಜಿ ವೇಣುಗೋಪಾಲ ಅವರು ಸಹ ಪ್ರಶಾಂತ್ ಭೂಷಣ್ ಅವರನ್ನು ಕ್ಷಮಿಸುವಂತೆ ಪೀಠಕ್ಕೆ ಮನವಿ ಮಾಡಿದಾಗಲೂ ಭೂಷಣ್ ಆವರಿಗೆ ಮತ್ತೊಂದು ಅವಕಾಶವನ್ನು ಪೀಠ ನೀಡಿತು. ಆದರೆ, ಪ್ರಶಾಂತ್ ಭೂಷಣ್‌ ತಮ್ಮ ನಿಲುವನ್ನು ಬದಲಿಸಲು ನಿರಾಕರಿಸಿದರು.

ಅಂತಿಮವಾಗಿ ಪೀಠವು ಶಿಕ್ಷೆ ಪ್ರಮಾಣ ಪ್ರಕಟಿಸುವ ತೀರ್ಪನ್ನು ಕಾಯ್ದಿರಿಸಿತು.

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!