AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮರಣದಂಡನೆಗೆ ನೇಣು ಶಿಕ್ಷೆಯೇ ಸೂಕ್ತ: ಮಾರಕ ಇಂಜೆಕ್ಷನ್ ಹೆಚ್ಚು ಮಾನವೀಯವಲ್ಲ ಎಂದ ಸುಪ್ರೀಂ ಕೋರ್ಟ್

ಭಾರತದಲ್ಲಿ ಮರಣದಂಡನೆ ಜಾರಿಗೊಳಿಸಲು ನೇಣು ಶಿಕ್ಷೆಯೇ ಸೂಕ್ತ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಮಾರಕ ಇಂಜೆಕ್ಷನ್ ಹೆಚ್ಚು ಮಾನವೀಯ ಅಥವಾ ವೈಜ್ಞಾನಿಕ ಎಂದು ಸಾಬೀತುಪಡಿಸಲು ಪುರಾವೆಗಳಿಲ್ಲ. ಮಾರಕ ಇಂಜೆಕ್ಷನ್‌ಗಳಲ್ಲಿನ ವೈಫಲ್ಯಗಳು, ವಿಳಂಬ, ಮತ್ತು ಸಂಭಾವ್ಯ ನೋವನ್ನು ನ್ಯಾಯಾಲಯ ಪರಿಗಣಿಸಿದೆ. ನೇಣು ಶಿಕ್ಷೆಯು ಹೆಚ್ಚು ವಿಶ್ವಾಸಾರ್ಹ ಮತ್ತು ದೋಷರಹಿತ ಎಂದು ಅಭಿಪ್ರಾಯಪಟ್ಟ ಸುಪ್ರೀಂ ಕೋರ್ಟ್, ಅಸ್ತಿತ್ವದಲ್ಲಿರುವ ಪದ್ಧತಿಯನ್ನೇ ಮುಂದುವರಿಸಲು ನಿರ್ಧರಿಸಿದೆ.

ಮರಣದಂಡನೆಗೆ ನೇಣು ಶಿಕ್ಷೆಯೇ ಸೂಕ್ತ: ಮಾರಕ ಇಂಜೆಕ್ಷನ್ ಹೆಚ್ಚು ಮಾನವೀಯವಲ್ಲ ಎಂದ ಸುಪ್ರೀಂ ಕೋರ್ಟ್
ಸುಪ್ರೀಂಕೋರ್ಟ್​
ನಯನಾ ರಾಜೀವ್
|

Updated on: Aug 20, 2026 | 11:31 AM

Share

ನವದೆಹಲಿ,ಆಗಸ್ಟ್​ 20: ಭಾರತದಲ್ಲಿ ಮರಣದಂಡನೆ ಶಿಕ್ಷೆ ಜಾರಿಗೊಳಿಸಲು ನೇಣು ಹಾಕುವ ಪದ್ಧತಿಯ ಬದಲಿಗೆ ಮಾರಕ ವಿಷಕಾರಿ ಚುಚ್ಚುಮದ್ದು (Lethal Injection) ಬಳಸಬೇಕೆಂಬ ಬಹುದಿನಗಳ ಚರ್ಚೆಗೆ ಭಾರತದ ಸುಪ್ರೀಂ ಕೋರ್ಟ್ ತೆರೆ ಎಳೆದಿದೆ. ಗಲ್ಲು ಶಿಕ್ಷೆಗಿಂತ ಮಾರಕ ಇಂಜೆಕ್ಷನ್ ಹೆಚ್ಚು ವೈಜ್ಞಾನಿಕ, ಶಾಂತಿಯುತ ಅಥವಾ ಮಾನವೀಯ ಎಂದು ಸಾಬೀತುಪಡಿಸಲು ಯಾವುದೇ ಗಣನೀಯ ವೈಜ್ಞಾನಿಕ ಪುರಾವೆಗಳಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಅಸ್ತಿತ್ವದಲ್ಲಿರುವ ಕಾನೂನಿನಿಂದ ನೇಣು ಶಿಕ್ಷೆಯನ್ನು ತೆಗೆದುಹಾಕಬೇಕೆಂದು ಕೋರಿ ವಕೀಲ ರಿಷಿ ಮಲ್ಹೋತ್ರಾ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರ ಪೀಠ ವಜಾಗೊಳಿಸಿದೆ.

ಮಾರಕ ಇಂಜೆಕ್ಷನ್ ಪದ್ಧತಿಯಲ್ಲಿನ ಗಂಭೀರ ಲೋಪಗಳು ಅಮೆರಿಕ ಸೇರಿದಂತೆ ಹಲವು ದೇಶಗಳಲ್ಲಿ ಮಾರಕ ಇಂಜೆಕ್ಷನ್‌ಗಾಗಿ ಮೂರು ಹಂತದ ಔಷಧಿಗಳನ್ನು ಬಳಸಲಾಗುತ್ತದೆ. ಮೊದಲನೆಯದು ಪ್ರಜ್ಞೆ ತಪ್ಪಿಸಲು, ಎರಡನೆಯದು ಸ್ನಾಯುಗಳ ಚಲನೆ ನಿಲ್ಲಿಸಲು ಮತ್ತು ಮೂರನೆಯದು ಹೃದಯ ಸ್ಥಗಿತಗೊಳಿಸಲು. ಮೊದಲ ಔಷಧ ಸಮರ್ಪಕವಾಗಿ ಕೆಲಸ ಮಾಡದಿದ್ದರೆ, ವ್ಯಕ್ತಿಯು ಹೊರನೋಟಕ್ಕೆ ಶಾಂತವಾಗಿ ಕಂಡರೂ ದೇಹದೊಳಗೆ ಅಸಹನೀಯ ಉರಿ ಮತ್ತು ನರಕಯಾತನೆ ಅನುಭವಿಸುತ್ತಾನೆ.

ಮತ್ತಷ್ಟು ಓದಿ: ಭ್ರಷ್ಟಾಚಾರಿಗಳಿಗೆ ಮರಣದಂಡನೆ ವಿಧಿಸುವಂತಾಗಬೇಕು; ಅಲಹಾಬಾದ್ ಹೈಕೋರ್ಟ್ ಟೀಕೆ

ವಿಫಲವಾದ ಉದಾಹರಣೆಗಳು: ದೆಹಲಿ ಎನ್‌ಎಲ್‌ಯುನ ‘ಪ್ರಾಜೆಕ್ಟ್ 39ಎ’ ವರದಿಯ ಪ್ರಕಾರ, ಅಮೆರಿಕದಲ್ಲಿ ನಡೆದ 9000 ಮರಣದಂಡನೆಗಳಲ್ಲಿ 276 ಪ್ರಕರಣಗಳು ತಾಂತ್ರಿಕವಾಗಿ ಎಡವಿವೆ. 2024 ರಲ್ಲಿ ಅಮೆರಿಕದ ಇಡಾಹೊದಲ್ಲಿ ಥಾಮಸ್ ಕ್ರೀಚ್ ಎಂಬ ಅಪರಾಧಿಗೆ ರಕ್ತನಾಳ ಸಿಗದೆ 8 ಬಾರಿ ಪ್ರಯತ್ನಿಸಿ ವಿಫಲವಾದಾಗ ಶಿಕ್ಷೆಯನ್ನೇ ಮುಂದೂಡಲಾಗಿತ್ತು.

ಭಾರತೀಯ ನ್ಯಾಯಾಂಗದ ಐತಿಹಾಸಿಕ ನಿಲುವು ವೈಜ್ಞಾನಿಕ ಪುರಾವೆಗಳ ಕೊರತೆ: ಭಾರತದ ಅಟಾರ್ನಿ ಜನರಲ್ ಆರ್. ವೆಂಕಟರಮಣಿ ಅವರು ವಾದ ಮಂಡಿಸಿ, ಭಾರತದಲ್ಲಿ ನೇಣು ಶಿಕ್ಷೆಯು ಅತ್ಯಂತ ವಿಶ್ವಾಸಾರ್ಹವಾಗಿದ್ದು ಎಂದೂ ವಿಫಲವಾಗಿಲ್ಲ, ಆದರೆ ಇಂಜೆಕ್ಷನ್ ವಿಧಾನದಲ್ಲಿ ರಕ್ತನಾಳ ಪತ್ತೆ ಹಚ್ಚುವುದು ಮತ್ತು ಔಷಧಿ ಕೊರತೆ ಮುಂತಾದ ಸಮಸ್ಯೆಗಳಿವೆ ಎಂದರು.

1983 ರ ‘ದೀನಾ ವರ್ಸಸ್ ಯೂನಿಯನ್ ಆಫ್ ಇಂಡಿಯಾ’ ಪ್ರಕರಣದಲ್ಲೂ ನ್ಯಾಯಾಲಯವು ವಿದ್ಯುತ್ ಕುರ್ಚಿ, ಗ್ಯಾಸ್ ಚೇಂಬರ್ ಮತ್ತು ಇಂಜೆಕ್ಷನ್‌ಗಳಿಗಿಂತ ನೇಣು ಪದ್ಧತಿಯೇ ಹೆಚ್ಚು ತ್ವರಿತ ಹಾಗೂ ಕಡಿಮೆ ದೋಷಪೂರಿತ ಎಂದು ಅಭಿಪ್ರಾಯಪಟ್ಟಿತ್ತು. ಈ ಎಲ್ಲಾ ಐತಿಹಾಸಿಕ ಮತ್ತು ವೈಜ್ಞಾನಿಕ ಅಂಶಗಳನ್ನು ಪರಿಗಣಿಸಿದ ಸುಪ್ರೀಂ ಕೋರ್ಟ್, ಪ್ರಸ್ತುತ ಇರುವ ನೇಣು ಶಿಕ್ಷೆಯ ವಿಧಾನವೇ ಮುಂದುವರಿಯಲಿದೆ ಎಂದು ತೀರ್ಪು ನೀಡಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ