AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನುಂಗಲಾರದ ತುತ್ತು: ಶಾಲೆಯಲ್ಲಿ ಮಕ್ಕಳಿಗೆ ಅನ್ನದ ಜತೆ ಮೆಣಸಿನ ಪುಡಿ ಬೆರೆಸಿದ ಊಟ

ಮಕ್ಕಳು ದೇವರಿಗೆ ಸಮಾನವೆನ್ನುತ್ತಾರೆ ಆದರೆ ಈ ಮುಗ್ದಮಕ್ಕಳಿಗೆ ಊಟದಲ್ಲಿ ಮೆಣಸಿನ ಪುಡಿ ಹಾಕಲು ಅದ್ಹೇಗೆ ಮನಸ್ಸು ಬಂತು. ತೆಲಂಗಾಣದ ಶಾಲೆಯೊಂದರಲ್ಲಿ ಬಿಸಿಯೂಟದಲ್ಲಿ ಅನ್ನದ ಜತೆ ಮೆಣಸಿನ ಪುಡಿ ಬೆರೆಸಿರುವ ಕುರಿತು ಮಾಹಿತಿ ಲಭ್ಯವಾಗಿದೆ.

ನುಂಗಲಾರದ ತುತ್ತು: ಶಾಲೆಯಲ್ಲಿ ಮಕ್ಕಳಿಗೆ ಅನ್ನದ ಜತೆ ಮೆಣಸಿನ ಪುಡಿ ಬೆರೆಸಿದ ಊಟ
ವಿದ್ಯಾರ್ಥಿಗಳುImage Credit source: India Today
ನಯನಾ ರಾಜೀವ್
|

Updated on: Aug 06, 2024 | 9:58 AM

Share

ಶಾಲೆಯಲ್ಲಿ ಮಧ್ಯಾಹ್ನ ಮಕ್ಕಳಿಗೆ ನೀಡುವ ಬಿಸಿಯೂಟದಲ್ಲಿ ಮೆಣಸಿನ ಪುಡಿ ಬೆರೆಸಿ ನೀಡಿರುವ ಘಟನೆ ತೆಲಂಗಾಣದ ಕೊತ್ತಪಲ್ಲಿ ಗ್ರಾಮದಲ್ಲಿ ನಡೆದಿದೆ. ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ನಾಯಕರು ಕಳಪೆ ಗುಣಮಟ್ಟದ ಆಹಾರವನ್ನು ನೀಡುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ರಾಜ್ಯಾದ್ಯಂತ ಎಲ್ಲಾ ಶಾಲೆಗಳಲ್ಲಿನ ಪರಿಸ್ಥಿತಿಯನ್ನು ಪರಿಶೀಲಿಸುವಂತೆ ಬಿಆರ್‌ಎಸ್ ನಾಯಕರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.

ತೆಲಂಗಾಣ ಮಾಜಿ ಸಚಿವ ಕೆ.ಟಿ.ರಾಮರಾವ್ ಅವರು ಕಾಂಗ್ರೆಸ್ ಸರ್ಕಾರವನ್ನು ಖಂಡಿಸಿದ್ದು, ಮೆಣಸಿನ ಪುಡಿಯೊಂದಿಗೆ ಅನ್ನಯನ್ನು ತಿನ್ನಲು ಮಕ್ಕಳಿಗೆ ಒತ್ತಾಯಿಸಲಾಗುತ್ತಿದೆ. ಕೆಸಿಆರ್ ಸರ್ಕಾರ ಶಾಲಾ ಮಕ್ಕಳಿಗೆ ಅದ್ಭುತವಾದ ಉಪಹಾರ ಯೋಜನೆಯನ್ನು ಜಾರಿಗೆ ತಂದಿದೆ, ಅದನ್ನು ಕಾಂಗ್ರೆಸ್ ಸರ್ಕಾರ ಯಾವುದೇ ಕಾರಣವಿಲ್ಲದೆ ರದ್ದುಗೊಳಿಸಿದೆ.

ತೆಲಂಗಾಣ ಮಾಜಿ ಆರೋಗ್ಯ ಸಚಿವ ಹರೀಶ್ ರಾವ್ ಕೂಡ ಕಾಂಗ್ರೆಸ್ ಸರಕಾರವನ್ನು ಟೀಕಿಸಿದ್ದು, ಈ ಘಟನೆಯು ರೇವಂತ್ ರೆಡ್ಡಿ ಸರ್ಕಾರ ನಿರ್ಲಕ್ಷ್ಯ ಧೋರಣೆಯನ್ನು ಬಿಂಬಿಸುತ್ತದೆ ಎಂದು ಹೇಳಿದ್ದಾರೆ.

ಆಗಸ್ಟ್ 2 ರಂದು ಮಧ್ಯಾಹ್ನ ಊಟದ ಏಜೆನ್ಸಿಯು ವಿದ್ಯಾರ್ಥಿಗಳಿಗೆ ಮೆಣಸಿನ ಪುಡಿ ಮತ್ತು ಎಣ್ಣೆ ಮಿಶ್ರಿತ ಅನ್ನವನ್ನು ಬಡಿಸಿದ ಘಟನೆ ನಡೆದಿದೆ. ಮೆಣಸಿನ ಪುಡಿಯೊಂದಿಗೆ ಅನ್ನದ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ಬಗ್ಗೆ ತನಿಖೆ ನಡೆಸಲು ಜಿಲ್ಲಾ ಶಿಕ್ಷಣಾಧಿಕಾರಿಗೆ ಸೂಚಿಸಲಾಗಿದೆ.

ಮತ್ತಷ್ಟು ಓದಿ: ಯಾದಗಿರಿ: ಬಿಸಿಯೂಟ ಸೇವಿಸಿ 48 ಮಕ್ಕಳು ಅಸ್ವಸ್ಥ, ಮೂವರ ಸ್ಥಿತಿ ಚಿಂತಾಜನಕ

ಹಲವಾರು ಪೋಷಕರು ತಮ್ಮ ಮಕ್ಕಳು ಹೊಟ್ಟೆನೋವಿನಿಂದ ಬಳಲುತ್ತಿದ್ದಾರೆ ಮತ್ತು ಅನಾರೋಗ್ಯಕ್ಕೆ ಒಳಗಾಗಿದ್ದಾರೆ ಎಂದು ದೂರು ನೀಡಿದ್ದಾರೆ. ಪೋಷಕರ ದೂರಿನ ಮೇರೆಗೆ ನಿಜಾಮಾಬಾದ್ ಡಿಇಒ ಎನ್ ದುರ್ಗಾಪ್ರಸಾದ್, ಮಂಡಲ ಶಿಕ್ಷಣಾಧಿಕಾರಿ (ಎಂಇಒ), ಕಾಂಪ್ಲೆಕ್ಸ್ ಶಾಲೆಯ ಮುಖ್ಯೋಪಾಧ್ಯಾಯರು ಮತ್ತು ಇತರ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿ ವಿಚಾರಣೆ ನಡೆಸಿದರು.

ವಿಷಯ ತಿಳಿದ ಜಿಲ್ಲಾ ಶಿಕ್ಷಣಾಧಿಕಾರಿಗಳು ಊಟದ ಸೇವೆ ನೀಡುವವರಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿ ಆಹಾರದ ಗುಣಮಟ್ಟದಲ್ಲಿ ರಾಜಿ ಮಾಡಿಕೊಳ್ಳದಂತೆ ಸೂಚಿಸಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ