AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ರೋಹಿಣಿ ಕೋರ್ಟ್ ಸ್ಫೋಟ ಪ್ರಕರಣ; ಹ್ಯಾಂಡ್​ವಾಶ್​ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಜೈಲಲ್ಲಿರುವ ಆರೋಪಿ ವಿಜ್ಞಾನಿ

ಡಿ. 9ರಂದು ರಾಷ್ಟ್ರ ರಾಜಧಾನಿ ನವದೆಹಲಿಯ ರೋಹಿಣಿ ಕೋರ್ಟ್​ನಲ್ಲಿ ಸಣ್ಣ ಸ್ಫೋಟ ಸಂಭವಿಸಿತ್ತು. ಈ ಘಟನೆಯಲ್ಲಿ ಓರ್ವ ಪೊಲೀಸ್ ಸಿಬ್ಬಂದಿಗೆ ಗಾಯವಾಗಿತ್ತು.

ದೆಹಲಿ ರೋಹಿಣಿ ಕೋರ್ಟ್ ಸ್ಫೋಟ ಪ್ರಕರಣ; ಹ್ಯಾಂಡ್​ವಾಶ್​ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಜೈಲಲ್ಲಿರುವ ಆರೋಪಿ ವಿಜ್ಞಾನಿ
ಬಂಧಿತ ವಿಜ್ಞಾನಿ
TV9 Web
| Edited By: |

Updated on: Dec 20, 2021 | 8:37 AM

Share

ದೆಹಲಿ: ಇಲ್ಲಿನ ರೋಹಿಣಿ ಜಿಲ್ಲಾ ನ್ಯಾಯಾಲಯದಲ್ಲಿ ಡಿ.9ರಂದು ನಡೆದಿದ್ದ ಸ್ಫೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧಿತರಾಗಿದ್ದ ಹಿರಿಯ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ (DRDO) ಸಂಸ್ಥೆಯ ವಿಜ್ಞಾನಿ ಭರತ್ ಭೂಷಣ್ ಕಠಾರಿಯಾ (47) , ಜೈಲಿನಲ್ಲಿಯೇ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆ. ಜೈಲಿನ ಸ್ನಾನದಕೋಣೆಯಲ್ಲಿದ್ದ ಹ್ಯಾಂಡ್​ವಾಶ್​ (ಕೈ ತೊಳೆಯುವ ದ್ರವ)ನ್ನು ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದಾಗಿ ಪೊಲೀಸರು ತಿಳಿಸಿದ್ದಾರೆ.  ಹಾಗೇ, ಸದ್ಯ ದೆಹಲಿಯ ಏಮ್ಸ್​ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ಹೇಳಿದ್ದಾರೆ. 

ರೋಹಿಣಿ ಕೋರ್ಟ್​ನೊಳಗೆ ಟಿಫಿನ್​ ಬಾಕ್ಸ್​​ನಲ್ಲಿ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಇಟ್ಟು ಸ್ಫೋಟಿಸಿದ್ದರು. ವಿಜ್ಞಾನಿ ಕಠಾರಿಯಾ ಮತ್ತು ಅವರ ನೆರೆಮನೆಯವರಾದ ವಕೀಲ ಅಮಿತ್ ವಸಿಷ್ಠ ಅವರ ನಡುವೆ ಹಳೆಯ ಭಿನ್ನಾಭಿಪ್ರಾಯವಿತ್ತು. ಅದೇ ಕಾರಣಕ್ಕೆ ವಕೀಲನ ಸೋಗಿನಲ್ಲಿ ಕಠಾರಿಯಾ ನ್ಯಾಯಾಲಯಕ್ಕೆ ಪ್ರವೇಶಿಸಿ, ಬಾಂಬ್ ಇಟ್ಟು, ಸ್ಫೋಟದ ನಂತರ ಪರಾರಿಯಾಗಿದ್ದರು.  ನೀರು ಸರಬರಾಜು ಸೇರಿದಂತೆ ಹಲವು ವಿಷಯಗಳಲ್ಲಿ ಪರಸ್ಪರರ ವಿರುದ್ಧ ಹಲವಾರು ಪ್ರಕರಣಗಳನ್ನು ದಾಖಲಿಸಲಾಗಿತ್ತು ಎಂದು ತನಿಖೆಯಿಂದ ತಿಳಿದುಬಂದಿದ್ದಾಗಿ ಪೊಲೀಸರು ಹೇಳಿದ್ದರು. ಅಷ್ಟೇ ಅಲ್ಲ, ಕಠಾರಿಯಾ ಕೂಡ ಬಂಧಿಸಲ್ಪಡುತ್ತಿದ್ದಂತೆ ತಾವೇ ಸ್ಫೋಟಿಸಿದ್ದಾಗಿ ಒಪ್ಪಿಕೊಂಡಿದ್ದರು.

ಡಿ. 9ರಂದು ರಾಷ್ಟ್ರ ರಾಜಧಾನಿ ನವದೆಹಲಿಯ ರೋಹಿಣಿ ಕೋರ್ಟ್​ನಲ್ಲಿ ಸಣ್ಣ ಸ್ಫೋಟ ಸಂಭವಿಸಿತ್ತು. ಈ ಘಟನೆಯಲ್ಲಿ ಓರ್ವ ಪೊಲೀಸ್ ಸಿಬ್ಬಂದಿಗೆ ಗಾಯವಾಗಿತ್ತು. ಕೋರ್ಟ್​ ಆವರಣದಲ್ಲಿ ಉಂಟಾದ ಸ್ಫೋಟದಿಂದಾಗಿ ಅಲ್ಲಿದ್ದ ಜನರಲ್ಲಿ ಕೆಲಕಾಲ ಆತಂಕ ಸೃಷ್ಟಿಯಾಗಿತ್ತು. ಲ್ಯಾಪ್​ಟಾಪ್​ನ ಬ್ಯಾಟರಿ ಸ್ಫೋಟಗೊಂಡು ಈ ಬ್ಲಾಸ್ಟ್​ ಉಂಟಾಗಿರುವ ಸಾಧ್ಯತೆಯಿದೆ ಎನ್ನಲಾಗಿತ್ತು. ನಂತರ ಅದು ಟಿಫನ್ ಬಾಕ್ಸ್​ನಲ್ಲಿ ಇರಿಸಲಾಗಿದ್ದ ಬಾಂಬ್ ಸ್ಫೋಟ ಎಂಬುದು ಗೊತ್ತಾಗಿತ್ತು. ಮಾಹಿತಿ ಪಡೆದ ನಂತರ ಆರು ಅಗ್ನಿಶಾಮಕ ದಳಗಳು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದ್ದರು.

ಇದನ್ನೂ ಓದಿ: ‘ಭಾಷೆಗಾಗಿ ನನ್ನ ಪ್ರಾಣ ಹೋಗ್ಬೇಕು ಅಂದ್ರೆ ಹೋಗಲಿ ಬಿಡಿ’; ಕನ್ನಡ ಪರ ಹೋರಾಟದ ಬಗ್ಗೆ ಶಿವಣ್ಣ ಮಾತು

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​