AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರಕ್‌ಗೆ ಡಿಕ್ಕಿ ಹೊಡೆದ ಸ್ಕಾರ್ಪಿಯೋ ಎಸ್‌ಯುವಿ, 5 ವೈದ್ಯರು ಸಾವು

ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ಸ್ಕಾರ್ಪಿಯೋ ಎಸ್‌ಯುವಿವೊಂದು ಟ್ರಕ್‌ಗೆ ಡಿಕ್ಕಿ ಹೊಡೆದು ಐವರು ವೈದ್ಯರು ಸಾವನ್ನಪ್ಪಿದ್ದಾರೆ, ಇದರ ಒಬ್ಬರಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಸೈಫೈನಲ್ಲಿರುವ ಉತ್ತರ ಪ್ರದೇಶ ವೈದ್ಯಕೀಯ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ತರಬೇತಿ ಪಡೆದ ವೈದ್ಯರು, ಲಕ್ನೋದಲ್ಲಿ ಮದುವೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದಾಗ ಅಪಘಾತ ಸಂಭವಿಸಿದೆ.

ಟ್ರಕ್‌ಗೆ ಡಿಕ್ಕಿ ಹೊಡೆದ ಸ್ಕಾರ್ಪಿಯೋ ಎಸ್‌ಯುವಿ, 5 ವೈದ್ಯರು ಸಾವು
ಅಕ್ಷಯ್​ ಪಲ್ಲಮಜಲು​​
|

Updated on: Nov 27, 2024 | 12:55 PM

Share

ಇಂದು ಮುಂಜಾನೆ ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ಸ್ಕಾರ್ಪಿಯೋ ಎಸ್‌ಯುವಿವೊಂದು ಟ್ರಕ್‌ಗೆ ಡಿಕ್ಕಿ ಹೊಡೆದು ಐವರು ವೈದ್ಯರು ಸಾವನ್ನಪ್ಪಿದ್ದಾರೆ, ಇದರ ಒಬ್ಬರಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಸೈಫೈನಲ್ಲಿರುವ ಉತ್ತರ ಪ್ರದೇಶ ವೈದ್ಯಕೀಯ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ತರಬೇತಿ ಪಡೆದ ವೈದ್ಯರು, ಲಕ್ನೋದಲ್ಲಿ ಮದುವೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದಾಗ ಅಪಘಾತ ಸಂಭವಿಸಿದೆ.

ಮುಂಜಾನೆ 3.30ರ ಸುಮಾರಿಗೆ ಲಕ್ನೋದಲ್ಲಿ ಮದುವೆ ಮುಗಿಸಿ ಹೊರಟ್ಟಿದ್ದಾರೆ. ಸ್ಕಾರ್ಪಿಯೋ ಎಸ್‌ಯುವಿ ನಿಯಂತ್ರಣ ತಪ್ಪಿ ಡಿವೈಡರ್‌ ಮುರಿದು ಎದುರುಗಡೆಯಿಂದ ಬರುತ್ತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. SUV ಚಾಲಕನು ಚಕ್ರದಲ್ಲಿ ನಿದ್ರಿಸಿದ ಕಾರಣ ಈ ಅಪಘಾತ ಸಂಭವಿಸಿದೆ ಎಂದು ಹೇಳಿದ್ದಾರೆ. ಈ ಅಪಘಾತ ಸಂಭವಿಸಿದ ನಂತರ ವೈದ್ಯರನ್ನು ಆಸ್ಪತ್ರೆ ಸಾಗಿಸಲಾಗಿದೆ. ಅಷ್ಟೊತ್ತಿಗೆ ಕಾರಿನಲ್ಲಿದ್ದ ಐವರು ವೈದ್ಯರು ಸಾವನ್ನಪ್ಪಿದ್ದಾರೆ. ಒಬ್ಬರ ತಲೆಗೆ ಗಂಭೀರ ಗಾಯವಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನು ಸಾವನ್ನಪಿದ್ದವರನ್ನು ಡಾ ಅನಿರುದ್ಧ್ ವರ್ಮಾ, ಡಾ ಸಂತೋಷ್ ಕುಮಾರ್ ಮೌರ್ಯ, ಡಾ ಜೈವೀರ್ ಸಿಂಗ್, ಡಾ ಅರುಣ್ ಕುಮಾರ್ ಮತ್ತು ಡಾ ನಾರ್ದೇವ್ ಎಂದು ಗುರುತಿಸಲಾಗಿದೆ.

ಇದನ್ನೂ ಓದಿ:ಬ್ಯಾಲೆಟ್ ಪೇಪರ್ ಮತದಾನ ಬೇಕು ಎಂಬ ಅರ್ಜಿಯನ್ನು ವಜಾಗೊಳಿಸಿದ ಸುಪ್ರೀಂ, ಕಾಂಗ್ರೆಸ್​​​ಗೆ ಶಾಕ್ 

ಇನ್ನು ಈ ಬಗ್ಗೆ ಮಾತನಾಡಿದ ತಿರ್ವಾ ವಲಯದ ಅಧಿಕಾರಿ ಪ್ರಿಯಾಂಕಾ ಬಾಜಪೈ ಅವರು, ಇಂದು ಮುಂಜಾನೆ 3.30ರ ಸುಮಾರಿಗೆ ಲಕ್ನೋದಿಂದ ಆಗ್ರಾ ಕಡೆಗೆ ಹೊರಟಿದ್ದ ಸ್ಕಾರ್ಪಿಯೋ ಎಸ್‌ಯುವಿ ನಿಯಂತ್ರಣ ತಪ್ಪಿ, ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ವೈದ್ಯರು ಸಾವನ್ನಪ್ಪಿದ್ದಾರೆ. ಇನ್ನು ಸಾವನ್ನಪ್ಪಿದರವನ್ನು ಸೈಫೈ ಆಸ್ಪತ್ರೆಯಲ್ಲಿ ವೈದ್ಯರು ಹಾಗೂ ಲ್ಯಾಬ್ ತಂತ್ರಜ್ಞರು ಎಂದು ಹೇಳಿದ್ದಾರೆ. ಇನ್ನು ಈ ಬಗ್ಗೆ ಪ್ರಕರಣ ಕೂಡ ದಾಖಲಿಸಲಾಗಿದೆ. ಜತೆಗೆ ತನಿಖೆ ನಡೆಸಲಾಗುವುದು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ