AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bajrang Dal Activists : ಬಿಹಾರದಲ್ಲಿ ಬಜರಂಗದಳದ ಕಾರ್ಯಕರ್ತರ ಮೇಲೆ ಪೊಲೀಸರಿಂದ ಲಾಠಿಚಾರ್ಜ್​, 12 ಮಂದಿಗೆ ಗಾಯ

ಬಿಹಾರದಲ್ಲಿ ಬಜರಂಗದಳದ ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿಚಾರ್ಜ್​ ನಡೆಸಿದ್ದು, ಘಟನೆಯಲ್ಲಿ 12 ಮಂದಿ ಗಾಯಗೊಂಡಿದ್ದಾರೆ.

Bajrang Dal Activists : ಬಿಹಾರದಲ್ಲಿ ಬಜರಂಗದಳದ ಕಾರ್ಯಕರ್ತರ ಮೇಲೆ ಪೊಲೀಸರಿಂದ ಲಾಠಿಚಾರ್ಜ್​, 12 ಮಂದಿಗೆ ಗಾಯ
ಬಜರಂಗದಳದ ಕಾರ್ಯಕರ್ತರುImage Credit source: IndiaToday
ನಯನಾ ರಾಜೀವ್
|

Updated on: Feb 15, 2023 | 12:03 PM

Share

ಬಿಹಾರದಲ್ಲಿ ಬಜರಂಗದಳದ ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿಚಾರ್ಜ್​ ನಡೆಸಿದ್ದು, ಘಟನೆಯಲ್ಲಿ 12 ಮಂದಿ ಗಾಯಗೊಂಡಿದ್ದಾರೆ. ನಳಂದದ ಬಿಹಾರ ಪೊಲೀಸ್ ಠಾಣೆ ವ್ಯಾಪ್ತಿಯ ಅಂಬರ್ ಚೌಕ್ ಬಳಿಯ ಹನುಮಾನ್ ದೇವಸ್ಥಾನದಲ್ಲಿ ಭಜರಂಗಬಲಿಯ ಆರತಿಯನ್ನು ನಡೆಸಲಾಯಿತು. ಈ ವೇಳೆ ಬಿಹಾರ ಪೊಲೀಸ್ ಠಾಣೆಯ ಪೊಲೀಸರು ಬಜರಂಗದಳದ ಕಾರ್ಯಕರ್ತರ ಮೇಲೆ ಲಾಠಿ ಚಾರ್ಜ್​ ಮಾಡಿದ್ದಾರೆ.

ಈ ವೇಳೆ ಸಿಟ್ಟಿಗೆದ್ದ ಬಜರಂಗದಳದ ಕಾರ್ಯಕರ್ತರು ಪೊಲೀಸರ ಜತೆ ವಾಗ್ವಾದಕ್ಕಿಳಿದರು, ಘರ್ಷಣೆ ತೀವ್ರಗೊಂಡು ಅಂಗಡಿಗಳನ್ನು ಮುಚ್ಚಲಾಯಿತು. ಅದೇ ಸಮಯದಲ್ಲಿ ಅಂಬರ್ ಚೌಕ್ ಬಳಿ ಬಜರಂಗದಳದ ಕಾರ್ಯಕರ್ತರು ಬಂದು ಆಡಳಿತದ ವಿರುದ್ಧ ಘೋಷಣೆ ಕೂಗಿದರು. ತನಿಖೆಯ ಬಳಿಕ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಸ್​ಡಿಎಂ ಅಭಿಷೇಕ್ ಪಲಾಸಿಯಾ ಹೇಳಿದ್ದಾರೆ.

ಪ್ರತಿ ಮಂಗಳವಾರ ಆಂಜನೇಯನಿಗೆ ಆರತಿ ಬೆಳಗಲಾಗುತ್ತದೆ. ಈ ವೇಳೆ ಬಜರಂಗದಳದ ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ. ಆರತಿ ವೇಳೆ ಗದ್ದಲ ಉಂಟಾದಾಗ ಪೊಲೀಸ್ ಅಧಿಕಾರಿಗಳು ಬಜರಂಗದಳ ಕಾರ್ಯಕರ್ತರ ಮೇಲೆ ಲಾಠಿ ಪ್ರಹಾರ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಪೊಲೀಸರ ಲಾಠಿ ಪ್ರಹಾರಕ್ಕೆ ಪ್ರತಿಯಾಗಿ ಭಜರಂಗ ದಳದ ಕಾರ್ಯಕರ್ತರು ಆಕ್ರೋಶಗೊಂಡು, ದೊಡ್ಡ ಗದ್ದಲ ಸೃಷ್ಟಿಸಿ, ಅಂಗಡಿ ಮುಂಗಟ್ಟುಗಳನ್ನು ಮುಚ್ಚುವಂತೆ ಸೂಚಿಸಿದರು. ಈ ಘಟನೆಯು ಪ್ರದೇಶದಲ್ಲಿ ಭಯಭೀತರಾಗಿರುವುದರಿಂದ, ಭಜರಂಗದಳದ ಕಾರ್ಯಕರ್ತರಿಂದ ಗೊಂದಲವುಂಟಾದ ಕಾರಣ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಪ್ರದೇಶದಲ್ಲಿ ಭಾರೀ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!