AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೊಯ್ಡಾದಲ್ಲಿ ಮಹಿಳಾ ಸೆಕ್ಯುರಿಟಿ ಕೂದಲು ಹಿಡಿದೆಳೆದು ಅಪಾರ್ಟ್​ಮೆಂಟ್ ನಿವಾಸಿಗಳ ಗಲಾಟೆ; ವಿಡಿಯೋ ವೈರಲ್

ಮಹಿಳೆಯರು ಮಹಿಳಾ ಸೆಕ್ಯುರಿಟಿಯ ಕೂದಲು ಹಿಡಿದು ಎಳೆದುಕೊಂಡು ಹೋಗುತ್ತಿರುವ ದೃಶ್ಯವೂ ವಿಡಿಯೋದಲ್ಲಿದೆ. ಆಗ ಸೆಕ್ಯುರಿಟಿಗಳು ಅಪಾರ್ಟ್​ಮೆಂಟ್ ನಿವಾಸಿಗಳಿಗೆ ಕೋಲುಗಳಿಂದ ಹೊಡೆಯುವುದನ್ನು ಕಾಣಬಹುದು.

ನೊಯ್ಡಾದಲ್ಲಿ ಮಹಿಳಾ ಸೆಕ್ಯುರಿಟಿ ಕೂದಲು ಹಿಡಿದೆಳೆದು ಅಪಾರ್ಟ್​ಮೆಂಟ್ ನಿವಾಸಿಗಳ ಗಲಾಟೆ; ವಿಡಿಯೋ ವೈರಲ್
ನೊಯ್ಡಾ ಅಪಾರ್ಟ್​ಮೆಂಟ್ ಗಲಾಟೆಯ ದೃಶ್ಯ
TV9 Web
| Edited By: |

Updated on:Oct 21, 2022 | 1:08 PM

Share

ನೋಯ್ಡಾ: ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ಅಧ್ಯಕ್ಷ ಸ್ಥಾನಕ್ಕೆ ವಿವಿಧ ಅಭ್ಯರ್ಥಿಗಳನ್ನು ಬೆಂಬಲಿಸುತ್ತಿರುವ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿರುವ ಘಟನೆ ನೋಯ್ಡಾದ (Noida) ಹೈಡ್ ಪಾರ್ಕ್ ರೆಸಿಡೆನ್ಶಿಯಲ್ ಸೊಸೈಟಿಯಲ್ಲಿ ನಡೆದಿದೆ. ಈ ಗಲಾಟೆಯಲ್ಲಿ ಇಬ್ಬರು ಮಹಿಳೆಯರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ನೋಯ್ಡಾ ಪೊಲೀಸರು ದೂರು ದಾಖಲಿಸಿಕೊಂಡು ಇಬ್ಬರು ಭದ್ರತಾ ಸಿಬ್ಬಂದಿಯನ್ನು ಬಂಧಿಸಿದ್ದಾರೆ. ಅಪಾರ್ಟ್​ಮೆಂಟ್ ನಿವಾಸಿಗಳು ಮತ್ತು ಸೆಕ್ಯುರಿಟಿ ಗಾರ್ಡ್​ಗಳ ನಡುವೆ ಗಲಾಟೆ ನಡೆದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ (Social Media) ವೈರಲ್ ಆಗಿದೆ.

ವೈರಲ್ ಆಗಿರುವ ವಿಡಿಯೋದಲ್ಲಿ ಕೆಲವರು ಹೊಡೆದಾಡಿಕೊಳ್ಳುತ್ತಿದ್ದು, ಸೆಕ್ಯುರಿಟಿ ಗಾರ್ಡ್​ಗಳು ಅವರನ್ನು ತಡೆಯಲು ಪ್ರಯತ್ನಿಸುತ್ತಿದ್ದಾರೆ. ಪ್ರತಿಭಟನಾನಿರತ ಮಹಿಳೆಯರು ಮಹಿಳಾ ಸೆಕ್ಯುರಿಟಿಯ ಕೂದಲು ಹಿಡಿದು ಎಳೆದುಕೊಂಡು ಹೋಗುತ್ತಿರುವ ದೃಶ್ಯವೂ ವಿಡಿಯೋದಲ್ಲಿದೆ. ಆಗ ಸೆಕ್ಯುರಿಟಿಗಳು ಅಪಾರ್ಟ್​ಮೆಂಟ್ ನಿವಾಸಿಗಳಿಗೆ ಕೋಲುಗಳಿಂದ ಹೊಡೆಯುವುದನ್ನು ಕಾಣಬಹುದು.

ಇದನ್ನೂ ಓದಿ: ಗುರುಗ್ರಾಮ್‌ನ ಮಸೀದಿ ಮೇಲೆ 200 ಜನರ ಗುಂಪು ದಾಳಿ; ಪ್ರಾರ್ಥನೆ ಮಾಡುತ್ತಿದ್ದ ಜನರ ಮೇಲೆ ಹಲ್ಲೆ, ಬೆದರಿಕೆ

ಗೌತಮ್ ಬುದ್ಧ ನಗರ ಪೊಲೀಸರ ಪ್ರಕಾರ, ಎಒಎ ಅಧ್ಯಕ್ಷ ಹುದ್ದೆಗೆ ಸಂಬಂಧಿಸಿದಂತೆ ಪೊಲೀಸ್ ಠಾಣೆ ಸೆಕ್ಟರ್ -113 ವ್ಯಾಪ್ತಿಯ ಹೈಡ್ ಪಾರ್ಕ್ ಸೊಸೈಟಿಯಲ್ಲಿ 2 ಗುಂಪಿನ ನಡುವೆ ವಿವಾದ ನಡೆಯುತ್ತಿದ್ದು, ಈ ಬಗ್ಗೆ ಸಿಆರ್‌ಪಿಸಿ ಸೆಕ್ಷನ್ 107/116 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ನೋಯ್ಡಾದ ಹೈಡ್ ಪಾರ್ಕ್ ಸೊಸೈಟಿಯ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ಅಧ್ಯಕ್ಷ ಸ್ಥಾನಕ್ಕೆ ವಿವಿಧ ಅಭ್ಯರ್ಥಿಗಳನ್ನು ಬೆಂಬಲಿಸುವ 2 ಗುಂಪುಗಳ ಜನರ ನಡುವೆ ನಿನ್ನೆ ಘರ್ಷಣೆ ಏರ್ಪಟ್ಟಿತ್ತು. ಇದರಲ್ಲಿ ಇಬ್ಬರು ಮಹಿಳೆಯರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ನೋಯ್ಡಾ ಡಿಸಿಪಿ ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:07 pm, Fri, 21 October 22

Follow Us
TV9 Web
TV9 Web

TV9 Kannada

Read More
ದೇವಿಮನೆ ಘಟ್ಟದ ಬಳಿ ಕಂದಕಕ್ಕೆ ಉರುಳಿಬಿದ್ದ KSRTC ಬಸ್: 12 ಮಂದಿಗೆ ಗಾಯ
ದೇವಿಮನೆ ಘಟ್ಟದ ಬಳಿ ಕಂದಕಕ್ಕೆ ಉರುಳಿಬಿದ್ದ KSRTC ಬಸ್: 12 ಮಂದಿಗೆ ಗಾಯ
ಇಂದು ಚಂದನ ಷಷ್ಠಿ; ಈ ರಾಶಿಗಳಿಗೆ ಕೂಡಿಬರಲಿದೆ ಅದೃಷ್ಟ!
ಇಂದು ಚಂದನ ಷಷ್ಠಿ; ಈ ರಾಶಿಗಳಿಗೆ ಕೂಡಿಬರಲಿದೆ ಅದೃಷ್ಟ!
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ