
ನೋಯ್ಡಾ: ಅಪಾರ್ಟ್ಮೆಂಟ್ ಮಾಲೀಕರ ಸಂಘದ ಅಧ್ಯಕ್ಷ ಸ್ಥಾನಕ್ಕೆ ವಿವಿಧ ಅಭ್ಯರ್ಥಿಗಳನ್ನು ಬೆಂಬಲಿಸುತ್ತಿರುವ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿರುವ ಘಟನೆ ನೋಯ್ಡಾದ (Noida) ಹೈಡ್ ಪಾರ್ಕ್ ರೆಸಿಡೆನ್ಶಿಯಲ್ ಸೊಸೈಟಿಯಲ್ಲಿ ನಡೆದಿದೆ. ಈ ಗಲಾಟೆಯಲ್ಲಿ ಇಬ್ಬರು ಮಹಿಳೆಯರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ನೋಯ್ಡಾ ಪೊಲೀಸರು ದೂರು ದಾಖಲಿಸಿಕೊಂಡು ಇಬ್ಬರು ಭದ್ರತಾ ಸಿಬ್ಬಂದಿಯನ್ನು ಬಂಧಿಸಿದ್ದಾರೆ. ಅಪಾರ್ಟ್ಮೆಂಟ್ ನಿವಾಸಿಗಳು ಮತ್ತು ಸೆಕ್ಯುರಿಟಿ ಗಾರ್ಡ್ಗಳ ನಡುವೆ ಗಲಾಟೆ ನಡೆದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ (Social Media) ವೈರಲ್ ಆಗಿದೆ.
ವೈರಲ್ ಆಗಿರುವ ವಿಡಿಯೋದಲ್ಲಿ ಕೆಲವರು ಹೊಡೆದಾಡಿಕೊಳ್ಳುತ್ತಿದ್ದು, ಸೆಕ್ಯುರಿಟಿ ಗಾರ್ಡ್ಗಳು ಅವರನ್ನು ತಡೆಯಲು ಪ್ರಯತ್ನಿಸುತ್ತಿದ್ದಾರೆ. ಪ್ರತಿಭಟನಾನಿರತ ಮಹಿಳೆಯರು ಮಹಿಳಾ ಸೆಕ್ಯುರಿಟಿಯ ಕೂದಲು ಹಿಡಿದು ಎಳೆದುಕೊಂಡು ಹೋಗುತ್ತಿರುವ ದೃಶ್ಯವೂ ವಿಡಿಯೋದಲ್ಲಿದೆ. ಆಗ ಸೆಕ್ಯುರಿಟಿಗಳು ಅಪಾರ್ಟ್ಮೆಂಟ್ ನಿವಾಸಿಗಳಿಗೆ ಕೋಲುಗಳಿಂದ ಹೊಡೆಯುವುದನ್ನು ಕಾಣಬಹುದು.
ಇದನ್ನೂ ಓದಿ: ಗುರುಗ್ರಾಮ್ನ ಮಸೀದಿ ಮೇಲೆ 200 ಜನರ ಗುಂಪು ದಾಳಿ; ಪ್ರಾರ್ಥನೆ ಮಾಡುತ್ತಿದ್ದ ಜನರ ಮೇಲೆ ಹಲ್ಲೆ, ಬೆದರಿಕೆ
ಗೌತಮ್ ಬುದ್ಧ ನಗರ ಪೊಲೀಸರ ಪ್ರಕಾರ, ಎಒಎ ಅಧ್ಯಕ್ಷ ಹುದ್ದೆಗೆ ಸಂಬಂಧಿಸಿದಂತೆ ಪೊಲೀಸ್ ಠಾಣೆ ಸೆಕ್ಟರ್ -113 ವ್ಯಾಪ್ತಿಯ ಹೈಡ್ ಪಾರ್ಕ್ ಸೊಸೈಟಿಯಲ್ಲಿ 2 ಗುಂಪಿನ ನಡುವೆ ವಿವಾದ ನಡೆಯುತ್ತಿದ್ದು, ಈ ಬಗ್ಗೆ ಸಿಆರ್ಪಿಸಿ ಸೆಕ್ಷನ್ 107/116 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ನೋಯ್ಡಾದ ಹೈಡ್ ಪಾರ್ಕ್ ಸೊಸೈಟಿಯ ಅಪಾರ್ಟ್ಮೆಂಟ್ ಮಾಲೀಕರ ಸಂಘದ ಅಧ್ಯಕ್ಷ ಸ್ಥಾನಕ್ಕೆ ವಿವಿಧ ಅಭ್ಯರ್ಥಿಗಳನ್ನು ಬೆಂಬಲಿಸುವ 2 ಗುಂಪುಗಳ ಜನರ ನಡುವೆ ನಿನ್ನೆ ಘರ್ಷಣೆ ಏರ್ಪಟ್ಟಿತ್ತು. ಇದರಲ್ಲಿ ಇಬ್ಬರು ಮಹಿಳೆಯರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ನೋಯ್ಡಾ ಡಿಸಿಪಿ ತಿಳಿಸಿದ್ದಾರೆ.
Published On - 1:07 pm, Fri, 21 October 22