AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ ಬಿಟ್ಟು ಶ್ರೀಲಂಕಾಕ್ಕೆ ಪರಾರಿಯಾದರಾ ಪಹಲ್ಗಾಮ್ ದಾಳಿಯ ಉಗ್ರರು? ಕೊಲಂಬೋ ವಿಮಾನ ನಿಲ್ದಾಣದಲ್ಲಿ ಶೋಧ

ಕಾಶ್ಮೀರದ ಪಹಲ್ಗಾಮ್​ನಲ್ಲಿ ನಡೆದ ಉಗ್ರರ ದಾಳಿಯಲ್ಲಿ 26 ಜನರು ಪ್ರಾಣ ಕಳೆದುಕೊಂಡಿದ್ದರು. ಈ ದಾಳಿಗೆ ಕಾರಣರಾದ ಉಗ್ರರ ರೇಖಾಚಿತ್ರಗಳನ್ನು ಬಿಡುಗಡೆ ಮಾಡಲಾಗಿದ್ದು, ಅವರಲ್ಲಿ ಓರ್ವ ಉಗ್ರನ ಹೋಲಿಕೆಯಿರುವ ವ್ಯಕ್ತಿ ಚೆನ್ನೈನಿಂದ ಶ್ರೀಲಂಕಾಕ್ಕೆ ತೆರಳಿದ ವಿಮಾನದಲ್ಲಿ ಭಾರತ ಬಿಟ್ಟು ಪರಾರಿಯಾಗಲು ಯತ್ನಿಸಿದ್ದಾನೆ ಎಂಬ ಮಾಹಿತಿ ಗುಪ್ತಚರ ಇಲಾಖೆಗೆ ಬಂದಿತ್ತು. ಈ ಹಿನ್ನೆಲೆಯಲ್ಲಿ ಆತನಿಗಾಗಿ ಶ್ರೀಲಂಕಾದ ಕೊಲಂಬೋ ವಿಮಾನ ನಿಲ್ದಾಣದಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗಿದೆ.

ಭಾರತ ಬಿಟ್ಟು ಶ್ರೀಲಂಕಾಕ್ಕೆ ಪರಾರಿಯಾದರಾ ಪಹಲ್ಗಾಮ್ ದಾಳಿಯ ಉಗ್ರರು? ಕೊಲಂಬೋ ವಿಮಾನ ನಿಲ್ದಾಣದಲ್ಲಿ ಶೋಧ
Colombo Airport
ಸುಷ್ಮಾ ಚಕ್ರೆ
|

Updated on: May 03, 2025 | 4:48 PM

Share

ನವದೆಹಲಿ, ಮೇ 3: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ದಾಳಿಗೆ (Pahalgam Attack) ಸಂಬಂಧಿಸಿದಂತೆ ಭಾರತೀಯ ಗಉಪ್ತಚರ ಇಲಾಖೆ ಮಾಹಿತಿ ನೀಡಿದ ನಂತರ ಚೆನ್ನೈನಿಂದ ಬಂದ ವಿಮಾನವನ್ನು ಶ್ರೀಲಂಕಾ ವಿಮಾನ ನಿಲ್ದಾಣದಲ್ಲಿ (Sri Lanka Airport) ಶೋಧಿಸಲಾಗಿದೆ. ಈ ವಿಮಾನದಲ್ಲಿ ಪಹಲ್ಗಾಮ್ ದಾಳಿಯ ಉಗ್ರನೊಬ್ಬ ಭಾರತ ಬಿಟ್ಟು ಪರಾರಿಯಾಗಲು ಯತ್ನಿಸುತ್ತಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದ್ದರಿಂದ ಕೊಲಂಬೋ ವಿಮಾನ ನಿಲ್ದಾಣದಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗಿದೆ. ಚೆನ್ನೈನಿಂದ ಬಂದ ಶ್ರೀಲಂಕಾ ಏರ್ಲೈನ್ಸ್ ವಿಮಾನವು ಇಂದು ಬಂಡಾರನಾಯಕೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಬಿಐಎ) ವಿಶೇಷ ಭದ್ರತಾ ಕಾರ್ಯಾಚರಣೆಗೆ ಒಳಗಾಯಿತು.

ಕಾಶ್ಮೀರದ ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಸಂಬಂಧಿಸಿದ ಸಂಭಾವ್ಯ ಶಂಕಿತರನ್ನು ಭಾರತೀಯ ಗುಪ್ತಚರ ಇಲಾಖೆ ಗುರುತಿಸಿದ ನಂತರ ಚೆನ್ನೈನಿಂದ ಬಂದ ಶ್ರೀಲಂಕಾ ಏರ್ಲೈನ್ಸ್ ವಿಮಾನವನ್ನು ಇಂದು ಬಂಡಾರನಾಯಕೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಬಿಐಎ) ವಿಶೇಷ ಭದ್ರತಾ ಕಾರ್ಯಾಚರಣೆಗೆ ಒಳಪಡಿಸಲಾಯಿತು. ಚೆನ್ನೈನಿಂದ ಬಂದ ವಿಮಾನದಲ್ಲಿ 6 ಶಂಕಿತ ಭಯೋತ್ಪಾದಕರು ಇರುವ ಬಗ್ಗೆ ಭಾರತದಿಂದ ಬಂದ ಎಚ್ಚರಿಕೆ ಬಂದ ನಂತರ ಶ್ರೀಲಂಕಾದ ಅಧಿಕಾರಿಗಳು ಆ ವಿಮಾನದ ಆಗಮನದ ನಂತರ ಶೋಧ ನಡೆಸಿದ್ದಾರೆ ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ. ಆ 6 ಜನರಲ್ಲಿ ಪಹಲ್ಗಾಮ್ ದಾಳಿಯ ಉಗ್ರನೂ ಇದ್ದಾನೆ ಎಂಬ ಮಾಹಿತಿ ಬಂದಿತ್ತು.

ಇದನ್ನೂ ಓದಿ
Image
ಬಸ್‌ ತಡೆದು ನಡು ರಸ್ತೆಯಲ್ಲಿ ಪಾನಮತ್ತ ಮಹಿಳೆಯ ಕಿರಿಕ್; ವಿಡಿಯೋ ವೈರಲ್‌
Image
ಛತ್ತೀಸ್​ಗಢ ಮಾಜಿ ಸಿಎಂ ಭೂಪೇಶ್ ಬಘೇಲ್ ಮನೆ ಸೇರಿ ಹಲವೆಡೆ ಇಡಿ ದಾಳಿ
Image
ಮೊಬೈಲ್​ನಲ್ಲಿ ಮಾತನಾಡುತ್ತಾ ಬಾವಿಗೆ ಬಿದ್ದು ವಿದ್ಯಾರ್ಥಿ ಸಾವು
Image
ಮದುವೆ ಮನೆಗಳಲ್ಲಿ ಇನ್ಮುಂದೆ ನೀರಿನ ಪ್ಲಾಸ್ಟಿಕ್ ಬಾಟಲಿ ಬಳಕೆ ಮಾಡುವಂತಿಲ್ಲ

ಇದನ್ನೂ ಓದಿ: ಪಹಲ್ಗಾಮ್ ದಾಳಿಕೋರರು ಶಸ್ತ್ರಾಸ್ತ್ರಗಳನ್ನು ಎಲ್ಲಿ ಅಡಗಿಸಿಟ್ಟಿದ್ರು? ಎನ್​ಐಎಯಿಂದ ಮಾಹಿತಿ

ಅಧಿಕೃತ ಹೇಳಿಕೆಯಲ್ಲಿ, 4R-ALS ವಿಮಾನದಿಂದ ನಿರ್ವಹಿಸಲ್ಪಡುವ UL 122 ವಿಮಾನವನ್ನು ಚೆನ್ನೈನಿಂದ ಕೊಲಂಬೊಗೆ ಬಂದ ನಂತರ ಭದ್ರತಾ ಅಧಿಕಾರಿಗಳು ಸಂಪೂರ್ಣವಾಗಿ ಪರಿಶೀಲಿಸಿದರು ಎಂದು ಶ್ರೀಲಂಕಾ ಏರ್ಲೈನ್ಸ್ ತಿಳಿಸಿದೆ. “ಇಂದು (ಮೇ 3) ಬೆಳಿಗ್ಗೆ 11.59 ಗಂಟೆಗೆ ಚೆನ್ನೈನಿಂದ ಕೊಲಂಬೊಗೆ ಬಂದಿಳಿದ 4R-ALS ವಿಮಾನದಿಂದ ನಿರ್ವಹಿಸಲ್ಪಡುವ UL 122 ವಿಮಾನವನ್ನು ಸಮಗ್ರ ಭದ್ರತಾ ತಪಾಸಣೆಗೆ ಒಳಪಡಿಸಲಾಗಿದೆ ಎಂದು ಶ್ರೀಲಂಕನ್ ಏರ್ಲೈನ್ಸ್ ಸಾರ್ವಜನಿಕರಿಗೆ ತಿಳಿಸಲು ಬಯಸುತ್ತದೆ” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಪಾಕ್ ಮೇಲೆ ಭಾರತ ದಾಳಿ ಮಾಡಿದರೆ ಈಶಾನ್ಯ ರಾಜ್ಯಗಳನ್ನು ಆಕ್ರಮಿಸಲು ಚೀನಾದೊಂದಿಗೆ ಕೈಜೋಡಿಸಿ; ಬಾಂಗ್ಲಾ ಮಾಜಿ ಜನರಲ್

“ಭಾರತಕ್ಕೆ ಬೇಕಾಗಿರುವ ಶಂಕಿತನೊಬ್ಬ ವಿಮಾನದಲ್ಲಿದ್ದಾನೆ ಎಂದು ಚೆನ್ನೈ ಪ್ರದೇಶ ನಿಯಂತ್ರಣ ಕೇಂದ್ರದಿಂದ ಬಂದ ಎಚ್ಚರಿಕೆಯ ನಂತರ ಸ್ಥಳೀಯ ಅಧಿಕಾರಿಗಳೊಂದಿಗೆ ಸಮನ್ವಯದಿಂದ ಈ ಶೋಧ ನಡೆಸಲಾಯಿತು” ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಆ ವಿಮಾನವನ್ನು ಪರಿಶೀಲಿಸಲಾಯಿತು. ನಂತರ ಮುಂದಿನ ಕಾರ್ಯಾಚರಣೆಗಳಿಗೆ ಅನುಮತಿ ನೀಡಲಾಯಿತು ಎಂದು ವಿಮಾನಯಾನ ಸಂಸ್ಥೆಗಳು ತಿಳಿಸಿವೆ. ಕಡ್ಡಾಯ ಭದ್ರತಾ ಕಾರ್ಯವಿಧಾನದಿಂದಾಗಿ ಮುಂದಿನ ನಿಗದಿತ ಸೇವೆ ಅಂದರೆ ಸಿಂಗಾಪುರಕ್ಕೆ ತೆರಳುವ UL308 ವಿಮಾನ ವಿಳಂಬವಾಯಿತು ಎಂದು ತಿಳಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More
ಭೀಕರ ಬರದಿಂದ ಬತ್ತಿದ ಭತ್ತದ ನಾಡು: ಇಡೀ ರಾಜ್ಯಕ್ಕೆ ಅಕ್ಕಿ ದರ ಏರಿಕೆಯ ಬಿಸಿ
ಭೀಕರ ಬರದಿಂದ ಬತ್ತಿದ ಭತ್ತದ ನಾಡು: ಇಡೀ ರಾಜ್ಯಕ್ಕೆ ಅಕ್ಕಿ ದರ ಏರಿಕೆಯ ಬಿಸಿ
ರೆಸ್ಯೂಮ್​​ನಲ್ಲಿ ಕನ್ನಡ ಇದ್ರೆ ರಿಜೆಕ್ಟ್​: ಅಳಲು ತೋಡಿಕೊಂಡ ಯುವತಿ
ರೆಸ್ಯೂಮ್​​ನಲ್ಲಿ ಕನ್ನಡ ಇದ್ರೆ ರಿಜೆಕ್ಟ್​: ಅಳಲು ತೋಡಿಕೊಂಡ ಯುವತಿ
ಹಿಂಗಾರು ಮಳೆ ಅಬ್ಬರಕ್ಕೆ ಹಚ್ಚ ಹಸಿರಾದ ಹಿಮವದ್ ಗೋಪಾಲಸ್ವಾಮಿ ಬೆಟ್ಟ
ಹಿಂಗಾರು ಮಳೆ ಅಬ್ಬರಕ್ಕೆ ಹಚ್ಚ ಹಸಿರಾದ ಹಿಮವದ್ ಗೋಪಾಲಸ್ವಾಮಿ ಬೆಟ್ಟ
2 ವರ್ಷ 10 ತಿಂಗಳ ಕಂದನಿಂದ ತಬಲಾ ವಾದನ
2 ವರ್ಷ 10 ತಿಂಗಳ ಕಂದನಿಂದ ತಬಲಾ ವಾದನ
40 ದಿನ ನಂತರ ಪತ್ತೆಯಾದ ಕೆಆರ್‌ಐಡಿಎಲ್ ಎಇಇ ಪರ್ವೀಜ್​ಗೆ ಈಗ ಪೊಲೀಸರ ಗ್ರಿಲ್
40 ದಿನ ನಂತರ ಪತ್ತೆಯಾದ ಕೆಆರ್‌ಐಡಿಎಲ್ ಎಇಇ ಪರ್ವೀಜ್​ಗೆ ಈಗ ಪೊಲೀಸರ ಗ್ರಿಲ್
ಡೈಮಂಡ್ ಟಾಸ್ಕ್​ ವಿಷಯದಲ್ಲಿ ಪಂಚಾಯ್ತಿ ಮಾಡಲು ಬಂದ ಸುದೀಪ್
ಡೈಮಂಡ್ ಟಾಸ್ಕ್​ ವಿಷಯದಲ್ಲಿ ಪಂಚಾಯ್ತಿ ಮಾಡಲು ಬಂದ ಸುದೀಪ್
ಸಿದ್ದರಾಮಯ್ಯ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಸಿದ್ದರಾಮಯ್ಯ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಐಷಾರಾಮಿ ಪ್ರವಾಸಿ ರೈಲಿನಲ್ಲಿ ಪ್ರಯಾಣಿಸಿ ಖುಷಿ ಹಂಚಿಕೊಂಡ ಸಿಎಂ ಡಿಕೆಶಿ !
ಐಷಾರಾಮಿ ಪ್ರವಾಸಿ ರೈಲಿನಲ್ಲಿ ಪ್ರಯಾಣಿಸಿ ಖುಷಿ ಹಂಚಿಕೊಂಡ ಸಿಎಂ ಡಿಕೆಶಿ !
ಮಾವಿನಕೆರೆ ರಂಗನಾಥಸ್ವಾಮಿಗೆ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಮಾವಿನಕೆರೆ ರಂಗನಾಥಸ್ವಾಮಿಗೆ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಆರ್.ಆರ್ ನಗರದ ಪಟ್ಟಣಗೆರೆ ಬಳಿ ಚಾಟ್ಸ್​ ಅಂಗಡಿಯಲ್ಲಿ ಸಿಲಿಂಡರ್ ಸ್ಫೋಟ!
ಆರ್.ಆರ್ ನಗರದ ಪಟ್ಟಣಗೆರೆ ಬಳಿ ಚಾಟ್ಸ್​ ಅಂಗಡಿಯಲ್ಲಿ ಸಿಲಿಂಡರ್ ಸ್ಫೋಟ!