AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೂರ್ವ ಲಡಾಖ್‌ನ ಪಾಂಗಾಂಗ್ ಸರೋವರ ಬಳಿ ಎರಡನೇ ಸೇತುವೆ ನಿರ್ಮಿಸುತ್ತಿದೆ ಚೀನಾ: ಅಧಿಕೃತ ಪ್ರತಿಕ್ರಿಯೆ ನೀಡಿದ ಭಾರತ

ಭಾರತದ ಭದ್ರತೆಯ ಮೇಲೆ ಪ್ರಭಾವ ಬೀರುವ ಎಲ್ಲಾ ಬೆಳವಣಿಗೆಗಳ ಮೇಲೆ ನಿರಂತರ ನಿಗಾ ಇರಿಸುತ್ತದೆ. ಸಾರ್ವಭೌಮತೆ ಮತ್ತು ಪ್ರಾದೇಶಿಕ ಸಮಗ್ರತೆಯನ್ನು ಕಾಪಾಡಲು ಎಲ್ಲಾ ಅಗತ್ಯ ಕ್ರಮಗಳನ್ನು ಸರ್ಕಾರ ತೆಗೆದುಕೊಳ್ಳುತ್ತದೆ" ಎಂದು ವಿದೇಶಾಂಗ ಸಚಿವಾಲಯದ ವಕ್ತಾರ....

ಪೂರ್ವ ಲಡಾಖ್‌ನ ಪಾಂಗಾಂಗ್ ಸರೋವರ ಬಳಿ ಎರಡನೇ ಸೇತುವೆ ನಿರ್ಮಿಸುತ್ತಿದೆ ಚೀನಾ: ಅಧಿಕೃತ ಪ್ರತಿಕ್ರಿಯೆ ನೀಡಿದ ಭಾರತ
ಪಾಂಗಾಂಗ್ ಸರೋವರ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: May 20, 2022 | 10:14 PM

Share

ಪೂರ್ವ ಲಡಾಖ್‌ನ ಪಾಂಗಾಂಗ್ ತ್ಸೋ (Pangong Tso lake) ಸರೋವರದ ಬಳಿ ಚೀನಾ (China) ಈ ವರ್ಷದ ಆರಂಭದಲ್ಲಿ ನಿರ್ಮಿಸಿದ ಸೇತುವೆಯ ಪಕ್ಕದಲ್ಲೇ ಎರಡನೇ ಸೇತುವೆಯನ್ನು ನಿರ್ಮಿಸುತ್ತಿದೆ ಎಂದು ವಿದೇಶಾಂಗ ಸಚಿವಾಲಯ (External Affairs Ministry) ಶುಕ್ರವಾರ ಹೇಳಿದೆ. ನಿರ್ಮಾಣ ನಡೆಯುತ್ತಿರುವ ಪ್ರದೇಶವು ಕಾನೂನುಬಾಹಿರವಾಗಿ ಸ್ವಾಧೀನ ಪಡೆಸಿದ್ದು ಎಂದು ಸಚಿವಾಲಯವು ಹೇಳಿದೆ. ಚೀನಾದ ಕಾನೂನುಬಾಹಿರ ವಶಪಡಿಸಿಕೊಳ್ಳುವಿಕೆಯನ್ನು ಅಥವಾ ಅಂತಹ ನಿರ್ಮಾಣ ಚಟುವಟಿಕೆಗಳನ್ನು ಭಾರತ ಸ್ವೀಕರಿಸಿಲ್ಲ ಎಂದು ವಿದೇಶಾಂಗ ಸಚಿವಾಲಯ ಹೇಳಿದೆ. ಸರ್ಕಾರವು “ಭಾರತದ ಭದ್ರತೆಯ ಮೇಲೆ ಪ್ರಭಾವ ಬೀರುವ ಎಲ್ಲಾ ಬೆಳವಣಿಗೆಗಳ ಮೇಲೆ ನಿರಂತರ ನಿಗಾ ಇರಿಸುತ್ತದೆ. ಸಾರ್ವಭೌಮತೆ ಮತ್ತು ಪ್ರಾದೇಶಿಕ ಸಮಗ್ರತೆಯನ್ನು ಕಾಪಾಡಲು ಎಲ್ಲಾ ಅಗತ್ಯ ಕ್ರಮಗಳನ್ನು ಸರ್ಕಾರ ತೆಗೆದುಕೊಳ್ಳುತ್ತದೆ” ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಹೇಳಿದ್ದಾರೆ. ಉಲ್ಲೇಖಿಸಲಾದ ಸೇತುವೆಯು ಚೀನಾವು ಭಾರತದ ಗಡಿ ರೇಖೆಯ ಉದ್ದಕ್ಕೂ ಇರುವ ಪ್ರದೇಶದಲ್ಲಿ ನಿರ್ಮಿಸುತ್ತಿರುವ ಎರಡನೇ ರಚನೆಯಾಗಿದೆ. ಚೀನಾ ಸೇನೆ ಮತ್ತು ಶಸ್ತ್ರಸಜ್ಜಿತ ವಾಹನಗಳ ಸುಗಮ ಸಂಚಾರಕ್ಕಾಗಿ ಪಾಂಗಾಂಗ್‌ ಸರೋವರ ಪ್ರದೇಶದಲ್ಲಿ ಎರಡನೇ ಸೇತುವೆ ನಿರ್ಮಿಸುತ್ತಿರುವುದನ್ನು ಉಪಗ್ರಹ ಚಿತ್ರಗಳು ಬಹಿರಂಗಪಡಿಸಿವೆ. ಚೀನಾ ತನ್ನ ಹಿಂದಿನ ಸೇತುವೆಯ ಜೊತೆಗೆ ಪಾಂಗಾಗ್ ಸರೋವರದ ಮೇಲೆ ಸೇತುವೆಯನ್ನು ನಿರ್ಮಿಸುತ್ತಿರುವ ವರದಿಗಳನ್ನು ನಾವು ನೋಡಿದ್ದೇವೆ. ಈ ಎರಡೂ ಸೇತುವೆಗಳು 1960 ರ ದಶಕದಿಂದಲೂ ಚೀನಾ ಅಕ್ರಮವಾಗಿ ವಶಪಡಿಸಿಕೊಂಡಿರುವ ಪ್ರದೇಶಗಳಲ್ಲಿವೆ. ನಮ್ಮ ಭೂಪ್ರದೇಶದ ಇಂತಹ ಕಾನೂನುಬಾಹಿರ ವಶಪಡಿಸಿಕೊಳ್ಳುವಿಕೆಯನ್ನು ನಾವು ಎಂದಿಗೂ ಒಪ್ಪಿಕೊಂಡಿಲ್ಲ ಅಥವಾ ಅಂತಹ ನಿರ್ಮಾಣ ಚಟುವಟಿಕೆಗಳನ್ನು ನಾವು ಸ್ವೀಕರಿಸಿಲ್ಲ ಎಂದು ಬಾಗ್ಚಿ ಹೇಳಿದ್ದಾರೆ.

“ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ಕೇಂದ್ರಾಡಳಿತ ಪ್ರದೇಶಗಳು ಭಾರತದ ಅವಿಭಾಜ್ಯ ಅಂಗವಾಗಿದೆ ಎಂದು ಭಾರತ ಹಲವಾರು ಸಂದರ್ಭಗಳಲ್ಲಿ ಸ್ಪಷ್ಟಪಡಿಸಿದೆ. ಇತರ ದೇಶಗಳು ಭಾರತದ ಸಾರ್ವಭೌಮತೆ ಮತ್ತು ಪ್ರಾದೇಶಿಕ ಸಮಗ್ರತೆಯನ್ನು ಗೌರವಿಸುತ್ತವೆ ಎಂದು ನಾವು ನಿರೀಕ್ಷಿಸುತ್ತೇವೆ”

ರಾಷ್ಟ್ರದ ಭದ್ರತಾ ಹಿತಾಸಕ್ತಿಗಳನ್ನು ಸಂಪೂರ್ಣವಾಗಿ ರಕ್ಷಿಸಲಾಗಿದೆ. ಸರ್ಕಾರವು ವಿಶೇಷವಾಗಿ 2014 ರಿಂದ ರಸ್ತೆಗಳು, ಸೇತುವೆಗಳು ಇತ್ಯಾದಿಗಳ ನಿರ್ಮಾಣ ಸೇರಿದಂತೆ ಗಡಿ ಮೂಲಸೌಕರ್ಯಗಳ ಅಭಿವೃದ್ಧಿಯನ್ನು ವೇಗಗೊಳಿಸಿದೆ. ಭಾರತದ ಆಯಕಟ್ಟಿನ ಮತ್ತು ಭದ್ರತಾ ಅವಶ್ಯಕತೆಗಳನ್ನು ಪೂರೈಸಲು ಮಾತ್ರವಲ್ಲದೆ ಈ ಪ್ರದೇಶಗಳ ಆರ್ಥಿಕ ಅಭಿವೃದ್ಧಿಗೆ ಅನುಕೂಲವಾಗುವಂತೆ ಗಡಿ ಪ್ರದೇಶಗಳಲ್ಲಿ ಮೂಲಸೌಕರ್ಯಗಳನ್ನು ರಚಿಸುವ ಉದ್ದೇಶಕ್ಕೆ ಸರ್ಕಾರ ಬದ್ಧವಾಗಿದೆ ಎಂದು ಬಾಗ್ಚಿ ಹೇಳಿದ್ದಾರೆ.

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ