AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದಲ್ಲಿ 2ನೇ ಬುಲೆಟ್ ಟ್ರೇನ್ ನಿರ್ಮಾಣ, ಬೆಂಗಳೂರು-ಮೈಸೂರು ನಡುವೆಯೂ ಬುಲೆಟ್!

ದೇಶದಲ್ಲಿ 2ನೇ ಬುಲೆಟ್ ಟ್ರೇನ್ ಮಾರ್ಗ ನಿರ್ಮಾಣಕ್ಕೆ ನಿರ್ಧಾರ ಮಾಡಲಾಗಿದೆ. ತಕ್ಷಣಕ್ಕೆ ದೆಹಲಿ-ವಾರಾಣಸಿ ಮಧ್ಯೆ ಬುಲೆಟ್ ಟ್ರೇನ್ ಮಾರ್ಗ ನಿರ್ಮಾಣವಾಗಲಿದೆ. ಇದೇ ರೀತಿ ದೇಶದಲ್ಲಿ 6 ಮಾರ್ಗದಲ್ಲಿ ಬುಲೆಟ್ ಟ್ರೇನ್ ಸಂಚರಿಸಲಿದೆ. 6 ಮಾರ್ಗದಲ್ಲಿ ಬುಲೆಟ್ ಟ್ರೇನ್ ಮಾರ್ಗ ನಿರ್ಮಾಣಕ್ಕೆ ಪ್ಲ್ಯಾನ್ ಮಾಡಲಾಗಿದ್ದು, ಚೆನ್ನೈ-ಬೆಂಗಳೂರು-ಮೈಸೂರು ಮಾರ್ಗವೂ ಇದರಲ್ಲಿ ಸೇರಿದೆ. ವಾರಾಣಸಿ ಕ್ಷೇತ್ರಕ್ಕೆ ಸೌಲಭ್ಯ ಕಲ್ಪಿಸಲು ಮೋದಿ ನಿರ್ಧಾರ ಮಾಡಿದ್ದು, ಮೋದಿ ಪ್ರತಿನಿಧಿಸುವ ವಾರಾಣಸಿ ಕ್ಷೇತ್ರಕ್ಕೆ ಬುಲೆಟ್ ಟ್ರೇನ್ ಪ್ರವೇಶಿಸಲಿದೆ. ನ್ಯಾಷನಲ್ ಹೈಸ್ಪೀಡ್ ರೈಲು ಕಾರ್ಪೊರೇಷನ್​ನಿಂದ ಇದರ ವಿನ್ಯಾಸ […]

ದೇಶದಲ್ಲಿ 2ನೇ ಬುಲೆಟ್ ಟ್ರೇನ್ ನಿರ್ಮಾಣ, ಬೆಂಗಳೂರು-ಮೈಸೂರು ನಡುವೆಯೂ ಬುಲೆಟ್!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jul 03, 2020 | 5:04 PM

Share

ದೇಶದಲ್ಲಿ 2ನೇ ಬುಲೆಟ್ ಟ್ರೇನ್ ಮಾರ್ಗ ನಿರ್ಮಾಣಕ್ಕೆ ನಿರ್ಧಾರ ಮಾಡಲಾಗಿದೆ. ತಕ್ಷಣಕ್ಕೆ ದೆಹಲಿ-ವಾರಾಣಸಿ ಮಧ್ಯೆ ಬುಲೆಟ್ ಟ್ರೇನ್ ಮಾರ್ಗ ನಿರ್ಮಾಣವಾಗಲಿದೆ. ಇದೇ ರೀತಿ ದೇಶದಲ್ಲಿ 6 ಮಾರ್ಗದಲ್ಲಿ ಬುಲೆಟ್ ಟ್ರೇನ್ ಸಂಚರಿಸಲಿದೆ. 6 ಮಾರ್ಗದಲ್ಲಿ ಬುಲೆಟ್ ಟ್ರೇನ್ ಮಾರ್ಗ ನಿರ್ಮಾಣಕ್ಕೆ ಪ್ಲ್ಯಾನ್ ಮಾಡಲಾಗಿದ್ದು, ಚೆನ್ನೈ-ಬೆಂಗಳೂರು-ಮೈಸೂರು ಮಾರ್ಗವೂ ಇದರಲ್ಲಿ ಸೇರಿದೆ.

ವಾರಾಣಸಿ ಕ್ಷೇತ್ರಕ್ಕೆ ಸೌಲಭ್ಯ ಕಲ್ಪಿಸಲು ಮೋದಿ ನಿರ್ಧಾರ ಮಾಡಿದ್ದು, ಮೋದಿ ಪ್ರತಿನಿಧಿಸುವ ವಾರಾಣಸಿ ಕ್ಷೇತ್ರಕ್ಕೆ ಬುಲೆಟ್ ಟ್ರೇನ್ ಪ್ರವೇಶಿಸಲಿದೆ. ನ್ಯಾಷನಲ್ ಹೈಸ್ಪೀಡ್ ರೈಲು ಕಾರ್ಪೊರೇಷನ್​ನಿಂದ ಇದರ ವಿನ್ಯಾಸ ಆಗಲಿದೆ. ಡಿಪಿಆರ್ ಸಿದ್ಧಪಡಿಸಲು ಬಿಡ್ ಆಹ್ವಾನ ಮಾಡಲಾಗಿದೆ.

ಸದ್ಯಕ್ಕೆ ದೆಹಲಿ-ವಾರಾಣಸಿ ಮಧ್ಯೆ ವಂದೇ ಭಾರತ್ ಸಂಚಾರವಾಗುತ್ತಿದೆ. ದೆಹಲಿ-ವಾರಾಣಸಿ ಮಧ್ಯೆ 865 ಕಿ.ಮೀ. ಅಂತರ ಇದೆ. ವಾರಾಣಸಿ ತಲುಪಲು ವಂದೇ ಭಾರತ್ ರೈಲಿಗೆ 8 ಗಂಟೆ ಸಮಯಾವಕಾಶ ತಗಲುತ್ತದೆ.  ಆದರೆ ಬುಲೆಟ್ ಟ್ರೇನ್ 4.5 ಗಂಟೆಯಲ್ಲಿ ಈ ದೂರವನ್ನು ಕ್ರಮಿಸಲಿದೆ. ಮಾರ್ಗ ಮಧ್ಯೆ ನೋಯ್ಡಾ, ಆಗ್ರಾ, ಕಾನ್ಪುರ, ಲಖನೌನಲ್ಲಿ ನಿಲ್ದಾಣಗಳು ನಿರ್ಮಾಣವಾಗಲಿವೆ.

Published On - 5:03 pm, Fri, 3 July 20

Follow Us
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್