AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊದಲ ಪತಿ ಮೇಲೆ ವರದಕ್ಷಿಣೆ ಕೇಸ್​​ ಹಾಕಿದ ಮಹಿಳೆಗೆ ಶಾಕ್ ಕೊಟ್ಟ 2ನೇ ಗಂಡ!

ಮಹಿಳೆಯೊಬ್ಬಳು ತನ್ನ ಗಂಡನ ವಿರುದ್ಧ ಕೌಟುಂಬಿಕ ದೌರ್ಜನ್ಯದ ಕೇಸ್ ಹಾಕಿ, ತನಗೆ ಆರ್ಥಿಕ ಪರಿಹಾರ ಬೇಕೆಂದು ಕೋರಿದ್ದಳು. ಮುಂಬೈನ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಕೌಟುಂಬಿಕ ಹಿಂಸಾಚಾರ ಕಾಯ್ದೆಯಡಿಯಲ್ಲಿ ಕೇಸ್ ದಾಖಲಾಗಿತ್ತು. ಆದರೆ, ಈ ಕೇಸ್​​ಗೆ ಆಕೆಯ 2ನೇ ಪತಿ ಎಂಟ್ರಿಯಾಗುತ್ತಿದ್ದಂತೆ ಕೋರ್ಟ್​​ನಲ್ಲಿ ಇಡೀ ಪ್ರಕರಣವೇ ತಲೆಕೆಳಗಾಗಿದೆ. ಈ ಕೇಸ್​​ಗೆ ಇದೀಗ ಹೊಸ ತಿರುವು ಸಿಕ್ಕಿದೆ. 17 ವರ್ಷದ ಹಿಂದಿನ ಪ್ರಕರಣದ ವಿಚಾರಣೆ ಇದೀಗ ಮುಕ್ತಾಯಗೊಂಡಿದೆ.

ಮೊದಲ ಪತಿ ಮೇಲೆ ವರದಕ್ಷಿಣೆ ಕೇಸ್​​ ಹಾಕಿದ ಮಹಿಳೆಗೆ ಶಾಕ್ ಕೊಟ್ಟ 2ನೇ ಗಂಡ!
Husband And Wife
ಸುಷ್ಮಾ ಚಕ್ರೆ
|

Updated on: Dec 28, 2025 | 8:15 PM

Share

ಮುಂಬೈ, ಡಿಸೆಂಬರ್ 28: ಮಹಾರಾಷ್ಟ್ರದ ಮುಂಬೈನ (Mumbai) ಕೋರ್ಟ್​ನಲ್ಲಿ ನಾಟಕೀಯ ಘಟನೆಯೊಂದು ನಡೆದಿದೆ. ವ್ಯಕ್ತಿಯೊಬ್ಬರ ಮೇಲೆ ಅವರ ಹೆಂಡತಿ ಕೌಟುಂಬಿಕ ದೌರ್ಜನ್ಯದ ಕೇಸ್ ಹಾಕಿದ್ದಳು. ತನಗೆ ಗಂಡನಿಂದ ಆರ್ಥಿಕ ಪರಿಹಾರ ಬೇಕೆಂದು ನ್ಯಾಯಾಲಯದ ಮೊರೆ ಹೋಗಿದ್ದಳು. ಆದರೆ, ಆಕೆಯ ಗಂಡ ಆಕೆಯ 2ನೇ ಗಂಡನನ್ನು ನ್ಯಾಯಾಲಯಕ್ಕೆ ಕರೆದುಕೊಂಡು ಬಂದ ನಂತರ ಈ ಪ್ರಕರಣದ ದಿಕ್ಕೇ ಬದಲಾಗಿದೆ.

ವರದಕ್ಷಿಣೆ ಆರೋಪದ ಮೇಲೆ ತನ್ನ ಪತಿ ತನ್ನ ಮೇಲೆ ದೈಹಿಕ ಹಲ್ಲೆ ನಡೆಸಿ, ವಿಚ್ಛೇದನದ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬಳು ಬಾಂದ್ರಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಳು. ವಿವಾಹದ ಸ್ವಲ್ಪ ಸಮಯದ ನಂತರ ನನ್ನ ಗಂಡ ನನ್ನನ್ನು ತೊರೆದು ಊರಿನಲ್ಲಿ ಇನ್ನೊಬ್ಬ ಮಹಿಳೆಯೊಂದಿಗೆ ನೆಲೆಸಿದ್ದಾರೆ ಎಂದು ಆಕೆ ದೂರಿನಲ್ಲಿ ತಿಳಿಸಿದ್ದಳು. ಅಲ್ಲದೆ, ಆತ ತನ್ನನ್ನು ಮನೆಯಿಂದ ಹೊರಗೆ ಹಾಕಿದ್ದಾನೆ ಎಂದು ಆ ಮಹಿಳೆ ಆರೋಪಿಸಿದ್ದಳು. ನನ್ನ ಗಂಡ ನನ್ನ ಮತ್ತು ನನ್ನ ಮಗುವಿನ ಆರ್ಥಿಕ ಅಗತ್ಯಗಳನ್ನು ಪೂರೈಸಲಿಲ್ಲ, ಆದ್ದರಿಂದ ಆತನಿಂದ ಆರ್ಥಿಕ ಪರಿಹಾರವನ್ನು ಕೊಡಿಸಬೇಕೆಂದು ಕೋರಿದ್ದಳು.

ಇದನ್ನೂ ಓದಿ: Video: ಮಗುವನ್ನು ಆಟೋದಲ್ಲಿ ಕೂರಿಸಿ ಬಾರ್​ಗೆ ಕುಡಿಯಲು ಹೋದ ಮಹಿಳೆ

ಈ ಪ್ರಕರಣದಲ್ಲಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ವಿಚಾರಣೆ ಆರಂಭವಾದಾಗ ಆ ಮಹಿಳೆ ತನ್ನ ತಂಗಿಯನ್ನು ಸಾಕ್ಷಿಯಾಗಿ ಹಾಜರುಪಡಿಸಿದಳು. ಈ ಮದುವೆಯಿಂದ ತನ್ನ ಅಕ್ಕ ಆಘಾತಕ್ಕೊಳಗಾಗಿದ್ದಾರೆ ಎಂದು ಆಕೆ ಹೇಳಿಕೆ ನೀಡಿದ್ದರು. ನ್ಯಾಯಾಲಯವು ಮೊದಲು ವಿಚಾರಣೆಯ ಸಮಯದಲ್ಲಿ ಮಧ್ಯಂತರ ಕ್ರಮವಾಗಿ ಆ ಮಹಿಳೆಗೆ ಮಾಸಿಕ ಭತ್ಯೆಯನ್ನು ಪಾವತಿಸಲು ಆಕೆಯ ಗಂಡನಿಗೆ ಸೂಚಿಸಿತ್ತು.

ಆದರೆ, ಇದಕ್ಕೆ ಒಪ್ಪದ ಆಕೆಯ ಮೊದಲ ಪತಿ, 2008ರಲ್ಲಿ ತಾವಿಬ್ಬರೂ ವಿಚ್ಛೇದನ ಪಡೆದಿದ್ದೇವೆ. ಆ ಮಹಿಳೆ ಸ್ವಂತ ಇಚ್ಛೆಯಂತೆ ನನ್ನನ್ನು ತೊರೆದು ಹೋಗಿದ್ದಾಳೆ. ನಾವಿಬ್ಬರೂ ಡೈವೋರ್ಸ್ ಪಡೆದ ನಂತರ ಆಕೆ ಈಗಾಗಲೇ ಬೇರೊಬ್ಬನನ್ನು ಮದುವೆಯಾಗಿರುವುದರಿಂದ ಆರ್ಥಿಕ ಪರಿಹಾರ ನೀಡುವ ಪ್ರಶ್ನೆಯೇ ಬರುವುದಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪ್ರೀತಿ ಇಷ್ಟೇನಾ? ಇಷ್ಟಪಟ್ಟು ಮದುವೆಯಾಗಿ 24 ಗಂಟೆಯೊಳಗೆ ವಿಚ್ಛೇದನ ಪಡೆದ ದಂಪತಿ

ಆಕೆಗೆ ಇನ್ನೊಂದು ಮದುವೆಯಾಗಿದೆ ಎಂಬುದನ್ನು ಸಾಬೀತುಪಡಿಸಲು ಆಕೆಯ ಮೊದಲ ಗಂಡ ಆಕೆಯ 2ನೇ ಗಂಡನನ್ನೇ ಸಾಕ್ಷಿಯಾಗಿ ಕೋರ್ಟ್​ಗೆ ಹಾಜರುಪಡಿಸಿದ್ದಾರೆ. ಅವರು ತಾನು ಆ ಮಹಿಳೆಯನ್ನು ಮದುವೆಯಾಗಿರುವುದಾಗಿ ಒಪ್ಪಿಕೊಂಡರು. ಈ ಸಾಕ್ಷ್ಯಗಳನ್ನು ಪರಿಗಣಿಸಿದ ನಂತರ, ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಬಿ.ಎನ್. ಚಿಕ್ನೆ ಅವರು ಮಹಿಳೆ ಈಗಾಗಲೇ ಇನ್ನೊಬ್ಬ ಪುರುಷನನ್ನು ಮದುವೆಯಾಗಿದ್ದಾರೆ, ಆದ್ದರಿಂದ ಆಕೆಯ ವಿಚ್ಛೇದಿತ ಪತಿಯಿಂದ ಯಾವುದೇ ಪರಿಹಾರಕ್ಕೆ ಅರ್ಹರಲ್ಲ ಎಂದು ತೀರ್ಪು ನೀಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್
ಮತ್ತೊಂದು ಬಿಗ್ ಎಲಿಮಿನೇಷನ್: ಸ್ಪಂದನಾ-ಮಾಳು ನಡುವೆ ಯಾರು ಹೊರಗೆ?
ಮತ್ತೊಂದು ಬಿಗ್ ಎಲಿಮಿನೇಷನ್: ಸ್ಪಂದನಾ-ಮಾಳು ನಡುವೆ ಯಾರು ಹೊರಗೆ?
ಹಾಲು ಕುಡಿಯಬೇಕಿದ್ದ 5 ವರ್ಷದ ಮೊಮ್ಮಗನಿಗೆ ಮದ್ಯ ಕುಡಿಸಿದ ಅಜ್ಜ!
ಹಾಲು ಕುಡಿಯಬೇಕಿದ್ದ 5 ವರ್ಷದ ಮೊಮ್ಮಗನಿಗೆ ಮದ್ಯ ಕುಡಿಸಿದ ಅಜ್ಜ!
ಟಿ20 ಕ್ರಿಕೆಟ್​ನಲ್ಲಿ ಅತೀ ವೇಗದ ಅರ್ಧಶತಕ ಸಿಡಿಸಿದ ಲಾರಾ ಹ್ಯಾರಿಸ್
ಟಿ20 ಕ್ರಿಕೆಟ್​ನಲ್ಲಿ ಅತೀ ವೇಗದ ಅರ್ಧಶತಕ ಸಿಡಿಸಿದ ಲಾರಾ ಹ್ಯಾರಿಸ್