‘ದ್ವಿತೀಯ ಪಿಯುಸಿ ಪರೀಕ್ಷೆ ನಿಷೇಧಿಸುವುದರಿಂದ ಶ್ರಮವಹಿಸಿ ಕಲಿಯುವ ವಿದ್ಯಾರ್ಥಿಗಳಿಗೆ ಅನ್ಯಾಯವಾಗಲಿದೆ’

ಅರ್ಜಿದಾರ ಶಿಕ್ಷಕ ಟೋನಿ ಜೋಸೆಫ್ ಹನ್ನೆರಡನೇ ತರಗತಿಯ ವಿದ್ಯಾರ್ಥಿಗಳಿಗೆ ಪಾಠ ಮಾಡುವವರಾಗಿದ್ದು, ತಮ್ಮ ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಕಾಳಜಿ ಹೊಂದಿದ್ದಾರೆ ಎಂದು ತಿಳಿಸಿದ್ದಾರೆ.

‘ದ್ವಿತೀಯ ಪಿಯುಸಿ ಪರೀಕ್ಷೆ ನಿಷೇಧಿಸುವುದರಿಂದ ಶ್ರಮವಹಿಸಿ ಕಲಿಯುವ ವಿದ್ಯಾರ್ಥಿಗಳಿಗೆ ಅನ್ಯಾಯವಾಗಲಿದೆ’
ಸುಪ್ರೀಂ ಕೋರ್ಟ್​

ದೆಹಲಿ: ಕೊರೊನಾ ಸಂದರ್ಭದಲ್ಲಿ ದ್ವಿತೀಯ ಪಿಯುಸಿ ಬೋರ್ಡ್ ಪರೀಕ್ಷೆಗಳನ್ನು ಸ್ಥಗಿತಗೊಳಿಸುವ ಬಗ್ಗೆ ಚರ್ಚೆಗಳು ನಡೆಯುತ್ತಿದೆ. ಪರೀಕ್ಷೆ ನಡೆಸದೆ ವಿದ್ಯಾರ್ಥಿಗಳನ್ನು ತೇರ್ಗಡೆಗೊಳಿಸುವ ಬಗ್ಗೆ ಕೇರಳದ ಗಣಿತ ಶಿಕ್ಷಕರೊಬ್ಬರು ಸುಪ್ರೀಂ ಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ನ್ಯಾಯವಾದಿ ಮಮತಾ ಶರ್ಮಾ ಎಂಬವರ ಮೂಲಕ ಆಂತರಿಕ ಪರೀಕ್ಷಾ ಗ್ರೇಡ್​ಗಳ ಆಧಾರದಲ್ಲಿ ಫಲಿತಾಂಶ ಪ್ರಕಟಗೊಳಿಸುವುದರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅರ್ಜಿದಾರ ಶಿಕ್ಷಕ ಟೋನಿ ಜೋಸೆಫ್ ಹನ್ನೆರಡನೇ ತರಗತಿಯ ವಿದ್ಯಾರ್ಥಿಗಳಿಗೆ ಪಾಠ ಮಾಡುವವರಾಗಿದ್ದು, ತಮ್ಮ ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಕಾಳಜಿ ಹೊಂದಿದ್ದಾರೆ ಎಂದು ತಿಳಿಸಿದ್ದಾರೆ. ಹನ್ನೆರಡನೇ ತರಗತಿಯ ಬೋರ್ಡ್ ಪರೀಕ್ಷೆಯು ವಿದ್ಯಾರ್ಥಿಗಳ ಜೀವನದ ಮುಖ್ಯ ಭಾಗವಾಗಿದೆ. ಮಕ್ಕಳ ವೃತ್ತಿಬದುಕಿನ ನಿಗದಿಗೂ ಈ ಪರೀಕ್ಷೆ ಮುಖ್ಯವಾಗುತ್ತದೆ. ಹಾಗಾಗಿ, ಪರೀಕ್ಷೆಯನ್ನು ನಿಷೇಧಿಸುವುದು ನಿಜವಾಗಿಯೂ ಕಷ್ಟಪಟ್ಟು ಕಲಿಯುವ ವಿದ್ಯಾರ್ಥಿಗಳಿಗೆ ಅನ್ಯಾಯವಾಗಲಿದೆ ಎಂದು ಅವರು ತಮ್ಮ ಅರ್ಜಿಯಲ್ಲಿ ತಿಳಿಸಿದ್ದಾರೆ.

ಆಂತರಿಕ ಅಸೆಸ್​ಮೆಂಟ್ ಹಾಗೂ ಆಂತರಿಕ ಆನ್​ಲೈನ್ ಪರೀಕ್ಷೆಗಳ ಆಧಾರದಲ್ಲಿ ಫಲಿತಾಂಶ ನೀಡುವುದು ಸರಿಯಲ್ಲ. 2020-21 ಅವಧಿಯಲ್ಲಿ ವಿದ್ಯಾರ್ಥಿಗಳನ್ನು ಶಿಕ್ಷಕರು ನೇರವಾಗಿ ನೋಡಿದ್ದೇ ಇಲ್ಲ. ವಿದ್ಯಾರ್ಥಿಗಳ ಆಂತರಿಕ ಪರೀಕ್ಷೆಗಳು ಹಾಗೂ ಎಲ್ಲಾ ತರಗತಿಗಳು ಆನ್​ಲೈನ್ ವಿಧಾನದಲ್ಲೇ ಆಗಿದೆ. ಹಾಗಾಗಿ, ಬೋರ್ಡ್ ಪರೀಕ್ಷೆಯನ್ನೂ ಆನ್​ಲೈನ್ ವಿಧಾನದ ಮೂಲಕ ನಡೆಸುವುದು ಕಷ್ಟವೇನಲ್ಲ ಎಂದು ಅವರು ಹೇಳಿದ್ದಾರೆ.

ಬಹುತೇಕ ಎಲ್ಲಾ ಪರೀಕ್ಷೆಗಳನ್ನೂ ಸಂಬಂಧಪಟ್ಟ ಇಲಾಖೆಗಳು ಮುಂದೂಡಿವೆ. ಎಸ್​ಎಸ್​ಎಲ್​ಸಿ, ಪಿಯುಸಿ, ಯುಪಿಎಸ್​ಸಿ, ಸಿಇಟಿ ಮುಂತಾದ ಪರೀಕ್ಷೆಗಳನ್ನು ಮುಂದೂಡಿ ಆದೇಶ ಹೊರಡಿಸಲಾಗಿತ್ತು.

ಕೊರೊನಾ ಸೋಂಕು ಕಡಿಮೆಯಾದ ಬಳಿಕ ಎಸ್ಎಸ್ಎಲ್​ಸಿ ಮತ್ತು ಪಿಯುಸಿ ಪರೀಕ್ಷೆ ಬಗ್ಗೆ ನಿರ್ಧಾರ ಮಾಡುತ್ತೇವೆ ಎಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದರು. ಮುಂಬೈ ನಗರದಲ್ಲಿಯೇ ಕೊರೊನಾ ಕಡಿಮೆಯಾಗಿದೆ. ಇನ್ನು ರಾಜ್ಯದಲ್ಲಿ ಕೊರೊನಾ ಕಡಿಮೆಯಾಗುವುದಿಲ್ಲವೇ. ಮೊದಲು ಕೊರೊನಾ ನಿಯಂತ್ರಣದ ಬಗ್ಗೆ ಗಮನಹರಿಸೋಣ. ಬಳಿಕ ಪರೀಕ್ಷೆ ನಡೆಸುವ ಬಗ್ಗೆ ತೀರ್ಮಾನ ಮಾಡೋಣ ಎಂದು ಚಾಮರಾಜನಗರ ಜಿಲ್ಲೆಯ ಹನೂರಿನಲ್ಲಿ ಅಭಿಪ್ರಾಯಪಟ್ಟಿದ್ದರು.

ಜೂನ್ 21ರಿಂದ ಎಸ್ಎಸ್ಎಲ್​ಸಿ ಪರೀಕ್ಷೆ ನಡೆಯಬೇಕಿತ್ತು. ಆದರೆ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿರುವ ಕಾರಣ ಪರೀಕ್ಷೆಯನ್ನು ಮುಂದೂಡಲಾಗಿದೆ. ಎಸ್ಎಸ್ಎಲ್​ಸಿ ಪರೀಕ್ಷೆ ಮುಂದೆ ಯಾವಾಗ ನಡೆಯುತ್ತದೆ ಎಂದು ಇನ್ನೂ ದಿನಾಂಕವನ್ನು ಪ್ರಕಟಿಸಿಲ್ಲ. ಅನಿರ್ದಿಷ್ಟಾವಧಿವರೆಗೆ ಮುಂದೂಡಲಾಗಿದ್ದು, ನಂತರದ ದಿನಗಳಲ್ಲಿ ಹೊಸ ದಿನಾಂಕ ತಿಳಿಸುವುದಾಗಿ ಸುದ್ದಿಗೋಷ್ಠಿಯಲ್ಲಿ ಹೇಳಿದ್ದರು. ರಾಜ್ಯದಲ್ಲಿ ಕೊರೊನಾ ಸೋಂಕು ದಿನೇದಿನೆ ಹೆಚ್ಚುತ್ತಿರುವುದರಿಂದ ವಿದ್ಯಾರ್ಥಿಗಳು, ಶಾಲಾ ಸಂಘಟನೆಗಳು, ಶಿಕ್ಷಕರು, ಪಾಲಕರ ಹಿತದೃಷ್ಟಿಯಿಂದ ಪರೀಕ್ಷೆಯನ್ನು ಮುಂದೂಡಲಾಗಿದೆ.

ಇದನ್ನೂ ಓದಿ: Smiling Buddha: ಕೊನೆಗೂ ಬುದ್ಧ ನಗುಬೀರಿದ: ಭಾರತದ ಮೊದಲ ನ್ಯೂಕ್ಲಿಯರ್ ಪರೀಕ್ಷೆ ಪೋಖ್ರಾನ್​ನಲ್ಲಿ ನಡೆದು ಇಂದಿಗೆ 47 ವರ್ಷ

ಬಿಜೆಪಿ ಕಾರ್ಯಕರ್ತರ ಹತ್ಯೆ ಪ್ರಕರಣ: ಪಶ್ಚಿಮ ಬಂಗಾಳ ಸರ್ಕಾರಕ್ಕೆ ನೊಟೀಸ್ ಜಾರಿಗೊಳಿಸಿದ ಸುಪ್ರೀಂ ಕೋರ್ಟ್