AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಛತ್ರಪತಿ ಶಿವಾಜಿ ಪ್ರತಿಮೆ ವಿಚಾರವಾಗಿ ಸಂಘರ್ಷ; ತೆಲಂಗಾಣದ ಗಡಿ ಪಟ್ಟಣವೊಂದರಲ್ಲಿ ಸೆಕ್ಷನ್​ 144 ಜಾರಿ

ವಿಡಿಯೋ ಶೇರ್ ಮಾಡಿಕೊಂಡಿರುವ ಅರವಿಂದ್ ಧರ್ಮಪುರಿ, ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಯನ್ನು ಕೆಡವಬೇಕು ಎಂದು ಎಂಐಎಂ ಮತ್ತು ತೆಲಂಗಾಣ ರಾಷ್ಟ್ರೀಯ ಸಮಿತಿ ಗೂಂಡಾಗಳು ಆಗ್ರಹಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

Video: ಛತ್ರಪತಿ ಶಿವಾಜಿ ಪ್ರತಿಮೆ ವಿಚಾರವಾಗಿ ಸಂಘರ್ಷ; ತೆಲಂಗಾಣದ ಗಡಿ ಪಟ್ಟಣವೊಂದರಲ್ಲಿ ಸೆಕ್ಷನ್​ 144 ಜಾರಿ
ಶಿವಾಜಿ ಪ್ರತಿಮೆಯನ್ನು ಮುಚ್ಚಿಟ್ಟಿರುವುದು
Follow us
TV9 Web
| Updated By: Lakshmi Hegde

Updated on: Mar 20, 2022 | 4:28 PM

ತೆಲಂಗಾಣದ ನಿಜಾಮಾಬಾದ್​ ಜಿಲ್ಲೆಯ ಬೋಧನ್​ ಪ್ರದೇಶದಲ್ಲಿ, ಶಿವಾಜಿ ಮಹಾರಾಜರ ಪ್ರತಿಮೆ ವಿಚಾರಕ್ಕೆ ಸಂಬಂಧಪಟ್ಟಂತೆ ಎರಡು ಗುಂಪುಗಳ ಮಧ್ಯೆ ಘರ್ಷಣೆ ಉಂಟಾದ ಬೆನ್ನಲ್ಲೇ ಸೆಕ್ಷನ್​ 144 ಜಾರಿಯಾಗಿದೆ. ಈ ಘರ್ಷಣೆ ನಡೆದಿದ್ದು  ರಾಜಕೀಯ ಬಣಗಳ ನಡುವೆ ಎಂದು ವರದಿಯಾಗಿದೆ. ಈ ಬಗ್ಗೆ ಸ್ಥಳೀಯ ಬಿಜೆಪಿ ಸಂಸದ ಅರವಿಂದ್ ಧರ್ಮಪುರಿ ಟ್ವೀಟ್ ಮಾಡಿದ್ದು, ಮಹಾರಾಷ್ಟ್ರದ ಗಡಿಯಲ್ಲಿರುವ ಬೋಧನ್​ ಪಟ್ಟಣದ, ಅಂಬೇಡ್ಕರ್​ ಕ್ರಾಸ್​ ರಸ್ತೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜ್​ ಪ್ರತಿಮೆಯನ್ನು ಸ್ಥಾಪಿಸಲಾಗಿದೆ. ಆದರೆ ಅಲ್ಲಿ ಶಿವಾಜಿ ಮಹಾರಾಜರ ಪ್ರತಿಮೆ ಇಡಬಾರದು ಎಂದು ಎಐಎಂಐಎಂ ಮತ್ತು ಟಿಆರ್​ಎಸ್​ ಪಕ್ಷದ ಕಾರ್ಯಕರ್ತರು ವಿರೋಧಿಸುತ್ತಿದ್ದಾರೆ. ಅಷ್ಟೇ ಅಲ್ಲ ಬಿಜೆಪಿ ಮತ್ತು ಶಿವಸೇನೆ ವಿರುದ್ಧ ನಿರಂತರವಾಗಿ ವಾಗ್ದಾಳಿ ನಡೆಸುತ್ತಿದ್ದಾರೆ ಎಂದು ಹೇಳಿದ್ದಾರೆ.

ವಿಡಿಯೋ ಶೇರ್ ಮಾಡಿಕೊಂಡಿರುವ ಅರವಿಂದ್ ಧರ್ಮಪುರಿ, ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಯನ್ನು ಕೆಡವಬೇಕು ಎಂದು ಎಂಐಎಂ ಮತ್ತು ತೆಲಂಗಾಣ ರಾಷ್ಟ್ರೀಯ ಸಮಿತಿ ಗೂಂಡಾಗಳು ಆಗ್ರಹಿಸುತ್ತಿದ್ದಾರೆ. ಇದೊಂಥರ ಕುಟಿಲ ಮನಸ್ಥಿತಿ. ನಮ್ಮ ಸಂಸ್ಕೃತಿ, ಪರಂಪರೆಯನ್ನು ಕೆಡವಬೇಕು, ಅವರದ್ದನ್ನು ಸಾಧಿಸಿಕೊಳ್ಳಬೇಕು ಎಂಬ ಯೋಚನೆ. ಈ ಪ್ರತಿಮೆಯನ್ನು ಧ್ವಂಸಗೊಳ್ಳಲು ಸ್ಥಳೀಯ ಪುರಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗಿದ್ದು ನಿಜಕ್ಕೂ ಖೇದನೀಯ ಎಂದು ಕ್ಯಾಪ್ಷನ್ ಬರೆದಿದ್ದಾರೆ.  ಸ್ಥಳದಲ್ಲಿ ಈಗಾಗಲೇ ವಾಗ್ವಾದ ನಡೆದಿದೆ. ಗಲಾಟೆಯೂ ನಡೆದಿದೆ. ಸಮಸ್ಯೆಯನ್ನು ಪರಿಹಾರ ಮಾಡಲು ಪೊಲೀಸರು ಪ್ರಯತ್ನ ಮಾಡುತ್ತಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ಸೆಕ್ಷನ್​ 144 ಜಾರಿ ಮಾಡಲಾಗಿದ್ದು, ಬಿಗಿ ಭದ್ರತೆ ಕಲ್ಪಿಸಲಾಗಿದೆ.

ಇದನ್ನೂ ಓದಿ: KL Rahul: ಕೆಎಲ್ ರಾಹುಲ್ ಪಂಜಾಬ್ ಪರ ತುಂಬಾ ನಿಧಾನವಾಗಿ ಆಡಿದ್ದರು: ಮಾಜಿ ಕ್ರಿಕೆಟಿಗನ ಗಂಭೀರ ಆರೋಪ

Daily Devotional: ಯಾರಿಗೆಲ್ಲಾ ಮನೆ ಖರೀದಿ ಯೋಗವಿದೆ ತಿಳಿಯಿರಿ
Daily Devotional: ಯಾರಿಗೆಲ್ಲಾ ಮನೆ ಖರೀದಿ ಯೋಗವಿದೆ ತಿಳಿಯಿರಿ
Daily horoscope: ಇಂದಿನ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯಿರಿ
Daily horoscope: ಇಂದಿನ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯಿರಿ
ಐಎನ್‌ಎಸ್ ವಿಕ್ರಾಂತ್ ಪರಾಕ್ರಮ : ಪಾಕಿಸ್ತಾನದ ಕರಾಚಿ ಬಂದರು ಧ್ವಂಸ
ಐಎನ್‌ಎಸ್ ವಿಕ್ರಾಂತ್ ಪರಾಕ್ರಮ : ಪಾಕಿಸ್ತಾನದ ಕರಾಚಿ ಬಂದರು ಧ್ವಂಸ
34 ಎಸೆತಗಳಲ್ಲಿ 70 ರನ್; ಡೆಲ್ಲಿ ವಿರುದ್ಧ ಪ್ರಿಯಾಂಶ್ ಅಬ್ಬರ
34 ಎಸೆತಗಳಲ್ಲಿ 70 ರನ್; ಡೆಲ್ಲಿ ವಿರುದ್ಧ ಪ್ರಿಯಾಂಶ್ ಅಬ್ಬರ
ಜಮ್ಮುವಿನಲ್ಲಿ ಪಾಕಿಸ್ತಾನದ ಡ್ರೋನ್ ಹೊಡೆದುರುಳಿಸಿದ ಭಾರತ
ಜಮ್ಮುವಿನಲ್ಲಿ ಪಾಕಿಸ್ತಾನದ ಡ್ರೋನ್ ಹೊಡೆದುರುಳಿಸಿದ ಭಾರತ
ದರ್ಶನ್ ನಟನೆಯ ‘ಡೆವಿಲ್’ ಸಿನಿಮಾ ಕಥೆ ಊಹೆ ಮಾಡಲೂ ಸಾಧ್ಯವಿಲ್ಲ: ಚಂದು ಗೌಡ
ದರ್ಶನ್ ನಟನೆಯ ‘ಡೆವಿಲ್’ ಸಿನಿಮಾ ಕಥೆ ಊಹೆ ಮಾಡಲೂ ಸಾಧ್ಯವಿಲ್ಲ: ಚಂದು ಗೌಡ
ಭಾರತದ ನಡೆಗಳಿಂದ ತತ್ತರಿಸುತ್ತಿದೆ ಪಾಕಿಸ್ತಾನ, ಅದಕ್ಕೆ ಮುಂದೇನು ಕಾದಿದೆಯೋ
ಭಾರತದ ನಡೆಗಳಿಂದ ತತ್ತರಿಸುತ್ತಿದೆ ಪಾಕಿಸ್ತಾನ, ಅದಕ್ಕೆ ಮುಂದೇನು ಕಾದಿದೆಯೋ
ಉಡುಪಿ ಶ್ರೀಕೃಷ್ಣನಿಗೆ ಪರ್ಯಾಯ ಶ್ರೀ, ಪುತ್ತಿಗೆ ಶ್ರೀಗಳಿಂದ ವಿಶೇಷ ಅಲಂಕಾರ
ಉಡುಪಿ ಶ್ರೀಕೃಷ್ಣನಿಗೆ ಪರ್ಯಾಯ ಶ್ರೀ, ಪುತ್ತಿಗೆ ಶ್ರೀಗಳಿಂದ ವಿಶೇಷ ಅಲಂಕಾರ
ಸ್ಥಳಾಂತರಗೊಂಡವರಿಗೆ ಊಟದ ವ್ಯವಸ್ಥೆ ಮಾಡುತ್ತಿರುವ ಸರ್ಕಾರ
ಸ್ಥಳಾಂತರಗೊಂಡವರಿಗೆ ಊಟದ ವ್ಯವಸ್ಥೆ ಮಾಡುತ್ತಿರುವ ಸರ್ಕಾರ
ರಕ್ಷಣೆ ಮಾಡಿ: ಭಾರತದ ಏಟಿಗೆ ಗೋಳೋ ಅಂತ ಅತ್ತ ಪಾಕ್ ಎಂಪಿ, ವಿಡಿಯೋ ನೋಡಿ
ರಕ್ಷಣೆ ಮಾಡಿ: ಭಾರತದ ಏಟಿಗೆ ಗೋಳೋ ಅಂತ ಅತ್ತ ಪಾಕ್ ಎಂಪಿ, ವಿಡಿಯೋ ನೋಡಿ