ಹಿಂದೂ ಕಾರ್ಯಕರ್ತನ ಹತ್ಯೆ ಹಿನ್ನೆಲೆ ಜಾರ್ಖಂಡ್​ನಲ್ಲಿ ನಿಷೇಧಾಜ್ಞೆ ಜಾರಿ

ಹಿಂದೂ ಮುಖಂಡ ಕಮಲ್ ಗಿರಿ ದೇವ್ ಅವರನ್ನು ಶನಿವಾರ ಹತ್ಯೆ ಮಾಡಿದ ನಂತರ ಜಾರ್ಖಂಡ್‌ನ ಚೈಬಾಸಾದಲ್ಲಿ ಸೆಕ್ಷನ್ 144ರ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಹಿಂದೂ ಕಾರ್ಯಕರ್ತನ ಹತ್ಯೆ ಹಿನ್ನೆಲೆ ಜಾರ್ಖಂಡ್​ನಲ್ಲಿ ನಿಷೇಧಾಜ್ಞೆ ಜಾರಿ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Nov 14, 2022 | 3:13 PM

ಜಾರ್ಖಂಡ್: 35 ವರ್ಷದ ಜಾರ್ಖಂಡ್​ನ (Jharkhand) ಹಿಂದೂ ಕಾರ್ಯಕರ್ತ ಕಮಲದೇವ್ ಗಿರಿ ಅವರನ್ನು ಶನಿವಾರ ಸಂಜೆ ಮೋಟಾರ್‌ಸೈಕಲ್‌ನಲ್ಲಿ ಬಂದ ದುಷ್ಕರ್ಮಿಗಳು ಕಚ್ಚಾ ಬಾಂಬ್‌ಗಳನ್ನು ಎಸೆದು ಕೊಲೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಜಾರ್ಖಂಡ್‌ನ ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯ ಚಕ್ರಧರ್‌ಪುರ ಪಟ್ಟಣದಲ್ಲಿ ಸೆಕ್ಷನ್ 144 ಸಿಆರ್‌ಪಿಸಿ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಮುನ್ನೆಚ್ಚರಿಕೆ ಕ್ರಮವಾಗಿ ಈ ಆದೇಶವನ್ನು ಜಾರಿಗೊಳಿಸಲಾಗಿದೆ ಎಂದು ಚಕ್ರಧರಪುರದ ಉಪವಿಭಾಗದ ಪೊಲೀಸ್ ಅಧಿಕಾರಿ ಕಪಿಲ್ ಚೌಧರಿ ತಿಳಿಸಿದ್ದಾರೆ. ಹಿಂದೂ ಮುಖಂಡ ಕಮಲ್ ಗಿರಿ ದೇವ್ ಅವರನ್ನು ಶನಿವಾರ ಹತ್ಯೆ ಮಾಡಿದ ನಂತರ ಜಾರ್ಖಂಡ್‌ನ ಚೈಬಾಸಾದಲ್ಲಿ ಸೆಕ್ಷನ್ 144ರ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಇದನ್ನೂ ಓದಿ: ಅನೈತಿಕ ಸಂಬಂಧಕ್ಕೆ ಅಡ್ಡಿಯಾಗುತ್ತಾನೆಂದು ಅಳಿಯನೊಂದಿಗೆ ಸೇರಿ ಪತಿಯನ್ನು ಹತ್ಯೆಗೈದ ಪತ್ನಿ

ಹಿಂದೂ ಸಂಘಟನೆ ಗಿರಿರಾಜ್ ಸೇನೆಯ ಮುಖ್ಯಸ್ಥ ಕಮಲ್ ಗಿರಿ ದೇವ್ ಜಾರ್ಖಂಡ್‌ನ ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯಲ್ಲಿ ಶನಿವಾರ ಬಾಟಲ್ ಬಾಂಬ್ ಸ್ಫೋಟದಲ್ಲಿ ಸಾವನ್ನಪ್ಪಿದ್ದರು. ಚೈಬಾಸಾದ ಚಕ್ರಧರಪುರದ ಶಿಶಿ ವಿದ್ಯಾ ಮಂದಿರ ತುಳಸಿ ಭವನದ ಬಳಿ ಸಂಜೆ 6 ಗಂಟೆ ಸುಮಾರಿಗೆ ಈ ಘಟನೆ ನಡೆದಿತ್ತು. ಈ ಘಟನೆಯ ವೇಳೆ ಗಿರಿರಾಜ್ ಸೇನಾ ಮುಖ್ಯಸ್ಥ ತನ್ನ ಸ್ನೇಹಿತ ಶಂಕರ್ ಜೊತೆ ಭವನ ಚೌಕ್‌ನಲ್ಲಿ ನಿಂತಿದ್ದರು. ಅಲ್ಲಿ ಬಂದ ಮೂವರು ದಾಳಿಕೋರರು ಬಾಟಲ್ ಬಾಂಬ್‌ನಿಂದ ದಾಳಿ ಮಾಡಿದ್ದರು.

ಈ ಘಟನೆಯು ಚೈಬಾಸಾದಲ್ಲಿ ಅಶಾಂತಿ ಮತ್ತು ಪ್ರತಿಭಟನೆಗೆ ಕಾರಣವಾಯಿತು. ಹಿಂದೂ ಕಾರ್ಯಕರ್ತನನ್ನು ಕೊಂದು ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಗಿರಿರಾಜ್ ಸೇನಾ ಮುಖ್ಯಸ್ಥರನ್ನು ತಕ್ಷಣವೇ ಹತ್ತಿರದ ರೈಲ್ವೆ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ, ಅಷ್ಟರಲ್ಲಾಗಲೇ ಅವರು ಸಾವನ್ನಪ್ಪಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ